ಮಡಿಕೇರಿ ಆ.8 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ‘ವೀರ್ ಪರಿವಾರ್ ಸಹಾಯತಾ ಯೋಜನೆ 2025’ ಎಂಬ ಯೋಜನೆಯು ಈಗಾಗಲೇ ಆರಂಭಿಸಲಾಗಿದೆ. ಈ ಯೋಜನೆಯು ಕೇಂದ್ರೀಯ ಸೈನಿಕ ಮಂಡಳಿಯ ಸಹಯೋಗದೊಂದಿಗೆ ಮೀಸಲಾದ ಕಾನೂನು ಸೇವಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಕ್ಷಣಾ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ಈ ಯೋಜನೆಯನ್ವಯ ಇಲಾಖಾ ಕಚೇರಿಯಲ್ಲಿ ನಿಗದಿತ ವಕೀಲರು ವಾರದಲ್ಲಿ ಒಂದು ದಿನ ಲಭ್ಯವಿದ್ದು, ಕಾನೂನು ಸಹಾಯ ಬೇಕಿರುವ ಕೊಡಗು ಜಿಲ್ಲೆಯ ಮಾಜಿ ಸೈನಿಕರು ಮತ್ತು ಅವಲಂಬಿತರು ಕಚೇರಿ ದಿನಗಳಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಾರ್ಯಾಲಯವನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಆ.8 NEWS DESK : ಪಂಚಾಯತಿ ವ್ಯಾಪ್ತಿಗೆ ಬರುವ ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಗಾಳಿಬೀಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವ ಭಾವಿ ಸಭೆ ನಡೆಯಿತು. ಅದ್ಯಕ್ಷರಾದ ಪುಪ್ಷವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ತಂಬಾಕು ಮುಕ್ತ ಗ್ರಾಮ ಘೋಷಣೆ, ಗೃಹ ಆರೋಗ್ಯ ಯೋಜನೆ, ಕುಷ್ಠರೋಗ ಪತ್ತೆ ಅಭಿಯಾನ, ಕ್ಷಯರೋಗ ಮುಕ್ತ, ಮತ್ತು ಡೆಂಗ್ಯೂ ನಿಯಂತ್ರಣ ಕುರಿತು ಮಾಹಿತಿ ನೀಡಿ ಪಂಚಾಯತಿ ಸಹಕಾರ ನೀಡುವಂತೆ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಾಲಾಕ್ಷ ಮಾತನಾಡಿ, ಸ್ತನ್ಯಪಾನ ಸಪ್ತಾಹ ಕುರಿತು ತಾಯಂದಿರು ಶಿಶುವಿಗೆ ಎದೆ ಹಾಲು ನೀಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ತಂಬಾಕು ಕೋಶದ ಪುನೀತ, ಮಂಜುನಾಥ್ ಅವರು ತಂಬಾಕು ಮುಕ್ತ ಗ್ರಾಮದ ಮಾರ್ಗಸೂಚಿ ಕುರಿತು ವಿವರಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರಾಜಶೇಖರ ಮತ್ತು ಸದಸ್ಯರು, ಹಾಗೂ ಪಂಚಾಯತಿ…
ಮಡಿಕೇರಿ ಆ.8 NEWS DESK : 2025-26 ನೇ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ದೆಯನ್ನು ಇಲಾಖಾ ವತಿಯಿಂದ ಈ ದಿನಾಂಕ ಮತ್ತು ಸ್ಥಳಗಳಲ್ಲಿ ಏರ್ಪಡಿಸಲಾಗಿದ್ದು. ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲ್ಲೂಕು ಕ್ರೀಡಾಪಟುಗಳು ಭಾಗವಹಿಸಬಹುದು. ಮಡಿಕೇರಿ ತಾಲ್ಲೂಕಿಗೆ ಆಗಸ್ಟ್, 18 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ, ಸಾಯಿ ಹಾಕಿ ಟರ್ಫ್, ಮಡಿಕೇರಿ. ಪೊನ್ನಂಪೇಟೆ ತಾಲ್ಲೂಕಿಗೆ ಆಗಸ್ಟ್, 19 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ ವಿರಾಜಪೇಟೆ ತಾಲ್ಲೂಕಿಗೆ ಆಗಸ್ಟ್ 20 ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ. ಕುಶಾಲನಗರ ತಾಲ್ಲೂಕಿಗೆ ಆಗಸ್ಟ್, 21 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಹಾಗೂ ಸೈನಿಕ ಶಾಲೆ, ಕೂಡಿಗೆ ಹಾಗೂ ಸೋಮವಾರಪೇಟೆ ತಾಲ್ಲೂಕಿಗೆ ಆಗಸ್ಟ್, 22 ರಂದು ಕೂಡಿಗೆ ಕ್ರೀಡಾ …
ಮಡಿಕೇರಿ ಆ.8 NEWS DESK : 2025ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷೆ ಕವಿಗೋಷ್ಠಿಗೆ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ, ಕವಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಯತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆಪ್ಟೆಂಬರ್ 6 ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕøತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(6 ರಿಂದ 14 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.ಮಕ್ಕಳ ಕವನ ಕಳುಹಿಸುವವರು ತರಗತಿ ಹಾಗೂ ಶಾಲೆಯ ವಿವರವನ್ನು ನಮೂದಿಸಬೇಕು. ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ…
ಮಡಿಕೇರಿ ಆ.8 NEWS DESK : ಪ್ರಧಾನಮಂತ್ರಿಯವರ ಉದ್ಯೋಗ ಸೃಜನೆ ಯೋಜನೆಯಡಿಯಲ್ಲಿ ನಿಗಧಿತ ಗುರಿ ನೀಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ, ಪ್ರಧಾನಮಂತ್ರಿಯವರ ವಿಶ್ವಕರ್ಮ ಯೋಜನೆ ಜಿಲ್ಲಾ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಇಲಾಖೆ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದರ ಜತೆಗೆ ಉದ್ದಿಮೆ ಪ್ರಾರಂಭಿಸಲು ಹೆಚ್ಚಿನ ಅನುಕೂಲ ಮಾಡಬೇಕು ಎಂದರು. ವಿಶ್ವಕರ್ಮ ಯೋಜನೆಯ ನಾಮ ನಿರ್ದೇಶಿತ ಸದಸ್ಯರಾದ ನಾಗೇಶ್ ಕುಂದಲ್ವಾಡಿ ಹಾಗೂ ರಾಬಿನ್ ದೇವಯ್ಯ ಅವರು ಸಭೆಯಲ್ಲಿ ಮಾತನಾಡಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಫಲಾನುಭವಿಗಳ ಯಶೋಗಾಥೆ ಒದಗಿಸುವಂತೆ ತಿಳಿಸಿದರು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಕುಂದು ಕೊರತೆ, ಚಟುವಟಿಕೆ ಹಾಗೂ ಬದಲಾವಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಶಿವಲಿಂಗಯ್ಯ ಹಾಗೂ ಉಪ ನಿರ್ದೇಶಕರಾದ ಉಮೇಶ್ವಿ ಹಾಜರಿದ್ದು…
ಮಡಿಕೇರಿ ಆ.8 NEWS DESK : 66/11ಕೆ.ವಿ ಕುಶಾಲನಗರ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಸುಂಟಿಕೊಪ್ಪ, ಪನ್ಯ, ಹೊಸಕೋಟೆ, ನಾಕೂರು, ಗದ್ದೆಹಳ್ಳ ಫೀಡರ್‍ಗಳಲ್ಲಿ ಆಗಸ್ಟ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯ ಹರದೂರು, ಉಲುಗುಲಿ, ನಾರ್ಗಾಣೆ, ಬೆಟ್ಟಗೇರಿ, ನಾಕೂರು, ಹೆರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಬೆಂಗಳೂರು ಆ.9 NEWS DESK : ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಗಾಗಿ ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ನಾಯಕರು ಸ್ವಾಗತಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಚಿವರು ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಮಡಿಕೇರಿ NEWS DESK ಆ.8 : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನಾ ಜಾಥಾ ನಡೆಸಿತು. ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ಭವನದ ವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರು. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಆಧಾರ ರಹಿತ ಆರೋಪ ಮಾಡಲಾಗುತ್ತಿದ್ದು, ಇದರಿಂದ ಭಕ್ತರಿಗೆ ನೋವುಂಟಾಗಿದೆ. ಯುವ ಜನಾಂಗದಲ್ಲಿ ಕೋಮು ಭಾವನೆ ಮೂಡುತ್ತಿದ್ದು, ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಮಡಿಕೇರಿ ಸಂಚಾಲಕ ಅಗೋಳಿಕಜೆ ಧನಂಜಯ…
ಮಡಿಕೇರಿ ಆ.8 NEWS DESK : ಕುಂಜಿಲ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಮಡಿಕೇರಿ ವುಡ್ಸ್‌ನ ರೋಟೆರಿಯನ್ ಬಿ.ಜಿ.ಅನಂತಶಯನ, ಕಿರಣ್ ಕುಂದರ್, ವಸಂತ್ ಕುಮಾರ್ ಮತ್ತು ಕೆ.ಜಿ.ಹರೀಶ್ ಉದ್ಘಾಟಿಸಿದರು. ಜಿಲ್ಲಾ ರೋಟರಿ ಚೇರ್ ಮ್ಯಾನ್ ಬಿ.ಜಿ.ಅನಂತಶಯನ ಮಾತನಾಡಿ ಸಮುದಾಯ ಸೇವೆ ಮತ್ತು ನಾಯಕತ್ವದ ಮಹತ್ವವನ್ನು ವಿವರಿಸಿದರು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದೆರ್ ಮಾತನಾಡಿ, ಇಂಟರಾಕ್ಟ್ ಕ್ಲಬ್ ರೋಟರಿ ಇಂಟರ್ನ್ಯಾಷನಲ್‌ನ ತತ್ವಗಳಿಂದ ಮಾರ್ಗದರ್ಶನ ಪಡೆದು ಅರ್ಥಪೂರ್ಣ ಸೇವೆ, ನಾಯಕತ್ವ ಅಭಿವೃದ್ಧಿಯೊಂದಿಗೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಲಿ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಶಾಹಿದ್ ಆಲಿ, ಪ್ರಾಂಶುಪಾಲರಾದ ಎಂ.ಎಂ.ಕವಿತಾ ಹಾಗೂ ಎಂ.ಜಿ.ಗಗನ್ ಉಪಸ್ಥಿತರಿದ್ದರು. ಪ್ರಸಕ್ತ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳನ್ನು ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ 10ನೇ ತರಗತಿ ವಿದ್ಯಾರ್ಥಿನಿ ಆಯಿಷ ಪರಿಚಯಿಸಿದಳು. ನೂತನ ಪದಾಧಿಕಾರಿಗಳಿಂದ ಪ್ರಮಾಣ ವಚನ ಸ್ವೀಕರಿಸಲಾಯಿತು.
ವಿರಾಜಪೇಟೆ ಆ.8 NEWS DESK : ಆಧುನಿಕ ಜೀವನ ಶೈಲಿಯಿಂದ ಕೃಷಿ ಭೂಮಿಯಿಂದ ದೂರ ಉಳಿದ ಯುವ ಜನತೆ ಒಂದು ದಿನವಾದರೂ ಕೃಷಿ ಭೂಮಿಯ ಸಂಪರ್ಕಕ್ಕೆ ಬಂದು ರೈತಾಪಿ ಬದುಕಿನ ಅನುಭವ ಪಡೆಯಬೇಕು ಎಂದು ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಾಲ್ಡಾನಾ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಟ್ಟಂಗಾಲದ ನಿವೃತ್ತ ಪೊಲೀಸ್ ಬಿ.ಡಿ.ಮಂದಪ್ಪ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿನ ವರ್ಷದಲ್ಲಿ ಯುವಜನತೆ ಕೃಷಿ ಭೂಮಿಯಿಂದ ದೂರ ಸರಿಯುತ್ತಿದ್ದಾರೆ. ಅಲ್ಲದೆ ಹಿಂದಿನ ಕಾಲದಲ್ಲಿ ಕೃಷಿ ಭೂಮಿಯ ಜೊತೆಗೆ ಹೊಂದಿದ್ದ ಅವಿನಾಭಾವ ಸಂಬಂಧ ಕಡಿಮೆಯಾಗುತ್ತಿದೆ. ವರ್ಷದಲ್ಲಿ ಒಂದು ಬಾರಿಯಾದರೂ ವಿದ್ಯಾರ್ಥಿಗಳು ಕೃಷಿ ಭೂಮಿಯ ಅನುಭವ ಪಡೆಯಬೇಕು. ವಿದ್ಯಾರ್ಥಿಗಳು ತಮ್ಮ ಪ್ರತಿನಿತ್ಯದ ಮನೆ ಹಾಗೂ ಶಿಕ್ಷಣದ ಜಂಜಾಟವನ್ನು ಮರೆತು ಪ್ರಕೃತಿಯ ಮಧ್ಯೆ ಕೃಷಿಭೂಮಿ, ನೀರು, ಕೆಸರು, ಮಳೆ ಮುಂತಾದವುಗಳ ಅನುಭವವನ್ನು ಪಡೆದು ಸಂಭ್ರಮಿಸಿ ದೈಹಿಕ ಹಾಗೂ ಮಾನಸಿಕವಾಗಿ ಪುನಶ್ಚೇತನಗೊಳಿಸಲು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ…






