ಮಡಿಕೇರಿ ಜು.30 NEWS DESK : ಕಳೆದ ಒಂದು ವಾರದಿಂದ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದ ಕೊಡಗು ಜಿಲ್ಲೆಯಲ್ಲಿ ಇಂದು ಸಾಧಾರಣ ಮಳೆಯೊಂದಿಗೆ ಕೊಂಚ ಬಿಸಿಲಿನ ವಾತಾವರಣವಿತ್ತು. ಆದರೆ ಗಾಳಿಯ ರಭಸ ಮುಂದುವರಿದಿರುವುದರಿಂದ ಕೆಲವು ಭಾಗಗಳಲ್ಲಿ ಮರ ಬಿದ್ದು ನಷ್ಟ ಉಂಟಾಗಿದೆ. ಮಡಿಕೇರಿ ತಾಲ್ಲೂಕಿನ ದೇವಸ್ತೂರು ಗ್ರಾಮದ ಕುಕ್ಕೇರ ಚಿಮ್ಮ ಎಂಬುವವರಿಗೆ ಸೇರಿದ ಮನೆ ಮತ್ತು ಕಾರಿನ ಮೇಲೆ ಬೃಹತ್ ಮರ ಬಿದ್ದು ಅಪಾರ ನಷ್ಟ ಸಂಭವಿಸಿದೆ. ಆದರೆ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಮಾರ್ಗಕ್ಕೆ ಹಾನಿ ಉಂಟಾಗಿದೆ. ನೂರಾರು ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡು ನಾಲ್ಕು ದಿನಗಳೇ ಕಳೆದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಆರು ದಿನಗಳ ಕಾಲ ಸುರಿದ ಬಿರುಗಾಳಿ ಸಹಿತ ಮಳೆಗೆ 800 ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಚೆಸ್ಕಾಂಗೆ ಅಪಾರ ನಷ್ಟ ಉಂಟಾಗಿದೆ. ಮರ ಮತ್ತು…
ಲೇಖಕ: admin
ವಿರಾಜಪೇಟೆ ಜು.29 NEWS DESK : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ವಿರಾಜಪೇಟೆ ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಬೇಗೂರು ಕೇಚೆಟ್ಟಿರ.ಎಸ್. ತಮ್ಮಯ್ಯ ಅವರಿಗೆ ಪ್ರದಾನ ಮಾಡಲಾಯಿತು. ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ಪ್ರಶಸ್ತಿಗೆ ಭಾಜನರಾಗಿದ್ದರು. ಈ ಹಿಂದೆ ಮೈಸೂರಿನ ಸೆಂಟ್ ಜೋಸೆಪ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಕೇಚೆಟ್ಟಿರ.ಎಸ್. ತಮ್ಮಯ್ಯ ಮಾರ್ಗದರ್ಶನದ ಎ ಹಾಗೂ ಬಿ ತಂಡಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಪೈನಲ್ ಹಂತಕ್ಕೆ ತಲುಪಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿತ್ತು. ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹಾಗೂ ಐ.ಕ್ಯೂ.ಎ.ಸಿ ಸಂಚಾಲಕಿ ಪ್ರಿಯ ಮುದ್ದಪ್ಪ ಕಾಲೇಜಿನ ಪರವಾಗಿ…
ಮಡಿಕೇರಿ ಜು.29 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 30ನೇ ವರ್ಷದ “ಕಕ್ಕಡ-18” ಆಚರಣೆ ಆ.2 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು “ಕಕ್ಕಡ-18” ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಆದಿಮಸಂಜಾತ ಕೊಡವರಿಗೆ ಎಸ್‍ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್371, 244ನೇ ವಿಧಿ ಮತ್ತು 6 ಮತ್ತು 8ನೇ ಶೆಡ್ಯೂಲ್ ಪ್ರಕಾರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ಒದಗಿಸಬೇಕು, ಆದಿಮಸಂಜಾತ ಏಕ ಜನಾಂಗೀಯ ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ…
ಮಡಿಕೇರಿ ಜು.29 NEWS DESK : ಕೊಡಗು ಜಿಲ್ಲೆಯ ರಸಗೊಬ್ಬರ ದಾಸ್ತಾನು ಕೇಂದ್ರಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಜು.29 NEWS DESK : ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿದ್ಧವಾಗಿರುವ ಕೊಡಗಿನ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ ‘ಎಲ್ಟು ಮುತ್ತಾ’ ಕನ್ನಡ ಚಲನಚಿತ್ರ ಇದೇ ಆ.1ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರ ನಿರ್ಮಾಪಕ ಸತ್ಯ ಶ್ರೀನಿವಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಚಲನಚಿತ್ರದ ‘ಟೀಸರ್’ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೊಡಗಿನ ನೆಲಜಿ ಗ್ರಾಮದ ಬಾಳಿಯಡ ಮಣಿ ಅಯ್ಯಪ್ಪ ಅವರ ಪುತ್ರ ರಾ.ಸೂರ್ಯ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸುಮಾರು 75 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಚಲನಚಿತ್ರ ಬಿಡುಗಡೆಯಾಗಲಿದೆ. ಕೊಡಗಿನ ಸಿದ್ದಾಪುರ, ಶನಿವಾರಸಂತೆ, ಸುಂಟಿಕೊಪ್ಪ ಚಿತ್ರಮಂದಿರಗಳಲ್ಲು ಚಿತ್ರ ಪ್ರದರ್ಶನ ಅದೇ ದಿನ ನಡೆಯಲಿದೆ ಎಂದರು. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಚಲನಚಿತ್ರದ ಆಡಿಯೋ ಲಾಂಚ್ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ. ಚಲನಚಿತ್ರದಲ್ಲಿ 5 ಹಾಡುಗಳು ಮತ್ತು 2 ಫೈಟ್ ಗಳಿದ್ದು, ಜನರ ಮನರಂಜನೆಗೆ ಪೂರಕವಾದ ಎಲ್ಲಾ ಅಂಶಗಳು ಇರುವುದಾಗಿ ತಿಳಿಸಿದರು. ಚಲನಚಿತ್ರದ ಪ್ರಮುಖ ಪಾತ್ರಗಳಲ್ಲಿ ಶೌರ್ಯ ಪ್ರತಾಪ್, ಪ್ರಿಯಾಂಕ ಮಳಲಿ ಅವರು ನಟಿಸಿದ್ದಾರೆ.…
ಮಡಿಕೇರಿ ಜು.29 NEWS DESK : ಅಸ್ಸಾಂ ರಾಜ್ಯಕ್ಕೆ ಸೇರಿದವರು ಎಂದು ಹೇಳಿಕೊಂಡು ನಕಲಿ ದಾಖಲೆಗಳ ಮೂಲಕ ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಬಾಂಗ್ಲಾ ದೇಶಿಗರನ್ನು ತಕ್ಷಣ ಗಡಿಪಾರು ಮಾಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕಾರ್ಮಿಕರ ಸೋಗಿನಲ್ಲಿ ಅಸ್ಸಾಂ ಮೂಲದವರೆಂದು ಹೇಳಿಕೊಂಡು ಕೊಡಗು ಜಿಲ್ಲೆಯಲ್ಲಿ ಅನೇಕರು ನೆಲೆಸಿದ್ದಾರೆ. ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತ ಕಾರ್ಮಿಕರ ದಾಖಲೆ ಪತ್ರಗಳನ್ನು ಪರಿಶೀಲಿಸಿ, ಅವುಗಳು ನಕಲಿಯಾಗಿದ್ದರೆ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನುಸುಳುಕೋರರಿಂದ ಗೋ ಸಾಗಾಟ, ಕಳ್ಳತನ, ಹಲ್ಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಮತ್ತು ಆಯಾ ಗ್ರಾಮ ಪಂಚಾಯ್ತಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿರುವ ಹೊರ ರಾಜ್ಯದ ಕಾರ್ಮಿಕರ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಬೇಕು. ಅಕ್ರಮವಾಗಿ ಜಿಲ್ಲೆಯಲ್ಲಿ ನೆಲೆಸಿರುವವರನ್ನು ಗಡಿಪಾರು ಮಾಡಬೇಕು, ನಿರ್ಲಕ್ಷ್ಯ ವಹಿಸಿದರೆ ಮುಂದೊಂದು ದಿನ ಅನಾಹುತ ಸಂಭವಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು. *ಮೂಡ ಮಾಹಿತಿ ನೀಡಲಿ* ಮಡಿಕೇರಿ…
ಬೆಂಗಳೂರು ಜು.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು.
ಮಡಿಕೇರಿ ಜು.29 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಹೈಪಟೈಟಿಸ್ ದಿನಾಚರಣೆಯನ್ನು ಆಚರಿಲಾಯಿತು. ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವೈರಲ್ ಹೈಪಟೈಟಿಸ್ ನೋಡಲ್ ಅಧಿಕಾರಿ ಡಾ. ಜಿ.ಕೆ.ಸನತ್ ಕುಮಾರ್ ಮಾತನಾಡಿ, ವೈರಲ್ ಹೈಪಟೈಟಿಸ್ ರೋಗದ ಲಕ್ಷಣ, ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಫಿಜಿಷಿಯನ್ ಡಾ.ರಾಜೇಶ್ ಮಾತನಾಡಿ, ವೈರಲ್ ಹೈಪಟೈಟಿಸ್ ಕಾಯಿಲೆ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವಿಶ್ವನಾಥ್ ಸಿಂಪಿ ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವೈರಲ್ ಹೈಪಟೈಟಿಸ್ ಕಾಯಿಲೆಯ ಅರಿವು ಮೂಡಿಸುವ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ನಂತರ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಹೈಪಟೈಟಿಸ್ ಲಸಿಕೆಯನ್ನು ನೀಡಲಾಯಿತು. ಶಿಬಿರದಲ್ಲಿ ಒಟ್ಟು 51 ಮಂದಿ ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಪ್ರಜ್ಷಲ್, ಶ್ರೂಶ್ರೂ಼ಷಣಾಧಿಕಾರಿ ಹಂಸ ಮತ್ತು ಕಾವೇರಿ, ಸಮಾರಂಭದಲ್ಲಿ ಜಿಲ್ಲಾ ಕ್ಷಯರೋಗ…
ಸೋಮವಾರಪೇಟೆ ಜು.29 NEWS DESK : ಇಂದು ನಡೆದ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಕಡತ ನಾಪತ್ತೆ ಪ್ರಕರಣ ಸದ್ದು ಮಾಡಿತು. ಪ.ಪಂ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಡತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ತಪ್ಪಿತಸ್ಥರನ್ನು ವಜಾಗೊಳಿಸಿ ಹೊಸ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಗುತ್ತಿಗೆ ಆಧಾರದ ಸಿಬ್ಬಂದಿಗಳನ್ನು 3 ವರ್ಷಕ್ಕೊಮ್ಮೆ ಬದಲಾಯಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯ ಅಧಿಕಾರಿಗಳು ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮಡಿಕೇರಿ ಜು.29 NEWS DESK : ದೇಶ ರಕ್ಷಣೆಗಾಗಿ ತ್ಯಾಗ ಮಾಡಿದ ಯೋಧರನ್ನು ದಿನನಿತ್ಯ ಸ್ಮರಿಸುವ ಮೂಲಕ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯೋಧರಿಗಾಗಿ ಪ್ರಾರ್ಥಿಸಬೇಕು ಮತ್ತು ಪ್ರತಿಯೊಬ್ಬರು ಗೌರವಿಸುವಂತಾಗಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚನ್ನಯ್ಯನಕೋಟೆ ಬಸ್ ನಿಲ್ದಾಣದ ಬಳಿ ನಿರ್ಮಿಸಲಾದ ಬೃಹತ್ ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಫ್ಲಕ್ಸ್ ಗೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಗ್ರಾಮದಲ್ಲಿರುವ ಸರ್ವಸಹಾಯಿ ಮಿತ್ರ ಮಂಡಳಿ ಹಲವು ವರ್ಷಗಳಿಂದ ದೇಶ ಅಭಿಮಾನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ದೇಶ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದರೊಂದಿಗೆ ಅವರ ಕುಟುಂಬವನ್ನು ಗೌರವಿಸುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಶ ಸೇವೆಯಲ್ಲಿರುವ ಯೋಧರಿಗೆ ಸ್ಪೂರ್ತಿ ತುಂಬಬೇಕೆಂದರು. ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ…






