ಮಡಿಕೇರಿ ಆ.7 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಇದರ ಭಾಗವಾಗಿ ಮಡಿಕೇರಿಯಲ್ಲಿ ಕೂಡ ಮೂರು ದಿನಗಳ ಕಾಲ ಸಮಾವೇಶ ಮತ್ತು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕಾರಣದಿಂದ ಮಡಿಕೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಸಾಧ್ಯವಾಗದಿರುವುದರಿಂದ ಆ.12, 13 ಹಾಗೂ 14 ರಂದು ಕೆಲಸ ಸ್ಥಗಿತಗೊಳಿಸಲಾಗುವುದು. ಆ.12 ರಂದು ನಗರದ ಬಾಲಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ…
ಲೇಖಕ: admin
ಮಡಿಕೇರಿ ಆ.7 NEWS DESK : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 166ನೇ ರಾಜ್ಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2025 ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 67 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶೇ.100ರಷ್ಟು ಫಲಿತಾಂಶದೊಂದಿಗೆ 36 ಚಾಂಪಿಯನ್ ಟ್ರೋಫಿ, 22 ಚಿನ್ನದ ಪದಕ ಮತ್ತು 9 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಕರ್ನಾಟಕದ ಒಟ್ಟು 80 ಬ್ರೈನೋಬ್ರೈನ್ ಕೇಂದ್ರಗಳಿಂದ ಸುಮಾರು 2100 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ 67 ವಿದ್ಯಾರ್ಥಿಗಳು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದರು. ಕೇವಲ 3 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಮಡಿಕೇರಿ ‘ಬ್ರೈನೋಬ್ರೈನ್’ ಕೇಂದ್ರಕ್ಕೆ “ಬೆಸ್ಟ್ ಪ್ರಾಂಚೈಸಿ” ಮತ್ತು “ಬೆಸ್ಟ್ ಫ್ಯಾಕಲ್ಟಿ” ಪ್ರಶಸ್ತಿ ಲಭಿಸಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಸಾಧನೆಯ ಹೆಗ್ಗಳಿಕೆಯು ತಮ್ಮ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು,…
ಮಡಿಕೇರಿ ಆ.7 NEWS DESK : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೊಡವರ ಪರವಾದ ವಿವಿಧ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಧರಣಿ ನಡೆಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ…
ಪುತ್ತೂರು ಆ.7 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆ.9 ರಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ. 2024-25ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀದರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್ ಗಳಿಸಿಕೊಂಡಿರುವ ಸುಚಿತಾ, ಪ್ರಜ್ಞಾಶಂಕರಿ, ಸಿಂಚನಲಕ್ಷ್ಮಿ, ಶ್ರೀಲಕ್ಷ್ಮಿ.ವಿ, ರÀವಿನಾರಾಯಣ.ಕೆ.ಎಸ್, ರಾಹುಲ್.ಕೆ, ಲಿಖಿತ.ಕೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ. ಅಂದು ಬೆಳಿಗ್ಗೆ 10 ಗಂಟೆಗೆ ಈ ಸಮಾರಂಭ ನಡೆಯಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಹಾಗೂ ನಿರ್ದೇಶಕ ಬಲರಾಮ ಆಚಾರ್ಯ.ಜಿ ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಾರೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು,…
ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಹೆಡ್ ಕಾನ್ಸಟೇಬಲ್ ಮೂಲತ: ಚಾಮರಾಜನಗರ ಜಿಲ್ಲೆಯ ಎಂ.ಎನ್.ವಿಜಯ (47) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪೊಲೀಸ್ ಹೆಡ್ ಕಾನ್ಸಟೇಬಲ್ ಎಂ.ಎನ್.ವಿಜಯ ಅವರು ಕೊಡಗು ಜಿಲ್ಲಾ ಸಶಸ್ತ್ರ ಪಡೆಯಲ್ಲಿ 1997ರ ಆಗಸ್ಟ್ 1 ರಂದು ಕರ್ತವ್ಯಕ್ಕೆ ನೇಮಕಗೊಂಡು ಸುಮಾರು 28 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮಡಿಕೇರಿಯ ಪೊಲೀಸ್ ಮೈತ್ರಿ ಭವನದ ಉಸ್ತುವಾರಿಯಾಗಿದ್ದ ಇವರು ಪೊಲೀಸ್ ಬ್ಯಾಂಡ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ.6 ರಂದು ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಎಂ.ಎನ್.ವಿಜಯ ಅವರ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಗುರುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಿಜಯ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.…
ಮಡಿಕೇರಿ ಆ.7 NEWS DESK : ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕೃತಿ ಮತ್ತು ಕ್ರೀಡಾ ಅಸೋಷಿಯೇಷನ್ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ನಡೆದ “ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ಜನರು ಹಿಂದಿನಿಂದಲೂ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಕೃಷಿ ಜೊತೆಗೆ ಕಲೆ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸಿಕೊಂಡು ಬಂದಿದ್ದು, ಅದನ್ನು ಮುಂದಿನ ಪೀಳಿಗೆಗೂ ತಿಳಿಸುವಂತಾಗಬೇಕು ಎಂದು ಸಲಹೆ ನೀಡಿದರು. ಆಟ್‍ಪಾಟ್ ಜೊತೆಗೆ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ…
ಮಡಿಕೇರಿ ಆ.7 NEWS DESK : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನ ಖಾಲಿ ಇರುವ 11 ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಿಬಿಎಸ್‍ಇ ಅಥವಾ ಮಾನ್ಯತೆ ಪಡೆದ ರಾಜ್ಯ ಮಂಡಳಿಯಿಂದ ಹತ್ತನೇ ತರಗತಿ ಪಾಸಾಗಿದ್ದು, ಕನಿಷ್ಠ ಶೇ.60 ಅಂಕಗಳನ್ನು ಪಡೆದಿರಬೇಕು. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಕನಿಷ್ಠ 60 ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಆನ್‍ಲೈನ್ ಮತ್ತು ಆಪ್‍ಲೈನ್ ಎರಡು ಮಾರ್ಗಗಳಲ್ಲಿ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನವೋದಯ ಶಾಲೆಯ ದೂ.ಸಂ.9481426184,9380802179 https://drive.google.com/file/d/1YPFdXUV8r17nZk499A9JHyMWrN4VQzv9. view?usp=sharing ನ್ನು ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಕುಶಾಲನಗರ ಆ.7 NEWS DESK : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ ಕುಶಾಲನಗರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ವೇದಿಕೆಯ ಜಿಲ್ಲಾ ಅಧ್ಯಕ್ಷ ಎ.ಟಿ ರಂಗಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಪ್ರತಿ ಶಾಲೆಯಲ್ಲಿ ಮಾದಕ ವಸ್ತು ತಡೆ ಸಮಿತಿ ರಚನೆ ಬಗ್ಗೆ ಚರ್ಚೆ ನಡೆಯಿತು. ತಾಲೂಕು ಯೋಜನಾಧಿಕಾರಿಗಳಿಂದ ಪ್ರಥಮ ತ್ರೈಮಾಸಿಕ ಸಾಧನ ವರದಿ ಮಂಡಿಸಲಾಯಿತು. ವೇದಿಕೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ವಿವೇಕ್ ವಿ ಪಾಯಸ್ ಅವರು 2025 26ನೇ ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ನಡೆಯುತ್ತಿರುವ ಬಗ್ಗೆ ಸಭೆಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು ಚರ್ಚೆ ನಡೆಸಿ, ಪ್ರಕರಣ ಸಂಬಂಧ ಸರ್ಕಾರದ ಎಸ್ಐಟಿ ರಚನೆ ಸ್ವಾಗತಿಸುವುದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅನಾವಶ್ಯಕ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ…
ಮಡಿಕೇರಿ ಆ.7 NEWS DESK : ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯಿತಿಯ ಕಡಂಗಮರೂರು ಭಾಗದ ಕಾಲೋನಿ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಟಾರ್ಪಲ್ ವಿತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಡಂಗಮರೂರು ಬೂತ್ ಅಧ್ಯಕ್ಷ ಮಂಡೆಪಂಡ ರೋಷನ್, ಬಾಲಟಿಲಂಡ ರಂಜಿ, ಮಂಡೆಟೀರ ಅನಿಲ್, ಮಹಿಳಾ ಘಟಕದ ಅಧ್ಯಕ್ಷ ಕಾವೇರಮ್ಮ, ಕಾಂಗಿರ ಸತೀಶ್, ಕಾಂಗಿರ ರವಿ ಮಾಚಯ್ಯ, ಮಲಂಡ ಜಗದೀಶ್, ಕೆದಮುಳ್ಳೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷರಾದ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಬಟಾಕಳಂಡ ರಾಜ, ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಶಾಲನಗರ, ಆ.7 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ವಿಶ್ವದ ಬುಡಕಟ್ಟು (ಆದಿವಾಸಿ) ಜನರ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಆ.9 ರಂದು ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಗಿರಿಜನರ ಪುನರ್ವಸತಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ಜನರ ದಿನಾಚರಣೆ: 2025 ರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆ ವತಿಯಿಂದ ಕೂಡಿಗೆ ಗ್ರಾಮ ಪಂಚಾಯತಿ ಹಾಗೂ ಬಸವನಹಳ್ಳಿಯಲ್ಲಿರುವ ತಾಲ್ಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ (ಲ್ಯಾಂಪ್ಸ್ ಸೊಸೈಟಿ) ದ ಸಹಯೋಗದೊಂದಿಗೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್…






