ಲೇಖಕ: admin

ಕಾರ್ಕಳ ಆ.11 NEWS DESK : ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಮಾದಕ ವ್ಯಸನವನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಹೇಳಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು, ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ…

Read More

ಪುತ್ತೂರು ಆ.11 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ವಿಭಾಗ, ಗ್ಲೋಬಲ್ ಡಿಗ್ರೀಸ್ ಮಣಿಪಾಲ್, ಇನ್ಸ್ಟಿಟ್ಯೂಶನ್ಸ್ ಇನ್ನೋವೇಶನ್ ಸೆಲ್ ಮತ್ತು ಕೆನರಾ ಬ್ಯಾಂಕ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು 3ನೇ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2025 ಕಾರ್ಯಕ್ರಮವು ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವು ಜಗತ್ತಿನಾದ್ಯಂತದ ಖ್ಯಾತ ಶಿಕ್ಷಣ ತಜ್ಞರು, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟು ಸೇರಿಸಿ ಜ್ಞಾನ ಹಂಚಿಕೆ ಮತ್ತು ಸಹಯೋಗದ ಹೊಸ ಅವಕಾಶಗಳನ್ನು ಸೃಷ್ಟಿಸಿತು. ಇಲ್ಲಿ 267 ಸಂಶೋಧನಾ ಪ್ರಬಂಧಗಳ ಪ್ರಸ್ತುತಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆನರಾ ಬ್ಯಾಂಕಿನ ಪುತ್ತೂರು ಪ್ರಾದೇಶಿಕ ಕಛೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್, ತಂತ್ರಜ್ಞಾನ ಮತ್ತು ನಿರ್ವಹಣೆ ಜಗತ್ತಿನ ಆರ್ಥಿಕತೆಯ ಆಧಾರ ಸ್ತಂಭಗಳಾಗಿವೆ. ಇದರ ಹೊಸತನದ ಕಲಿಕೆ ಮತ್ತು ಬಳಕೆಗೆ ಅಗತ್ಯವಾದ ತಿಳುವಳಿಕೆಯನ್ನು ನೀಡಲು…

Read More

ಮಡಿಕೇರಿ ಆ.11 NEWS DESK : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್‍ಬಿಐ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಬ್ಯಾಂಕ್ ಗ್ರಾಹಕರ ಸಹಾಯ ಮತ್ತು ಮಾರಾಟ ವಿಭಾಗದಲ್ಲಿ ಒಟ್ಟು 6,589 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 198 ಬ್ಯಾಕ್ಲ್ಯಾಗ್ ಹುದ್ದೆಗಳೂ ಸೇರಿದಂತೆ ಒಟ್ಟು 270 ಹುದ್ದೆಗಳಿಗೆ ನೇಮಕ ಮಾಡಿ ಕೊಳ್ಳಲಾಗುತ್ತದೆ. ಕಳೆದ ವರ್ಷ 13,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಎಸ್‍ಬಿಐ ನೇಮಕಾತಿ ನಡೆಸಿತ್ತು. ಈ ವರ್ಷ ಅದರ ಅರ್ಥಕ್ಕೂ ಹೆಚ್ಚು ಹುದ್ದೆಗಳನ್ನು ಕಡಿತಗೊಳಿಸಲಾಗಿದೆ ಎಂಬುದನ್ನ ಮರೆಯದಿರಿ. ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯುವ ಅವಕಾಶ ಇದೆ. :: ರಾಜ್ಯದಲ್ಲಿ ಹುದ್ದೆಗಳ ಸಂಖ್ಯೆ ::  ಕರ್ನಾಟಕ-270 ಹುದ್ದೆಗಳು ( ಬ್ಯಾಕ ಲಾಗ್ ಹುದ್ದೆಗಳು 198) :: ಒಂದಿಷ್ಟು ಗಮನಿಸಿ ::  ಅಧಿಸೂಚನೆಯ ಪ್ರಕಾರ, ಒಬ್ಬ ಅಭ್ಯರ್ಥಿಯು ಒಂದು ರಾಜ್ಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ನೇಮಕಗೊಂಡ ಅಭ್ಯರ್ಥಿಗಳಿಗೆ ಆರು ತಿಂಗಳ ಪ್ರೋಬೇಷನರಿ ಅವಧಿ ಇರುತ್ತದೆ. ಈ…

Read More

ಮಡಿಕೇರಿ ಆ.11 NEWS DESK : ಕರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ನಡೆಯಿತು. ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಾಲಚಂದ್ರ ನಾಯರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ  ಶಾಲಾ ಮುಖ್ಯೋಪಾಧ್ಯಾಯರಾದ ಪ್ರಸನ್ನ ಕುಮಾರಿ, ಮಹಾಲಕ್ಷ್ಮಿ, ಸಹ ಶಿಕ್ಷಕಿಯರಾದ ಅಹಲ್ಯ, ಲತಾ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಯಮುನಾ ಮತ್ತು ಸದಸ್ಯರು ಪೋಷಕರು ಹಾಗೂ ಪಂಚಾಯತಿ ಸದಸ್ಯರಾದ ಜಯಶ್ರೀ ಕೆ.ಸಿ.ಕೃಷ್ಣ ವಿದ್ಯಾರ್ಥಿಗಳು ಪಾಲ್ಗೊಂಡರು.

Read More

ಮಡಿಕೇರಿ ಆ.11 NEWS DESK : ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು. ಶ್ರೀ ಕಾವೇರಿ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ  ಶ್ರೀನಾಥ್  ಮಾತನಾಡಿ, ರಕ್ಷಾಬಂಧನ ಕಾರ್ಯಕ್ರಮದ ಹಿನ್ನೆಲೆ ಮತ್ತು ರಾಷ್ಟೀಯ  ಸ್ವಯಂ ಸೇವಕ ಸಂಘ ದ ಪಾತ್ರ ದ ಬಗ್ಗೆ ತಿಳಿಸಿದರು. ರಾಷ್ಟೀಯ ಸ್ವಯಂ ಸೇವಕ ಸಂಘದ ನಿಕಟಪೂರ್ವ ಕಾರ್ಯಕರ್ತ  ಪ್ರಸನ್ನ ಸಂಘದ ಪ್ರಾರ್ಥನೆ ಮತ್ತು ರಕ್ಷಾಬಂಧನದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ನಂತರ ಪರಸ್ಪರ ರಕ್ಷೆ ಕಟ್ಟಿ ಸಿಹಿ ಹಂಚಿ ಸಂಭ್ರಮಿಸಿದರು.

Read More

ಕಾರ್ಕಳ ಆ.11 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು “ಕ್ರಿಯೇಟಿವ್ ಪುಸ್ತಕ ಧಾರೆ – 2025” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಜೊತೆಗೆ ಶ್ರೀ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ. :: ಅನಾವರಣಗೊಳ್ಳಲಿರುವ ಕೃತಿಗಳು :: ಯಾತ್ರೆ – ಚಂದ್ರಕಾಂತ ಪೋಕಳೆ,  ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ,  ಹರ್ಷ ರಾಗ – ಪೌಝಿಯಾ ಸಲೀಂ,  ಹಿತಶತ್ರು – ಪದ್ಮಲತಾ ಮೋಹನ್, …

Read More

ಸೋಮವಾರಪೇಟೆ ಆ.10 : ಸಿ ಮತ್ತು ಡಿ ಕೃಷಿ ಭೂಮಿಯ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ರೈತ ಹೋರಾಟ ಸಮಿತಿ ವತಿಯಿಂದ ಆ.12ರಂದು ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ರೈತ ಹೋರಾಟ ಸಮಿತಿಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದ್ದ ಸದಸ್ಯರುಗಳೂ ಇದ್ದು, ಇದು ರೈತಪರವಾದ ಹೋರಾಟವಾಗಿದೆ. ಸಮಿತಿಯೂ ರಾಜಕೀಯ ರಹಿತವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಶಾಸಕ ಡಾ.ಮಂತರ್‌ಗೌಡ ನೇತೃತ್ವದಲ್ಲಿ ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಕಂದಾಯ ಸಚಿವರು, ಅರಣ್ಯ ಸಚಿವರು ಸೇರಿದಂತೆ ಸಂಬಂಧಪಟ್ಟ ಮೇಲಾಧಿಕಾರಿಗಳನ್ನು ಅನೇಕ ಬಾರಿ ಭೇಟಿ ಮಾಡಿ, ಸಿ ಆಂ್ಯಡ್ ಡಿ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಉನ್ನತ ಮಟ್ಟದ ಸಮಿತಿ ರಚಿಸಿ ಸಮಸ್ಯೆ ಬಗೆಹರಿಸುವ ಬಗ್ಗೆ ಸಂಬಂಧಪಟ್ಟ ಸಚಿವರು ಭರವಸೆ ನೀಡಿದ್ದಾರೆ. ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ. ರೈತರಿಗೆ ಅನ್ಯಾಯವಾಗುವುದಕ್ಕೆ ಕಾಂಗ್ರೆಸ್ ಸರ್ಕಾರ ಅವಕಾಶ…

Read More

ಸೋಮವಾರಪೇಟೆ NEWS DESK ಆ.10 : ಸಿ ಮತ್ತು ಡಿ ಕೃಷಿ ಭೂಮಿ ಹಕ್ಕಿಗಾಗಿ ರೈತ ಹೋರಾಟ ಸಮಿತಿ ಆ.12ರಂದು ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ಬಿಜೆಪಿ ಕೃಷಿಮೋರ್ಚಾ ಹಾಗೂ ಮಂಡಲ ಬಿಜೆಪಿ ಸಂಪೂರ್ಣ ಬೆಂಬಲ ಸೂಚಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಶರತ್‌ಚಂದ್ರ ಅವರು ಬಿಜೆಪಿ ಶಕ್ತಿ ಕೇಂದ್ರ, ಕೃಷಿ ಮೋರ್ಚಾದ ಸದಸ್ಯರುಗಳು ಬಂದ್ ಹಾಗೂ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ತರುವ ಮೂಲಕ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಎಸ್.ಆರ್.ಸೋಮೇಶ್, ಪ್ರಮುಖರಾದ ಭಾನುಪ್ರಕಾಶ್, ರವಿ, ಕಿಬ್ಬೆಟ್ಟ ಮಧು ಇದ್ದರು.

Read More

ಮಡಿಕೇರಿ NEWS DESK ಆ.10 : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಆ.17 ರಂದು ಮೂರ್ನಾಡಿನಲ್ಲಿ 6 ವರ್ಷದೊಳಗಿನ ಮಕ್ಕಳಿಗಾಗಿ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆ ಹಾಗೂ 25 ವರ್ಷ ಮೇಲ್ಪಟ್ಟ ದಂಪತಿಗಳಿಗಾಗಿ ರಾಧಾಕೃಷ್ಣ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಿರುವ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಸಂದರ್ಭ ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. 6 ವರ್ಷದೊಳಗಿನ ಮಕ್ಕಳು ಶ್ರೀಕೃಷ್ಣನ ಛದ್ಮವೇಷವನ್ನು ಮಾತ್ರ ಧರಿಸಬೇಕು. 25 ವರ್ಷ ಮೇಲ್ಪಟ್ಟ ದಂಪತಿಗಳು ಹಾವಾಭಾವದೊಂದಿಗೆ ರಾಧಾಕೃಷ್ಣ ಛದ್ಮವೇಷ ಪ್ರದರ್ಶಿಸಬೇಕು. ಈ ಸ್ಪರ್ಧಾ ವಿಭಾಗದಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ. ಆಸಕ್ತರು ಆ.12 ರೊಳಗೆ ಹೆಸರನ್ನು ನೋದಾಯಿಸಿಕೊಳ್ಳಬೇಕು. ವಿಜೇತರಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಿ.ಪಿ.ಚಂಗಪ್ಪ 9449073036, ಎಂ.ಕೆ.ಪ್ರವೀಣ 7019095524, ಮಮತ ಶ್ರೀಹರಿ 9686960327 ನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ NEWS DESK ಆ.10 : ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸುವುದರಿಂದ ಕೊಡವರ ಸಾಂವಿಧಾನಿಕ ಹಕ್ಕುಗಳಿಗೆ ಮತ್ತಷ್ಟು ಬಲ ಸಿಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸುಂಟಿಕೊಪ್ಪದಲ್ಲಿ 9ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 2026ರ ರಾಷ್ಟ್ರೀಯ ಜನಗಣತಿ ಮತ್ತು ಜನಾಂಗವಾರು ಮಾಹಿತಿ ಸಂಗ್ರಹಿಸುವ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್‌ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು. 2018ರಲ್ಲಿ ಕೊಡವಲ್ಯಾಂಡ್ ನಲ್ಲಿ ವ್ಯಾಪಕ ಜಲಸ್ಫೋಟ ಮತ್ತು ಭೂಸ್ಫೋಟ ಸಂಭವಿಸಿ ಸಾವುನೋವು,…

Read More