ನೇಪಾಳ ಹಾಗೂ ಟಿಬೇಟ್ ದೇಶದಲ್ಲಿ ಪ್ರಕೃತಿ ವಿಕೋಪದಿಂದ ಭಾರೀ ಪ್ರಮಾಣದ ಪ್ರವಾಹ, ಭೂಕುಸಿತ ಸಂಭಾವಿಸಿದ್ದು . ಕೊಡಗು ಜಿಲ್ಲೆಯ ಯಾರಾದರೂ ಈ ಪ್ರದೇಶದಲ್ಲಿ ಸಿಲುಕಿದ್ದರೆ , ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ದೂ:- 08272-221077 08272-221099 ವಾಟ್ಸಾಪ್ ಸಂಖ್ಯೆ:- 8550001077
ಲೇಖಕ: admin
ಮಡಿಕೇರಿ, NEWS DESK ಆ.27 – ನಗರದ ಶ್ರುತಿ-ಲಯ ತಂಡದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸಹಯೋಗದೊಂದಿಗೆ ವಿಶ್ವ ಸಂಗೀತ ದಿನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆಯ ಪ್ರಯುಕ್ತ ಆ.30 ರಂದು ಭಾನುವಾರ ದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಆಯೋಜಿತವಾಗಿದೆ. ನಗರದ ,ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪ ದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ದಾಸರ ಕೀತ೯ನೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಮಡಿಕೇರಿಯ ವೈದ್ಯಸಾಹಿತಿ ಡಾ. ನಡಿಬೈಲು ಉಯಶಂಕರ್ , ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್. ಟಿ., ಶೖತಿಲಯ ತಂಡದ ಪ್ರಧಾನ ಕಾಯ೯ದಶಿ೯ ಗೀತಾ ಎಸ್.ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ೆ ಎಂದು ಶೖತಿಲಯ ತಂಡದ ಅಧ್ಯಕ್ಷೆ ವೀಣಾ ಎಸ್. ಹೊಳ್ಳ…
ಮಡಿಕೇರಿ, NEWS DESK, ಆ.27: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ಮಾಡಿದ್ದು, ರೂ.75.35 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ನೀಡುವ ಪ್ರಸ್ತಾವನೆಯನ್ನು ವಾರ್ಷಿಕ ಮಹಾಸಭೆಯ ಅನುಮೋದನೆಗೆ ಮಂಡಿಸಲು ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ಮಾರ್ಚ್ 31ರ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 1,203 ‘ಎ’ ತರಗತಿಯ ಸದಸ್ಯರಿದ್ದು, ಸದಸ್ಯರಿಂದ ರೂ.89.26 ಲಕ್ಷ ಪಾಲು ಬಂಡವಾಳ ಸಂಗ್ರಹವಾಗಿದೆ. ಕ್ಷೇಮ ನಿಧಿ ಸೇರಿದಂತೆ ಇತರೆ ನಿಧಿಗಳಲ್ಲಿ ರೂ.3.95 ಕೋಟಿ ಹಾಗೂ ನಿರಖು ಠೇವಣಿ, ಸಂಚಯ ಠೇವಣಿ ಸೇರಿದಂತೆ ಒಟ್ಟು ರೂ.22.71 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದರು. ಸಂಘದ ಬಂಡವಾಳದ ಪೈಕಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ, ನಿರಖು ಠೇವಣಿ ಹಾಗೂ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಾಲು ಮತ್ತು ಠೇವಣಿ ರೂಪದಲ್ಲಿ…
ಮಡಿಕೇರಿ, NEWS DESK ಆ.27: ಕಸ್ತೂರಿರಂಗನ್ ವರದಿಯಿಂದ ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಯ ನೀಡಿದ್ದಾರೆ. ಮಡಿಕೇರಿಯಲ್ಲಿ ಸಂಸದರ ನೇತೃತ್ವದಲ್ಲಿ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು, ರೈತ ಮುಖಂಡರು ಹಾಗೂ ಪರಿಸರ ಪ್ರೇಮಿಗಳೊಂದಿಗೆ ಕಸ್ತೂರಿರಂಗನ್ ವರದಿ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಕಸ್ತೂರಿರಂಗನ್ ವರದಿ ಇನ್ನೂ ಕರಡು ಅಧಿಸೂಚನೆಯ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಹಲವು ಹಂತದ ಚರ್ಚೆಗಳು ನಡೆಯಬೇಕಿದೆ ಎಂದು ತಿಳಿಸಿದರು. ಕೊಡಗಿನ ಜನರು ಪ್ರಕೃತಿಯನ್ನು ರಕ್ಷಿಸುವ ಹಾಗೂ ಗೌರವಿಸುವ ಮನೋಭಾವ ಹೊಂದಿದ್ದಾರೆ. ಹೀಗಿರುವಾಗ ಅವರನ್ನು ಅನ್ಯಾಯವಾಗಿ ಅರಣ್ಯ ಕಾಯ್ದೆಯ ವ್ಯಾಪ್ತಿಗೆ ತಳ್ಳುವುದು ಸರಿಯಲ್ಲ. ಕೇರಳದಲ್ಲಿ ಕೈಗೊಂಡಿರುವ ಕ್ರಮದಂತೆ ಕೊಡಗಿನಲ್ಲಿಯೂ ಬಫರ್ ಜೋನ್ ಅನ್ನು ಶೂನ್ಯ ಕಿಲೋಮೀಟರ್‌ಗೆ ನಿಗದಿಪಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಜನವಸತಿ ಪ್ರದೇಶಗಳು ಹಾಗೂ ಕೃಷಿ ಭೂಮಿಯನ್ನು ಯಾವುದೇ…
ಸೋಮವಾರಪೇಟೆ, NEWS DESK ಆ.27: ಈದ್ ಮಿಲಾದ್ ಪ್ರೀತಿ, ಶಾಂತಿ, ಸಹನೆ, ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ನೆನಪಿಸುವ ಮಹತ್ವದ ಪವಿತ್ರ ದಿನವಾಗಿದೆ ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು. ಸಮೀಪದ ಬಜೆಗುಂಡಿ ಗ್ರಾಮದ ಖಿಳಾರಿಯ ಮಸಿದಿಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮನುಷ್ಯರು ಪರಸ್ಪರ ಗೌರವದಿಂದ, ಯಾವುದೇ ಭೇದಭಾವವಿಲ್ಲದೆ ಬದುಕಬೇಕು ಎಂಬ ಸಂದೇಶ ಹಬ್ಬದ ನಿಜವಾದ ಆಶಯವಾಗಿದೆ. ನಮ್ಮ ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಇಂತಹ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಲ್ಲ ಧರ್ಮಗಳ ಜನರು ಪರಸ್ಪರ ಗೌರವದಿಂದ ಬದುಕಿದಾಗ ಮಾತ್ರ ಸುಂದರ ಮತ್ತು ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ ಎಂದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ, ಅವರ ಜೀವನವನ್ನು ಅವರು ಮುನ್ನೆಡೆಸುವಂತಾದಾಗ ಅವರಿಗೆ ಮದುವೆ ಮಾಡಿದಲ್ಲಿ ಅವರ ಜೀವನ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮಸೀದಿಯ ಅಭಿವೃದ್ಧಿಗೆ 10…
ಸೋಮವಾರಪೇಟೆ, NEWS DESK ಆ.27: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಸಲ್ಲಿಸಿದ್ದ ಮನವಿಗೆ ಆರೋಗ್ಯ ಇಲಾಖೆ ಸ್ಪಂದಿಸಿದೆ. ಮೈಸೂರು ವಿಭಾಗೀಯ ಆರೋಗ್ಯ ಸೇವಾ ಪ್ರಾಧಿಕಾರದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ. ಅವರು ಬುಧವಾರ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ, ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಆಸ್ಪತ್ರೆಯಲ್ಲಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಶೀಘ್ರ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ಆಸ್ಪತ್ರೆಗೆ ಅರವಳಿಕೆ ತಜ್ಞರು, ಮೂಳೆ ಮತ್ತು ಕೀಲು ತಜ್ಞರು ಹಾಗೂ ಮಕ್ಕಳ ವೈದ್ಯರನ್ನು ಕಾಯಂ ಆಗಿ ನೇಮಕ ಮಾಡಬೇಕು. ಆಸ್ಪತ್ರೆಯ ನೈರ್ಮಲ್ಯೀಕರಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸಬೇಕು. ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ವೈದ್ಯರ ಕೊರತೆ ಸೇರಿದಂತೆ ಆಸ್ಪತ್ರೆಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ…
ಮಡಿಕೇರಿ NEWS DESK ಆ.27 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಆ.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಜಿ.ಕೆ ಹಾಗೂ ಯೋಗೇಶ್ ಹೆಚ್.ಎಸ್ ಅವರು ತಿಳಿಸಿದ್ದಾರೆ. ಸರಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ರೂ.36 ಸಾವಿರ ವೇತನ ಪಾವತಿಸಬೇಕು, ಹೊರಗುತ್ತಿಗೆ ವ್ಯವಸ್ಥೆ ಬದಲಾಗಿ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಆದೇಶವನ್ನು ರದ್ದುಪಡಿಸಬೇಕು. ರಾಜ್ಯ ಸರಕಾರ 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನವನ್ನು ಬಿಸಿಎಂ, ಎಸ್‌ಸಿ, ಎಸ್‌ಟಿ, ಕ್ರೆöÊಸ್ತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನಿಷ್ಠ ವೇತನ ಜಾರಿ ಕುರಿತಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯನ್ನು ರದ್ದುಪಡಿಸಬೇಕು. ಹೊರಗುತ್ತಿಗೆ…
ಮಡಿಕೇರಿ NEWS DESK ಆ.27 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಆ.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಜಿ.ಕೆ ಹಾಗೂ ಯೋಗೇಶ್ ಹೆಚ್.ಎಸ್ ಅವರು ತಿಳಿಸಿದ್ದಾರೆ. ಸರಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ರೂ.36 ಸಾವಿರ ವೇತನ ಪಾವತಿಸಬೇಕು, ಹೊರಗುತ್ತಿಗೆ ವ್ಯವಸ್ಥೆ ಬದಲಾಗಿ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಆದೇಶವನ್ನು ರದ್ದುಪಡಿಸಬೇಕು. ರಾಜ್ಯ ಸರಕಾರ 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನವನ್ನು ಬಿಸಿಎಂ, ಎಸ್‌ಸಿ, ಎಸ್‌ಟಿ, ಕ್ರೆöÊಸ್ತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನಿಷ್ಠ ವೇತನ ಜಾರಿ ಕುರಿತಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯನ್ನು ರದ್ದುಪಡಿಸಬೇಕು. ಹೊರಗುತ್ತಿಗೆ…
ಮಡಿಕೇರಿ NEWS DESK ಆ.27: ಕೊಡಗು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಸಂಘ ಮಡಿಕೇರಿ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಋಗುಪಾಕರ್ಮ ಹೋಮ ಹಾಗೂ ಯಜ್ಞೋಪವೀತಧಾರಣ ವಿಧಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ವಿಶ್ವಕರ್ಮ ಸಮಾಜ ಸೇವಾ ಸಂಘದ ಭವನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಮಂಗಳೂರಿನ ಪುರೋಹಿತ್ ಸತೀಶ್ ಆಚಾರ್ಯ ಅವರ ಪೌರೋಹಿತ್ಯದಲ್ಲಿ ನೆರವೇರಿಸಲಾಯಿತು. ಋಗುಪಾಕರ್ಮ ಹೋಮ ಹಾಗೂ ಯಜ್ಞೋಪವೀತಧಾರಣ ವಿಧಿಗಳು ಸಾಂಪ್ರದಾಯಿಕ ಆಚರಣೆಗಳೊಂದಿಗೆ ಭಕ್ತಿಪೂರ್ವಕವಾಗಿ ಜರುಗಿದವು. ಸಮಾಜದ ಅಧ್ಯಕ್ಷ ಜಗದೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸರ್ವ ಸದಸ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಸಮಾಜದ ಪರಂಪರೆ, ಸಂಸ್ಕೃತಿ ಹಾಗೂ ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಮಡಿಕೇರಿ NEWS DESK ಆ.27 : ರೌಳತುಲ್ ಉಲೂಮ್ ದರ್ಸ್ ಸಂಘಟನೆಯ ಲಿವಾವ್ ಶರಿಯಾ ಸ್ಟುಡೆಂಟ್ ಅಸೋಸಿಯೇಷನ್ ವತಿಯಿಂದ ಸೆ.3ರಂದು ಬೆಳಿಗ್ಗೆ 10 ಗಂಟೆಯಿ0ದ ರಾತ್ರಿ 10ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಕೋಶಾಧಿಕಾರಿ ರಶೀದ್ ಮುಸ್ಲಿಯಾರ್ ಪಯ್ಯಡಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ದರ್ಸ್ ವಿದ್ಯಾರ್ಥಿಗಳಿಂದ ಕಲಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 7 ಗಂಟೆಗೆ ಬೃಹತ್ ಮೌಲಿದ್ ಮಜ್ಲಿಸ್ ಹಾಗೂ ದುಆ ಮಜ್ಲಿಸ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಸಾದಾತ್, ಉಲಮಾ, ಉಮರಾ ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ದಾರಿ ತಪ್ಪುತ್ತಿರುವ ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಮಹಿಳೆಯರಿಗಾಗಿ ಎಲ್‌ಸಿಡಿ ವ್ಯವಸ್ಥೆಯೊಂದಿಗೆ ಪ್ರತ್ಯೇಕ ಸ್ಥಳದ ಸೌಕರ್ಯ ಕಲ್ಪಿಸಲಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಖ್ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಸೈಖುನಾ ಇಂಬಿಚಿ ಕೊಯ ಅಲ್ ಮಶ್ಹೂರ್ ವಳವಟ್ಟಣಮ್, ಸೈಖುನಾ ಅಬೂ ಹನೀಫಲ್ ಫೈಝಿ ತೆನ್ನಲ,…






