ಮಡಿಕೇರಿ ಜು.28 NEWS DESK : ಗ್ರಾಮ ಪಂಚಾಯ್ತಿಗಳ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿತು. ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ನೌಕರರು ಇಂದು ಬೆಳಗ್ಗೆ ಜಿಲ್ಲಾಡಳಿತದ ಭವನದ ಎದುರು ಸೇರಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪಿ.ಆರ್.ಭರತ್ ಮಾತನಾಡಿ, ಗ್ರಾಮ ಪಂಚಾಯ್ತಿಯ ಕರವಸೂಲಿಗಾರ, ಗುಮಾಸ್ತ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಮೂಲ ವೇತನವನ್ನು 38,021-86 ಎಂದು ನಿಗದಿ ಪಡಿಸಬೇಕು, ವಾಟರ್‍ಮೆನ್, ಪಂಪ್ ಆಪರೇಟರ್ ಕಂ ಮೆಕ್ಯಾನಿಕ್ ಹುದ್ದೆಗಳಿಗೆ ಮೂಲ ವೇತನವನ್ನು 33,062-50 ಎಂದು ಹಾಗೂ ಅಟೆಂಡರ್, ಜವಾನರುಗಳ ಮೂಲ ವೇತನವನ್ನು 28,750 ಎಂದು ನಿಗದಿ ಪಡಿಸಿ ಪ್ರಸಕ್ತ ಸಾಲಿನ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿ…
ಲೇಖಕ: admin
ಮಡಿಕೇರಿ ಜು.28 NEWS DESK : 17ನೇ ಶತಮಾನದ ಉತ್ತರಾರ್ಧದಲ್ಲಿ ಅರಸ ಮುದ್ದುರಾಜರು ನಿರ್ಮಿಸಿದ ಐತಿಹಾಸಿಕ ಮಡಿಕೇರಿ ಕೋಟೆಯ ಹೆಬ್ಬಾಗಿಲು ಕಳೆದ ಎರಡು ದಿನಗಳು ಬೀಸಿದ ಬಿರುಗಾಳಿಗೆ ಮುಚ್ಚಿಕೊಂಡವು. ಸುಮಾರು 50 ಅಡಿ ಎತ್ತರದ ಶಿಥಿಲಾವಸ್ಥೆಯಲ್ಲಿರುವ ಎರಡು ಬಾಗಿಲು ಗಾಳಿಯ ರಭಸಕ್ಕೆ ಮುಚ್ಚಿಕೊಂಡವು. ಆದರೆ ಮತ್ತೆ ಬಾಗಿಲನ್ನು ತೆರೆಯಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ನಂತರ ಅಧಿಕಾರಿಗಳು ಜೆಸಿಬಿ ಯಂತ್ರದ ಸಹಾಯದಿಂದ ಬಾಗಿಲನ್ನು ತೆರೆಯುವಲ್ಲಿ ಯಶಸ್ವಿಯಾದರು. ಈ ಐತಿಹಾಸಿಕ ಆಕರ್ಷಕ ಮಡಿಕೇರಿ ಕೋಟೆಗೆ ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಭಾರತೀಯ ಪುರಾತತ್ವ ಇಲಾಖೆಯ ಅಧೀನದ ಕೋಟೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕೋಟೆ ಮತ್ತಷ್ಟು ಆಕರ್ಷಣೆಯನ್ನು ಪಡೆದುಕೊಳ್ಳಲಿದೆ ಮತ್ತು ಹೆಬ್ಬಾಗಿಲು ಕೂಡ ದುರಸ್ತಿ ಕಾಣಲಿದೆ.
ಚೆಯ್ಯಂಡಾಣೆ ಜು.28 NEWS DESK : ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ಶಾಲೆಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಆಂಗ್ಲ ಮಾಧ್ಯಮ ಶಾಲೆಗೆ ದಾಖಲಾತಿಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು. ಶಾಲೆಯ ಪ್ರಬಾರಿ ಮುಖ್ಯ ಶಿಕ್ಷಕಿ ರಝೀನ ಪ್ರಸ್ತಾವಿಕವಾಗಿ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಯ ಜೊತೆಯಲ್ಲಿ ಆಂಗ್ಲ ಮಾದ್ಯಮ ಪ್ರಾರಂಭಿಸಲು ಸರಕಾರದಿಂದ ಆದೇಶ ಬಂದಿದೆ. ಅದು ನಮ್ಮಗೆಲ್ಲರಿಗೂ ಸಂತೋಷದ ವಿಚಾರ ಎಂದ ಅವರು ಆಂಗ್ಲ ಮಾಧ್ಯಮ ಶಾಲೆಗೆ ಈ ವ್ಯಾಪ್ತಿಯ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಯಾಗುವಂತಾಗಲಿ ಎಂದರು. ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂಜಿಲ ಕಕ್ಕಬೆ ಗ್ರಾ.ಪಂ ಸದಸ್ಯರಾದ ಇಂದಿರಾ, ಶೈಲಾ, ಅತಿಥಿ ಶಿಕ್ಷಕರಾದ ಸಾಜೀದ, ಮಮತ, ಆಶಿಕಾ, ಎಸ್ ಡಿ ಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ…
ಮಡಿಕೇರಿ ಜು.28 NEWS DESK : ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಕೊಡಗು ಘಟಕ ಮತ್ತು ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ವತಿಯಿಂದ ಮಡಿಕೇರಿ ನಗರಸಭೆ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಔಷಧಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ನಗರಸಭೆಯ ಸ್ಥಾಯಿ ಸಮತಿ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಪೌರಾಯುಕ್ತ ಹೆಚ್.ಆರ್.ರಮೇಶ್ ಹಾಗೂ ಪೌರ ಕಾರ್ಮಿಕ ಸುಂದರ ಅವರು ಉದ್ಘಾಟಿಸಿದರು. ಪೌರಾಯುಕ್ತ ಹೆಚ್.ಆರ್.ರಮೇಶ್ ಮಾತನಾಡಿ ನಗರದ ಸ್ವಚ್ಛತೆಗಾಗಿ ಪೌರ ಕಾರ್ಮಿಕರು ಬೆಳಗ್ಗಿನಿಂದ ಸಂಜೆಯವರೆಗೆ ಶ್ರಮ ಪಡುತ್ತಾರೆ. ಶ್ರಮಿಕ ಜೀವಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡಬೇಕು ಎನ್ನುವ ಉದ್ದೇಶದಿಂದ ನ್ಯಾಷನಲ್ ಮೆಡಿಕೋಸ್ ಸಂಸ್ಥೆ ಮತ್ತು ಕೊಡಗು ಸಂಸ್ಕೃತಿ ಸಿರಿ ಬಳಗ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ. ಸಂಘಟಕರಿಗೆ ಪೌರ ಕಾರ್ಮಿಕರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಜಿಲ್ಲಾ ಆಸ್ಪತ್ರೆಯ ತುರ್ತು ಘಟಕ ಮತ್ತು ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಮುಖ್ಯಸ್ಥ ಡಾ.ಮೋಹನ್ ಅಪ್ಪಾಜಿ…
ಅಮ್ಮತ್ತಿ ಜು.26 NEWS DESK : ಕೊಡಗಿನ ಭೂ ಮತ್ತು ನಿವೇಶನ ರಹಿತ ಬಡ ಕೂಲಿ ಕಾರ್ಮಿಕರ ಕುಟುಂಬಗಳ ಬದುಕಿಗೆ ವಿರಾಜಪೇಟೆ ಶಾಸಕರರಾದ ಎ.ಎಸ್ ಪೊನ್ನಣ್ಣ ಅವರು ಮಾಡುತ್ತಿರುವ ಜನಪರ ಕಾರ್ಯಗಳು ಯುವ ಜನತೆಗೆ ಮಾದರಿಯಾಗುತ್ತಿದೆ. ಕೊಡಗಿನಂತಹ ಕುಖ್ಯಾತ ಜಿಲ್ಲೆಗೆ ಇಂತಹ ಶಾಸಕರ ಅಗತ್ಯವಿದೆ ಎಂದು ಬಹುಜನ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕೆ.ಮೊಣ್ಣಪ್ಪ ಅವರು ಪ್ರಸಂಶಿಸಿದರು. ವಿರಾಜಪೇಟೆಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಡಗಿನ ಕಟ್ಟ ಕಡೆಯ ಜನಾಂಗದ ಧ್ವನಿ, ನ್ಯಾಯವಾದಿ, ತೀಕ್ಷ್ಣ ಮಾತಿನ ಚತುರ, ಬಡವರ ಜೀವಾಳವಾಗಿದ್ದ ಎ.ಕೆ.ಸುಬ್ಬಯ್ಯ ಅವರ ಪ್ರತಿ ರೂಪದಂತೆ ಭಾಷವಾಗುತ್ತಿರುವ ತಂದೆಗೆ ತಕ್ಕ ಮಗನೆನಿಸಿರುವ ಕೊಡಗಿನ ಜನಪರ ನಾಯಕರಾಗಿರುವ ಎ.ಎಸ್ ಪೊನ್ನಣ್ಣ ಅವರಿಗೆ ಕೊಡಗಿನ ನಿವೇಶನ ರಹಿತ, ಭೂ ರಹಿತ, ಶೋಷಿತರ ಪರವಾಗಿ ಮತ್ತು ಬಹುಜನ ಕಾರ್ಮಿಕರ ಸಂಘಟನೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದರು. ಕ್ಷೇತ್ರದಲ್ಲಿ 1559 ಆದಿವಾಸಿ ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಹಾಗೂ 20 ಸಾವಿರ ನಿವೇಶನ ರಹಿತರಿಗೆ ಸವಲತ್ತು…
ಮಡಿಕೇರಿ ಜು.28 NEWS DESK : ಅಯ್ಯಂಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ 1ನೇ ತರಗತಿಯ ಪ್ರಾರಂಭೋತ್ಸವ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಂ.ರಾಶಿದ್, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಆಲಿ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎನ್.ಶಾಂತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸುವಂತೆ ಕೋರಿದರು. ಈ ಸಂದಭ೯ ಎಸ್.ಡಿ.ಎ೦. ಸಿ ಸದಸ್ಯರು, ಶಿಕ್ಷಕ ವೃಂದದವರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜು.28 NEWS DESK : ಭಾರೀ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಹಾನಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಗ್ರಾಮದ ಕುಲ್ಲೆಟ್ಟಿರ ಚಂಗಪ್ಪ ಎಂಬವರ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ.
ಮಡಿಕೇರಿ ಜು.28 NEWS DESK : ಭಾಗಮಂಡಲ ಕೆವಿಜಿ ಅನುದಾನಿತ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ 2025- 27ನೇ ಸಾಲಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಎಲೆಕ್ಟ್ರಿಕಲ್ ಕೋರ್ಸು ಗಳಲ್ಲಿ ಕೆಲವೇ ಕೆಲವು ಸೀಟುಗಳು ಖಾಲಿ ಇದೆ. ಕಳೆದ ಹಲವು ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಿರುವ ಈ ಸಂಸ್ಥೆಯಲ್ಲಿ ಸರಕಾರದ ನಿಯಮಾನುಸಾರ ಪ್ರವೇಶಾತಿ, ತಾಂತ್ರಿಕ ತರಬೇತಿ, ಉಚಿತ B.C.M ಹಾಸ್ಟೆಲ್ ವ್ಯವಸ್ಥೆ ಮತ್ತು ಕ್ಯಾಂಪಸ್ ಸಂದರ್ಶನದ ಮೂಲಕ ಶೇ.100 ರಷ್ಟು ಉದ್ಯೋಗದ ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ 9900902141 ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಜು.28 NEWS DESK : ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿ, ಪೂರ್ಣಗೊಂಡ ಕಾಮಗಾರಿಯನ್ನು ಉದ್ಘಾಟಿಸಿದರು. ಶಾಸಕ ಉದಯ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್ ಉಪಸ್ಥಿತರಿದ್ದರು.
ಮಡಿಕೇರಿ ಜು.28 NEWS DESK : ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕ ಸಾಧಕ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಸಮಾಜದ ಮೂರನೇ ಕಣ್ಣು ಆಗಿರುವ ಪತ್ರಕರ್ತರು ಯಾವುದೇ ಕಾರಣಕ್ಕೂ ದೃಷ್ಟಿ ಕಳೆದುಕೊಳ್ಳಬಾರದು. ಪ್ರಸ್ತುತ ಸನ್ನಿವೇಶದಲ್ಲಿ ಪತ್ರಕರ್ತರ ದೃಷ್ಟಿಕೋನ ಬದಲಾಗಿದೆ. ಊಹ ಪತ್ರಿಕೋದ್ಯಮ ಭರಾಟೆಯಿಂದ ಟೀಕೆ-ಟಿಪ್ಪಣಿ ಎದುರಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಪತ್ರಕರ್ತರು ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಮಾಜ ಹಾಗೂ ಸರಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುವುದರೊಂದಿಗೆ ವೃತ್ತಿಧರ್ಮ ಪಾಲಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಹೆಸರಿನಲ್ಲಿ ಬೇರೆಯವರ ಸ್ವಾತಂತ್ರ್ಯ ಕಸಿಯಬಾರದು. ಎಂದಿಂಗೂ ಅರ್ಧ…






