ಮಡಿಕೇರಿ ಜು.29 NEWS DESK : ಕರಿಕೆ ಗ್ರಾಮದ ವನಶಾಸ್ತವ್ ನಾಗ ಬನದಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರು ಶ್ರೀ ನಾಗ ಮೂರ್ತಿಗೆ ವಿಶೇಷ ಅಲಂಕಾರ ಸೇವೆಯನ್ನು ಸಲ್ಲಿಸಿ, ಶಾಸ್ತಪೂಜೆ ಮತ್ತು ಸಂಕಲ್ಪ, ಹಾಲಿನ ಅಭಿಷೇಕ, ಕುಂಕುಮಾರ್ಚನೆ ಸೇವೆಯನ್ನು ಸಲ್ಲಿಸಿದರು. ನಂತರ ಮಹಾಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಲೇಖಕ: admin
ಮಡಿಕೇರಿ ಜು.29 NEWS DESK : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 46.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2099.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1996.15 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.18 ಮಿ.ಮೀ. ಕಳೆದ ವರ್ಷ ಇದೇ ದಿನ 61.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3144.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2697.24 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1917.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1819.35 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜು.29 NEWS DESK : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ನಿವಾಸಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನರಾಗಿದ್ದಾರೆ. ಮಾಹಿತಿ ತಿಳಿದು ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.
ಮಡಿಕೇರಿ ಜು.29 NEWS DESK : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ, ಶ್ರೀ ಮುತ್ತಪ್ಪ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಎಳನೀರಭಿಷೇಕ, ಕ್ಷೀರಾಭಿಷೇಕ, ಅಲಂಕಾರ ಪೂಜೆ, ಸಂಕಲ್ಪ ಪೂಜೆ, ಮಹಾಪೂಜೆ, ವಿಶೇಷ ಧಾರ್ಮಿಕ ವಿಧಿ ವಿಧಾನಗಳು, ಮಹಾ ಮಂಗಳಾರತಿ, ಮತ್ತು ಪ್ರಸಾದ ವಿತರಣೆ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ನಾಗನ ಕಲ್ಲಿಗೆ ಪುಷ್ಪಾರ್ಚನೆ ಹಾಗೂ ಹಾಲಿನ ಅಭಿಷೇಕ ಮಾಡಿದರು.
ಮಡಿಕೇರಿ ಜು.29 NEWS DESK : ತೋಳೂರು ಶೆಟ್ಟಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಎಎಎಮ್ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮತ್ತು ತಂಡದವರು ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು. ಎಂಎಫ್ ಆರ್ ಮತ್ತು ಸಿಪಿಆರ್, ಡೆಂಗಿ ಮುಕ್ತ ಶಾಲಾ ಆವರಣ, ಒತ್ತಡ ನಿರ್ವಹಣೆ, ಜಂಕ್ ಫುಡ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು. CHOs ನವೀನ್ ಮತ್ತು ಪ್ರಕಾಶ್ ಸಿಪಿಆರ್ ಕುರಿತು ಪ್ರಾತ್ಯಕ್ಷತೆಯನ್ನು ತೋರಿಸಿದರು. ತಂಡದಲ್ಲಿ ಆಶಾ ಕಾರ್ಯಕರ್ತರು ಮತ್ತು 245 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.
ಮೈಸೂರು, ಜು.29 NEWS DESK : ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವುದಕ್ಕಾಗಿ ಕೇಂದ್ರ ಸರ್ಕಾರ ಈ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಏಕತಾ ಮಾಲ್ ವೈವಿಧ್ಯಮಯ ತಾಣವಾಗಿ ಹೊರಹೊಮ್ಮಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರು ವಸ್ತುಪ್ರದರ್ಶನದ ಮೈದಾನದಲ್ಲಿ ತಲೆ ಎತ್ತಲಿರುವ ಈ ಏಕತಾ ಮಾಲ್ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಂಸದರು ಮಾತನಾಡಿದರು. ಇದು ಕೇಂದ್ರದ ಮಹತ್ವದ ಯೋಜನೆಯಾಗಿದೆ. ಜಿಲ್ಲೆಗಳ ವೈವಿಧ್ಯಮಯ ಮತ್ತು ವಿಶಿಷ್ಠವಾದ ಉತ್ಪನ್ನಗಳು ಒಂದೇ ಸೂರಿನಲ್ಲಿ ಸಿಗಬೇಕು ಎಂಬ ದೃಷ್ಟಿಯಿಂದ ಇದು ನಿರ್ಮಾಣವಾಗಲಿದೆ ಎಂದು ತಿಳಿಸಿದರು. ಭಾರತೀಯ ಉತ್ಪನ್ನಗಳು, ಮೇಕ್ ಇನ್ ಇಂಡಿಯಾ ಉತ್ಪನ್ನಗಳು, ಸ್ಥಳೀಯ ಪ್ರತಿಭೆಗಳು ತಮ್ಮ ವಸ್ತುಗಳನ್ನು ಪ್ರದರ್ಶಿಸಲು ಇಲ್ಲಿ ಅವಕಾಶ ನೀಡಲಾಗಿದೆ. ವೈವಿಧ್ಯತೆಯನ್ನು ಜಗದಗಲ ಪಸರಿಸಲು ಈ ಏಕತಾ ಮಾಲ್ ನೆರವಾಗಲಿದೆ ಎಂದು ಸಂಸದರು ತಿಳಿಸಿದರು. ಒಂದು ಜಿಲ್ಲೆ, ಒಂದು ಉತ್ಪನ್ನ ಎಂಬ ವಿಶೇಷ ಪ್ರೋತ್ಸಾಹ ದೊರೆಯಲಿದೆ. ಗ್ರಾಮೀಣ ಕಲಾವಿದರಿಗೆ, ವಿವಿಧ…
ಕಾರ್ಕಳ ಜು.29 NEWS DESK : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ ಕಾರ್ಯಾಗಾರವನ್ನು ಉದ್ಯಮಿ ಸೂರಜ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ “ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆಯ ಉಪನಿರ್ದೇಶಕ ಮಾರುತಿ ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ…
ಮಡಿಕೇರಿ ಜು.29 NEWS DESK : ಕಳೆದ ಒಂದು ವಾರದಿಂದ ಕೊಡಗಿನ ಜನರನ್ನು ಕಾಡಿದ ಮಹಾಮಳೆ ಇಂದು ಕೊಂಚ ಇಳಿಮುಖಗೊಂಡಿತು. ಆದರೆ ಗಾಳಿಯ ತೀವ್ರತೆ ಹಾಗೇ ಇದ್ದು, ಕೆಲವು ಭಾಗಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಶೀತ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ. ಸೋಮವಾರಪೇಟೆ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮಳೆ ಕಡಿಮೆಯಾಗಿದೆ. ನಿರಂತರ ಮಳೆಯ ಕಾರಣ ನದಿಗಳು ತುಂಬಿ ಹರಿಯುತ್ತಿದ್ದು, ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೂಡಿಗೆ ಸೇತುವೆಯಲ್ಲಿ ಸಂಚಾರವನ್ನು ನಿಷೇಧಿಸಿ ಬಂದ್ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಗಾಳಿಯಿಂದ ಮರ ಮತ್ತು ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ಮನೆಗಳಿಗೆ ಹಾನಿಯಾಗಿದೆ. ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ವಾಸವಿರುವ ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಮಾರ್ಗಗಳ ದುರಸ್ತಿಯಲ್ಲಿ ಚೆಸ್ಕಾಂ ಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆ ಬೆಟ್ಟಗುಡ್ಡಗಳ ಪ್ರದೇಶವಾಗಿರುವುದರಿಂದ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ…
ಮಡಿಕೇರಿ ಜು.28 NEWS DESK : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದರು. ಸರ್ಕಾರ ಶಕ್ತಿ, ಗೃಹಜ್ಯೋತಿ, ಗೃಹಭಾಗ್ಯ, ಯುವನಿಧಿ, ಅನ್ನಭಾಗ್ಯ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು ಸಹ ಉತ್ತಮ ಬದುಕು ನಡೆಸುವಂತಾಗಲು ಹಲವು ಸಮಾಜಪರ ಕಾರ್ಯಕ್ರಮಗಳನ್ನು ನೀಡಿದೆ. ಅವುಗಳನ್ನು ಸ್ಮರಿಸುವಂತಾಗಬೇಕು ಎಂದರು. ಕಾಡಾನೆ ಮತ್ತು…
ಮಡಿಕೇರಿ ಜು.28 NEWS DESK : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಜೊತೆಗೆ ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಎಂಜಿನಿಯರ್‍ಗಳಿಗೆ ತಾಕೀತು ಮಾಡಿದರು. ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು…






