ಲೇಖಕ: admin

ಮಡಿಕೇರಿ ಆ.4 NEWS DESK : ಪೊನ್ನಂಪೇಟೆಯ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಮಾತನಾಡಿ, 2023-24 ಮತ್ತು 2025ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ, ತಾನು ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗ ಮುಂದುವರಿಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ನೀಡಬೇಕಿದೆ ಎಂದು ಹೇಳಿದರು. ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿ ಪಡೆಯಬಹುದಾಗಿದ್ದು, ವೆಬ್‍ಸೈಟ್ ವಿಳಾಸ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ…

Read More

ಸುಂಟಿಕೊಪ್ಪ ಆ.5 NEWS DESK : ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪ್ರಮುಖ ಸಾಧನ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ. ಸುಂಟಿಕೊಪ್ಪ ಗದ್ದೆಹಳ್ಳದ ವೈ.ಎಂ.ಕರುಂಬಯ್ಯ ಅವರ ಗದ್ದೆಯಲ್ಲಿ ಪ್ರಪಥಮ ಬಾರಿಗೆ ಆಯೋಜಿತವಾಗಿದ್ದ “ಗದ್ದೆಹಳ್ಳದಲ್ಲಿ ಗದ್ದೆ ಆಟ ಮಳೆಗಾಲದ ಹಬ್ಬ 2025” ರ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಭತ್ತದ ಬೇಸಾಯ ಹಿನ್ನಡೆ ಕಂಡಿರುವ ಈ ದಿನಗಳಲ್ಲಿ ಹಿರಿಯರಾದ ವೈ.ಎಂ.ಕರುಂಬಯ್ಯ ಅವರು ಯುವಜನತೆ ಮಹಿಳೆಯರು, ಪುರುಷರು, ಮತ್ತು ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಏಕತೆ, ಪದ್ಧತಿ, ಪರಂಪರೆ ಮತ್ತು ಸಮಾಜದ ಒಗ್ಗಟ್ಟನ್ನು ಕಾಪಾಡಿಕೊಳ್ಳುವ ಧ್ಯೇಯ ವಾಕ್ಯದೊಂದಿಗೆ ಈ ಹಬ್ಬವನ್ನು ಆಯೋಜಿಸಿದ್ದು, ಅತ್ಯಂತ ಮಹತ್ವ ಪೂರ್ಣವಾಗಿದೆ ಪ್ರಶಂಸಿದರು. ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಸಮಾಜ ಸರ್ವಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮುತ್ತದೆ ಎಂದು ಹೇಳಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಕೆಸರುಗದ್ದೆ…

Read More

ಸುಂಟಿಕೊಪ್ಪ ಆ.4 NEWS DESK : ಶ್ರೀ ವಿನಾಯಕ ಸೇವಾ ಸಮಿತಿ ಶ್ರೀ ಅಣ್ಣಪ್ಪಸ್ವಾಮಿ ದೇವಾಲಯ ಶ್ರೀದೇವಿ ನಾರ್ಗಾಣೆ ಗ್ರಾಮದ 12ನೇ ವರ್ಷದ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಜೆ.ಆಕಾಶ್ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಸುಧಿ, ಖಜಾಂಚಿಯಾಗಿ ಮೋಹನ್, ಸಹ ಖಜಾಂಚಿಯಾಗಿ ಬಿ.ಕೆ.ರಾಜೇಶ್ ಹಾಗೂ ಸಮಿತಿ ಸದಸ್ಯರುಗಳಾಗಿ 77 ಮಂದಿಯನ್ನು ಆಯ್ಕೆಮಾಡಲಾಯಿತು. ಹಿಂದಿನ ಸಾಲಿನ ಅಧ್ಯಕ್ಷ ಪುನಿತ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More

ಹುಣುಸೂರು NEWS DESK ಆ.4 : ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿಯಿಂದ ಇಂದು ಗಜಪಯಣ ಆರಂಭಗೊ0ಡಿತು. ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಅರಣ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಂದರ್ಭ ಹಾಜರಿದ್ದು, ಶುಭ ಹಾರೈಸಿದರು. ವಿವಿಧ ಕಲಾತಂಡಗಳು ಬೀಳ್ಕೊಡುಗೆ ಸಮಾರಂಭಕ್ಕೆ ಮೆರುಗು ತಂದವು.

Read More

ಮಡಿಕೇರಿ ಆ.4 NEWS DESK : ಕುಶಾಲನಗರದ ಅತ್ತೂರಿನ ಜ್ಞಾನಗಂಗಾ ಶಾಲೆಯ ಮೂವರು ಶಿಕ್ಷಕರಿಗೆ ಮೈಸೂರಿನಲ್ಲಿ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪರೀಕ್ಷಾ ಸ್ಫೂರ್ತಿ ಫೌಂಡೇಷನ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರಸ್ವತಿ ಪುರಂ ನ ಜೆಎಸ್‍ಎಸ್ ಮಹಿಳಾ ಕಾಲೇಜ್ ನ ನವಜ್ಯೋತಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜ್ಞಾನಗಂಗಾ ವಸತಿ ಶಾಲೆಯ ಕನ್ನಡ ಶಿಕ್ಷಕರಾದ ಭಾಸ್ಕರ್ ಹೆಚ್, ಅರುಣ್ ಕುಮಾರ್ ಕೆ.ಇ ಹಾಗೂ ಜಲಾವತಿ ಎ.ಎ ಅವರು ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದರು. ಕಳೆದ ವರ್ಷ ನಡೆದ ಸಿಬಿಎಸ್‍ಸಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ತಂದುಕೊಟ್ಟ ಹೆಗ್ಗಳಿಕೆ ಈ ಮೂವರು ಶಿಕ್ಷಕರದ್ದಾಗಿದೆ.

Read More

ವಿರಾಜಪೇಟೆ ಆ.4 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಭಾರಿಕಾಡುವಿನಲ್ಲಿ ಎಂಟು ವರ್ಷಗಳಿಂದ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿರುವ 59 ಪರಿಶಿಷ್ಟ ಪಂಗಡ ಕುಟುಂಬಗಳು ಹಾಗೂ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಲೈನ್ ಮನೆಗಳಲ್ಲಿ ವಾಸವಿರುವ 70 ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ನಿವೇಶನ ಮತ್ತು ಮನೆಗಳನ್ನು ಹಂಚುವ ಸಲುವಾಗಿ ವಿಶೇಷ ಸಭೆಯನ್ನು ನಡೆಸಲಾಯಿತು. ಈ ಸಂದರ್ಭ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು, ಈಗಾಗಲೇ ಪರಿಶಿಷ್ಟ ಪಂಗಡದ 33 ಕುಟುಂಬಗಳಿಗೆ ಸರಕಾರದಿಂದ ಮನೆ ನೀಡಲು ಗುರುತಿಸಲಾಗಿದೆ. ಇವರಿಗೆ ಗ್ರಾಮದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹಾಗೆಯೇ ಇವರುಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲಾ ಕಾಲೇಜುಗಳಿಗೆ ಕಳುಹಿಸಬೇಕು. ಗ್ರಾಮಸ್ಥರ ವಿಶ್ವಾಸ ಗಳಿಸಿಕೊಂಡು ಗ್ರಾಮ ಪಂಚಾಯಿತಿಗೆ, ಗ್ರಾಮಕ್ಕೆ ಬದ್ಧರಾಗಿರುವಂತೆ ಸಲಹೆ ನೀಡಿದರಲ್ಲದೆ…

Read More

ಕುಶಾಲನಗರ ಆ.4 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ‌ ನಿರ್ದೇಶಕ (ಅಭಿವೃದ್ಧಿ)ರಾಗಿ ನಿವೃತ್ತಿ ಹೊಂದಿದ ಪ್ರಾಂಶುಪಾಲ ಎಂ.ಚಂದ್ರಕಾಂತ್  ಅವರಿಗೆ  ಡಯಟ್ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಡಯಟ್ ಸಂಸ್ಥೆಯ ಅಧಿಕಾರಿಗಳು, ಕಛೇರಿಯ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳ ವತಿಯಿಂದ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿಗೊಂಡ ಪ್ರಾಂಶುಪಾಲ ಚಂದ್ರಕಾಂತ್ ಅವರನ್ನು ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದಪ್ರಾಂಶುಪಾಲ ಎಂ.ಚಂದ್ರಕಾಂತ್,  ತಾವುಗಳು ಶಿಕ್ಷಣ ಇಲಾಖೆಯ ವಿವಿಧ ಸ್ತರದ ಹುದ್ದೆಗಳ ಜತೆಗೆ ಈ ಡಯಟ್ ಸಂಸ್ಥೆಯಲ್ಲಿ 2 ವರ್ಷಗಳ ಕಾಲ‌ ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಲು ಹಾಗೂ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ್ದಕ್ಕೆ  ಕೃತಜ್ಞತೆ ಸಲ್ಲಿಸಿದರು. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ವೃದ್ಧಿಸಲು ಹಾಗೂ 2024 ನೇ ಜನವರಿಯಲ್ಲಿ  ಜಿಲ್ಲೆಯಲ್ಲಿ ನಡೆದ ಶಾಲಾ ಮಕ್ಕಳ ರಾಷ್ಟ್ರೀಯ ಹಾಕಿ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲು  ಶಿಕ್ಷಣ ಇಲಾಖೆಯ ಅಧಿಕಾರಿಗಳು…

Read More

ಮೂರ್ನಾಡು ಆ.4 NEWS DESK : ಮೂರ್ನಾಡು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೆ ಬಂದು ಐದು ವರ್ಷ ಪೂರೈಸಿದ ಪ್ರಯುಕ್ತ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ ಬಾಲು ಉದ್ಘಾಟಿಸಿ ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ನಾವು ವಿದ್ಯೆಕಲಿತ ಶಾಲೆ ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದ್ದು, ಇಲ್ಲಿ ದೊರಕುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶಗಳನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಉತ್ತಮಗುಣಮಟ್ಟದ ಶಿಕ್ಷಣವನ್ನು ಒದಗಿಸುವುದಲ್ಲದೆ, ಈ ನೀತಿಯು ಮಕ್ಕಳ ಸಮಗ್ರ ಅಭಿವೃದ್ಧಿ ಮತ್ತು ಕೌಶಲ್ಯ ಆಧಾರಿತ ಕಲಿಕೆಗೆ ಒತ್ತು ನೀಡುವುದು. ಸರ್ವರಿಗೂ ಗುಣಮಟ್ಟದ ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿ, ಬಹುಭಾಷಾ ಶಿಕ್ಷಣ, ತಂತ್ರಜ್ಞಾನ ವೃತ್ತಿಪರ ಶಿಕ್ಷಣ ನೀಡುವುದೆ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.  ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ…

Read More

ಮಡಿಕೇರಿ ಆ.4 NEWS DESK  : ಜಾನಪದ ಕಥೆಗಳು ಪ್ರಕೃತಿಯಲ್ಲಿನ ನೈಜ ಪುಪ್ಪಗಳಂತೆ ಸದಾ ಪರಿಮಳ ಬೀರುತ್ತಾ ಕಥಾ ಲೋಕದಲ್ಲಿ ಕಂಗೊಳಿಸುತ್ತದೆ. ಹೀಗಾಗಿ ಜಾನಪದ ಕಥೆಗಳು ಜನರ ಕಥೆಗಳಾಗಿ ಅತ್ಯಂತ ಮಹತ್ವ ಪಡೆಯುತ್ತದೆ. ಜಾನಪದೀಯ ಮೂಲದ ಕಥೆಗಳನ್ನು ಎಂದಿಗೂ ಮರೆಯಬಾರದು ಎಂದು ತ್ರಿಭಾಷಾ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಕಥೆಗಾರರಿಗೆ ಕರೆ ನೀಡಿದ್ದಾರೆ. ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕು ಪತ್ರಕತ೯ರ ಸಂಘ ಮತ್ತು ಕಾಮಧೇನು ಗೋಶಾಲೆ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ಅಮ್ಮತ್ತಿಯ ಕಾವಾಡಿಯಲ್ಲಿನ ಗೋಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಥಾ ಸಮಯ – ಕಥೆ ಹೇಳುವ ಸ್ಪಧೆ೯ಯ ತೀಪು೯ಗಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. 1940 ರ ದಶಕದಲ್ಲಿ ಖ್ಯಾತ ಕಲಾವಿದ ಕರೀಂಖಾನ್ ಅವರು ಜಾನಪದ ಕಲೆ, ಸಾಹಿತ್ಯಕ್ಕೆ ಹೊಸ ರೂಪು ನೀಡಿದರು. ಅನಂತರವೇ ಕನಾ೯ಟಕದಲ್ಲಿ ಜಾನಪದ ಕಥೆ, ಕವನಗಳಿಗೆ ಆದ್ಯತೆ ದೊರಕಿತ್ತು ಎಂದೂ ಬಾಚರಣಿಯಂಡ ಅಪ್ಪಣ್ಣ ಸ್ಮರಿಸಿದರು. ನಾಡಿನ ಹೆಮ್ಮೆಯ ಕಥೆಗಾರರಾಗಿದ್ದ ಪೂಣ೯ಚಂದ್ರ ತೇಜಸ್ವಿ ನಮ್ಮಿಂದ ಮರೆಯಾಗಿದ್ದರೂ ಅವರ ಸಾಹಿತ್ಯ ಕೖತಿಗಳು ಸದಾ…

Read More

ಸೋಮವಾರಪೇಟೆ ಆ.4 NEWS DESK : ಜಕ್ಕನಳ್ಳಿ ಗ್ರಾಮದಲ್ಲಿ ಸಿ ಆ್ಯಂಡ್ ಡಿ ಭೂಮಿಯ ಸೆಕ್ಷನ್-5 ಸರ್ವೆಗೆ ಕೃಷಿಕರಿಗೆ ನೋಟೀಸ್ ಬಂದಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾಗೃತಿ ಸಭೆ ನಡೆಸಿ ಚರ್ಚೆ ನಡೆಸಿದರು. ತಾಲ್ಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಮಾತನಾಡಿ, ಹಲವು ದಶಕಗಳಿಂದ ರೈತರು ವ್ಯವಸಾಯ ಮಾಡುತ್ತಿರುವ ಸಿ ಆ್ಯಂಡ್ ಡಿ ವ್ಯವಸಾಯಕ್ಕೆ ಯೋಗ್ಯವಾದ ಸರ್ಕಾರಿ ಭೂಮಿಯಾಗಿದೆ. ದಾಖಲೆಗಳಲ್ಲಿ ಸಿ ಆ್ಯಂಡ್ ಡಿ ಭೂಮಿ ವ್ಯವಸಾಯಕ್ಕೆ ಯೋಗ್ಯವಲ್ಲ ಎಂಬ ಕಾರಣದಿಂದ ಅರಣ್ಯ ಇಲಾಖೆಗೆ ಸೇರಿಸಲಾಗಿದೆ. ಸಿ ಆ್ಯಂಡ್ ಡಿ ಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡರೆ, ಕೊಡಗಿನ ಬಹುತೇಕ ರೈತರು ಆಸ್ತಿ ಕಳೆದುಕೊಂಡು ಗುಳೆ ಹೋಗಬೇಕಾದ ಅನಿವಾರ್ಯತೆ ಒದಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರನ್ನು ರಕ್ಷಣೆ ಮಾಡುವಂತಹ ಎಲ್ಲಾ ಅವಕಾಶಗಳಿವೆ. ಈಗಾಗಲೆ ಸಿ ಆ್ಯಂಡ್ ಡಿ ಭೂಮಿಗೆ ಹಕ್ಕುಪತ್ರ ಪಡೆದುಕೊಳ್ಳಲು ಹೋರಾಟ ನಡೆಯುತ್ತಿದೆ ಎಂದರು. ಸರ್ವೆಗೆ ನೋಟೀಸು ಬಂದರೆ ಪ್ರತಿಯೊಬ್ಬ ರೈತರು ಸಂಬಂಧಿಸಿದ ಸಕ್ಷಮ ಪ್ರಾಧಿಕಾರಕ್ಕೆ ತಕರಾರು ಅರ್ಜಿಗಳನ್ನು ಸಲ್ಲಿಸಬೇಕೆಂದು…

Read More