ಮಡಿಕೇರಿ ಜು.31 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ, ವಿದ್ಯಾರ್ಥಿ ನಿಯರಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರವು ಆಗಸ್ಟ್, 01 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಮರೂರು ತಿತಿಮತಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ತಿತಿಮತಿ ಗ್ರಾ.ಪಂ. ಅಧ್ಯಕ್ಷರಾದ ಪಿ.ಎಸ್.ಪೊನ್ನು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೇಶವಕಾಮತ್, ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರ್ ಕೆ.ಎನ್.ಮೋಹನ್ ಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಪೊನ್ನಂಪೇಟೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾಜ ಹಲಸಬಾಳ್, ತಿತಿಮತಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗುರುಶ್ರೀ, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕರಾದ ವಿ.ಎಸ್.ಪ್ರಶಾಂತ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ಗಾಯಕರಾದ ಆರ್.ರವಿ ಅವರು ಜಾನಪದ ಸಂಗೀತ ತರಬೇತಿ…
ಲೇಖಕ: admin
ಮಡಿಕೇರಿ ಜು.31 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ವಿಶೇಷ ಘಟಕ ಯೋಜನೆಯಡಿ ವಿದ್ಯಾರ್ಥಿ ನಿಯರಿಗೆ ಸುಗಮ ಸಂಗೀತ ಕಲಾ ತರಬೇತಿ ಶಿಬಿರವು ಆ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ. ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾದ ಎಚ್.ಟಿ.ಅನಿಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಾಲಕೃಷ್ಣ ರೈ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಗೀತಾ ಇತರರು ಪಾಲ್ಗೊಳ್ಳಲಿದ್ದಾರೆ. ಸಂಗೀತ ಕಲಾವಿದರಾದ ವೀಣಾ ಹೊಳ್ಳ ಅವರು ಸುಗಮ ಸಂಗೀತ ತರಬೇತಿ ನೀಡಲಿದ್ದಾರೆ.
ಮಡಿಕೇರಿ ಜು.31 NEWS DESK : ಚೇರಂಬಾಣೆ-ಬೇಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಕ-ಕೊಳಗದಾಳು ಗ್ರಾಮದ ಜನರು ಕಳೆದ 10 ದಿನಗಳಿಂದ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಹದಗೆಟ್ಟಿರುವ ರಸ್ತೆಯ ಹೊಂಡಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯಿತಿ ಸದಸ್ಯರಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು ರಸ್ತೆ ಅವ್ಯವಸ್ಥೆ ಮತ್ತು ವಿದ್ಯುತ್ ಕಡಿತದಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಪಾಕ-ಕೊಳಗದಾಳು ಗ್ರಾಮದ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ನೀರು ನಿಂತು ವಾಹನಗಳ ಸಂಚಾರ ಹಾಗೂ ಸಾರ್ವಜನಿಕರ ಓಡಾಟ ಅಸಾಧ್ಯವಾಗಿದೆ. ಹೊಂಡಗುಂಡಿಗಳಲ್ಲಿ ರಸ್ತೆಯನ್ನು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕಳೆದ ಹತ್ತು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಕತ್ತಲಲ್ಲಿ ಕಾಲ ಕಳೆಯುವಂತ್ತಾಗಿದೆ. ವಯೋವೃದ್ಧರು ಕಷ್ಟ ಪಡುವಂತ್ತಾಗಿದ್ದು, ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಅಡಚಣೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು. ಮನವಿಗೆ ಯಾವುದೇ ಸ್ಪಂದನೆ ದೊರೆಯದೇ…
ಮಡಿಕೇರಿ ಜು.31 NEWS DESK : ಕುಶಾಲನಗರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಆಚರಿಸಲಾಯಿತು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ.ಭರತ್ ಮಾತನಾಡಿ, ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಶುಚಿತ್ವ, ರಕ್ತ ಹೀನತೆ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂಗ್ಯೂ ಜ್ವರದ ಲಕ್ಷಣಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಅತಿಸಾರ ಭೇದಿ ನಿಯಂತ್ರಣಾ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಡೆಂಗ್ಯೂ, ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದ ಅವರು, ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆ ಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಸಂಚಾರಿ ಗಿರಿಜನ ಆರೋಗ್ಯ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ಧನ ರಾವ್ ಕದಂ ಮಾತನಾಡಿ…
ನಾಪೋಕ್ಲು ಜು.31 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಅರೆ ಭಾಷೆಲಿ ಕಥೆ ಬರೆಮೋ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಪುಟಾಣಿ ಕೂಡಕಂಡಿ ಅನ್ವಿತ ಸುದೀಪ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ, ಸಮಾಜದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಒಂದು ಅಪರೂಪದ ಸುವರ್ಣ ಅವಕಾಶ. ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ನುಡಿದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಚೇರಂಬಾಣೆ ಗೌಡ ಸಮಾಜ ಕೇವಲ ಮದುವೆ ಸಮಾರಂಭಗಳಿಗೆ ಮೀಸಲಾಗಿರದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮಗಳಿಗೂ ನೆರಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಒಕ್ಕೂಟವನ್ನು ರಚಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಇದು ಚೊಚ್ಚಲ ಕಾರ್ಯಕ್ರಮವಾಗಿದ್ದು, ಮುಂದೆ ಯುವ ಸಮೂಹಕ್ಕೆ ಹಾಗೂ ಮಹಿಳೆಯರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಇದಕ್ಕಾಗಿ ಎಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಅಕಾಡಮಿ ಹಮ್ಮಿಕೊಳ್ಳುತ್ತಿರುವ…
ಮಡಿಕೇರಿ NEWS DESK ಜು.31 : ಕಳೆದ ಒಂದು ವಾರ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ಬರೆ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್ ಮೇಕೇರಿ ಗ್ರಾಮದ ಶಕ್ತಿನಗರ ಕಾಲೋನಿ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಹಾಯಹಸ್ತ ಚಾಚಿದ್ದಾರೆ. ತಮ್ಮ ಸ್ವಂತ ಖರ್ಚಿನಿಂದ ಟಾರ್ಪಲ್ ಗಳನ್ನು ಖರೀದಿಸಿ ನಿವಾಸಿಗಳಿಗೆ ನೀಡಲು ಕ್ರಮ ಕೈಗೊಂಡಿದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿನಲ್ಲಿರುವ ಶಾಸಕರು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ ಅವರ ಮೂಲಕ ಟಾರ್ಪಲ್ ಗಳನ್ನು ವಿತರಿಸಿದರು. ಈ ಸಂದರ್ಭ ಮೇಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಪೂಜಾರಿರ ಧ್ರುವ, ಹಾಕತ್ತೂರು ವಲಯ ಅಧ್ಯಕ್ಷ ಪಿಯೂಷ್ ಪೆರೇರ, ಮೇಕೇರಿ ಗ್ರಾಮ ಪಂಚಾಯತ್ ಸದಸ್ಯ ಎಂ.ಯು.ಹನೀಫ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಬಶೀರ್, ಸ್ಥಳೀಯ ಪ್ರಮುಖರಾದ ಹ್ಯಾರಿಸ್, ರಫೀಕ್ ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ ಮಾತನಾಡಿ ಶಾಸಕರು ಬೆಂಗಳೂರಿಂದ ಹಿಂತಿರುಗಿದ ತಕ್ಷಣ ಎಲ್ಲರನ್ನು…
ನಾಪೋಕ್ಲು ಜು.31 NEWS DESK : ಗೌರಿ-ಗಣೇಶೋತ್ಸವವನ್ನು ನಾಪೋಕ್ಲು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸೌಹಾರ್ದತೆಯಿಂದ ಆಚರಿಸುವಂತೆ ಠಾಣಾಧಿಕಾರಿ ಪಿ.ಜಿ.ರಾಘವೇಂದ್ರ ಸೂಚಿಸಿದರು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗೌರಿ ಗಣೇಶೋತ್ಸವ ಸಮಿತಿಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಇಡುವ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸುವುದು, ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಕಾವಲುಗಾರನಾಗಿ ಒಬ್ಬರನ್ನು ನೇಮಿಸಿಕೊಂಡು ರಾತ್ರಿಯಲ್ಲಿ ತಂಗಲು ವ್ಯವಸ್ಥೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು, ಕೆಇಬಿ ಇಲಾಖೆ, ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯ ಎಂದರು. ಅತಿಯಾದ ಧ್ವನಿವರ್ಧಕ ಬಳಸಿ ಶಬ್ದ ಮಾಲಿನ್ಯ ಮಾಡದಂತೆ ನೋಡಿಕೊಳ್ಳುವುದು, ಗೌರಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ರಾತ್ರಿ 10 ಗಂಟೆ ಒಳಗಡೆ ಕಡ್ಡಾಯವಾಗಿ ಮುಗಿಸುವುದು, ಗೌರಿ ಗಣೇಶ ವಿಸರ್ಜನೆ ವೇಳೆ ಈಜುಗಾರರು ವಿಸರ್ಜನಾ ಸ್ಥಳದಲ್ಲಿ ಇರುವಂತೆ ನೋಡಿಕೊಳ್ಳುವುದು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭ ವಿವಿಧ ಗೌರಿ ಗಣೇಶೋತ್ಸವ ಸಮಿತಿ…
ಮಡಿಕೇರಿ ಜು.31 NEWS DESK : ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ ಕೆ.ಬಿ. ಸೂರ್ಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ. ಕೆ.ಬಿ.ಸೂರ್ಯಕುಮಾರ್ ಅವರು ಬರೆದು, ಹರಿವು ಪ್ರಕಾಶನದವರು ಪ್ರಕಟಿಸಿರುವ ‘ಮಂಗಳಿ’ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಪದಾಧಿಕಾರಿಗಳು ನಗರದಲ್ಲಿರುವ ಡಾ. ಸೂರ್ಯಕುಮಾರ್ ಅವರ ಕ್ಲಿನಿಕ್ ನಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕೊಡಗಿನಲ್ಲಿ ಹುಟ್ಟಿ, ಬೆಳೆದ ಡಾ. ಕೆ.ಬಿ.ಸೂರ್ಯಕುಮಾರ್ ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಬರಹಗಾರರು. ವಿಧಿ ವಿಜ್ಞಾನ ವಿಭಾಗದಲ್ಲಿ…
ಮಡಿಕೇರಿ NEWS DESK ಜು.31 : ನಿರಂತರ ಮಳೆಯಿಂದ ಮಡಿಕೇರಿ- ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕೆಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಜಲಸ್ಫೋಟ ಮತ್ತು ಭೂಕುಸಿತದಲ್ಲಿ ಹಲವು ಪ್ರದೇಶಗಳು ಅಪಾಯಕ್ಕೆ ಸಿಲುಕಿದ್ದವು. ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹೆದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪತ್ರಿವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಸರಕಾರ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಂಗಳೂರು ರಸ್ತೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸುರಕ್ಷತೆಯ ದೃಷ್ಟಿಯಿಂದ ತಡೆಗೋಡೆ ಕೆಳಭಾಗದ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ರೆಡ್ ಕ್ರಾಸ್ ಭವನದಲ್ಲಿ ಆಶ್ರಯ ಪಡೆದಿರುವ ನಿವಾಸಿಗಳನ್ನು ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು. ಊಟ, ಉಪಹಾರ ಸೇರಿದಂತೆ ಮೂಲಭೂತ…
ಮಡಿಕೇರಿ ಜು.31 NEWS DESK : ಮಡಿಕೇರಿ-ಮಂಗಳೂರು ರಸ್ತೆಗೆ ನಿರ್ಮಿಸಲಾಗಿದ್ದ ಬೃಹತ್ ತಡೆಗೋಡೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪರಿಶೀಲಿಸಿದರು. 2018ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಸಂದರ್ಭ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭೂ ಕುಸಿತ ಉಂಟಾದ ಹಿನ್ನೆಲೆ ರಸ್ತೆ ಬದಿಗೆ ಬೃಹತ್ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.






