ಲೇಖಕ: admin

ಮಡಿಕೇರಿ ಆ.5 NEWS DESK : ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, 10,277 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 1,170 ಹುದ್ದೆಗಳಿಗೆ ಸೇರಿಸಿ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಯಲಿದೆ. ಈ ಮೊದಲೇ ಸಾಲು-ಸಾಲಾಗಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಅಧಿಸೂಚನೆ ಪ್ರಕಟವಾಗಿದೆ. ಸಾಮಾನ್ಯವಾಗಿ ಪದವಿ ಮುಗಿಸಿದ ಅಭ್ಯರ್ಥಿಗಳು ಮೊದಲ ಬಾರಿಗೆ ಈ ಪರೀಕ್ಷೆಗಳನ್ನು ಎದುರಿಸುವಾಗ ಸಹಜವಾಗಿಯೇ ಆತಂಕಗಳು ಎದುರಾಗಿರುತ್ತವೆ. ಇರುವ 1,170 ಹುದ್ದೆಗಳಿಗೆ ಲಕ್ಷಗಟ್ಟಲೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವಾಗ ನನಗೆ ಈ ಹುದ್ದೆಯನ್ನ ಪಡೆಯಲು ಸಾದ್ಯವೇ….? ಎಂಬ ಪ್ರಶ್ನೆ ಪ್ರತಿಯೊಬ್ಬರನ್ನ ಕಾಡುತ್ತಿರುತ್ತದೆ. ಇದು ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೊದಲ ಬಾರಿಗೆ ಬರೆಯುವವರಿಗೆ ಕಾಡುವ ಮಿಲಿಯನ್ ಡಾಲರ್ ಪ್ರಶ್ನೆ. ಇದು ಸಹಜ, ಅರ್ಜಿ ಸಲ್ಲಿಸಿದ ಎಲ್ಲ…

Read More

ನಾಪೋಕ್ಲು ಆ.5 NEWS DESK : ತಮ್ಮದೇ ಸಂಸ್ಕೃತಿ ಸಂಪ್ರದಾಯವನ್ನು ಹೊಂದಿರುವ ಕೊಡಗು ಗೌಡ ಸಮುದಾಯದವರು ತಮ್ಮ ಶ್ರೇಷ್ಠ ಸಂಸ್ಕೃತಿ ಪರಂಪರೆಯನ್ನು ಸಾರ್ವಜನಿಕ ಸಮಾರಂಭಗಳ ಮೂಲಕ ಇತರರಿಗೂ ಪಸರಿಸುವ ಪ್ರಯತ್ನ ಮಾಡಬೇಕೆಂದು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಹಾಗೂ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಕೆ.ವಿ.ಶ್ರೀಧರ್ ಅಭಿಪ್ರಾಯಪಟ್ಟರು. ಆಟಿ 18ರ ಪ್ರಯುಕ್ತ ಮೈಸೂರು ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಆಟಿ ಗೌಜಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೊಡಗು ಗೌಡರ ಶ್ರೇಷ್ಠ ಭಾಷೆ, ಸಂಸ್ಕೃತಿ, ಆಹಾರ, ಪದ್ಧತಿ ಕ್ರಮಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮೂಲಕ, ತಮ್ಮ ಸಂಸ್ಕೃತಿ ಇತರರಿಗೂ ಹಂಚಿಕೆಯಾಗಿ ಅದು ಶಾಶ್ವತವಾಗಿರುವಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಮಾತನಾಡಿ, ಕೊಡಗಿನಲ್ಲಿ ಮಳೆಗಾಲದ ವಾತಾವರಣದಲ್ಲಿ ಪರಿಸರದಲ್ಲಿ ಸಿಗುವ ಆಹಾರ ಉತ್ಪನ್ನಗಳನ್ನು ಬಳಸಿ ಜನರು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾರೆ, ಮೈಸೂರಿನಲ್ಲಿ ನೆಲೆಸಿರುವ ನಮ್ಮ ಸಮುದಾಯದ ಜನರಿಗೆ ಈ ಆರೋಗ್ಯದಾಯಕ ಆಹಾರವನ್ನು ಒದಗಿಸುವ…

Read More

ನಾಪೋಕ್ಲು ಆ.5 NEWS DESK : ಚೋನಕೆರೆ ಹಾಗೂ ಅಜ್ಜಿಮುಟ್ಟ ಅಂಗನವಾಡಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಚೋನಕೆರೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಂ.ಪ್ರತೀಪ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಎಲ್ಲರೂ ಮಕ್ಕಳ ಶ್ರೇಯಾ ಅಭಿವೃದ್ಧಿಗೆ ಶ್ರಮಿಸಬೇಕೆಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶೀಲಾ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿ ಎದೆಹಾಲಿನ ಮಹತ್ವದ ಬಗ್ಗೆ ಹಾಗೂ ಇಲಾಖೆಯ ಸೌಲಭ್ಯಗಳಾದ ಭಾಗ್ಯಲಕ್ಷ್ಮಿ, ಮಾತೃ ವಂದನಾ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಿರಿಯ ಆರೋಗ್ಯ ಕಾರ್ಯಕರ್ತೆಯವರಾದ ಉಮಾಮಹೇಶ್ವರಿ ಅವರು ಆರೋಗ್ಯ ಇಲಾಖೆಯಿಂದ ದೊರೆಯುವ ಸೌಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಜ್ಜಿಮುಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕಿ ಪುಷ್ಪಾವತಿ, ಆಶಾ ಕಾರ್ಯಕರ್ತೆಯರು, ಮಕ್ಕಳ ತಾಯಂದಿರು, ಗ್ರಾಮಸ್ಥರು ಹಾಗೂ ಪುಟಾಣಿ ಮಕ್ಕಳು ಹಾಜರಿದ್ದರು. ಚೋನಕೆರೆ ಅಂಗನವಾಡಿ ಕಾರ್ಯಕರ್ತೆಯವರಾದ ಸಿ.ಯು.ಪವಿತ್ರ ಸ್ವಾಗತಿಸಿ, ನಿರೂಪಿಸಿದರು. ಅಜ್ಜಿಮುಟ್ಟ ಅಂಗನವಾಡಿ ಕಾರ್ಯಕರ್ತೆಯರಾದ ಸುಜಾತ ಯು.ಎನ್…

Read More

ಮಡಿಕೇರಿ NEWS DESK ಆ.4 : ಮಡಿಕೇರಿಯ ರಾಜಾಸೀಟ್‌ನಲ್ಲಿ ‘ಗ್ಲಾಸ್ ಬ್ರಿಡ್ಜ್’ ಮತ್ತು ‘ಫುಡ್ ಕೋರ್ಟ್’ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಗಳು ನಡೆದಿದ್ದರು, ನಗರಸಭೆಯ ಗಮನಕ್ಕೆ ಬಾರದ ಬಗ್ಗೆ ತುರ್ತು ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಮತ್ತೆ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸುವ ನಿರ್ಣಯವನ್ನು ಕೈಗೊಳ್ಳಲಾಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಆರಂಭದಲ್ಲೆ, ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್ ಸೇರಿದಂತೆ ನಾಮನಿರ್ದೇಶಿತ ಸದಸ್ಯರು, ಗ್ಲಾಸ್ ಬ್ರಿಡ್ಜ್ ಮತ್ತು ಫುಡ್ ಕೋರ್ಟ್ ಯೋಜನೆಯನ್ನು ಸರ್ಕಾರ ರೂಪಿಸಿದೆ. ಇದಕ್ಕೆ ವಿರೋಧ ಮಾಡುವ ಉದ್ದೇಶದಿಂದಲೇ ತುರ್ತು ಸಭೆ ಕರೆಯಲಾಗಿದೆ. ಈ ಸಭೆಯನ್ನು ಯಾವುದೇ ಕಾರಣಕ್ಕೂ ನಡೆಯಲು ಬಿಡುವುದಿಲ್ಲ ಎಂದು ವೇದಿಕೆಯ ಮುಂಭಾಗಕ್ಕೆ ಬಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಕಾಂಗ್ರೆಸ್ ಸದಸ್ಯರ ವಿರೋಧಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು, ನಗರಸಭೆಯ ಗಮನಕ್ಕೆ ಬಾರದೆ ಬಹುಕೋಟಿ ಯೋಜನೆಯನ್ನು ಜಾರಿ ಗೊಳಿಸಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಈ…

Read More

ಮಡಿಕೇರಿ ಆ.4 NEWS DESK : ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಕುದ್ರೆಪಾಯ ಗ್ರಾಮ ಮಟ್ಟದ ಉಪ ಸಮಿತಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಕೆ.ಜೆ.ಶಶಿಕಾಂತ್ ಹಾಗೂ ಕಾರ್ಯದರ್ಶಿಯಾಗಿ ಸತೀಶ ಪಿ.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕುದ್ರೆಪಾಯ ಗ್ರಾಮ ಮಟ್ಟದ ಸಭೆ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಹಾವಿಷ್ಣು  ದೈವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಯಶೋಧ ಪಿ.ಎಂ, ಉಪ ಕಾರ್ಯದರ್ಶಿಯಾಗಿ ಪ್ರವೀಣ ವಿ.ಆರ್, ಕೋಶಾಧಿಕಾರಿಯಾಗಿ ರಂಜಿತ್ ಕೆ.ಎಂ. ಸಂಚಾಲಕರಾಗಿ ವಿಷ್ಣು ನಾಯ್ಕ್ ಟಿ, ಭಾರತಿ, ಸರಸ್ವತಿ ಮಾಪ್ಲೆಕಜೆ, ಸಲಹೆಗಾರರಾಗಿ ವಸಂತ ಕೆ.ಸಿ, ಸಮಿತಿ ಸದಸ್ಯರಾಗಿ ಸತೀಶ್, ರಾಜೇಶ್ವರ ವಿ.ಸಿ, ಕುಶಾಲಪ್ಪ ಬಳ್ಳಿಕೋಡಿ, ವಿಶ್ವನಾಥ ಚಳ್ಳಂಗಾಯ, ಹೂವಯ್ಯ ಕೆರೆಮೂಲೆ ಅವಿರೋಧವಾಗಿ ಆಯ್ಕೆಯಾದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪರಮೇಶ್ವರ ಎಂ.ಎಂ ಅವರು ನೂತನ ಪದಾಧಿಕಾರಿಗಳು ಸಂಘಟಿತರಾಗಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಬೇಕು ಮತ್ತು ಸಂಘವನ್ನು ಉತ್ತಮ ರೀತಿಯಲ್ಲಿ…

Read More

ಮಡಿಕೇರಿ ಆ.4 NEWS DESK : ನಮ್ಮ ಸ್ನೇಹಿತ, ದಂತಕಥೆ/ಇತಿಹಾಸ ಪುರುಷ  ಜಾರ್ಖಂಡ್ ನಾಯಕ ಮತ್ತು ಜಾರ್ಖಂಡ್ ರಾಜ್ಯದ ಪಿತಾಮಹ ಶಿಬು ಸೊರೆನ್ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‍ಸಿ) ಹೃದಯ ಸ್ಪರ್ಶಿ ಸಂತಾಪ ಮತ್ತು ಗೌರವಾಂಜಲಿ ಸಲ್ಲಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಶಿಬು ಸೊರೆನ್ ಅವರ ನಿಧನದಿಂದ ನಮಗೆ ತೀವ್ರ ದುಃಖವಾಗಿದೆ.  ಕೊಡವ ಹೋರಾಟಕ್ಕೆ ಅವರು ನೀಡಿದ ಮಹತ್ವದ ಬೆಂಬಲವನ್ನು ನಾವು ಪ್ರೀತಿಯಿಂದ ಸ್ಮರಿಸುತ್ತೇವೆ. ನವೆಂಬರ್ 1998 ರಲ್ಲಿ ನವದೆಹಲಿಯಲ್ಲಿ ನಡೆದ  ಬೃಹತ್ ಕೊಡವ ರ‍್ಯಾಲಿಯ ಸಂದರ್ಭದಲ್ಲಿ, ಅವರು ನಮ್ಮೊಂದಿಗೆ ರಾಮಲೀಲಾ ಮೈದಾನದಿಂದ ಪಾರ್ಲಿಮೆಂಟ್  ಬೀದಿವರೆಗೆ ಸುಮಾರು 4 ಕಿಲೋಮೀಟರ್ ನಡೆದು ನಮ್ಮ ಹೋರಾಟವನ್ನು ಬೆಂಬಲಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮತ್ತೊಮ್ಮೆ, 2001 ರಲ್ಲಿ, ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ತಮ್ಮ ಅನಾರೋಗ್ಯ ಪೀಡಿತ ಪುತ್ರ ದುರ್ಗಾ ಸೊರೇನ್ ಅವರನ್ನು ನೋಡಿಕೊಳ್ಳುತ್ತಿದ್ದರೂ, ಅವರು ನಮ್ಮ ಆಹ್ವಾನವನ್ನು ಗೌರವಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆದ ಕೊಡವ ನ್ಯಾಷನಲ್ ಡೇಯಲ್ಲಿ…

Read More

ಮಡಿಕೇರಿ ಆ.4 NEWS DESK : ಮಡಿಕೇರಿ ನಗರದ ರಾಣಿಪೇಟೆಯ ಮುನೇಶ್ವರ ಯುವಕ ಸಂಘದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ 2ನೇ ವರ್ಷದ 4 ಲೈನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಮ್ ಫ್ಲ್ಯಾಶ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಡಿ.ಕೆ.ಬಾಯ್ಸ್ ಬಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಸಂತು ಮ್ಯಾಕ್ಸ್ ವೆಲ್ ಬೆಸ್ಟ್ ಬ್ಯಾಟ್ಸ್‍ಮನ್, ಮ್ಯಾನ್ ಆಫ್ ದಿ ಮ್ಯಾಚ್, ರಕ್ಷಿತ್ ಬೆಸ್ಟ್ ಬೌಲರ್ ಹಾಗೂ ಪುನೀತ್ ಮ್ಯಾನ್ ಆಫ್ ದಿ ಸೀರಿಸ್ ಪ್ರಶಸ್ತಿ ಪಡೆದರು.  ಮುನೇಶ್ವರ ಯುವಕ ಸಂಘದ ಅಧ್ಯಕ್ಷ ಅಜಿತ್ ಹೆಚ್.ಹೆಚ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹದ ಮಾತುಗಳನ್ನಾಡಿದರು. ಪ್ರಥಮ ಬಹುಮಾನ ರೂ.15 ಸಾವಿರ ಮತ್ತು ದ್ವಿತೀಯ ಬಹುಮಾನ ರೂ.10 ಸಾವಿರ ನೀಡಲಾಯಿತು.  ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಸದಸ್ಯ ಮುದ್ದುರಾಜು ಬಿ.ಎನ್, ಮುನೇಶ್ವರ ಯುವಕ ಸಂಘದ ಕಾರ್ಯದರ್ಶಿ ಶ್ರೇಯಸ್ ಹೆಚ್.ಎಲ್…

Read More

ಮಡಿಕೇರಿ ಆ.4 NEWS DESK :  ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ.ನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ…

Read More

ಮಡಿಕೇರಿ ಆ.4 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸುತ್ತ 16 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಕರಿಕೆ, ಮಕ್ಕಂದೂರು, ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಬಲ್ಯಮಂಡೂರು, ದೇವರಪುರ, ಕೆ.ಬಾಡಗ, ಕಿರುಗೂರು, ನಾಲ್ಕೇರಿ, ನಿಟ್ಟೂರು, ಪೊನ್ನಂಪೇಟೆ ಮತ್ತು ಟಿ.ಶೆಟ್ಟಿಗೇರಿ, ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟ, ದೊಡ್ಡಮಳ್ತೆ ಮತ್ತು ಗೌಡಳ್ಳಿ, ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಮತ್ತು ಕದನೂರು. ಆಸಕ್ತ ಪ್ರಾಂಚೈಸಿಗಳು ಈ ಕೆಳಕೆ ನೀಡಿದ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಆಗಸ್ಟ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಲಿಂಕ್ https://kal-mys.gramaone.karnataka.gov.in/ ಹೆಚ್ಚಿನ ಮಾಹಿತಿಗೆ care@blsinternationl.net ಈ ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ  ತಿಳಿಸಿದ್ದಾರೆ.

Read More

ಮಡಿಕೇರಿ ಆ.4 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಆ.5 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಈ ಫೀಡರ್‌ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‍ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ದೊಡ್ಡಟ್ಟಿ ಚೌಕಿಯಿಂದ ಪ್ರೈವೇಟ್ ಬಸ್ ನಿಲ್ದಾಣದವರೆಗೆ(ದರ್ಶನ್ ಲಾಡ್ಜ್ ಪರಿವರ್ತಕ, ಅಭಿಲಾಷ್ ಸ್ಟೋರ್, ಬದ್ರಿಯಾಸ್ ಪಳ್ಳಿ, ಮಮತಾ ಲಾಡ್ಜ್, ಮತ್ತು ಪ್ರೈವೇಟ್ ಬಸ್‍ನಿಲ್ದಾಣದ ಪರಿವರ್ತಕಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More