ಮಡಿಕೇರಿ, NEWS DESK ಆ.27 : ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 63ನೇ ವಾರ್ಷಿಕ ಮಹಾಸಭೆ ನಗರದ ಬಾಲಭವನ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಅಪ್ಪಚಟ್ಟೋಳಂಡ ಮನು ಮುತ್ತಪ್ಪ ಅವರು, 1957ರ ಫೆಬ್ರವರಿ 13ರಂದು ಕೊಡಗು ವ್ಯಾಪ್ತಿಯನ್ನು ಒಳಗೊಂಡಂತೆ 25 ಸದಸ್ಯರು ಹಾಗೂ ರೂ.3 ಸಾವಿರ ಷೇರು ಬಂಡವಾಳದೊಂದಿಗೆ ಆರಂಭಗೊಂಡ ಬ್ಯಾಂಕ್ ಇಂದು 2,906 ಸದಸ್ಯರನ್ನು ಹೊಂದಿದ್ದು, ರೂ.184.21 ಲಕ್ಷ ಷೇರು ಬಂಡವಾಳ ಹೊಂದಿದೆ ಎಂದು ತಿಳಿಸಿದರು. ತಾಲೂಕಿನ ಖಾಲಿ ಜಮ್ಮಾ ಬಾಣೆ ಜಮೀನಿಗೆ ಸಾಲ ಸೌಲಭ್ಯ ಒದಗಿಸಿದ ಪ್ರಥಮ ಬ್ಯಾಂಕ್ ಇದಾಗಿದ್ದು, ಇದರ ಮೂಲಕ ಸಾವಿರಾರು ಎಕರೆ ಪ್ರದೇಶಗಳಲ್ಲಿ ಕಾಫಿ, ಕಾಳುಮೆಣಸು, ಅಡಿಕೆ, ತೆಂಗು ಹಾಗೂ ರಬ್ಬರ್ ತೋಟಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಸರ್ಕಾರದ ಆದೇಶದಂತೆ ಶೇ.3ರ ಬಡ್ಡಿದರದಲ್ಲಿ ರೂ.15 ಲಕ್ಷದವರೆಗೆ ವಿವಿಧ ಕೃಷಿ ಉದ್ದೇಶಗಳಿಗೆ ಸಾಲ ನೀಡಲಾಗುತ್ತಿದೆ. ಅಲ್ಲದೆ, ಸಕಾಲದಲ್ಲಿ ಸಾಲದ ಚಾಲ್ತಿ ಕಂತುಗಳನ್ನು ಮರುಪಾವತಿಸುವ…
ಲೇಖಕ: admin
ಮಡಿಕೇರಿ ಆ.27 NEWS DESK : ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ ‘ಜಾನಪದ ಸಂಗಮ’ ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸ ಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸೆಪ್ಟೆಂಬರ್, 16 ರೊಳಗೆ ತಲುಪಿಸಲು ಕೋರಿದೆ. ಅರ್ಜಿ ನಮೂನೆಯು ಅಕಾಡೆಮಿ ವೆಬ್‍ಸೈಟ್ ವಿಳಾಸ https://janapada.karnataka.gov.in/ ಇಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಅಕಾಡೆಮಿ ಇ-ಮೇಲ್ registrar.janapada@gmail.com ಹಾಗೂ ದೂ.ಸಂ.080-22215509 ನ್ನು ಸಂಪರ್ಕಿಸಬಹುದು. ಶಿಬಿರಾರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.27 NEWS DESK : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಅಭ್ಯರ್ಥಿಗಳಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ 21 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್, 03 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ…
ಮಡಿಕೇರಿ ಆ.27 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಸೆ.14 ರಂದು ನಡೆಯಲಿರುವ ಗಣೇಶೋತ್ಸವ’ ಹಬ್ಬದ ಪ್ರಯುಕ್ತ ಭಕ್ತಾದಿಗಳು ಒಡೆದ ಈಡುಗಾಯಿಗಳನ್ನು ದೇವಾಲಯದ ವತಿಯಿಂದ ಸಾರ್ವಜನಿಕರ ಸಮ್ಮುಖದಲ್ಲಿ ಆಸಕ್ತ ಬಿಡ್ಡುದಾರರಿಂದ ಬಹಿರಂಗ ಹರಾಜು ಮಾಡಲಾಗುವುದು. ಈಡುಗಾಯಿ ಬಹಿರಂಗ ಹರಾಜು ಸೆ.8 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ಸಾರ್ವಜನಿಕ ಬಿಡ್ಡುದಾರರು ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಈಡುಗಾಯಿ ಬಹಿರಂಗ ಹರಾಜಿನಲ್ಲಿ ಭಾಗವಹಿಸುವ ಪ್ರತಿಯೊಬ್ಬ ಆಸಕ್ತ ಬಿಡ್ಡುದಾರರು ರೂ.10,000 ಮುಂಗಡ ಠೇವಣಿ ಹಣವನ್ನು “ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಓಂಕಾರೇಶ್ವರ ದೇವಾಲಯ, ಮಡಿಕೇರಿ” (Executive Officer, Sri Omkareshwara Temple, Madikeri) ಅವರ ಹೆಸರಿನಲ್ಲಿ ಡಿ.ಡಿ. ಅಥವಾ ನಗದು ಮೂಲಕ ಪಾವತಿಸಿ ಈಡುಗಾಯಿ ಬಹಿರಂಗ ಹರಾಜಿನಲ್ಲಿ ಭಾಗವಹಿಸುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಎ.ಸಿ.ದೇವಯ್ಯ ಅಧ್ಯಕ್ಷರು, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ…
ಮಡಿಕೇರಿ ಆ.27 NEWS DESK : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಅವರು ಆ.28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಆ.28 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷಗಳಿಗೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳು, ಸಂಘಟನೆಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.27 NEWS DESK : ಪ್ರಸಕ್ತ ಸಾಲಿನಲ್ಲಿ ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು. ಸಭೆಯಲ್ಲಿ ಮಾಜಿ ಸಚಿವರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೆಂಕಟೇಶ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಎ.ಮಂಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ನೀರಾವರಿ ಇಲಾಖೆಯ ಎಂಜಿನಿಯರ್‍ಗಳು ಇತರರು ಇದ್ದರು.
ಗುಂಡಿಕೆರೆ, NEWS DESK ಆ.27: ಜುಲೈ 25, 26 ರಂದು ಗುಂಡಿಕೆರೆಯಲ್ಲಿ ನಡೆದ SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಸೀನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ರೌಳತುಲ್ ಉಲೂಂ ದರ್ಸ್ ಕುಂಜಿಲದ ವಿದ್ಯಾರ್ಥಿ ಹಾಶೀರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗಾಗಿ SSF ಚಿಟ್ಟಾಡೆ ಯುನಿಟ್ ವತಿಯಿಂದ ಹಾರ್ದಿಕ ಅಭಿನಂದನೆಗಳು ಸಲ್ಲಿಸಲಾಗಿದೆ.
ರಾಜ್ಯಾದಂತ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ *ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್” (ಗ್ರಾಮೀಣ)(VB-G RAM G )* ಯೋಜನೆಯಾಗಿ ಜುಲೈ 01ರಿಂದ ಪ್ರಾರಂಭವಾಗಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ, ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶ್ ಕುಮಾರ್ ವಿ ರವರು ಮಾತನಾಡಿ, *ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್”(ಗ್ರಾಮೀಣ)(VB-G RAM G )* *ಯೋಜನೆ ಜನರಿಗೆ 125 ದಿನಗಳ ಕೂಲಿ ಖಾತ್ರಿಯ ಉದ್ಯೋಗ ಒದಗಿಸುವುದರ ಜೊತೆಗೆ ಪ್ರತಿ ದಿನದ ಕೂಲಿಯ ಮೊತ್ತವನ್ನ 382/-ರೂ ಗೆ ಹೆಚ್ಚಿಸಿ ಜನರ ಜೀವನ ಮಟ್ಟವನ್ನ ಉತ್ತಮ ಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಯೋಜನೆಯಡಿ ಹೆಚ್ಚು ಅರ್ಹ ಕುಟುಂಬಗಳನ್ನು ಸೇರ್ಪಡೆಗೊಳಿಸಿ, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುಲು ಹೆಚ್ಚಿನ ಅವಕಾಶಗಳಿದ್ದು ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕೋಳಿಗೂಡು, ಮೇಕೆ ಶೇಡ್, ಹಂದಿ ಶೇಡ್, ಇಂಗು ಗುಂಡಿ, ತೆರೆದ ಬಾವಿ, ಕೃಷಿ ಹೊಂಡ, ಅಡಿಕೆ, ಕಾಫಿ, ಕಾಳುಮೆಣಸು, ಸೇರಿದಂತೆ ವೈಯಕ್ತಿಕ…
ಕುಶಾಲನಗರ, NEWS DESK ಆ. 27: ಮಹಿಳೆಯು ತನ್ನ ಅನುಭವವನ್ನು ಮಾತ್ರ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವುದಿಲ್ಲ. ಸಂಸ್ಕೃತಿಗೆ ದಾಖಲೆಯನ್ನು, ಪ್ರಕೃತಿಗೆ ಕಾವ್ಯವನ್ನು, ಬದುಕಿಗೆ ಹೊಸ ಅರ್ಥವನ್ನು, ಎಲ್ಲಕ್ಕಿಂತ ಮಿಗಿಲಾಗಿ ತನ್ನ ಗಟ್ಟಿ ಸಾಹಿತ್ಯದ ಧ್ವನಿಯನ್ನು ನೀಡುತ್ತಾಳೆ ಎಂದು ಕವಯಿತ್ರಿ, ಸಾಹಿತಿ ಲೀಲಾಕುಮಾರಿ ತೊಡಿಕಾನ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ, ದಿ. ಪಾಣತ್ತಲೆ ಶ್ರೀ ಅಣ್ಣಯ್ಯ ಮತ್ತು ಶ್ರೀಮತಿ ಚಿನ್ನಮ್ಮ ಅವರ ಸ್ಮರಣಾರ್ಥ ಏರ್ಪಡಿಸಿದ್ದ “ಕೊಡಗಿನಲ್ಲಿ ಕನ್ನಡ ಸಾಹಿತ್ಯ ಬೆಳವಣಿಗೆಗೆ ಮಹಿಳಾ ಸಾಹಿತಿಗಳ ಕೊಡುಗೆಗಳು” ಎಂಬ ದತ್ತಿ ಉಪನ್ಯಾಸ ಮಾಲಿಕೆಯಲ್ಲಿ ಅವರು ಮಹಿಳಾ ಸಾಹಿತಿಗಳ ಸಾಹಿತ್ಯ ರಚನೆ ಕುರಿತು ಮಾತನಾಡಿದರು. ಕೊಡಗಿನ ಮಹಿಳಾ ಸಾಹಿತಿಗಳ ಪರಿಚಯದೊಂದಿಗೆ ಕನ್ನಡ ಸಾಹಿತ್ಯಕ್ಕೆ ಅವರದೇ ಆದ ವಿಶೇಷ ಕೊಡುಗೆಗಳನ್ನು ಸ್ಮರಿಸಿಕೊಂಡು ಮಾತನಾಡಿದ ಅವರು, ಕನ್ನಡದ ಮೊದಲ ಕಥೆಗಾರ್ತಿ ಎನಿಸಿದ ಕೊಡಗಿನ ಗೌರಮ್ಮ ಅವರು ಸ್ತ್ರೀವಾದಿ ಹಾಗೂ ಭಾರತೀಯ ಸ್ವಾತಂತ್ರ್ಯ…
ಮಡಿಕೇರಿ, NEWS DESK ಆ.27 : ಗ್ರಾಮೀಣ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಆತಂಕವನ್ನು ಸೃಷ್ಟಿಸಿರುವ ಕಸ್ತೂರಿ ರಂಗನ್ ವರದಿ ಇದೀಗ ಮಡಿಕೇರಿ ನಗರಸಭೆಯನ್ನು ಕೂಡ ಕಾಡಿದೆ. ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಪಿ. ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ವಿರುದ್ಧ ನಿರ್ಣಯ ಕೈಗೊಳ್ಳಲಾಯಿತು. ಕಸ ವಿಲೇವಾರಿಗಾಗಿ 2ನೇ ಮೊಣ್ಣಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಗುರುತಿಸಿರುವ 10 ಎಕರೆ ಪ್ರದೇಶವು ಕಸ್ತೂರಿ ರಂಗನ್ ವರದಿಯಲ್ಲಿ ಸೇರ್ಪಡೆಗೊಂಡಿರುವುದರಿಂದ ನಗರಸಭೆ ಪರ್ಯಾಯ ಜಾಗದಲ್ಲಿ ಕಸ ವಿಲೇವಾರಿಗೆ ಮುಂದಾಗಬೇಕಾದ ಅನಿವಾರ್ಯತೆ ಎದುರಾಗಿದೆ. ನಗರಸಭೆಯ ವಿರೋಧ ಪಕ್ಷದ ನಾಯಕ ಅಮಿನ್ ಮೊಹಿಸಿನ್ ಮಾತನಾಡಿ, 2ನೇ ಮೊಣ್ಣಂಗೇರಿಯಲ್ಲಿ ಕಸ ವಿಲೇವಾರಿ ಘಟಕಕ್ಕಾಗಿ ಗುರುತಿಸಲಾಗಿದ್ದ 10 ಎಕರೆ ಜಾಗಕ್ಕೆ ಈಗಾಗಲೇ ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಆದರೆ ಇದೀಗ ಆ ಜಾಗವನ್ನು ಕೈಬಿಟ್ಟು ಕಾಟಗೇರಿಯಲ್ಲಿ 5 ಎಕರೆ ಜಾಗ ಗುರುತಿಸಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯ ಕಾಳಚಂಡ ಅಪ್ಪಣ್ಣ ಮಾತನಾಡಿ,…






