ಕುಶಾಲನಗರ, ಆ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ 2002-03, 2005-06 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಶಾಲೆಯ ಹಳೆಯ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಅಂದಿನಿಂದ ಸೇವೆ ಸಲ್ಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ವಿದ್ಯಾರ್ಥಿ ಜೀವನದ ನೂರಾರು ನೆನಪುಗಳು ಕಣ್ಣು ಮುಂದೆ ಬರುವಂತೆ ಮಾಡಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ತಮ್ಮ ಶಾಲೆಯನ್ನು ಮರೆಯದೆ, ತಮ್ಮಿಂದಾಗುವ ಸಹಕಾರವನ್ನು ಶಾಲೆಗಳ ಅಭಿವೃದ್ಧಿಗೆ ನೀಡುವುದು ಉತ್ತಮ ಬೆಳವಣಿಗೆ ಎಂದರು. ಗುರುವಿನ ಶ್ರೇಷ್ಠತೆ ವಿದ್ಯಾರ್ಥಿ ಜೀವನದಲ್ಲಿ ತಿಳಿಯುವುದಕ್ಕಿಂತ ವೃತ್ತಿ ಜೀವನದ ಪಯಣದಲ್ಲಿ ತಿಳಿಯುವುದು ಹೆಚ್ಚು. ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಶಾಲೆಯ ಹಳೆಯ ನೆನಪುಗಳು, ಕಲಿಕೆಯ ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ’ ಎಂದರು. ಕಲಿಸಿದ ಶಾಲೆ ಮತ್ತು ಕಲಿಸಿದ ಗುರುವಿಗೆ ನಮಿಸುವ ಹಳೇ ವಿದ್ಯಾರ್ಥಿಗಳ…
ಲೇಖಕ: admin
ಮಡಿಕೇರಿ ಆ.5 NEWS DESK : ನಗರದ ವಿದ್ಯುತ್ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಆ.6 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳಬೇಕಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್‍ಆರ್‍ಟಿಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಅಶೋಕಪುರ, ಜಲಾಶ್ರಯ ಬಡಾವಣೆ, ಸರಕಾರಿ ಆಸ್ಪತ್ರೆ, ಮಂಗಳದೇವಿನಗರ, ಅರಣ್ಯಭವನ, ಚೈನ್‍ಗೇಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಕೋರಿದ್ದಾರೆ.
ಮಡಿಕೇರಿ ಆ.5 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್‍ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಅಥವಾ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
ಮಡಿಕೇರಿ ಆ.5 NEWS DESK : ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ವತಿಯಿಂದ ಎರಡು ವಿಭಾಗಗಳಲ್ಲಿ ರೋಟರಿ ನಾಯಕತ್ವ ಶಿಬಿರ ನಡೆಯಿತು. ನಗರದ ರೋಟರಿ ಹಾಲ್‍ನಲ್ಲಿ ನಡೆದ ಶಿಬಿರಕ್ಕೆ ರೋಟರಿ 1 3181ನ ವಿವಿಧ ಜಿಲ್ಲಾ ಹಾಗೂ ಕ್ಲಬ್‍ಗಳಿಂದ ಸುಮಾರು 58 ಸದಸ್ಯರು ಆಗಮಿಸಿ ತರಬೇತಿ ಪಡೆದರು. ಸಂಪನ್ಮೂಲ ವ್ಯಕ್ತಿಗಳಾಗಿ ರೋಟರಿ ತರಬೇತಿ ಸಂಸ್ಥೆಯ ಕೇಂದ್ರ ಮುಖ್ಯಸ್ಥ ಪಿ.ಡಿ.ಜಿ.ರೋಟರಿಯನ್ ರಾಜೇಂದ್ರ ರೈ, ಹಿರಿಯ ಸಂಪನ್ಮೂಲ ವ್ಯಕ್ತಿ ರೋಟರಿಯನ್ ಪಿ.ಡಿ.ಜಿ ಅನಂತ್, ಸಂಯೋಜಕ ಪ್ರಕಾಶ್ ಬಳ್ವಾಡಿ ಹಾಗೂ ಪ್ರಸಾದ್ ಶಿಬಿರದಲ್ಲಿ ಪಾಲ್ಗೊಂಡಿದ್ದರು. ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ರೋಟರಿಯನ್ ಬಿ.ಎನ್.ರತ್ನಾಕರ ರೈ, ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ಕಾರ್ಯಕ್ರಮ ಮುಖ್ಯಸ್ಥ ಸುಮಂತ್ ಪಾಲಾಕ್ಷ, ಜಿಲ್ಲಾ ಆರ್.ಎಲ್.ಐ ಸಹ ಮುಖ್ಯಸ್ಥ ರೋಟರಿಯನ್ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರೋಟರಿಯನ್ ಹರೀಶ್ ಕುಮಾರ್, ಸಹಾಯಕ ಗವರ್ನರ್ ರೋಟರಿಯನ್ ದಿಲನ್ ಚೆಂಗಪ್ಪ, ವಲಯ ಲೆಫ್ಟಿನೆಂಟ್ ರೋಟರಿಯನ್ ಕಾರ್ಯಪ್ಪ ಉಪಸ್ಥಿತರಿದ್ದರು. ಅಧ್ಯಕ್ಷ ಬಿ.ಎನ್.ರತ್ನಾಕರ ರೈ ಸ್ವಾಗತಿಸಿ, ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ ವಂದಿಸಿದರು.
ಮಡಿಕೇರಿ ಆ.5 NEWS DESK : ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಜ್ಯೋತಿ ಕುದುಪಜೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯ ದೇವಾಂಗರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು. ಅತ್ಯಂತ ಶ್ರದ್ದೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ, ಕಾವೇರಿ ಮಾತೆಯ ಉಗಮ ಸ್ಥಳವಾಗಿರುವ ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕವನ್ನು ಬಲಪಡಿಸಲು ಶಕ್ತಿಮೀರಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿ ಹಾಜರಿದ್ದರು.
ವಿರಾಜಪೇಟೆ ಆ.5 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಪೊನ್ನಂಪೇಟೆ ವಲಯದ ಶೆಟ್ಟಿಗೇರಿ ಕಾರ್ಯಕ್ಷೇತ್ರದ ಹರಿಹರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸುಶೀಲಾ ಅಶೋಕ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತಡಿಯಂಗಡ ಸೌಮ್ಯ ಕರುಂಬಯ್ಯ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ, ನೀರು ಸಿಗುತ್ತದೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು, ವಾಯು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ನಾಗರಾಜ್, ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಶಿಕ್ಷಕಿಯರಾದ ಸಾವಿತ್ರಿ,…
ಮಡಿಕೇರಿ ಆ.5 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣ ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆಗಸ್ಟ್ 10 ರಂದು ಸುಂಟಿಕೊಪ್ಪದಲ್ಲಿ 9ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಸುಂಟಿಕೊಪ್ಪದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್…
ಮಡಿಕೇರಿ ಆ.5 NEWS DESK : ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪತ್ರಕತ೯ರ ಸಂಘ (ರಿ) ದ ವತಿಯಿಂದ ಪತ್ರಕತ೯ರು, ಸಾವ೯ಜನಿಕರಿಗೆ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ ಫೋಟೋ ಸ್ಪರ್ಧೆಗಾಗಿ ಸ್ಪಧಿ೯ಗಳು. ಗರಿಷ್ಟ 3 ಫೋಟೋಗಳನ್ನು ಕಳುಹಿಸಬಹುದು. ಪತ್ರಕತ೯ರು ಸುದ್ದಿ ಚಿತ್ರಕ್ಕೆ (ನ್ಯೂಸ್ ಫೋಟೋ) ವಿಷಯಕ್ಕೆ ಸಂಬಂಧಿಸಿದಂತೆ ಗರಿಷ್ಟ 3 ಫೋಟೋಗಳನ್ನು ಕಳುಹಿಸಬಹುದು. ಜಲಲ ಜಲಧಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕತ೯ರು 1 ನಿಮಿಷ ಕಾಲಾವಧಿಯ ಹಿನ್ನಲೆ ದ್ವನಿಯಿಲ್ಲದ, ಸುದ್ದಿ ಅಲ್ಲದ, ವಿಡಿಯೋಕ್ಕೆ ಆದ್ಯತೆ ನೀಡಿರುವ 1 ವಿಡಿಯೋವನ್ನು ಕಳುಹಿಸಬಹುದು. ಸಾವ೯ಜನಿಕರು ಮಳೆಗಾಲದ ಸಂಕಷ್ಟ (ಫನ್ನಿ ಸೈಡ್, ಹಾಸ್ಯವಾಗಿ) ವಿಷಯಕ್ಕೆ ಸಂಬಂಧಿಸಿದಂತೆ 1 ನಿಮಿಷ ಕಾಲಮಿತಿಯಲ್ಲಿರುವ ಗರಿಷ್ಟ 3…
ಮಡಿಕೇರಿ ಆ.5 NEWS DESK : ಭಾರತ ಮುಖ್ಯ ಹಾಕಿ ತಂಡದಲ್ಲಿ ಕೊಡಗಿನ ಆಟಗಾರ ಚಂದೂರ ಬಿ.ಪೂವಣ್ಣ ಅವರು ಆಯ್ಕೆಯಾಗಿದ್ದಾರೆ. ಹಾಕಿ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುತ್ತಿರುವ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಕರ್ನಾಟಕ ರಾಜ್ಯದಿಂದ ತಂಡದಲ್ಲಿ ಪೂವಣ್ಣ ಮಾತ್ರ ಸ್ಥಾನ ಪಡೆಯುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ಪೂವಣ್ಣ ಯುರೋಪ್ ಪ್ರವಾಸ ಕೈಗೊಂಡಿದ್ದ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದರು. ಜೂನಿಯರ್ ಇಂಡಿಯಾ ತಂಡವನ್ನು ಈ ಹಿಂದೆ ಪ್ರತಿನಿಧಿಸಿದ್ದರು. ಪೂವಣ್ಣ ಮೂಲತಃ ಕಂಡಂಗಾಲದ ನಿವಾಸಿ ಚಂದೂರ ಎಸ್.ಪ್ರಭು (ಬಾಬಿ) ಹಾಗೂ ಅನಿಲ (ತಾಮನೆ-ಮಲ್ಲೇಂಗಡ) ದಂಪತಿಯ ಪುತ್ರ.
ಮಡಿಕೇರಿ ಆ.5 NEWS DESK : ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ ಲಭಿಸಿದೆ. ಜು.27 ರಿಂದ ಆ.2 ರವರೆಗೆ ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ 357 ಕರ್ನಾಟಕದ ಅತ್ಯುತ್ತಮ ಶ್ರೇಯಾಂಕಿತ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಿದರು. ಇದರಲ್ಲಿ ದಿಯಾ ಭೀಮಯ್ಯ ಮೂರು ವಿಭಾಗದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾಳೆ. ಬೊಪ್ಪಂಡ ದಿಯಾ ಭೀಮಯ್ಯ 19 ವರ್ಷದ ಬಾಲಕಿಯರ ಸಿಂಗಲ್ಸ್ ನಲ್ಲಿ ದ್ವಿತೀಯ, ಮಿಕ್ಸ್ ಡಬಲ್ಸ್ ನಲ್ಲಿ ಪ್ರಥಮ ಹಾಗೂ ಸೀನಿಯರ್ ವಿಭಾಗದ ಡಬಲ್ಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಕರ್ನಾಟಕದ ಪ್ರಥಮ ಶ್ರೇಯಾಂಕಿತ ಆಟಗಾರ್ತಿ ಡಬಲ್ಸ್ ವಿಭಾಗದಲ್ಲಿ ಬೆಂಗಳೂರಿನ ಅಶ್ವತಿ ವರ್ಗೀಸ್ ಹಾಗೂ ಮಿಶ್ರ ಡಬಲ್ಸ್ ನಲ್ಲಿ ಎ.ಆರ್.ಸುಮಿತ್ ಅವರೊಂದಿಗೆ ಆಡಿದ್ದಾಳೆ. ಮೈಸೂರಿನ ವಿದ್ಯಾಶ್ರಮ ಕಾಲೇಜಿನಲ್ಲಿ ದ್ವಿತೀಯ…






