ಮಡಿಕೇರಿ ಜು.30 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಹನೀಫ್ ಕೊಂಡಂಗೇರಿ ಆಯ್ಕೆಯಾಗಿದ್ದಾರೆ. ಪಕ್ಷದ ಬಲವರ್ಧನೆಗಾಗಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ಅವರು ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ “ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನ” ದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ , ಏಳನೇ ಹೊಸಕೋಟೆ, ನಂಜರಾಯಪಟ್ಟಣ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ – ನೀರಿನ ಗುಣಮಟ್ಟ ಸೇರಿದಂತೆ ವಿವಿಧ ವಿಷಯಗಳ ಕುರಿತು ವರದಿಗಳನ್ನು ಪರಿಶೀಲಿಸಿದರು. ಗ್ರಾಮಗಳಲ್ಲಿನ ಶಾಲೆ, ಗ್ರಂಥಾಲಯ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿದ ಅವರು ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಯೋಜನೆಯ ನೀರು ಶುದ್ದಿಕರಣ ಘಟಕಗಳು ಹಾಗೂ ನೀರು ಶೇಖರಣ ತೊಟ್ಟಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಗ್ರಾ.ಕು.ನೀ.ನೈ ವಿಭಾಗ, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ , ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ/ ಕಿರಿಯ…
ಮಡಿಕೇರಿ ಜು.30 NEWS DESK : ಕೊಡಗು ಪತ್ರಕತ೯ರ ಸಂಘದ ವೀರಾಜಪೇಟೆ ತಾಲೂಕು ಘಟಕದ ವತಿಯಿಂದ ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್, ಅಮ್ಮತ್ತಿ ಇವರ ಸಹಯೋಗದಲ್ಲಿ ಆ.3 ರಂದು ಕಥಾ ಸಮಯ. ಕಥೆ ಹೇಳುವ ಸ್ಪಧೆ೯ ಆಯೋಜಿಸಲಾಗಿದೆ ಎಂದು ಪತ್ರಕತ೯ರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮುದೋಷ್ ಪೂವಯ್ಯ ಮಾಹಿತಿ ನೀಡಿದ್ದಾರೆ. ಕಾವಾಡಿ ಅಮ್ಮತ್ತಿಯ ಕಾಮದೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್ ನ ಆವರಣದಲ್ಲಿ ಆಯೋಜಿತ ಕಥಾ ಸಮಯ ಕಾಯ೯ಕ್ರಮವನ್ನು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಿಕಾಭವನದ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವಕಾಮತ್, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ, ಬಾರಿಯಂಡ ಜೋಯಪ್ಪ, ಅಸೀಮಾ ಮಾಸಪತ್ರಿಕೆಯ ಸಂಪಾದಕ ಮಾಣಿಪಂಡ ಸಂತೋಷ್ ತಮ್ಮಯ್ಯ, ಪಕ್ಷಿ ತಜ್ಞ ಡಾ.ಎಸ್.ವಿ. ನರಸಿಂಹನ್, ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ರಾಮಚಂದ್ರ ಭಟ್ , ಕೊಡಗು ಪತ್ರಕತ೯ರ ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ…
ಸಿದ್ದಾಪುರ ಜು.30 NEWS DESK : ಮಾನಸಿಕ ಒತ್ತಡ ಹಾಗೂ ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಸೇವನೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಮೈಸೂರು ಅಲ್ ಅನ್ಸರ್ ಆಸ್ಪತ್ರೆಯ ವೈದ್ಯ ಡಾ.ಜಾವೀದ್ ಸಲಹೆ ನೀಡಿದ್ದಾರೆ. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚೆನ್ನಯ್ಯನ ಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕಲಬೆರಿಕೆಯ ಜಂಕ್ ಫುಡ್ ಗಳತ್ತ ಮುಖ ಮಾಡುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೆಚ್ಚಿನ ಸಂಖ್ಯೆಯ ಯುವ ಸಮೂಹ ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ಸಮಾಜ ಸೇವಾ ಸಂಘಟನೆಗಳು ಆರೋಗ್ಯ ಮತ್ತು ಜಾಗೃತಿ ಶಿಬಿರಗಳನ್ನ ಆಯೋಜಿಸುವ ಮೂಲಕ ಆರೋಗ್ಯ ಕಾಳಜಿಯೊಂದಿಗೆ ಉತ್ತಮ ಭವಿಷ್ಯ ರೂಪಿಸಬೇಕಾಗಿದೆ. ಪ್ರತಿಯೊಬ್ಬರು ಆರೋಗ್ಯ ತಪಾಸಣೆಯೊಂದಿಗೆ ಆರೋಗ್ಯ ಕಾಳಜಿಯ ಸಲಹೆಗಳನ್ನು ಮನವರಿಕೆ ಮಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ…
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು ಹಾಗೂ ಶಾಸಕರು ಕೊಡಗು ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಕುರಿತು ವಿವರಿಸಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದ ಸಿಎಂ, ವಿವಿಧ ಇಲಾಖೆಗಳಡಿ ನೀಡಲಾದ ಅನುದಾನ ಮತ್ತು ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಪ್ರತಿ ಅರ್ಹರಿಗೂ ತಲುಪಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಸಲಹೆಗಳನ್ನು ಮುಖ್ಯಮಂತ್ರಿಗಳು ನೀಡಿದರು ಎಂದು ಶಾಸಕದ್ವಯರು ತಿಳಿಸಿದ್ದಾರೆ.
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲೆಯಲ್ಲಿ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು, ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿದೆ. ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ ಬಹುತೇಕ ಕಡೆ ಬೀಸುತ್ತಿರುವ ವಿಪರೀತ ಗಾಳಿಯಿಂದ ಸೆಸ್ಕ್ ಇಲಾಖೆಯ ಸಿಬ್ಬಂದಿಯವರಿಗೆ ದುರಸ್ತಿ ಕೆಲಸ ನಿರ್ವಹಿಸಲು ತೀರಾ ಹಿನ್ನಡೆ ಉಂಟಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಐದಾರು ದಿವಸಗಳಿಂದ ವಿದ್ಯುತ್ ಮರುಜೋಡಣೆ ಬಾಕಿ ಇದ್ದು, ಚೆಸ್ಕಾಂ ವತಿಯಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ಆದಷ್ಟು ಬೇಗ ವಿದ್ಯುತ್ ಮರುಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
ಮಡಿಕೇರಿ ಜು.30 NEWS DESK : ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆ, ಕನ್ನಡ ವೈದ್ಯ ಬರಹಗಾರರ ಸಮಿತಿ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಕೊಡಗಿನ ಹಿರಿಯ ವೈದ್ಯ, ಸಾಹಿತಿ ಡಾ. ಕೆ.ಬಿ.ಸೂರ್ಯಕುಮಾರ್ ಭಾಜನರಾಗಿದ್ದಾರೆ. ಸೂರ್ಯಕುಮಾರ್ ಅವರು ಬರೆದ ಮಂಗಳಿ ಕೃತಿಗೆ ಡಾ. ಕೆ.ಎಸ್.ಶ್ಯಾಮ್‌ಪ್ರಸಾದ್ ಶ್ರೇಷ್ಠ ವೈದ್ಯೇತರ ಕೃತಿ ಪ್ರಶಸ್ತಿ ಲಭಿಸಿದೆ.
ವಿರಾಜಪೇಟೆ ಜು.30 NEWS DESK : ಹೆಗ್ಗಳ ಗ್ರಾಮದ ಪಾಲ್ಟ್ ಮಕ್ಕಿಯಲ್ಲಿರುವ ಶ್ರೀ ನಾಗ ಬನದಲ್ಲಿ ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ಅರ್ಚಕರಾದ ವೇಣುಗೋಪಾಲ್ ಭಟ್ ಅವರು ಸಂಕಲ್ಪ ಪೂಜೆ, ಅಲಂಕಾರ, ಶ್ರೀ ನಾಗ ದೇವರಿಗೆ ಸೀಯಾಳ ಅಭಿಷೇಕ, ಕ್ಷೀರಾಭಿಷೇಕ, ಕುಂಕುಮಾರ್ಚನೆ, ಪುಷ್ಪರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಾನಗಳನ್ನು ನಡೆಸಿದರು. ನಂತರ ನಾಗ ತಂಬಿಲ ನಡೆಯಿತು. ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಸಮೀಪವಿರುವ ಹುತ್ತಕ್ಕೆ ಗ್ರಾಮದ ಮಹಿಳೆಯರು ಹಾಲನ್ನು ಎರೆಯುವುದರ ಮೂಲಕ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ವಿರಾಜಪೇಟೆ ಜು.30 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ನಾಗ ದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೆ ಪೂಜಾ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯಿತು. ಅರ್ಚಕರು ಸಂಕಲ್ಪ ಪೂಜೆ ಹಾಗೂ ಪ್ರಾರ್ಥನೆ ಮಾಡಿದರು. ನಂತರ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಪಂಚಾಂಬ್ರುತ ಅಭಿಷೇಕ, ಕುಂಕುಮಾರ್ಚನೆ, ಸೀಯಾಳ ಅಭಿಷೇಕ, ನಾಗತಂಬಿಲ, ಮಹಾಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ವಿವಿಧ ಕಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ, ಪ್ರಾರ್ಥನೆ, ಹಾಲಿನ ಅಭಿಶೇಷ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಕೊಡಗು ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸಿದೆ.






