ನಾಪೋಕ್ಲು ಆ.6 NEWS DESK : ಪಾರಾಣೆ ಯೂತ್ ಕ್ರಿಕೆಟರ್ಸ್ ವತಿಯಿಂದ ಪಾರಾಣೆ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ಕೆಸರು ಗದ್ದೆ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆದರ್ಶ್ ಫ್ರೆಂಡ್ಸ್ ಚೆಡವು ಚಾಂಪಿಯನ್, ಕಗ್ಗೋಡು ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಕ್ರಿಕೆಟ್ ಪಂದ್ಯದಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದರೆ, ಓಂ ಸಿ ಸಿ ಬೆಟ್ಟಗೇರಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ಬಹುಮಾನ ವಿತರಿಸಿದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ಆ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಕಾನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಲಕ್ಕುಂದ ಪೈಸಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್, ರಸ್ತೆ ಅಭಿವೃದ್ಧಿ ಹಾಗೂ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಶಾಸಕರ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಶಾಸಕರು, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. :: ಕಾಂಗ್ರೆಸ್‍ಗೆ ಸೇರ್ಪಡೆ :: ಶಾಸಕರ ಜನಪರ ಕಾಳಜಿ, ಅಭಿವೃದ್ಧಿ ಬಗ್ಗೆ ಚಿಂತನೆ ಹಾಗೂ ಕ್ಷೇತ್ರದ ಜನರ ಬಗ್ಗೆ ಅವರು ಹೊಂದಿರುವ ಅಭಿವೃದ್ಧಿಯ ಕನಸುಗಳನ್ನು ಮೆಚ್ಚಿದ ಇತರ ಪಕ್ಷದ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡ ಶಾಸಕರು ಪಕ್ಷವನ್ನು ಬಲಪಡಿಸುವುದರೊಂದಿಗೆ ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ವಹಿಸಿಕೊಂಡು ಅವರಿಗೆ ಅನುಕೂಲ…
ಮಡಿಕೇರಿ ಆ.6 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಾಳಲೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆಗಳನ್ನು ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋದಂಡ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಶಾಸಕರೊಂದಿಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಹವಾಲುಗಳನ್ನು ನೀಡಿದರು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ನಿಟ್ಟೂರು ವಲಯ ಅಧ್ಯಕ್ಷ ಪವನ್, ಚೋಂದಮ್ಮ, ಪಂಚಾಯಿತಿ ಸದಸ್ಯರಾದ ವಿನು ಉತ್ತಪ್ಪ, ಸರಕಾರಿ ನಾಮನಿರ್ದೇಶಿತ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
*ಹಠಾತ್ ಮೇಘಸ್ಫೋಟದಿಂದ ಗ್ರಾಮಕ್ಕೆ ಗ್ರಾಮವೇ ನಾಶವಾದ ಘಟನೆ ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಭಾಗದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ನಡೆದ ಈ ಘಟನೆಯಿಂದ 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ನೈಸರ್ಗಿಕ ಮೇಘಸ್ಫೋಟ ಧರಾಲಿ ಮಾರುಕಟ್ಟೆಗೆ ಭಾರಿ ಹಾನಿಯನ್ನುಂಟು ಮಾಡಿದೆ. ಬಲವಾದ ಪ್ರವಾಹದಿಂದಾಗಿ, ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಹದ ಸ್ಥಳವು ತುಂಬಾ ಭಯಾನಕವಾಗಿದ್ದು, ನೀರಿನ ಹರಿವು ಎಷ್ಟು ವೇಗವಾಗಿತ್ತೆಂದರೆ ದೊಡ್ಡ ಕಲ್ಲುಗಳು ಮತ್ತು ಅವಶೇಷಗಳು ಸಹ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿವೆ. ಈ ಪ್ರವಾಹದಲ್ಲಿ ಅನೇಕರು ಕೊಚ್ಚಿ ಹೋಗಿದ್ದಾರೆ. ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಭಾರೀ ಹಾನಿ ದುಃಖಕರ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಜನರ ರಕ್ಷಣಾ ಕಾರ್ಯ ಮುಂದುವರೆದಿದೆ.
*ರಸ್ತೆಯ ಮಧ್ಯ ಭಾಗ ಕುಸಿದು ಬಿದ್ದು ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್ ಸಿಲುಕಿಕೊಂಡ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಪ್ರದೇಶದ ಮಹೇಶ್ವರಿ ಚೇಂಬರ್ಸ್ ಬಳಿ ನಡೆದಿದೆ.*
ಸೋಮವಾರಪೇಟೆ NEWS DESK ಆ.5 : ಇಂದು ಸಂಜೆ ಸುರಿದ ದಿಢೀರ್ ಮಳೆಗೆ ಸೋಮವಾರಪೇಟೆಯ ಅಲೆಕಟ್ಟೆ ರಸ್ತೆ ವ್ಯಾಪ್ತಿಯ ಮನೆಗಳು ಜಲಾವೃತಗೊಂಡು ನಷ್ಟ ಸಂಭವಿಸಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಮನೆಯವರ ನೆರವಿಗೆ ಧಾವಿಸಿ ನೀರು ತೆರವುಗೊಳಿಸಿತು. ಪಟ್ಟಣದ ಅಲೆಕಟ್ಟೆ ರಸ್ತೆಯ ಕೊಲ್ಲಿ ಮೂಲಕ ನೀರು ನುಗ್ಗಿ ನಿಂಗರಾಜು ಎಂಬುವವರ ಮನೆ ಜಲಾವೃತಗೊಂಡು ಹಲವು ವಸ್ತುಗಳು ಹಾನಿಗೊಂಡವು. ವಿಷಯ ಅರಿತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ 10ಕ್ಕೂ ಹೆಚ್ಚು ಮಂದಿಯ ತಂಡ ಸ್ಥಳಕ್ಕಾಗಮಿಸಿ ನೀರು ಹೊರ ಹಾಕಿ ಮನೆ ಶುಚಿಗೊಳಿಸಲು ಶ್ರಮಿಸಿತು. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ NEWS DESK ಆ.5 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ರಾಜ್ಯವ್ಯಾಪಿ ನಡೆಸುತ್ತಿರುವ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಯಿತು. ಇಂದು ಬೆಳಿಗ್ಗೆ 8 ಗಂಟೆಯ ನಂತರ ಸಂಚಾರವನ್ನು ಸ್ಥಗಿತಗೊಳಿಸಿದ ಬಸ್ ಗಳು ಬಸ್ ನಿಲ್ದಾಣಗಳಲ್ಲೇ ಸಾಲುಗಟ್ಟಿ ನಿಂತವು. ಬಸ್ ಮುಷ್ಕರದ ಕುರಿತು ಮೊದಲೇ ಮಾಹಿತಿ ಇದ್ದ ಕಾರಣ ಬಸ್ ನಿಲ್ದಾಣಗಳಲ್ಲಿ ವಿರಳ ಸಂಖ್ಯೆಯ ಪ್ರಯಾಣಿಕರಿದ್ದರು. ಮಾಹಿತಿ ಇಲ್ಲದ ಪ್ರಯಾಣಿಕರು ವಿವಿಧ ಊರಿಗಳಿಗೆ ತೆರಳಲು ಕಾದು ಕುಳಿತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪುತ್ತೂರು ಡಿಪೋದ ಮಡಿಕೇರಿ ಘಟಕದ ಮೂಲಕ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಗೆ ಒಟ್ಟು 130 ಬಸ್ ಮಾರ್ಗಗಳಿದ್ದು, ಈ ಪೈಕಿ 64 ಮಾರ್ಗಗಳು ಮಡಿಕೇರಿ ಘಟಕದಿಂದ ನಿರ್ವಹಿಸಲಾಗುತ್ತಿದೆ. ಬಸ್ ಸೇವೆ ಬಂದ್ ಹಿನ್ನೆಲೆಯಲ್ಲಿ ಬಹುತೇಕ ಬಸ್‌ಗಳ ಸಂಚಾರ ಸ್ಥಗಿತವಾಗಿತ್ತು. ಹೊರ ಭಾಗಗಳಿಂದ ನಿಲ್ದಾಣಕ್ಕೆ ಆಗಮಿಸಿದ ಬಸ್‌ಗಳು ಸಂಚಾರಿ ನಿಯಂತ್ರಕರಲ್ಲಿ ನೋಂದಾಯಿಸಿಕೊಂಡ ನಂತರ ಇಲ್ಲಿಯೇ ಉಳಿದುಕೊಂಡವು. ಮುಷ್ಕರಕ್ಕೆ ಚಾಲಕರು ಹಾಗೂ ನಿರ್ವಾಹಕರು ಕೈ ಜೋಡಿಸಿದರು. ಖಾಸಗಿ ಮತ್ತು…
ಮಡಿಕೇರಿ ಆ.5 NEWS DESK : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೊಡಗಿನ ಏಳು ಕಡೆಗಳಲ್ಲಿ ಆ.8 ರಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಂಜನ್ ಗೌಡ (ಬೋಜೇಗೌಡ) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತದ ಸಂಕಲ್ಪ ದಿನ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ ನಡೆಯಲಿದೆ ಎಂದರು. ಆ.8 ರಂದು ಸಂಜೆ 6 ಗಂಟೆಗೆ ಮಡಿಕೇರಿ ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರಜೆ ಸಲ್ಲಿಸುವುದರ ಮೂಲಕ ಪಂಜಿನ ಮೆರವಣಿಗೆ ಆರಂಭಗೊಂಡು ಇಂದಿರಾ ಗಾಂಧಿ ವೃತ್ತ, ಅಂಚೆ ಕಚೇರಿ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಹಾದು ಹೋಗಿ ಕೊಡವ ಸಮಾಜ ಸಭಾಂಗಣದಲ್ಲಿ ಸಂಜೆ 7.30 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ರಾತ್ರಿ 9.30 ಗಂಟೆಗೆ 2 ಕಿ.ಮೀ. ಮುಕ್ತಾಯ…
ಸುಂಟಿಕೊಪ್ಪ ಆ.5 NEWS DESK : ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಆರಂಭಿಸಿರುವ ಮುಷ್ಕರ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದ್ದು, ಸೂಕ್ತ ಸಂಚಾರ ವ್ಯವಸ್ಥೆ ಇಲ್ಲದೇ ಸಾರ್ವಜನಿಕರೂ ಪರದಾಡುವಂತಾಯಿತು. ಸುಂಟಿಕೊಪ್ಪದಲ್ಲಿ ಸರ್ಕಾರಿ ಬಸ್ಸನ್ನೇ ಅವಲಂಭಿತರಾಗಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಛೇರಿಗೆ ತೆರಳುವ ಸಿಬ್ಬಂದಿಗಳು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ ಪ್ರಯಾಣಿಕರು ಬಸ್ ಸಿಗದೆ ಸಮಸ್ಯೆ ಎದುರಿಸಿದ್ದರು. ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆಯಲ್ಲಿ ಮಡಿಕೇರಿ-ಕುಶಾಲನಗರ ಭಾಗಗಳಿಗೆ ತೆರಳುವ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳುವಂತಾಯಿತು. ಮುಷ್ಕರವು ಮುಂದುವರಿದಲ್ಲಿ ಸರ್ಕಾರಿ ಬಸ್ಸನ್ನೇ ಅವಲಂಭಿತರಾಗಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಛೇರಿ ಸಿಬ್ಬಂದಿಗಳು ಹಾಗೂ ಜನಸಾಮಾನ್ಯರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ಆ.5 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಗೌ.ಮುಖ್ಯ ನ್ಯಾಯಮೂರ್ತಿಗಳು ಗೌ. ಸರ್ವೋಚ್ಛ ನ್ಯಾಯಾಲಯ ಅವರು ದೇಶಾದಾದ್ಯಂತ ಅ.7 ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ 90 ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಡ್ರೈವ್‍ನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ…






