ಲೇಖಕ: admin

ಮಡಿಕೇರಿ ಆ.1 NEWS DESK  : ಎಜಿಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕೆ.ಆರ್ ಚಾರಿಟೇಬಲ್ ಟ್ರಸ್ಟ್ ಪ್ರತಿವರ್ಷ ಸ್ವಾತಂತ್ರೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿದ ಗಣ್ಯರನ್ನು ಗುರುತಿಸಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅಂತೆಯೇ ಈ ಸಾಲಿನ ಪ್ರಶಸ್ತಿ ಪ್ರಕಣವಾಗಿದ್ದು, ಪತ್ರಕರ್ತ ಪ್ರಶಾಂತ್.ಟಿ.ಆರ್ ಅವರು ಈ ಸಾಲಿನ ಕರ್ನಾಟಕ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಅವರು ಪ್ರಸ್ತುತ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಪ್ರಶಾಂತ್ ಅವರು ರಚಿಸಿರುವ ಹೊನ್ನಮ್ಮನ ಕನಸು ಕಾದಂಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ಬಾಳಹಾದಿಯಲಿ ಬೆಳ್ಳಿ ಚುಕ್ಕಿ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್ ಸಂದಿದೆ. ಈಗ ಕರ್ನಾಟಕ ಸೇವಾ ರತ್ನ ಪ್ರಶಸ್ತಿಯೂ ಸಂದಿದೆ. ಇದು ರಾಜ್ಯ ಮಟ್ಟದ ಪ್ರಶಸ್ತಿಯಾಗಿದ್ದು, ಇದೇ 10 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ನೀಡಿ…

Read More

ಮಡಿಕೇರಿ ಆ.1 NEWS DESK : ಮಡಿಕೇರಿ-ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಮುದ್ದುರಾಜು, ಸದಾ ಮುದ್ದಪ್ಪ, ಮೂಡ ಸದಸ್ಯ ಆರ್.ಪಿ.ಚಂದ್ರಶೇಖರ್ ಹಾಗೂ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಆ.1 NEWS DESK : ಅರಿವೆಯ ಚೀಲವನ್ನು ಹಿಡಿದು ಮನೆಯಿಂದ ಮನೆಗೆ ಹೋಗಿ ಕುಟುಂಬ- ಸಮಾಜ- ದೇಶವನ್ನೇ ಹಾಳು ಮಾಡುವ ದುವ್ರ್ಯಸನ ಹಾಗೂ ದುಶ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಜನರ ಎಲ್ಲಾ ದುಶ್ಚಟಗಳ ವಸ್ತುಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿಸಿದವರು ಡಾ.ಮಹಾಂತ ಶಿವಯೋಗಿ ಅವರು ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆ ಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು. ವಿಜಯಪುರ ಜಿಲ್ಲೆಯ (ಇಂದಿನ ಬಾಗಲಕೋಟೆ ಜಿಲ್ಲೆ) ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 1, 1930 ರಲ್ಲಿ ಜನಿಸಿದ ಡಾ|| ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ…

Read More

ಮಡಿಕೇರಿ ಆ.1 NEWS DESK : ತಾಯಿಯ ಎದೆಹಾಲು ಪ್ರಕೃತಿದತ್ತವಾದ ದೇವರ ಕೊಡುಗೆಯಾಗಿದ್ದು ಎದೆಹಾಲಿನಿಂದ ಮಗುವಿನ ಆರೋಗ್ಯ ಮತ್ತು ಬೆಳವಣಿಗೆ ಜೊತೆಗೆ ಭವಿಷ್ಯದ ವ್ಯಕ್ತಿಯಾಗಿ ರೂಪಿಸುವ ಚೈತನ್ಯ ಶಕ್ತಿ ಆಡಗಿದ್ದು ಮಗು ಜನಿಸಿದ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ 1991ರಲ್ಲಿ ಡಬ್ಲ್ಯುಎಚ್‍ಒ ಮತ್ತು ಯುನೆಸೆಫ್ ಮತ್ತು ಡಬ್ಲ್ಯುಬಿಡ್ಲ್ಯು ಸಹಯೋಗದಲ್ಲಿ ಆರಂಭಿಸಲಾಯಿತು. ಪ್ರತಿ ವರ್ಷ ಆಗಸ್ಟ್ 1 ರಿಂದ 7 ರವರೆಗೆ ಸಪ್ತಾಹದೊಂದಿಗೆ ಈ ಕುರಿತು ತಾಯಾಂದಿರಿಗೆ ಹೆಚ್ಚಿನ ಅರಿವು ಮೂಡಿಸುವ ಜಾಗೃತಿ ಕಾರ್ಯ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತಿದೆ. ಇತ್ತೀಚಿನ ಅಧುನಿಕ ಯುಗದಲ್ಲಿ ಮಹಿಳೆಯರಲ್ಲಿ ತಪ್ಪು ಕಲ್ಪನೆಗಳಿಂದ, ಉದ್ಯೋಗಸ್ಥ ಮಹಿಳೆಯರಿಗೆ ಸಮಯದ ಅಭಾವದಿಂದಲೋ ಅಥವಾ ಯುವತಿಯರ ಎದೆಯ ಚೌಕಟ್ಟು ಅಥವಾ ಸೌಂದರ್ಯ ಕೆಡುತ್ತದೆಂಬ ತಪ್ಪು ತಿಳುವಳಿಕೆಯಿಂದ ಆದಷ್ಟು ಬೇಗ ಮಗುವಿಗೆ ಎದೆ ಹಾಲು ಬಿಡಿಸಿ ಬಾಟಲಿ ಹಾಲನ್ನು ನೀಡಲು ಮುಂದಾಗುತ್ತಿರುವುದು ವಿಷದಾನಿಯ. ಜೀವನ ಮಟ್ಟ ಕಡಿಮೆ ಇರುವ, ಶಿಕ್ಷಣ ಮಟ್ಟ ಕಡಿಮೆ ಇರುವುದು, ಎದೆಹಾಲು…

Read More

ಮೈಸೂರು ಆ.1 NEWS DESK : ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಹೆಚ್ಚುವರಿ ಸಂಪರ್ಕ ಸೇವೆ ಕಲ್ಪಿಸಲು ಬದ್ಧವಾಗಿರುವ ಕೇಂದ್ರ ಸರ್ಕಾರ, ಅತಿ ಕೂಡಲೇ ಮೈಸೂರು-ಕುಶಾಲನಗರ ಹೆದ್ದಾರಿಯ ಎರಡನೇ ಹಂತದ ಯೋಜನೆ ಚಾಲನೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಸಂಸದರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. 2023ರ ಜುಲೈ 19ರಂದು ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿತ್ತು. ಎರಡನೇ ಪ್ಯಾಕೇಜ್‌ನಲ್ಲಿ 22.70 ಕಿಲೋಮೀಟರ್‌ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಇದಕ್ಕಾಗಿ ಈಗಾಗಲೇ 14.522 ಕಿಲೋ ಮೀಟರ್‌ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಾಕಿ ಉಳಿದಿರುವ 8.178 ಕಿಲೋಮೀಟರ್‌ ಅರಣ್ಯ ಭೂಮಿ ಸ್ವಾಧೀನಕ್ಕೆ ಅರಣ್ಯ ಇಲಾಖೆಯ ಅನುಮೋದನೆ ಅಗತ್ಯವಿದೆ ಎಂದು ಸಂಸದರು ವಿವರಿಸಿದ್ದಾರೆ. ಈ ಸಂದರ್ಭದಲ್ಲಿ ಯೋಜನೆಯ ಘೋಷಣೆಗೆ ಸಚಿವಾಲಯ ಮುಂದಾಗಬೇಕು. ಕಾಲಮಿತಿಯಲ್ಲಿ ಅರಣ್ಯ ಇಲಾಖೆಯ ಅನುಮೋದನೆಯನ್ನು…

Read More

ಸುಂಟಿಕೊಪ್ಪ ಜು.31 NEWS DESK : ಮಾದಾಪುರ ಸಮೀಪದ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಿಸಿದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶ್ರೀನಿವಾಸ್ ನೇತೃತ್ವದ ಆರೋಗ್ಯ ತಂಡದಲ್ಲಿ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಿಶಾ, ಡಾ.ದರ್ಶನ್ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಭೇಟಿ ನೀಡಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತ ದೊತ್ತಡ, ಹೃದಯ ಸಂಬಂಧಿ ಖಾಯಿಲೆ, ಮಧುಮೇಹ, ಕ್ಯಾನ್ಸರ್, ಪಾಶ್ರ್ವ ವಾಯುವಿನ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ತಡೆಗಟ್ಟುವ ಕುರಿತು ಸಲಹೆ ನೀಡಿದರು. ಮಳೆಗಾಲದಲ್ಲಿ ಹರಡಬಹುದಾದ ಖಾಯಿಲೆಗಳ ಬಗ್ಗೆ, ವೈಯುಕ್ತಿಕ ಶುಚಿತ್ವ, ರಕ್ತ ಹೀನತೆಯ ಬಗ್ಗೆ ತಿಳಿಸಿದರು. ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ವಿಶ್ವಜ್ಞಾ ಮಾತನಾಡಿ,…

Read More

ಮಡಿಕೇರಿ NEWS DESK ಜು.31 : ಹೆಸರುವಾಸಿ ಪ್ರವಾಸಿತಾಣ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಿಸುವ ಯೋಜನೆ ಪರಿಸರಕ್ಕೆ ಮತ್ತು ಜನರ ನೆಮ್ಮದಿಗೆ ಮಾರಕವಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಅವರು ಪ್ರಕೃತಿದತ್ತವಾದ ರಾಜಾಸೀಟು ಉದ್ಯಾನವನವನ್ನು ಈಗಾಗಲೇ ಕಾಂಕ್ರಿಟೀಕರಣಗೊಳಿಸಿ ನೈಜತೆಗೆ ದಕ್ಕೆ ತರಲಾಗಿದೆ. ಇದೀಗ ಗಾಜಿನ ಸೇತುವೆ ನಿರ್ಮಿಸುವ ಕುರಿತು ಯೋಜನೆ ರೂಪಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದ್ದಾರೆ. ಯೋಜನೆಯ ಕುರಿತು ಯಾರ ಗಮನಕ್ಕೂ ತಾರದೆ ಮತ್ತು ಜನಾಭಿಪ್ರಾಯ ಸಂಗ್ರಹಿಸದೆ ಏಕಾಏಕಿ ಗಾಜಿನ ಸೇತುವೆ ನಿರ್ಮಿಸಲು ಮುಂದಾಗಿರುವುದು ನಿಯಮಬಾಹಿರ ಕ್ರಮವಾಗಿದೆ. ಗಾಜಿನ ಸೇತುವೆ ಪ್ರಕೃತಿ ಸೌಂದರ್ಯದ ರಾಜಾಸೀಟು ಉದ್ಯಾನವನಕ್ಕೆ ಮಾರಕವಾಗಿದೆ. ಪ್ರಸ್ತುತ ಸಾವಿರಾರು ಪ್ರವಾಸಿಗರಿಂದ ತುಂಬಿ ಹೋಗುತ್ತಿರುವ ರಾಜಾಸೀಟು ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವ ಪರಿಸ್ಥಿತಿ ಇದೆ. ಗಾಜಿನ ಸೇತುವೆಯಂತಹ ಪ್ರಕೃತಿಗೆ ವಿರುದ್ಧವಾದ…

Read More

ಮಡಿಕೇರಿ ಜು.31 NEWS DESK : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27 ನೇ ಶೈಕ್ಷಣಿಕ ವರ್ಷಕ್ಕಾಗಿ 9 ನೇ ಮತ್ತು 11ನೇ ತರಗತಿಗಳಿಗೆ (ಖಾಲಿ ಇರುವ ಸೀಟು) ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮತ್ತು ಬೇಕಾದ ಮಾಹಿತಿ ಪಡೆಯಲು Class lx lest 2026: https://cbseitms.nic.in/2025/nvsix9, Class xl lest 2026: hutps://cbseitms.nic.in/2025/nvsixi 11 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಜು.31 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಆ.2 ರಂದು ನಡೆಯುವ “ಕಕ್ಕಡ-18” ಕಾರ್ಯಕ್ರಮದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ವಿಧಾನ ಪರಿಷತ್ ನ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಮುತ್ಸದಿ ಬಿ.ಕೆ.ಹರಿಪ್ರಸಾದ್ ಅವರು ಕೊಡವರ ನೈಜ ಆಪತ್ಪಾಂಧವರಾಗಿದ್ದಾರೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತಕ್ಕಾಗಿ ಸಿಎನ್‍ಸಿ ನಡೆಸುತ್ತಿರುವ ಶಾಂತಿಯುತ ಹೋರಾಟಕ್ಕೆ ಸುದೀರ್ಘ ಕಾಲದಿಂದ ಬೆಂಬಲ ನೀಡುತ್ತಾ ಬಂದಿದ್ದಾರೆ. ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸುವುದು, ಕೊಡವರ ಧಾರ್ಮಿಕ ಸಂಸ್ಕಾರ ಬಂದೂಕು/ಗನ್ ಹಕ್ಕುಗಳ ಮಹತ್ವದ ಕುರಿತು ಪಾರ್ಲಿಮೆಂಟ್ ನಲ್ಲಿ ದೇಶದ ಸರಕಾರದ ಗಮನ ಸೆಳೆದಿದ್ದಾರೆ. 2019 ರ ಎಸ್‍ಸಿ ಎಸ್‍ಟಿ ಸಂವಿಧಾನ ತಿದ್ದುಪಡಿ ಮಸೂದೆಯ ಸಮಯದಲ್ಲಿ ಕೊಡವ ಬುಡಕಟ್ಟು ವರ್ಗೀಕರಣದ ಕಾಳಜಿಯನ್ನು ಮುನ್ನಲೆಗೆ ತಂದರು.…

Read More

ಮಡಿಕೇರಿ ಜು.31 NEWS DESK : ಅಂಚೆ ಅದಾಲತ್‍ನ ಮುಂದಿನ ಸಭೆಯು ಆ.6 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ.  ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಆ.5 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಆ.6 ರಂದು ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More