ಮಡಿಕೇರಿ, NEWS DESK ಆ.28: ಕೊಡಗು ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯನ್ನು ಆಗಸ್ಟ್ 29ರಂದು ಆಯೋಜಿಸಲಾಗಿದೆ. ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಜಿಲ್ಲೆಯ ವಿವಿಧ ಉಪವಿಭಾಗಗಳ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರು ಸಭೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಪ್ರಸ್ತಾಪಿಸಿ, ಸೂಕ್ತ ಪರಿಹಾರಕ್ಕಾಗಿ ಮನವಿ ಸಲ್ಲಿಸಬಹುದಾಗಿದೆ. ಸಭೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಸಭೆಯ ಕುರಿತು ಸಂಬಂಧಪಟ್ಟ ಸಮುದಾಯದ ಮುಖಂಡರಿಗೆ ಮಾಹಿತಿ ನೀಡಿ, ತಪ್ಪದೇ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ, NEWS DESK ಆ.28 : ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅವರು ಕರೆ ನೀಡಿದರು. ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ವತಿಯಿಂದ ಸಾರಸ್ವತ್ IAS/KAS ಅಕಾಡೆಮಿ, ಮೈಸೂರು ಇವರ ಸಹಯೋಗದಲ್ಲಿ ‘Career Opportunities in Government Sector and Civil Services’ ವಿಷಯದ ಕುರಿತು ಶುಕ್ರವಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು IQAC ಸಂಚಾಲಕರಾದ ಡಾ. ಸೌಮ್ಯ ಕೆ. ಸ್ವಾಗತಿಸಿ, ಕಾರ್ಯಾಗಾರದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕದ ಖ್ಯಾತ GMAT ತರಬೇತುದಾರರು ಹಾಗೂ RIMSEಯ ಮಾಜಿ ಪ್ರಾಂಶುಪಾಲರಾದ ಪ್ರೊ. ಚಂದ್ರಶೇಖರನ್ ಜಿ. ಭಾಗವಹಿಸಿದ್ದರು. ಸಾರಸ್ವತ್ IAS/KAS ಅಕಾಡೆಮಿ, ಮೈಸೂರಿನ…
ಮಡಿಕೇರಿ NEWS DESK ಆ.28 : ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣಾಷ್ಟಮಿ ಹಾಗೂ ಶ್ರೀ ಕೃಷ್ಣ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 4ರಂದು ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ರಾತ್ರಿ ವಿಶೇಷ ಪೂಜೆ ನೆರವೇರಲಿದ್ದು, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮವೂ ನಡೆಯಲಿದೆ. *ಮೊಸರು ಕುಡಿಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಛದ್ಮವೇಷ ಸ್ಪರ್ಧೆ* ಸೆಪ್ಟೆಂಬರ್ 6ರಂದು ಭಾನುವಾರ ಸಂಜೆ 4 ಗಂಟೆಗೆ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 6 ವರ್ಷದೊಳಗಿನ ಮಕ್ಕಳಿಗಾಗಿ ಶ್ರೀ ಕೃಷ್ಣ ಹಾಗೂ ರಾಧೆ ಛದ್ಮವೇಷ ಸ್ಪರ್ಧೆಯನ್ನೂ ಹಮ್ಮಿಕೊಳ್ಳಲಾಗಿದೆ. ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಕೃಷ್ಣನ ಆರಾಧನೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮನವಿ ಮಾಡಿದೆ. ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸುವವರು ಕೆಳಗಿನ…
ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ, ಫ್ಲೆಕ್ಸ್-ಬ್ಯಾನರ್‌ಗಳ ಬಳಕೆ ಹಾಗೂ ಅವುಗಳ ಸೂಕ್ತ ವಿಲೇವಾರಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಭೆ ನಡೆಯಿತು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳು, ಗಣೇಶೋತ್ಸವಕ್ಕೆ ಸಂಬ0ಧಿಸಿದ ಮಾರಾಟಗಾರರು ಹಾಗೂ ಬಾಡಿಗೆದಾರರು ಭಾಗವಹಿಸಿದ್ದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ0ತೆ ಶಬ್ದ ಮಾಲಿನ್ಯ ನಿಯಂತ್ರಿಸುವುದು, ಧ್ವನಿವರ್ಧಕಗಳ ಬಳಕೆಯಲ್ಲಿ ನಿಯಮಗಳನ್ನು ಪಾಲಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದೇ ರೀತಿ ಗಣೇಶೋತ್ಸವದ ಸಂದರ್ಭ ಬಳಸುವ ಫ್ಲೆಕ್ಸ್, ಬ್ಯಾನರ್‌ಗಳನ್ನು ಕಾರ್ಯಕ್ರಮದ ಬಳಿಕ ಎಲ್ಲೆಂದರಲ್ಲಿ ಎಸೆಯದೆ, ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳು ಹಾಗೂ ಮಾರಾಟಗಾರರಿಗೆ ಸೂಚನೆ…
ಬೆಂಗಳೂರು/ಮೈಸೂರು NEWS DESK ಆ.28: ಕೊಡಗಿನ ಜನರ ಪ್ರಮುಖ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾನವ–ಆನೆ ಸಂಘರ್ಷ ಹಾಗೂ ಡಾ. ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಗ್ರ ಪ್ರಸ್ತಾವನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಲ್ಲಿಸಿದ್ದಾರೆ. ಕೊಡಗಿನಲ್ಲಿ ಈ ಎರಡೂ ವಿಚಾರಗಳು ರೈತರು, ತೋಟದ ಮಾಲೀಕರು ಹಾಗೂ ಅರಣ್ಯ ಪ್ರದೇಶಗಳ ಸುತ್ತಮುತ್ತ ವಾಸಿಸುವ ಜನರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಸಮಸ್ಯೆಗಳಿಗೆ ವೈಜ್ಞಾನಿಕ ಮತ್ತು ದೀರ್ಘಕಾಲೀನ ಪರಿಹಾರ ಕಲ್ಪಿಸುವಂತೆ ಸಂಸದರು ಒತ್ತಾಯಿಸಿದ್ದಾರೆ. ಕೊಡಗಿನಲ್ಲಿ ನಡೆದ ವಿಶೇಷ ಸಭೆಗೆ ಯದುವೀರ್ ಒಡೆಯರ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಮೈಸೂರಿನಲ್ಲಿ ನಡೆಯುತ್ತಿದ್ದ ದಿಶಾ ಸಭೆಯಲ್ಲಿ ಪೂರ್ವನಿಗದಿತ ಅಧಿಕೃತ ಕಾರ್ಯಕ್ರಮವಿದ್ದ ಕಾರಣ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯ, ಸಲಹೆ ಹಾಗೂ ಪ್ರಸ್ತಾವನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನೇರವಾಗಿ ಸಲ್ಲಿಸಿದ್ದಾರೆ. ಕೊಡಗಿನಲ್ಲಿ ಹೆಚ್ಚುತ್ತಿರುವ ಮಾನವ–ಆನೆ ಸಂಘರ್ಷವನ್ನು ತಾತ್ಕಾಲಿಕ ಕ್ರಮಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಮಾನವ ಜೀವ, ಕೃಷಿ ಹಾಗೂ…
ಮಡಿಕೇರಿ, NEWS DESK ಆ.27: ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ತಾಣದ ರಕ್ಷಣೆ ಹಾಗೂ ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ ಕುರಿತು ಕೊಡಗು ಜಿಲ್ಲೆಯ ವಿವಿಧ ಹಾಲಿ-ಮಾಜಿ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಗಣ್ಯರ ಸಭೆ ಮಡಿಕೇರಿಯ ರಾಜ್ಯದರ್ಶನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕೊಡಗು-ಮೈಸೂರು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನ, ಅರಣ್ಯ ಹಾಗೂ ಖಾಸಗಿ ಜಮೀನುಗಳ ರಕ್ಷಣೆ ಮತ್ತು ಜಿಲ್ಲೆಯ ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಡು ಹಾಗೂ ಪರಿಸರವನ್ನು ಉಳಿಸಿ ರಕ್ಷಿಸಿಕೊಂಡು ಬರಲಾಗಿದ್ದು, ಪರಿಸರ ಸಂರಕ್ಷಣೆಗೆ ವಿರೋಧವಿಲ್ಲ. ಆದರೆ ಕಸ್ತೂರಿರಂಗನ್ ವರದಿಯನ್ನು ಕೇರಳ ಮಾದರಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು: * ಪ್ರತಿ ಗ್ರಾಮದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು…
ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ ‘ಎ’ ವರ್ಗೀಕರಣ ಪಡೆದುಕೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ರೂ.29 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ ತಿಳಿಸಿದರು. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ಕೊಡಗು ಜಿಲ್ಲಾದ್ಯಂತ ಕಾರ್ಯವ್ಯಾಪ್ತಿ ಹೊಂದಿದ್ದು, ಪ್ರಸ್ತುತ 2,165 ಸದಸ್ಯರನ್ನು ಹೊಂದಿದೆ. ರೂ.1.12 ಕೋಟಿ ಪಾಲು ಬಂಡವಾಳ, ರೂ.6.74 ಕೋಟಿ ಠೇವಣಿ ಹಾಗೂ ರೂ.5.73 ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮನೆ ಸಾಲ, ಕೃಷಿ ಸಾಲ, ಕೃಷಿಯೇತರ ದೀರ್ಘಾವಧಿ ಸಾಲ, ಠೇವಣಿಗಳ ಮೇಲಿನ ಸಾಲ ಹಾಗೂ ಆಭರಣ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಶೇ.97ರಷ್ಟು ಸಾಲ ವಸೂಲಾತಿ ಮಾಡಲಾಗಿದ್ದು, ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ ರೂ.3.32 ಕೋಟಿ…
ಚೆಟ್ಟಳ್ಳಿ, ಆ.27 NEWS DESK : ಕೊಡಗಿನ ಸಾಂಪ್ರದಾಯಿಕ ಕೈಲ್ ಪೊವ್ದ್ ಹಬ್ಬದ ಅಂಗವಾಗಿ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀ ಭಗವತಿ ದೇವಾಲಯದಲ್ಲಿ ಕೈಲ್ ಪೊವ್ದ್ ಧಾರೆ ಪೂಜೆಯನ್ನು ಸಂಪ್ರದಾಯಬದ್ಧವಾಗಿ ನೆರವೇರಿಸಲಾಯಿತು. ತಕ್ಕ ಮುಖ್ಯಸ್ಥರು ಹಾಗೂ ಊರಿನವರ ಸಮ್ಮುಖದಲ್ಲಿ ನಡೆದ ಪೂಜಾ ವಿಧಿವಿಧಾನಗಳಲ್ಲಿ ಪುರಾತನ ಕಾಲದಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರಿಸಲಾಯಿತು. ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಸೆಪ್ಟೆಂಬರ್ 3ರಂದು ಕೊಡಗಿನಾದ್ಯಂತ ಸಾಂಪ್ರದಾಯಿಕವಾಗಿ ಕೈಲ್ ಪೊವ್ದ್ ಹಬ್ಬ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ನಾಡಿನ ಜನತೆಗೆ ಒಳಿತಾಗಲಿ, ಸುಖ-ಸಮೃದ್ಧಿ ನೆಲೆಸಲಿ ಎಂದು ಕುಲದೇವರಾದ ಇಗ್ಗುತಪ್ಪ, ಕಾವೇರಮ್ಮೆ ಹಾಗೂ ಗ್ರಾಮ ದೇವರಲ್ಲಿ ಹಿರಿಯರಾದ ಬಟ್ಟಿರ ಕಾವೇರಪ್ಪ ಅವರು ಪ್ರಾರ್ಥಿಸಿದರು. ಪೂಜೆಯ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಹಿರಿಯರು, ತಕ್ಕ ಮುಖ್ಯಸ್ಥರು ಹಾಗೂ ಊರಿನವರು ಸೇರಿದಂತೆ ಹಲವು ಮಂದಿ ಧಾರೆ ಪೂಜೆಯಲ್ಲಿ ಪಾಲ್ಗೊಂಡು ಸಾಂಪ್ರದಾಯಿಕ ಆಚರಣೆಗೆ ಸಾಕ್ಷಿಯಾದರು.
ಮಡಿಕೇರಿ, ಆ.27 NEWS DESK : ರಕ್ಷಾಬಂಧನದ ಪ್ರಯುಕ್ತ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಲಾಯಿತು. ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ಸಂಸದ ಯದುವೀರ್ ಒಡೆಯರ್ ಅವರಿಗೆ ರಾಖಿ ಕಟ್ಟಿ, ತಿಲಕವಿಟ್ಟು ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು. ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ಪರಸ್ಪರ ರಕ್ಷಣೆಯ ಸಂಕೇತವಾಗಿರುವ ರಕ್ಷಾಬಂಧನದ ಮಹತ್ವವನ್ನು ಈ ಸಂದರ್ಭದಲ್ಲಿ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅಪ್ಪಚ್ಚು ರಂಜನ್, ಸುಜಾ ಕುಶಾಲಪ್ಪ ಸೇರಿದಂತೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ಹಾಗೂ ಇತರ ಸಹೋದರ-ಸಹೋದರಿಯರಿಗೂ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ರಾಖಿ ಕಟ್ಟಿ ರಕ್ಷಾಬಂಧನದ ಶುಭಾಶಯಗಳನ್ನು ಸಲ್ಲಿಸಲಾಯಿತು. ಈ ವೇಳೆ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಸಂಸದರು ಸೇರಿದಂತೆ ಗಣ್ಯರನ್ನು ಶಾಖೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ರಕ್ಷಾಬಂಧನದ ಮೂಲಕ ಸಮಾಜದಲ್ಲಿ ಸಹೋದರತ್ವ, ಸೌಹಾರ್ದತೆ, ಪ್ರೀತಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಸಂದೇಶವನ್ನು…
ವಿರಾಜಪೇಟೆ, NEWS DESK ಆ.27: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ. ಸುಬ್ಬಯ್ಯ ಅವರ ಪುಣ್ಯಸ್ಮರಣೆಯ ಅಂಗವಾಗಿ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ತಮ್ಮ ಪೂಜನೀಯ ತಾಯಿಯವರ ಸಮಾಧಿಗೂ ಪುಷ್ಪ ನಮನ ಸಲ್ಲಿಸಿ ವಂದಿಸಿದರು. ಈ ಸಂದರ್ಭದಲ್ಲಿ ಶಾಸಕರ ಹಿರಿಯ ಸಹೋದರ ಎ.ಎಸ್. ನರೇನ್ ಕಾರ್ಯಪ್ಪ, ಶಾಸಕರ ದೊಡ್ಡಮ್ಮ ಮಾಚಮಾಡ ಗಂಗಮ್ಮ, ಪ್ರಮುಖರಾದ ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಪೊನ್ನಪ್ಪ, ಆದಿತ್ಯ ಪೆಮ್ಮಯ್ಯ, ಬಾಳೆಯಡ ಕರುಣ್ ಕಾಳಪ್ಪ, ಶಾಸಕರ ಸಿಬ್ಬಂದಿ ವರ್ಗದವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.






