ಲೇಖಕ: admin

ಮಡಿಕೇರಿ NEWS DESK ಆ.9 : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಪ್ರಕಾಶ್ ಆಚಾರ್ಯ ಅವರನ್ನು ನಿಯಮ ಬಾಹಿರವಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಮಡಿಕೇರಿ ನಗರಾಧ್ಯಕ್ಷ ಗಜೇಂದ್ರ ಕುಶ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಕಾಯ್ದೆಯನ್ವಯ ನಾಮ ನಿರ್ದೇಶಿತ ಸದಸ್ಯರು ಯಾವುದೇ ರಾಜಕೀಯ ಪಕ್ಷದ ಪದಾಧಿಕಾರಿಯಾಗಿರಬಾರದು. ಆದರೆ ಪ್ರಕಾಶ್ ಆಚಾರ್ಯ ಅವರು ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿಗೆ ನಾಮ ನಿರ್ದೇಶನವಾಗುವಾಗ ನಗರ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿದ್ದರು, ಅಲ್ಲದೆ ಪ್ರಸ್ತುತ ನಗರಾಧ್ಯಕ್ಷರಾಗಿದ್ದಾರೆ ಎಂದು ಗಮನ ಸೆಳೆದಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ತಿದ್ದುಪಡಿ ಅದಿನಿಯಮ 2011 ರ ಸೆಕ್ಷನ್ 25(3) ಮತ್ತು (4)ರ ಅನಹರ್ತೆಗಳೊಂದಿಗೆ ಹಾಗೂ ಕಾಯ್ದೆಯ (2)ನೇ ಯ ತಿದ್ದುಪಡಿ ಕಲಂ 25(2)(ಡಿ) ಅನ್ವಯ ಯಾವುದೇ ರಾಜಕೀಯ ಪಕ್ಷದ ಪದಾಧಿಕಾರಿಯಾಗಿರುವುದು ಕಂಡು ಬಂದಲ್ಲಿ ಅಂತಹವರ ಸದಸ್ಯತ್ವ…

Read More

ಮಡಿಕೇರಿ NEWS DESK ಆ.9 : ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕರೊಬ್ಬರು ಗಾಯಗೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕು ಅಮ್ಮತಿ ಗ್ರಾ.ಪಂ ವ್ಯಾಪ್ತಿಯ ಇಂಜಿಲಗೆರೆ ಬಳಿ ನಡೆದಿದೆ. ಕಾಫಿ ತೋಟದ ಕೆಲಸಕ್ಕೆಂದು ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ಪ್ರದೀಪ್ ಎಂಬುವವರೇ ಗಾಯಗೊಂಡಿರುವ ಕಾರ್ಮಿಕ. ಇಂದು ಬೆಳಿಗ್ಗೆ ಮೂವರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾದ ಮೇಲೆ ಮುಖ್ಯರಸ್ತೆಯ ತಿರುವಿನಲ್ಲಿ ತೋಟದೊಳಗಿನಿಂದ ದಿಢೀರ್ ಆಗಿ ಧಾವಿಸಿದ ಆನೆ ದಾಳಿ ಮಾಡಿದೆ. ಈ ಸಂದರ್ಭ ಆನೆಯ ದಂತ ತಗುಲಿ ಪ್ರದೀಪ್ ಗಾಯಗೊಂಡರು ಎಂದು ತಿಳಿದು ಬಂದಿದೆ. ಆಟೋದಲ್ಲಿದ್ದವರು ಕಿರುಚಿಕೊಂಡಾಗ ಮತ್ತೊಮ್ಮೆ ದಾಳಿ ಮಾಡಲು ಕಾಡಾನೆ ಮುಂದಾಗಿದೆ. ಸಮಯ ಪ್ರಜ್ಞೆ ಮೆರೆದ ಆಟೋ ಚಾಲಕ ಫಿರೋಜ್ ಅವರು ವೇಗವಾಗಿ ಆಟೋವನ್ನು ಚಲಾಯಿಸಿದ್ದಾರೆ. ಆಟೋದ ಹಿಂಭಾಗದಲ್ಲಿ ಕಾಡಾನೆ ಓಡಿ ಬಂದಿತ್ತಾದರೂ ಬೇರೊಂದು ವಾಹನ ಬಂದ ತಕ್ಷಣ ಪಕ್ಕದ ತೋಟದೊಳಗೆ ನುಸುಳಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಲಯ ಅರಣ್ಯ ಅಧಿಕಾರಿ ಶಿವರಾಮ ಅವರ ನಿರ್ದೇಶನದ ಮೇರೆಗೆ ಉಪ ವಲಯ…

Read More

ಮಡಿಕೇರಿ NEWS DESK ಆ.9 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೊಡವರ ಪರವಾದ ವಿವಿಧ ಹಕ್ಕುಗಳನ್ನು ಮಂಡಿಸಿತು. ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ನಿರಂತರವಾಗಿ ಶಾಂತಿಯುತ ಧರಣಿ ಸತ್ಯಾಗ್ರಹಗಳನ್ನು ನಡೆಸಲಾಗುತ್ತಿದೆ ಎಂದರು. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು…

Read More

ಸೋಮವಾರಪೇಟೆ NEWS DESK ಆ.9 : ರಕ್ಷಾ ಬಂಧನದ ಹಿನ್ನೆಲೆ ಸೋಮವಾರಪೇಟೆ ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖರು ಪತ್ರಕರ್ತರಿಗೆ ರಕ್ಷೆ ಕಟ್ಟಿ ಶುಭ ಹಾರೈಸಿದರು. ಸಹೋದರತ್ವ ಮತ್ತು ಬಾಂಧವ್ಯದ ಕೊಂಡಿ ರಕ್ಷಾ ಬಂಧನ ಎಂದು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗೆ ರಕ್ಷೆ ಕಟ್ಟಿ ಶುಭ ಹಾರೈಸಿದ ಅವರು ಹೆಣ್ಣು ಮಕ್ಕಳು ಸಹೋದರ ಭಾವನೆಯಿಂದ ರಕ್ಷೆ ಕಟ್ಟಿ ಸಹೋದರರಿಂದ ಆಶೀರ್ವಾದ ಮತ್ತು ರಕ್ಷಣೆ ಕೋರುವ ಸಂಪ್ರದಾಯ ನಮ್ಮ ದೇಶದಲ್ಲಿ ಆಚರಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದರು. ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಮೋಹಿನಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ತಂಗಮ್ಮ, ಹಾನಗಲ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಣುಕಾ, ಮಂಡಲ ಬಿಜೆಪಿ ಕಾರ್ಯದರ್ಶಿ ಇಂದಿರಾ ಸಾಲಿಯಾನ, ಪ್ರಮುಖರಾದ ವರಲಕ್ಷ್ಮಿ ಸಿದ್ದೇಶ್ವರ, ಸುಮತಿ ಉಪಸ್ತಿತರಿದ್ದರು. ನಂತರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೂ ರಕ್ಷೆ ಕಟ್ಟಿ ಶುಭ ಹಾರೈಸಿದರು.

Read More

ಮಡಿಕೇರಿ NEWS DESK ಆ.9 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ )ನ ಕೊಡಗು ಜಿಲ್ಲಾ ಘಟಕದ ವತಿಯಿಂದ ಬೆಳ್ಳಿ ಹಬ್ಬ ಆಚರಣೆಯ ಅಂಗವಾಗಿ “ತರು-ಯಜ್ಞ” ಎಂಬ ವಿಶೇಷ ಕಾರ್ಯಕ್ರಮಕ್ಕೆ ಕೊಡಗಿನ ವಿವಿಧ ತಾಲೂಕುಗಳಲ್ಲಿ ಚಾಲನೆ ನೀಡಲಾಯಿತು. ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಔಷಧೀಯ ಗಿಡಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕೊಡಗಿನಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿಯಲ್ಲಿ ಒಂದು ವರ್ಷದಲ್ಲಿ ಕೊಡಗಿನ ಶಾಲಾ ಕಾಲೇಜುಗಳಲ್ಲಿ ಕನಿಷ್ಠ 2,500 ಔಷಧೀಯ ಗಿಡಗಳನ್ನು ಮಕ್ಕಳ ಮೂಲಕ ಬೆಳೆಸುವ ಗುರಿ ಹೊಂದಲಾಗಿದೆ. ಒಂದು ವರ್ಷದ ನಂತರ ಅತ್ಯುನ್ನತವಾಗಿ ಬೆಳೆದ ಮದ್ದಿನ ಗಿಡಗಳನ್ನು ಪೋಷಿಸುತ್ತಿರುವ ವಿದ್ಯಾರ್ಥಿಗಳಿಗೆ ಬಹುಮಾನ  ನೀಡಲಾಗುವುದು ಎಂದು ನೀಮಾ ಪ್ರಮುಖರು ತಿಳಿಸಿದರು. ಮಡಿಕೇರಿಯ ಕೊಡಗು ವಿದ್ಯಾಲಯದ ಎನ್ ಸಿ ಸಿ ವಿದ್ಯಾರ್ಥಿಗಳು, ನಾಪೋಕ್ಲುವಿನ ಪಾರಾಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು, ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಹಾಗೂ ಕುಶಾಲನಗರದಲ್ಲಿ ಪೋಷಕರು ಈ ವಿಶೇಷ ಯೋಜನೆಗೆ ಚಾಲನೆ ನೀಡಿದರು. ಕೊಡಗು ನೀಮಾ ಸದಸ್ಯ…

Read More

ಮಡಿಕೇರಿ NEWS DESK ಆ.9 : ಮಡಿಕೇರಿ ನಗರದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಟ್ರಸ್ಟಿಗಳು, ದಸರಾ ಉತ್ಸವ ಸಮಿತಿಯ ಮಾಜಿ ಗೌರವ ಅಧ್ಯಕ್ಷರು ಹಾಗೂ ಅಂಬಿಕಾ ವೀಡಿಯೋಸ್ ನ ಮಾಲೀಕರೂ ಆದ ಅಜ್ಜಿನಂಡ ಗಣೇಶ್ ಅಯ್ಯಣ್ಣ (68) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಸಮಾಜ ಸೇವಕಿ ಮೊಹಂತಿ ಗಣೇಶ್ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮೃತ ಗಣೇಶ್ ಅವರ ಅಂತ್ಯಕ್ರಿಯೆ ಆ.10 ರಂದು ಮಡಿಕೇರಿಯ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ.

Read More

ಸೋಮವಾರಪೇಟೆ NEWS DESK ಆ.8 : ರೈತರ ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸುವುದಕ್ಕೆ ಸರ್ಕಾರ ಸೆಕ್ಷನ್-4 ಸರ್ವೆಗೆ ಮುಂದಾಗಿರುವುದನ್ನು ಖಂಡಿಸಿ ಆ.12 ರ ಮಂಗಳವಾರ ಸೋಮವಾರಪೇಟೆ ತಾಲ್ಲೂಕು ಬಂದ್ ನಡೆಸಲಾಗುವುದು ಎಂದು ರೈತ ಹೋರಾಟ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಆ.11ರಂದು ನಡೆಸಬೇಕಿದ್ದ ತಾಲ್ಲೂಕು ಬಂದ್ ಅನ್ನು ಆ.12ಕ್ಕೆ ಮುಂದೂಡಲಾಗಿದ್ದು, ವರ್ತಕರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ರೈತರು ಕೃಷಿ ಭೂಮಿಯನ್ನು ಕಳೆದುಕೊಂಡು ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕೊಡಗು ಜಿಲ್ಲೆಯಲ್ಲಿ 25 ಸಾವಿರ ಎಕರೆಯಷ್ಟು ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಕಳೆದುಕೊಳ್ಳಬೇಕಾಗಿದ್ದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದರು. ರೈತರು ಅನೇಕ ದಶಕಗಳ ಹಿಂದೆಯೇ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದಾರೆ.  ಅನೇಕ ವರ್ಷಗಳಿಂದ ಕಂದಾಯ ಇಲಾಖೆಗೆ ನಮೂನೆ 50,53, 57 ಅರ್ಜಿ ಸಲ್ಲಿಸಿಕೊಂಡು ಹಕ್ಕುಪತ್ರಕ್ಕಾಗಿ ಪರದಾಡುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೃಷಿ ಭೂಮಿಯನ್ನೇ ಸಿ ಆ್ಯಂಡ್ ಡಿ ಭೂಮಿಯೆಂದು ಸರ್ವೆಗೆ ಮುಂದಾಗಿರುವುದು ಖಂಡನೀಯ…

Read More

ಮಡಿಕೇರಿ NEWS DESK ಆ.8 : ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಅಖಂಡ ಭಾರತದ ಸಂಕಲ್ಪ ತೊಟ್ಟರು. ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಂಜಿನ ಮೆರವಣಿಗೆ ಆರಂಭಗೊಂಡಿತು. ಇಂದಿರಾ ಗಾಂಧಿ ವೃತ್ತ, ಅಂಚೆ ಕಚೇರಿ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಕೊಡವ ಸಮಾಜದ ವರೆಗೆ ಮೆರವಣಿಗೆ ಸಾಗಿತು. ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಸ್ತುತ ಭಾರತ ದೇಶ ಎದುರಿಸುತ್ತಿರುವ ಸವಾಲುಗಳ ಕುರಿತು ಪ್ರಮುಖರು ವಿವರಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತದ ಸಂಕಲ್ಪ ದಿನ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥಾ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಂಜನ್…

Read More

ವಿರಾಜಪೇಟೆ NEWS DESK ಆ.8 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜ್ ನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅವರು ನೇಮಕಗೊಂಡಿದ್ದಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯ ಆದೇಶಿಸಿದೆ. ತೃಪ್ತಿ ಬೋಪಣ್ಣ ಅವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು, ಕಳೆದ 16 ವರ್ಷಗಳಿಂದ ಸೆಂಟ್ ಆನ್ಸ್ ಪದವಿ ಕಾಲೇಜ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಾಣಿಜ್ಯ ಶಾಸ್ತ್ರ ವಿಷಯದ ಪ್ರಾಧ್ಯಾಪಕಿಯೂ ಆಗಿರುವ ಅವರು ಈ ಹಿಂದೆ ಕಾಲೇಜ್ ನ ಐಕ್ಯೂಎ ಸಿ ಸಂಚಾಲಕಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.  ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ ತೃಪ್ತಿ ಬೋಪಣ್ಣ ಅವರನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಅವರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Read More

ಮಡಿಕೇರಿ NEWS DESK ಆ.8 : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸುವ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ವಿ.ಟಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ. ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರ (7 ಮಂದಿಯ ತಂಡ) ವಿಭಾಗಕ್ಕೆ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ (4 ಮಂದಿಯ ತಂಡ) ಮತ್ತು…

Read More