ಮಡಿಕೇರಿ ಜು.26 NEWS DESK : ಪೆರಾಜೆ ವಲಯ ಕಾಂಗ್ರೆಸ್ ಸಮಿತಿ ಹಾಗೂ ಕಾರ್ಯಕರ್ತರ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪೆರಾಜೆ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಪಕ್ಷ ಸಂಘಟನೆ, ಪಕ್ಷದಲ್ಲಿನ ಆಂತರಿಕ ವಿಷಯಗಳು ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪೆರಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಜಯರಾಮ್ ಪೆರುಮುಂಡ, ಕೊಲ್ಯದ ಗಿರಿಶ್, ರಮನಾಥ್ ಬೇಕಲ್, ನೆರವಂಡ ಉಮೇಶ್, ಸುರೇಶ್ ಪೆರುಮುಂಡ, ಟಿ.ಎಂ.ಶಹೀದ್, ಸೂರಜ್ ಹೊಸೂರು, ಡಿಸಿಸಿ ಪದಾಧಿಕಾರಿಗಳು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ NEWS DESK ಜು.26 : ಸೋಮವಾರಪೇಟೆ ತಾಲ್ಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕುಂಬೂರು ಗ್ರಾಮದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಹಾನಿಯಾಗಿದೆ. ಆಟೋ ಚಾಲಕ ಕುಂಬೂರು ಗ್ರಾಮದ ನಿವಾಸಿ ಪ್ರವೀಣ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಮಡಿಕೇರಿ ಜು.26 NEWS DESK : ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2025-26 ನೇ ಸಾಲಿಗೆ ಪ್ರಥಮ ಬಿ.ಎ ತರಗತಿಗಳಿಗೆ ಹೆಣ್ಣುಮಕ್ಕಳಿಗೆ ಉಚಿತ ಪ್ರವೇಶಾತಿ ನೀಡಲಾಗುವುದು. ಈ ಕಾಲೇಜಿಗೆ ಪ್ರವೇಶ ಪಡೆಯಲು ಇಚ್ಛಿಸಿರುವ ವಿದ್ಯಾರ್ಥಿನಿಯರು ಕಛೇರಿಯಿಂದ ಅರ್ಜಿಯನ್ನು ಪಡೆದುಕೊಂಡು ಭರ್ತಿಮಾಡಿ ಸೂಕ್ತ ದಾಖಾಲಾತಿಗಳೊಂದಿಗೆ ಪ್ರವೇಶ ಪಡೆಯಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು 31/07/2025 ಕಡೆಯ ದಿನ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು. 9483826271 9008140516, 991639338, 9449946142.
ಮಡಿಕೇರಿ ಜು.26 NEWS DESK : ಪೆರಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋರಿಕ್ಷಾ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರನ್ನು ಆಟೋ ಚಾಲಕರು ಹಾಗೂ ಸ್ಥಳೀಯರು ಆತ್ಮೀಯವಾಗಿ ಬರಮಾಡಿಕೊಂಡು ಧನ್ಯವಾದ ಅರ್ಪಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಜಯರಾಮ್ ಪೆರುಮುಂಡ, ಪಕ್ಷದ ಪ್ರಮುಖರಾದ ಕೊಲ್ಯದ ಗಿರಿಶ್, ರಮನಾಥ್ ಬೇಕಲ್, ನೆರವಂಡ ಉಮೇಶ್, ಸುರೇಶ್ ಪೆರುಮುಂಡ, ಟಿ.ಎಂ.ಶಹೀದ್, ಸೂರಜ್ ಹೊಸೂರು, ಚುನಾಯಿತ ಜನಪ್ರತಿನಿಧಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಡಿಸಿಸಿ ಪದಾಧಿಕಾರಿಗಳು, ವಲಯದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಈ ಭಾಗದಲ್ಲಿ ಆಟೋರಿಕ್ಷಾ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಸುಸಜ್ಜಿತ ಆಟೋ ತಂಗುದಾಣದ ಅಗತ್ಯತೆಯನ್ನು ಮನಗಂಡಿದ್ದ ಶಾಸಕರು ಈ ಹಿಂದೆ ಇದಕ್ಕಾಗಿ ಅನುದಾನ ಒದಗಿಸಿದ್ದರು.
ಮೈಸೂರು ಜು.26 NEWS DESK : ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮೈಸೂರಿನ ಸಂಗೀತ ವಿವಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಮೂರು ಕೃತಿಗಳ ಲೋಕಾರ್ಪಣೆಗೊಂಡಿತು. ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯವಹಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್ ಕುಮಾರ್ ಅವರು ಮೈಸೂರು ವೃತ್ತಗಳ ವೃತ್ತಾಂತ, ಮಹಾವೀರ ಚಕ್ರ ಪುರಸ್ಕೃತ ವೀರ ಸೇನಾನಿ ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ ಅವರು ಸಿಂದೂರ, ಶಾಸಕ ಟಿ.ಎಸ್. ಶ್ರೀವತ್ಸ ಅವರು ಮೈಸೂರಿನ ಗಲ್ಲಿ ಕಥೆ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು, ಮೂರು ಕೃತಿಗಳ ವಿಷಯ ಆಯ್ಕೆ ವಿಭಿನ್ನವಾಗಿದೆ. ಗಲ್ಲಿ, ರಸ್ತೆಗಳ ಮಹತ್ವದ ಕುರಿತು ಬರೆಯುವುದು ಉತ್ತಮ ಪ್ರಯೋಗವಾಗಿದೆ. ಸೇನಾನಿಯಾಗುವ ಆಕಾಂಕ್ಷೆ ಹೊಂದಿದ್ದ ರಮೇಶ್ ಉತ್ತಪ್ಪ…
ಸೋಮವಾರಪೇಟೆ ಜು.26 NEWS DESK : ಸಮೀಪದ ಕಾನ್ವೆಂಟ್ ಬಾಣೆಯ ಅಂಗನವಾಡಿಗೆ ಶಾಸಕ ಡಾ. ಮಂತರ್ ಗೌಡ ಅವರು ಭೇಟಿ ನೀಡಿ ಪರಿಶೀಲಿಸಿದರು. ಅಂಗನವಾಡಿಯಲ್ಲಿ ಮಕ್ಕಳ ಸಂಖ್ಯೆ, ನೀಡುತ್ತಿರುವ ಆಹಾರ ಮತ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಕೇಂದ್ರವನ್ನು ಸರಿಯಾಗಿ ನೋಡಿಕೊಳ್ಳುವುದರೊಂದಿಗೆ, ಮಕ್ಕಳಿಗೆ ಕಾಲ ಕಾಲಕ್ಕೆ ಸರ್ಕಾರ ನಿಗದಿಗೊಳಿಸಿರುವ ಆಹಾರವನ್ನು ವಿತರಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭ ಅಂಗನವಾಡಿ ಶಿಕ್ಷಕಿ ಬೊಳ್ಳಮ್ಮ ಅವರು, ಕಟ್ಟಡ ಶಿಥಿಲವಾಗಿರುವ ಬಗ್ಗೆ ಶಾಸಕರ ಗಮನಕ್ಕೆ ತಂದರು. ಶಾಸಕರ ಆಪ್ತ ಸಹಾಯಕ ಕಿರಣ್ ಇದ್ದರು.
ಸೋಮವಾರಪೇಟೆ ಜು.26 NEWS DESK : ತಾಕೇರಿ ಗ್ರಾಮದ ಹಿರಿಯ ವಾಲಿಬಾಲ್ ಆಟಗಾರ ಹಾಗೂ ಕಾಫಿ ಬೆಳೆಗಾರ ಮೇದಪ್ಪ (ಅಣ್ಣ-58) ಅನಾರೋಗ್ಯದಿಂದ ನಿಧನರಾದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ. ತಾಕೇರಿ ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.
ಕುಶಾಲನಗರ ಜು.26 NEWS DESK : ಕುಶಾಲನಗರ ಪುರಸಭೆ ಕಟ್ಟಡ ನಿರ್ಮಾಣ ಸೇರಿದಂತೆ 1.5 ಕೋಟಿ ರು.ಗಳ ಕಾಮಗಾರಿಗಳು ವಾರ್ಡ್ ಜನ ಪ್ರತಿನಿಧಿಗಳ ಗಮನಕ್ಕೆ ಬಾರದೆ ನಡೆದಿರುವ ಬಗ್ಗೆ ಸದಸ್ಯರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಕಾವೇರಿದ ಚರ್ಚೆ ನಡೆಯಿತು. ಪುರಸಭೆಯ ನೂತನ ಕಟ್ಟಡ ನಿರ್ಮಾಣ ಸಂದರ್ಭ 1.25 ಕೋಟಿ ರೂ ವೆಚ್ಚದ ಬೃಹತ್ ಮೊತ್ತದ ಕಾಮಗಾರಿಗೆ ಅಧ್ಯಕ್ಷರು ಘಟನೋತ್ತರ ಅನುಮತಿ ನೀಡಿದ್ದು, ಈ ಬಗ್ಗೆ ಮತ್ತು ಕುಶಾಲನಗರ ಪಟ್ಟಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ 16.5 ಲಕ್ಷ ರೂಗಳ ಕಾಮಗಾರಿಗೆ ಸಭೆ ಅನುಮೋದನೆ ಪಡೆದಿಲ್ಲ ಎನ್ನುವ ವಿಷಯ ಚರ್ಚೆಗೆ ಗ್ರಾಸವಾಯಿತು. ಸದಸ್ಯರಾದ ಅಮೃತರಾಜ್ ಮಾತನಾಡಿ, ತುರ್ತು ಸಂದರ್ಭ ಅಧ್ಯಕ್ಷರು ಸದಸ್ಯರ ಗಮನಕ್ಕೆ ತಾರದೆ ಕೆಲವು ಮಿತಿಯಲ್ಲಿ ಮಾತ್ರ ಕೆಲಸ ಮಾಡಬಹುದು. ಆದರೆ ವಾರ್ಡ್ ಸದಸ್ಯರ ಹಕ್ಕನ್ನು ಕಸಿಯುವುದು ಸರಿಯಲ್ಲ ಎಂದು ಆರೋಪಿಸಿದರು. ವಾರ್ಡ್ ಸದಸ್ಯರುಗಳ ಗಮನಕ್ಕೆ ತರದೆ…
ಮಡಿಕೇರಿ ಜು.26 NEWS DESK : ನಗರದ ವಿವಿಧ ಸಂಘಟನೆಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕೊಡಗು ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ನಗರದ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಮೇಜರ್ ಓ.ಎಸ್.ಚಿಂಗಪ್ಪ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ಭಾರತೀಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು. ಈ ಸಂದರ್ಭ ಮಾಜಿ ಸೇನಾಧಿಕಾರಿಗಳು, ಹಿಂದು ಜಾಗರ ವೇದಿಕೆಯ ಪ್ರಮುಖರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮಾಜಿ ಸೇನಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ದೇಶಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡಿದ್ದರು. ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಗರದ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು.
ಮಡಿಕೇರಿ ಜು.26 NEWS DESK : ಇದು ಭಾರತೀಯರ ಆತ್ಮಸ್ಮರಣೆಯ ದಿನ. ಇದು ಕೇವಲ ಒಂದು ಇತಿಹಾಸದ ಪುಟವಲ್ಲ; ದೇಶದ ಸಂವಿದಾನಿಕ ಸಮಗ್ರತೆಗಾಗಿ ಹೋರಾಡಿದ ವೀರ ಯೋಧರ ತ್ಯಾಗವನ್ನು ಸ್ಮರಿಸುವ ಪವಿತ್ರ ದಿವಸ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತದ ಗೆಲುವಿನ ಸಂಕೇತವಾಗಿ ಪ್ರತಿ ವರ್ಷದ ಈ ದಿನವನ್ನು ನಾವು ‘ಕಾರ್ಗಿಲ್ ವಿಜಯ ದಿವಸ’ ವಾಗಿ ಆಚರಿಸುತ್ತೇವೆ. ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ’ ದೇಶದ ಜನಮನದಲ್ಲಿ ಹೊಸ ಚೈತನ್ಯ ಮೂಡಿಸಿದರೂ, ಅದಕ್ಕೂ ಮುನ್ನ ಹಿಮಾಲಯದ ಎತ್ತರದ ಪರ್ವತಗಳಲ್ಲಿ ನಡೆದ ಕಾರ್ಗಿಲ್ ಯುದ್ಧವು ಭಾರತೀಯ ಸೇನೆಯ ಶ್ರೇಷ್ಠತೆ, ಶೌರ್ಯ ಮತ್ತು ತ್ಯಾಗದ ಪ್ರತಿ ರೂಪವಾಗಿದೆ. 1999ರ ಮೇ ತಿಂಗಳಿನಲ್ಲಿ ಪಾಕಿಸ್ತಾನಿ ಸೇನೆಯ ಜೊತೆಗೂಡಿದ ಉಗ್ರರು ನಿಯಂತ್ರಣ ರೇಖೆ (ಐoಅ) ದಾಟಿ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಉಚ್ಚ ಪ್ರದೇಶಗಳನ್ನು ಆಕ್ರಮಿಸಿದರು. ಈ ಆಕ್ರಮಣವು ಭಾರತಕ್ಕೆ ಆಘಾತ ನೀಡುವಷ್ಟು ತೀವ್ರವಾಗಿತ್ತು. ಪರ್ವತ ಶಿಖರಗಳಲ್ಲಿ ಬೀಡು ಬಿಟ್ಟ ಪಾಕಿಸ್ತಾನಿ ಸೇನೆ, ಲಡಾಖ್ ಅನ್ನು ಉಳಿದ…






