ಮಡಿಕೇರಿ ಆ.2 NEWS DESK : ನಾಪೋಕ್ಲುವಿನ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ “ವ್ಯಸನ ಮುಕ್ತ ಭಾರತ” ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ನಡೆಯಿತು. ನಾಪೋಕ್ಲು ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಮತ್ತು ಸೇವನೆ ಹಾಗೂ ದುಷ್ಪರಿಣಾಮಗಳು, ಪೋಕ್ಸೊ ಕಾಯ್ದೆ, ಸೈಬರ್ ಸುರಕ್ಷತೆ, ಸೋಶಿಯಲ್ ಮೀಡಿಯಾ, ಆನ್‌ಲೈನ್ ಗೇಮ್, ಮೈನರ್ ಡ್ರೈವಿಂಗ್ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಲೇಖಕ: admin
ನಾಪೋಕ್ಲು ಆ.2 NEWS DESK : ಕೊಳಕೇರಿ ಗ್ರಾಮದ ಕಾಫಿ ತೋಟದಲ್ಲಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಜ್ವಲ್ ಕುಮಾರ್ ರಕ್ಷಿಸಿದ್ದಾರೆ. ನಾಪೋಕ್ಲು ಗ್ರಾಮ ಪಂಚಾಯಿತಿಯ ಕೊಳಕೇರಿ ಗ್ರಾಮದ ಕನ್ನಂಬೀರ ಪವನ್ ಪೂವಯ್ಯ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವ ಸಂದರ್ಭ ಸುಮಾರು 14 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಬಳಿಕ ಮೂರ್ನಾಡು ಕೋಡಂಬೂರು ವಿನ ಉರಗ ತಜ್ಞ ಪ್ರಜ್ವಲ್ ಕುಮಾರ್ ಅವರನ್ನು ಸಂಪರ್ಕಿಸಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪ್ರಜ್ವಲ್ ಕುಮಾರ್ ಹಾವನ್ನು ಹಿಡಿದು ಮಾಕುಟ ರಕ್ಷಿತಾ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ಸಂದರ್ಭ ಕೊಳಕೇರಿ ಗ್ರಾಮ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಕುಂಡಿಯೋಳಂಡ ವಿಶು ಪೂವಯ್ಯ, ಕೇಟೋಳಿರ ಶಮ್ಮಿ ಸುಬ್ಬಯ್ಯ ಗ್ರಾಮದ ಹಿರಿಯರಾದ ಕನ್ನಂಬೀರ ಎನ್.ಚಂಗಪ್ಪ, ಕಾಂಡಂಡ ಚೋಂದವ್ವ, ಕುಂಡಿಯೋಳಂಡ ಜತ್ತಿ ಸುಬ್ಬಯ್ಯ ಸೇರಿದಂತೆ ಗ್ರಾಮಸ್ಥರು ಇದ್ದರು. ಹಾವುಗಳು ಕಂಡಬಂದಲ್ಲಿ ಅದನ್ನು ಕೊಲ್ಲದೆ ಮಾಹಿತಿ ನೀಡಿದರೆ ಅವುಗಳನ್ನು ರಕ್ಷಿಸಲಾಗುವುದು ಎಂದು ಉರಗ ತಜ್ಞ ಪ್ರಜ್ವಲ್ ಕುಮಾರ್ ತಿಳಿಸಿದರು.…
ನಾಪೋಕ್ಲು ಆ.2 NEWS DESK : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾಳೆ. ಆಂಧ್ರ ಪ್ರದೇಶದ ಕಾಕಿನಾಡಲ್ಲಿ ಆ.12ರವರೆಗೆ ನಡೆಯಲಿರುವ ಪಂದ್ಯಾವಳಿಗೆ ಶ್ರಾವ್ಯ ದೇವಯ್ಯ ಆಯ್ಕೆ ಆಗಿರುವುದು ಕೊಡಗಿಗೆ ಹೆಮ್ಮೆಯ ವಿಷಯವಾಗಿದೆ. ತಮಿಳುನಾಡಿನ ತಿರುಪೂರ್ ಜಿ.ವಿ.ಜಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರಾವ್ಯ ಮುಂಬೈಯ ಎನ್.ಸಿ.ಓ.ಇ ತಂಡದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಇವಳು ಕುಂಜಿಲ ಗ್ರಾಮದ ವಾಟೆಕಾಡು ನಿವಾಸಿ ದೇವಯ್ಯ ಹಾಗೂ ಚಿತ್ರ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಆ.2 NEWS DESK : ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಎ.ಎ.ಲಕ್ಷ್ಮಣ್ ಅವರಿಗೆ ಶಾಲೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷೆ ಲಿಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿಗೊಂಡ ಶಿಕ್ಷಕ ಲಕ್ಷ್ಮಣ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಕೆ.ಎಂ.ಅಯ್ಯಚ್ಚು, ಶಿಕ್ಷಕರಾದ ಲಕ್ಷ್ಮಣ್ ಅವರು ಶಾಲಾ ಮಕ್ಕಳಲ್ಲಿ ಎನ್ನೆಸ್ಸೆಸ್ ಮೂಲಕ ಉತ್ತಮ ನಾಯಕತ್ವ ಗುಣ ಮತ್ತು ಸೇವಾ ಮನೋಭಾವದೊಂದಿಗೆ ಅವರಲ್ಲಿ ಕ್ರೀಡಾ ಚಟುವಟಿಕೆಗಳ ಅಭಿರುಚಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶ್ಲಾಘಿಸಿದರು. ಶಾಲೆಯ ಅಭಿವೃದ್ಧಿ ಮತ್ತು ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಉತ್ತಮ ಸೇವೆ ಸಲ್ಲಿಸಿರುವುದನ್ನು ಪ್ರಶಂಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಶಿಕ್ಷಕ ಲಕ್ಷ್ಮಣ್ ಅವರು ಶಾಲೆಯ ಅಭಿವೃದ್ಧಿ ಮತ್ತು ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳ ಜತೆಗೆ…
ಮಡಿಕೇರಿ ಆ.2 NEWS DESK : ನವದೆಹಲಿಯ ಐಟಿಸಿ ಮೌರ್ಯ ಹೊಟೇಲ್‌ನಲ್ಲಿ ಬ್ರಿಡ್ಜ್ ಟು ಬೆಂಗಳೂರು ಎಂಬ ತಾಂತ್ರಿಕ ಶೃಂಗಸಭೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಮಾಹಿತಿ ತಂತ್ರಜ್ಞಾನದ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ದೃಷ್ಟಿಕೋನದಿಂದ ಹಾಗೂ ಹೂಡಿಕೆ ಸಂಬಂಧ, ಅತ್ಯಂತ ಮಹತ್ವದ ಶೃಂಗಸಭೆ ಇದಾಗಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಟಿ.ಬಿ.ಜಯಚಂದ್ರ, ದೇಶ ವಿದೇಶಗಳ ಪ್ರಮುಖರು ಮಾಹಿತಿ-ತಂತ್ರಜ್ಞಾನ ಕಂಪನಿಗಳ ಮುಖ್ಯಸ್ಥರು, ವಿವಿಧ ದೇಶದ ರಾಯಭಾರಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಶೃಂಗಸಭೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಕಡೆಗಳಲ್ಲಿ ಬಂಡವಾಳ ಹೂಡಿಕೆಗಳ ಬಗ್ಗೆ ಹಾಗೂ ಕರ್ನಾಟಕವು ಮಾಹಿತಿ ತಂತ್ರಜ್ಞಾನಕ್ಕೆ ನೀಡುತ್ತಿರುವ ಅವಕಾಶಗಳ ಹಾಗೂ ಮಹತ್ವದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ತಂತ್ರಜ್ಞಾನ ಅಭಿವೃದ್ಧಿಗೆ ಇರುವ ವಿಪುಲ ಅವಕಾಶಗಳನ್ನು ಶೃಂಗಸಭೆಯಲ್ಲಿ ತೆರೆದಿಡಲಾಯಿತು.
ಮಡಿಕೇರಿ NEWS DESK ಆ.2 : ವ್ಯಾಪಕ ಮಳೆಯಿಂದ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರ್ನಾಟಕ ಮತ್ತು ಕೇರಳ ಗಡಿಯಲ್ಲಿ ಹರಡಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿರುವುದು ಬೆಳಕಿಗೆ ಬಂದಿದೆ. ಕೆದಮುಳ್ಳೂರು ಪಂಚಾಯ್ತಿಗೆ ಒಳಪಟ್ಟ ಪಾಲಂಗಾಲ ಗ್ರಾಮದ ಮಲೆತಿರಿಕೆ ದೇವಸ್ಥಾನದಿಂದ ಸುಮಾರು 5 ರಿಂದ 10 ಕಿ.ಮೀ. ದೂರದಲ್ಲಿ ಕೇರಳದ ಗಡಿಗೆ ಒತ್ತಿಕೊಂಡಂತೆ ಅರಣ್ಯವಿದೆ. ಇದರ ನಡುವಿನ ಗುಡ್ಡ ಪ್ರದೇಶದಿಂದ ಭಾರೀ ಪ್ರಮಾಣದ ಭೂ ಕುಸಿತ ಸಂಬವಿಸಿದೆ. ಈ ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ರಾಜ್ಯದ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಸಂಭವಿಸಿರುವ ಗುಡ್ಡ ಕುಸಿತದ ಸುತ್ತಮುತ್ತಲ ಸುಮಾರು 10 ರಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಸತಿಯ ಪ್ರದೇಶಗಳಿಲ್ಲ. ಇದರಿಂದಾಗಿ ಗುಡ್ಡ ಕುಸಿತದ ಬಗ್ಗೆ ಯಾರ ಗಮನಕ್ಕೂ ಬರಲಿಲ್ಲ ಮತ್ತು ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಅರಣ್ಯದ ಗುಡ್ಡ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯ ಸಂದರ್ಭ ಐದಾರು…
ಮಡಿಕೇರಿ NEWS DESK ಆ.1 : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಕನ್ನಡ ಚಲನಚಿತ್ರ ‘ಕಂದೀಲು’ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದೆ. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳ 13 ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಕಂದೀಲು’ ಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ‘ಕಂದೀಲು’ ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಬೆಳಕು ಚೆಲ್ಲಲಾಗಿದೆ. ‘ಕಂದೀಲು’ ಚಿತ್ರದ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಗಳಿಸಿರುವ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ರಾಷ್ಟ್ರ ಪ್ರಶಸ್ತಿ ಪಡೆದ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದ “ಕಂದೀಲು” ಚಲನಚಿತ್ರ 15ನೇ ಬೆಂಗಳೂರು…
ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತಲ್ಲೀನರಾಗಿರುತ್ತಾರೆ. ಪ್ರಸ್ತುತ ಜಿಲ್ಲೆಯಲ್ಲಿ ಭತ್ತ ಹಾಗೂ ಮುಸುಕಿನ ಜೋಳದ ಬೆಳೆಗಳ ಬಿತ್ತನೆ ಕಾರ್ಯಗಳು ಪ್ರಗತಿಯಲ್ಲಿವೆ. ಒಟ್ಟು 30525 ಹೆಕ್ಟೇರ್‍ಗೆ ಇಲ್ಲಿಯವರೆಗೆ 5864 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ/ ನಾಟಿ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯ ಕೃಷಿ, ತೋಟಗಾರಿಕೆ ಮತ್ತು ಕಾಫಿ ಬೆಳೆಗಳಿಗೆ 2025ನೇ ಸಾಲಿನ ಮುಂಗಾರು ಹಂಗಾಮಿಗೆ ಸುಮಾರು 88677 ಮೆ.ಟನ್ ರಸಗೊಬ್ಬರಗಳ ಅವಶ್ಯಕತೆ ಇದೆಯೆಂದು ಅಂದಾಜಿಸಲಾಗಿದೆ. ಏಪ್ರಿಲ್ ಮಾಹೆಯ ಆರಂಭಿಕ ದಾಸ್ತಾನು (ಕಾಪು ದಾಸ್ತಾನು ಸೇರಿ) 35,924 ಮೆ.ಟನ್ ಇದ್ದು, ಜುಲೈ, 28 ರವರೆಗೆ 54520 ಮೆ.ಟನ್ ರಸ ಗೊಬ್ಬರ ವಿವಿಧ ತಯಾರಕ ಸಂಸ್ಥೆಗಳಿಂದ ಜಿಲ್ಲೆಗೆ ಸರಬರಾಜಾಗಿದೆ. ಒಟ್ಟಾರೆಯಾಗಿ ಇಲ್ಲಿಯವರೆಗೆ 90,444 ಮೆ. ಟನ್. ರಸಗೊಬ್ಬರ ಜಿಲ್ಲೆಯ ರೈತರಿಗೆ ಲಭ್ಯವಿದ್ದು, ಸುಮಾರು 60,126 ಮೆ. ಟನ್ ರಸಗೊಬ್ಬರವನ್ನು ರೈತರಿಗೆ ವಿತರಣೆ/ ಮಾರಾಟ ಮಾಡಲಾಗಿದೆ. ಬಾಕಿ 30,318 ಮೆ. ಟನ್ ರಸಗೊಬ್ಬರ (ಯೂರಿಯಾ…
ಮಡಿಕೇರಿ ಆ.1 NEWS DESK : ಯುವ ಜನರು ದುಶ್ಚಟಗಳಿಗೆ ತುತ್ತಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಕರೆ ನೀಡಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಕಾರದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳಿಗೆ ದಾಸರಾದಲ್ಲಿ ಭವಿಷ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಮದ್ಯ ಹಾಗೂ ಮಾದಕ ವಸ್ತುಗಳ ಬಗ್ಗೆ ಯೋಚಿಸಲೇ ಬಾರದು ಎಂದರು. ‘ಪೊಲೀಸ್ ಇಲಾಖೆಯು ವಿವಿಧ ಇಲಾಖೆಗಳ ಸಹಕಾರದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಬಗ್ಗೆ ಒಂದು ಕಡೆ ಜಾಗೃತಿ ಮೂಡಿಸುತ್ತದೆ.…
ಮಡಿಕೇರಿ ಆ.1 NEWS DESK : ಮಡಿಕೇರಿ ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಪರಿಶೀಲಿಸಿದರು. ಅತಿಹೆಚ್ಚು ಮಳೆಯಾಗುವ ಈ ಪ್ರದೇಶಕ್ಕೆ ಪೂರಕವಾಗಿ ತಜ್ಞ ಎಂಜಿನಿಯರ್ ಗಳಿಂದ ವೈಜ್ಞಾನಿಕ ರೂಪದ ಪರಿಹಾರ ಕಂಡುಕೊಳ್ಳುವಂತೆ ಸೂಚನೆ ನೀಡಿದರು. ಬಿರುಕು ಬಿಟ್ಟಿರುವ ತಡೆಗೋಡೆ ಕುಸಿದು ಬಿದ್ದರೆ ಇಡೀ ಹೆದ್ದಾರಿಯೇ ಬಂದ್ ಆಗಲಿದೆ. ಆದ್ದರಿಂದ ತಜ್ಞ ಎಂಜಿನಿಯರ್‍ಗಳನ್ನು ಆಹ್ವಾನಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹೆದ್ದಾರಿ ವಿಭಾಗದ ಎಂಜಿನಿಯರ್‍ಗೆ ಶಾಸಕರು ಸೂಚಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧಿಸಿದಂತೆ ಟಾರ್ಪಲ್ ಹೊದಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಾಸಕರು ನಿರ್ದೇಶನ ನೀಡಿದರು. ಈ ಬಾರಿ ಮೇ ತಿಂಗಳಿನಿಂದಲೇ ದೊಡ್ಡ ಮಳೆ ಆರಂಭವಾಯಿತು. ಮುಂದಿನ ನವೆಂಬರ್ ವರೆಗೂ ಮಳೆ ಇರುವ ಸಾಧ್ಯತೆ ಇದೆ. ಆದ್ದರಿಂದ ಹೆದ್ದಾರಿ ಸುರಕ್ಷತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ತಜ್ಞ ಎಂಜಿನಿಯರ್‍ಗಳನ್ನು ಆಹ್ವಾನಿಸಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು. ಸಾರ್ವಜನಿಕರ ಓಡಾಟ…






