ಮಡಿಕೇರಿ ಜು.7 NEWS DESK : ಪ್ರಸ್ತುತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾಫಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುವುದರಿಂದ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ. ಸೋಮವಾರಪೇಟೆಗೆ ಆಗಮಿಸಿದ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರನ್ನು ಭೇಟಿಯಾದ ಪ್ರಮುಖರು ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು ವಿವರಿಸಿದರು. ಅತಿ ಹೆಚ್ಚು ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಜನವರಿಯಿಂದ ಜೂನ್ ಅಂತ್ಯಕ್ಕೆ 70 ರಿಂದ 100 ಇಂಚಿನಷ್ಟು ಮಳೆಯಾಗಿದೆ. ಅತಿಯಾದ ಮಳೆಯಿಂದ ಸಕಾಲದಲ್ಲಿ ಕೃಷಿ ಚಟುವಟಿಕೆ ನಡೆಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ಮೂರು ತಿಂಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಕಾಫಿ ಕೃಷಿಗೆ ಕೊಳೆರೋಗ ಎದುರಾಗುವ ಸಾಧ್ಯತೆ ಇದೆ. ಇದರಿಂದ ಮುಂದಿನ ವರ್ಷ ನಿರೀಕ್ಷಿಸಿದಷ್ಟು ಕಾಫಿ…
ಲೇಖಕ: admin
ಮಡಿಕೇರಿ ಜು.7 NEWS DESK : 26ನೇ ವರ್ಷದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ವೀರ ಯೋಧರ ಸ್ಮರಣಾರ್ಥ, 1999ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ಮಣ್ಣಿನ ವೀರ ಪುತ್ರರು ಮಾಡಿದ ಅತ್ಯುನ್ನತ ತ್ಯಾಗಗಳನ್ನು ಗೌರವಿಸಲು ಮತ್ತು ಸ್ಮರಿಸಲು ಭಾರತೀಯ ಸೇನೆಯು ಘರ್ ಘರ್ ಶೌರ್ಯ ಸನ್ಮಾನ್ ವಿಶೇಷ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಮೂಲಕ ಕುಟುಂಬವನ್ನ ಗೌರವಿಸಿ ನಿಮ್ಮೊಂದಿಗೆ ಭಾರತೀಯ ಸೇನೆ ಸದಾ ಇರುತ್ತದೆ ಎಂಬ ಸಂದೇಶ ಸಾರುವ ಮೂಲಕ ಸೇನೆ ವತಿಯಿಂದ ಸ್ಮರಣಿಕೆ ಮತ್ತು ಕೃತಜ್ಞತಾ ಪತ್ರವನ್ನು ಪ್ರಧಾನ ಮಾಡುವ ಕಾರ್ಯಕ್ರಮ ವಿರಾಜಪೇಟೆ ತಾಲೂಕಿನ ಮೈತಾಡಿ ಗ್ರಾಮದಲ್ಲಿ ನಡೆಯಿತು. ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಮತ್ತು ಮೂವರು ಇತರ ಶ್ರೇಣಿಗಳು (ಒಆರ್) ಒಳಗೊಂಡ ಸೇನಾ ನಿಯೋಗದ ಆರು ಮಂದಿ ತಂಡ ಕಾರ್ಗಿಲ್ ಯುದ್ಧ ವೀರರ ಕುಟುಂಬವನ್ನು ಭೇಟಿಯಾಗಿ ಹುತಾತ್ಮ ಯೋಧರ ಸೇವೆಯನ್ನ ಗೌರವಿಸಿ ಸೇನೆ ಸದಾ ಕುಟುಂಬದೊಂದಿಗೆ ಇರುತ್ತದೆ ಎಂಬ ಸಂದೇಶದೊಂದಿಗೆ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಕಾವೇರಪ್ಪನವರ…
ಮಡಿಕೇರಿ ಜು.7 NEWS DESK : ಕರ್ನಾಟಕ ಮುಸ್ಲಿಂ ಯೂನಿಟಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಮುಸ್ಲಿಂ ಜಾಗೃತಿ ಸಮಾಲೋಚನಾ ಸಭೆ ನಡೆಯಿತು. ಮುಸಲ್ಮಾನರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ವಿವಿಧ ಹಕ್ಕೊತ್ತಾಯಗಳನ್ನು ಸಭೆ ಮಂಡಿಸಿತು. ಕುಶಾಲನಗರ ಸಮೀಪ ಗುಡ್ಡೆಹೊಸೂರಿನ ಖಾಸಗಿ ರೆಸಾರ್ಟ್‍ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಮುಸ್ಲಿಂ ಯೂನಿಟಿಯ ರಾಜ್ಯಾಧ್ಯಕ್ಷ ಜಬ್ಬರ್ ಕಲ್ಬುರ್ಗಿ ಅವರು ಮುಸಲ್ಮಾನರು ಇಂದು ಸಮಾಜಿಕ ಮತ್ತು ರಾಜಕೀಯವಾಗಿ ತಾರತಮ್ಯಕ್ಕೆ ಒಳಗಾಗುತ್ತಿದ್ದು, ಸಂವಿಧಾನಾತ್ಮಕ ಹಕ್ಕುಗಳನ್ನು ಪಡೆಯಲು ನಾವೆಲ್ಲರು ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು ಎಂದು ಕರೆ ನೀಡಿದರು. ಐಕ್ಯತೆಯ ಕೂಗಿನೊಂದಿಗೆ ಮುಸಲ್ಮಾನರ ಏಳಿಗೆಗಾಗಿ ಪ್ರಮುಖ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಬೇಕಾಗಿದೆ ಎಂದು ಸಭೆಯ ಒಪ್ಪಿಗೆ ಪಡೆದರು. *ಹಕ್ಕೊತ್ತಾಯಗಳು* 2ಬಿ ಯ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ರಾಜ್ಯದ ಈ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕೈಬಿಟ್ಟು ಮೀಸಲಾತಿಯನ್ನು ಯಥಾಸ್ಥಿತಿ ಮುಂದುವರಿಸಬೇಕು ಮತ್ತು ಜನಸಂಖ್ಯೆಯನ್ನು ಆಧರಿಸಿ ಶೇ.4 ರಷ್ಟಿರುವ ಮೀಸಲಾತಿಯನ್ನು ಶೇ.8 ಕ್ಕೆ ಏರಿಕೆ ಮಾಡಬೇಕು. ಸ್ಥಳಿಯ ಸಂಸ್ಥೆಗಳಲ್ಲಿರುವ ಓಬಿಸಿಯ…
ಕುಶಾಲನಗರ ಜು.7 NEWS DESK : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸಂಪಾಜೆ ಪ್ರೌಢಶಾಲೆಯ ಶಿಕ್ಷಕ ಹೆಚ್.ಜೆ.ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ಎಸ್.ಮಹೇಂದ್ರ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚುನಾವಣೆಯಾಧಿಕಾರಿಯಾಗಿ ಚೇರಂಬಾಣೆ ಅರುಣ ಪದವಿ ಪೂರ್ವ ಪಿಯೂ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ರಮೇಶ್ ಕಾರ್ಯನಿರ್ವಹಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಹಿಂದಿನ ಅವಧಿಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಟಿ. ಸೋಮಶೇಖರ್ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.
ಕುಶಾಲನಗರ ಜು.7 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಜೂನ್ ಅಂತ್ಯಕ್ಕೆ ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಎ.ಭೋಜಮ್ಮ ಅವರನ್ನು ಶಾಲೆಯ ಸಿಬ್ಬಂದಿ ಹಾಗೂ ಎಸ್.ಡಿ.ಎಂ.ಸಿ.ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಿವೃತ್ತಗೊಂಡ ಶಿಕ್ಷಕಿ ಭೋಜಮ್ಮ ಅವರನ್ನು ಸನ್ಮಾನಿಸಿ ಮಾತನಾಡಿದ ಸಂಪಾಜೆ ಕಂದಾಯ ಹೋಬಳಿಯ ಪ್ರಭಾರ ಉಪ ತಹಶೀಲ್ದಾರ್ ಬಿ.ಜೆ.ವೆಂಕಟೇಶ್, ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಪ್ರಗತಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು ಎಂದರು. ಶಾಲೆಯಲ್ಲಿ ಅವರು ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಶಿಕ್ಷಕಿ ಭೋಜಮ್ಮ ಅವರು ಪಾತ್ರರಾಗಿರುವುದು ಹೆಮ್ಮೆಯ ಸಂಗತಿ ಎಂದರು. ಕೂಡಿಗೆ ಕ್ಲಸ್ಟರ್ ನ ಸಿ.ಆರ್.ಪಿ. , ಕೆ.ಶಾಂತಕುಮಾರ್ ಮಾತನಾಡಿ, ಶಿಕ್ಷಕಿ ಭೋಜಮ್ಮ ಅವರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದು, ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗಿದೆ ಎಂದರು. ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರು ಉತ್ತಮ ಸೇವೆ…
ಕುಶಾಲನಗರ ಜು.7 NEWS DESK : ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಡಾ.ಹೆಚ್.ಎಂ.ರಘುಕೋಟಿ ಅವರು ಆಯ್ಕೆಯಾಗಿದ್ದಾರೆ. ಪರಿಷತ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜಾನ್ ಸುಮುವೆಲ್ ಜೆ.ಕಿಮ್, ರಾಷ್ಟ್ರೀಯ ಸಂಯೋಜಕರಾದ ಜೆ.ಆಲ್ಬರ್ಟ್ ಮನೋಜ್ ರಾಜ್, ರಾಷ್ಟ್ರೀಯ ಉಪಾಧ್ಯಕ್ಷರಾದ ಮಣಿಕಂದನ್, ರಾಷ್ಟ್ರೀಯ ಮಹಿಳಾ ಸಭಾಧ್ಯಕ್ಷರಾದ ರೋಹಿಣಿ ದೀಕ್ಷಿತ್, ರಾಷ್ಟ್ರೀಯ ಆಡಳಿತ ಮಂಡಳಿಯ ನಿರ್ದೇಶಕರಾದ ಬಿಷಪ್ ಸ್ಯಾಮ್ಸನ್ಸ್ ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಘಟಕದ ರಾಜ್ಯಾಧ್ಯಕ್ಷರಾದ ಅನಿತಾ ಹಾಗೂ ರಾಜ್ಯ ಮಹಿಳಾ ಅಧ್ಯಕ್ಷರಾದ ಭಾಗ್ಯಮ್ಮ.ಬಿ ಸೇರಿದಂತೆ ಸಂಸ್ಥೆಯ ಗಣ್ಯರ ಸಮ್ಮುಖದಲ್ಲಿ ನೇಮಕ ಮಾಡಿ ಆದೇಶ ಪತ್ರವನ್ನು ವಿತರಿಸಲಾಗಿದೆ.
ಭಾರತದಲ್ಲಿ ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ‘ಬ್ಯಾಂಕ್ ಆಫ್ ಬರೋಡಾ’ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2,500 ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 450 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿಡಲಾಗಿದೆ. ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿ ಪರಿಣತಿ ಹೊಂದಿದವರಿಗೆ ಮಾತ್ರ ಈ ಉದ್ಯೋಗ ನೀಡಲಾಗುತ್ತದೆ. :: ಹುದ್ದೆಗಳ ಸಂಖ್ಯೆ:: ರಾಜ್ಯಕ್ಕೆ ಮೀಸಲಿಟ್ಟ ಒಟ್ಟು 450 ಹುದ್ದೆಗಳಲ್ಲಿ ಸಾಮಾನ್ಯ ವರ್ಗದವರಿಗೆ 184, ಆರ್ಥಿಕ ದುರ್ಬಲ ವರ್ಗದವರಿಗೆ 45, ಇತರೆ ಹಿಂದುಳಿದ ವರ್ಗದವರಿಗೆ 121, ಎಸ್ಟಿ 33 ಹಾಗೂ ಎಸ್ಸಿ ಅಭ್ಯರ್ಥಿಗಳಿಗೆ 67 ಹುದ್ದೆಗಳನ್ನು ಮೀಸಲಿಡಲಾಗಿದೆ. ಅಧಿಕಾರಿಗಳ ವೃಂದದಲ್ಲಿ ಮಾಜಿ ಸೈನಿಕರಿಗೆ ಯಾವುದೇ ಮೀಸಲಾತಿ ಇಲ್ಲ. :: ಹುದ್ದೆಯ ಹೆಸರು :: ಜೂನಿಯರ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಟೇಲ್ -1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಈಗಾಗಲೇ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು,…
ಸೋಮವಾರಪೇಟೆ ಜು.7 NEWS DESK : ಕೇಂದ್ರಿಯ ಮೀಸಲು ಪಡೆಯಲ್ಲಿ 37 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತಿ ಪಡೆದು ಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧನನ್ನು ಮೈಲಾತಪುರ ಗ್ರಾಮಸ್ಥರು ಬರಮಾಡಿಕೊಂಡು ಗೌರವಿಸಿದರು. ಆಲೂರು ಸಿದ್ದಾಪುರ ಸಮೀಪದ ಮೈಲಾತಪುರ ಗ್ರಾಮದ ನಿವೃತ್ತ ಯೋಧ ಮಂಜುನಾಥ್ ಮತ್ತು ಅವರ ಪತ್ನಿಯನ್ನು ಸನ್ಮಾನಿಸಲಾಯಿತು. ಇವರೊಂದಿಗೆ ಅಕ್ಕ ಪಕ್ಕದ ಗ್ರಾಮಗಳ ಮಾಜಿ ಸೈನಿಕರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಯೋಧ ಮಂಜುನಾಥ್, ದೇಶ ಸೇವೆ ಮಾಡುವ ಭಾಗ್ಯ ನನಗೆ ಸಿಕ್ಕಿರುವುದಕ್ಕೆ ಹೆಮ್ಮೆ ಪಡುತ್ತೇನೆ. 37 ವರ್ಷಗಳಲ್ಲಿ ಹಲವು ಭಾರಿ ಪ್ರಾಣ ಕಳೆದು ಕೊಳ್ಳಬೇಕಾದಂತಹ ಪರಿಸ್ಥಿತಿ ಎದುರಾಗಿತ್ತು. ನಮ್ಮ ಕಣ್ಣ ಎದುರಿಗೆ ಹಲವು ಸಹೋದ್ಯೋಗಿಗಳು ಜೀವತೆತ್ತಿದ್ದಾರೆ. ಇವೆಲ್ಲಾ ನನ್ನ ವೃತ್ತಿ ಬದುಕಿನ ಅತ್ಯಂತ ದುಃಖದ ಕ್ಷಣಗಳು ಎಂದು ಭಾವುಕರಾಗಿ ನುಡಿದರು. ತಮ್ಮ ಬಾಲ್ಯ ಸ್ನೇಹಿತರು, ಗ್ರಾಮಸ್ಥರು ವೃತ್ತಿ ಬದುಕಿನ ಸಿಹಿ, ಕಹಿ ಘಟನೆಗಳನ್ನು ಮೆಲುಕು ಹಾಕಿದರು. ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ,…
ಸೋಮವಾರಪೇಟೆ ಜು.17 NEWS DESK : ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. 1988- 89ನೇ ಶೈಕ್ಷಣಿಕ ಸಾಲಿನಲ್ಲಿ ನಿಡ್ತ ಹಾಗೂ ಮುಳ್ಳೂರು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಒಟ್ಟುಗೂಡಿ ಶಾಲೆಗಳಿಗೆ ನೆರವು ನೀಡುತ್ತಿದ್ದು, ತಾವು ಓದಿದ ಸರ್ಕಾರಿ ಶಾಲೆಗಳಿಗೆ ಏನಾದರೊಂದು ಸಹಾಯ ಮಾಡುವ ಮೂಲಕ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂಬ ಉದ್ದೇಶದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದೇವೆ ಎಂದು ಸಂಘದ ಅಧ್ಯಕ್ಷ ಜಯಕುಮಾರ್ ತಿಳಿಸಿದರು. ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಶೋಕ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಲೋಟಗಳನ್ನು ವಿತರಿಸುವುದಾಗಿ ತಿಳಿಸಿದರು. ಇದೇ ಸಂದರ್ಭ ಸಂಘದ ಕಾರ್ಯದರ್ಶಿ ಸುನಿಲ್, ಮುಳ್ಳೂರು ಶಾಲಾ ಆವರಣಕ್ಕೆ ಇಂಟರ್ ಲಾಕ್ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು. ನಿಡ್ತ ಸರ್ಕಾರಿ ಶಾಲೆಯ ಮೂವತೈದು ಹಾಗೂ ಮುಳ್ಳೂರು ಕಿರಿಯ ಪ್ರಾಥಮಿಕ ಶಾಲೆಯ ಮೂವತ್ತೆರೆಡು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿದರು. ಸಂಘದ ಸದಸ್ಯರಾದ ಮುರುಗನ್, ರಾಮಕೃಷ್ಣ, ಆಶೋಕ್, ಮಲ್ಲೇಶ್, ರೇಖಾ, ಹೇಮಲತಾ,…
ಸೋಮವಾರಪೇಟೆ ಜು.7 NEWS DESK : ಯಡೂರು ದೇವರಕೆರೆ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಉದ್ಯಮಿ ಹರಪಳ್ಳಿ ರವೀಂದ್ರ ಕೆರೆ ತಟದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಕಳೆದ 4 ವರ್ಷದ ಹಿಂದೆ ರವಿಂದ್ರ ಅವರು ತನ್ನ ಸ್ವಂತ ಖರ್ಚಿನಲ್ಲಿ ಕೆರೆ ಹೂಳು ತೆಗಿಸಿದ್ದರು. ಪ್ರತಿ ವರ್ಷ ನೀರು ತುಂಬುತ್ತಿರುವುದರಿಂದ ರೈತರು ಕೆರೆಯ ನೀರನ್ನು ಕೃಷಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭ ಯಡೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವೈ.ಡಿ.ಮೋಹನ್, ಮಾಜಿ ಅಧ್ಯಕ್ಷ ಮಲ್ಲಪ್ಪ, ಗ್ರಾಮಸ್ಥರಾದ ಲೋಹಿತ್, ಸರ್ವೇಶ್, ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್ ಇದ್ದರು.






