ಮಡಿಕೇರಿ ಆ.1 NEWS DESK : ನಗರದ ರೆಡ್‍ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು. ನಗರದ ಸಮೀಪದಲ್ಲಿರುವ ಹೆದ್ದಾರಿ ತಡೆಗೋಡೆ ಬಿರುಕಿನಿಂದ 5 ಕುಟುಂಬಗಳು ರೆಡ್‍ಕ್ರಾಸ್ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿರುವ ಹಿನ್ನೆಲೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ಶಾಸಕರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು. ತಡೆಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಈಗಾಗಲೇ 2018 ಮತ್ತು 2019 ರಲ್ಲಿ ಸಂತ್ರಸ್ತರಿಗೆ ಮನೆ ನೀಡಿರುವ ಜಾಗದಲ್ಲಿ ಮನೆ ಖಾಲಿ ಇದ್ದಲ್ಲಿ, ಮನೆ ಒದಗಿಸುವ ಸಂಬಂಧ ಪರಿಶೀಲಿಸಿ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಶಾಸಕರು ಸಲಹೆ ಮಾಡಿದರು. ಇಂತಹ ಕುಟುಂಬಗಳು ಸಂತ್ರಸ್ತ ಕುಟುಂಬಗಳ ಮನೆ ಪಟ್ಟಿಯಿಂದ ಏಕೆ ಕೈಬಿಟ್ಟಿವೆ ಎಂದು ತಿಳಿಯುತ್ತಿಲ್ಲ. ಆದ್ದರಿಂದ ಮರು ಪರಿಶೀಲಿಸಿ ಮನೆ ನೀಡಲು ಕ್ರಮವಹಿಸುವಂತೆ…
ಲೇಖಕ: admin
ಮಡಿಕೇರಿ ಆ.1 NEWS DESK : ವಿದ್ಯಾರ್ಥಿ ಜೀವನದಲ್ಲಿಯೇ ಕಲಾ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದರ ಜೊತೆಗೆ, ಮನಸ್ಸಿನಲ್ಲಿನ ಋಣಾತ್ಮಕ ಅಂಶಗಳೂ ಮರೆಯಾಗಲು ಸಹಕಾರಿಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಹೇಳಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಆಯೋಜಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿಯಲ್ಲಿನ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಸುಗಮ ಸಂಗೀತ ತರಬೇತಿ ಶಿಬಿರವನ್ನು ಸರ್ಕಾರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದ ಅವರು ಸುಗಮ ಸಂಗೀತ ಮಾಧ್ಯಮವು ನಮ್ಮ ಭಾವನೆಗಳ ಅಭಿವ್ಯಕ್ತಿಗೆ ಸೂಕ್ತವಾಗಿದೆ ಎಂದು ತಿಳಿಸಿದರು. ಸಮಾಜದ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರನ್ನು ವಿದ್ಯಾರ್ಥಿಗಳು ಮಾದರಿಯಾಗಿ ಪರಿಗಣಿಸಿಕೊಂಡಲ್ಲಿ ಅವರು ಕೂಡ ಅಮೂಲ್ಯವಾದ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು. ಸರ್ಕಾರ ಆಯೋಜಿಸುವ ವಿವಿಧ ಕಾರ್ಯಕ್ರಮಗಳಿಗೆ ಸಮಾಜದ ವಿವಿಧ ಸಂಘಸಂಸ್ಥೆಗಳೂ ಕೈಜೋಡಿಸಿದರೆ…
ಸುಂಟಿಕೊಪ್ಪ ಆ.1 NEWS DESK : ಕಂಬಿಬಾಣೆ, ಅತ್ತೂರು, ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ನೀಡಲಾಗುವ ಶೂ ಮತ್ತು ಸಾಕ್ಸ್‍ಗಳನ್ನು ವಿತರಿಸಲಾಯಿತು. ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಆರ್.ಆರ್.ಮೋಹನ್ ಅವರು ಅತ್ತೂರು ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 66 ಮಕ್ಕಳಿಗೆ ಶೂ ಮತ್ತು ಸಾಕ್ಸ್ ಅನ್ನು ವಿತರಿಸಿ ಮಾತನಾಡಿದ ಅವರು, ಸರಕಾರವು ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡಯಲೇಬೇಕೆಂಬ ಮುಖ್ಯಉದ್ದೇಶವನ್ನು ಇರಿಸಿಕೊಂಡು ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಪಡೆದುಕೊಂಡು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಾಯನಿ ನಯನ ಹಾಗೂ ಸಹಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಮಡಿಕೇರಿ ಆ.1 NEWS DESK : ಕುಶಾಲನಗರದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕಾರ ಬಿ.ಪಿ.ದಿನೇಶ್ ಕುಮಾರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸೋಮವಾರಪೇಟೆ ಉಪ ವಿಭಾಗದ ಗಣಪತಿ ಪ್ರತಿಷ್ಟಾಪನಾ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಿ ಶಾಂತಿಯುತ ಗಣೇಶ ಚತುರ್ಥಿ ಆಚರಣೆಗೆ ಸಲಹೆ ನೀಡಿದರು.
ಮಡಿಕೇರಿ ಆ.1 NEWS DESK : ಕೇರಳ ರಾಜ್ಯದ ಇಬ್ಬರು ಕ್ರೈಸ್ತ ಕನ್ಯಾಸ್ತ್ರೀಯರನ್ನು ಸುಳ್ಳು ಮೊಕದ್ದಮೆ ಹೂಡಿ ಛತ್ತೀಸ್‍ಗಢ ರಾಜ್ಯದಲ್ಲಿ ಬಂಧಿಸಿರುವ ಕ್ರಮವನ್ನು ಖಂಡಿಸಿ ಆ.2 ರಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು. ಕನ್ಯಾಸ್ತ್ರೀಯರನ್ನು ತಕ್ಷಣ ಬಿಡುಗಡೆ ಮಾಡಬೇಕು, ಸುಳ್ಳು ಮೊಕದ್ದಮೆಯನ್ನು ಹಿಂಪಡೆಯಬೇಕು ಮತ್ತು ಬಂಧಿಸಲು ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿವೃತ್ತ ಎಎಸ್‌ಐ ಬಿ.ಎನ್.ಶಿವಪ್ಪ, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ಲತಾ ಮತ್ತು ಸ್ವಇಚ್ಛಾ ನಿವೃತ್ತಿ ಹೊಂದಿದ ಎಎಸ್ಐ ಫ್ರಾನ್ಸಿಸ್, ಎಆರ್‌ಎಸ್ಐ ಬೇಲಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ಐ.ಪಿ. ಮೇದಪ್ಪ ಹಾಗೂ ಇತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸೋಮವಾರಪೇಟೆ ಆ.1 NEWS DESK : ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ಶಾಂತಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಹಲವು ಯೋಜನೆಗಳನ್ನು ಮಾಡಿದೆ. ಈ ಅವಕಾಶವನ್ನು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಸ್‍ಡಿಎಂಸಿ ಅಧ್ಯಕ್ಷ ಗುರುಪ್ರಸಾದ್ ಹೇಳಿದರು. ಪ್ರಣವ್ ಫೌಂಡೇಶನ್‍ನವರು ಜನಪರ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭ ಫೌಂಡೇಶನ್‍ನ ಪದಾಧಿಕಾರಿಗಳಾದ ಪ್ರೇಮ್ ಸಾಗರ್, ಸಜನ್ ಮಂದಣ್ಣ, ಕೆ. ಪಿ.ಆಶೀತ್ ಶಾಲೆಯ ಮುಖ್ಯ ಶಿಕ್ಷಕ ಪರಮೇಶ್, ಸ್ಥಳೀಯರಾದ ಡಿ.ಎಸ್.ಲಿಂಗರಾಜು, ಕೆ.ಎಂ.ಕೃಷ್ಣಕುಮಾರ್, ಮಧುಕುಮಾರ್, ಧರ್ಮಪ್ಪ, ನಿಶಾಂತ್, ಕಿರಣ್ ಕುಮಾರ್ ಇದ್ದರು.
ಸೋಮವಾರಪೇಟೆ ಆ.1 NEWS DESK : ಸೋಮವಾರಪೇಟೆ ಬಿ.ಬಿ.ಶಿವಪ್ಪ ಅಭಿಮಾನಿ ಬಳಗದ ವತಿಯಿಂದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಬಿ.ಶಿವಪ್ಪ ಅವರ 8ನೇ ಸಂಸ್ಮರಣೋತ್ಸವವನ್ನು ಪಟ್ಟಣದ ಶ್ರೀಗಣಪತಿ ದೇವಾಲಯದಲ್ಲಿ ಆಚರಿಸಲಾಯಿತು. ಬಳಗದ ಪದಾಧಿಕಾರಿಗಳಾದ ಡಿ.ಬಿ.ಧರ್ಮಪ್ಪ, ಬಿ.ಟಿ.ತಿಮ್ಮಶೆಟ್ಟಿ, ರಾಘವ, ಬಿ.ಎಸ್.ಅನಂತರಾಮ್, ತಾಕೇರಿ ಪೊನ್ನಪ್ಪ, ಪ್ರೇಮನಾಥ್, ಕೆ.ಜಿ.ಸುರೇಶ್, ಸುಮಾ ಸುದೀಪ್, ಎ.ಎಸ್.ಮಲ್ಲೇಶ್, ಶೇಷಪ್ಪ ಮತ್ತಿತ್ತರು ಇದ್ದರು.
ನಾಪೋಕ್ಲು ಆ.1 NEWS DESK : ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಆ.3 ರಂದು ಕಕ್ಕಡ-18 ತೀನಿ ನಮ್ಮೆ ಪೈಪೋಟಿ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆಯಲಿದೆ. ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದು,್ದ ಕೊಳಕೇರಿಯ ಕಾಫಿ ಬೆಳೆಗಾರ್ತಿ ಬಿದ್ದಾಟಂಡ ಸುಮನ್ ಪ್ರದೀಪ್ ಉದ್ಘಾಟಿಸಲಿದ್ದಾರೆ. ತಿನಿಸುಗಳ ಪ್ರದರ್ಶನವನ್ನು ನೆಲಜಿ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಮಣವಟ್ಟಿರ ಕಮಲ ಬೆಳ್ಳಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ನರ್ಸಿಂಗ್ ಸೂಪರಿಟೆಂಡೆಂಟ್ ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಸನ್ಮಾನಿಸಲಾಗುವುದು. ಕಕ್ಕಡ ತೀನಿರ ಭೋಜ…
ನಾಪೋಕ್ಲು ಆ.1 NEWS DESK : ಜಿಲ್ಲೆಯ ಅತ್ಯಂತ ಎತ್ತರದ ಬೆಟ್ಟ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯಲ್ಲಿ ತಡಿಯಂಡಮೋಳ್ ಬೆಟ್ಟಕ್ಕೆ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಚಾರಣ ನಿರ್ಬಂಧಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಮಾನವ ಪ್ರಾಣ ಹಾನಿ, ಜಾನುವಾರುಗಳ ಪ್ರಾಣಹಾನಿ, ಮೂಲಭೂತ ಸೌಕರ್ಯಗಳು ಹಾನಿಯಾಗುವಂತಹ ಪ್ರಕರಣಗಳು ವರದಿಯಾಗಿದ್ದು, ಮುಂಜಾಗ್ರತ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿರುಸಿನ ಮಳೆಯಾಗುತ್ತಿರುವುದರಿಂದ ಮಳೆ ಗಾಳಿಯಿಂದಾಗಿ ಅಪಾಯಕಾರಿ ಹಂತದಲ್ಲಿರುವ ಮರದ ರೆಂಬೆ ಕೊಂಬೆಗಳು ರಸ್ತೆ ಮೇಲೆ ಅಥವಾ ಸಂಚರಿಸುವ ಮಾರ್ಗದಲ್ಲಿ ಮುರಿದು ಬಿದ್ದು ಪ್ರಾಣಾಪಾಯವಾಗುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮುಂಗಾರು ಅವಧಿ ಮುಕ್ತಾಯಗೊಳ್ಳುವವರೆಗೆ ಅರಣ್ಯ ವ್ಯಾಪ್ತಿಯಲ್ಲಿ ಚಾರಣವನ್ನು ನಿಷೇಧಿಸಲಾಗಿದೆ. ಮಡಿಕೇರಿ ಪ್ರಾದೇಶಿಕ ವಿಭಾಗ ವ್ಯಾಪ್ತಿಯ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯಲ್ಲಿ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣ ತೆರಳಲು ಇಲಾಖೆ ಅನುಮತಿ ಪಡೆಯಲು ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ.…






