ಲೇಖಕ: admin

ಮಡಿಕೇರಿ ಜು.26 NEWS DESK : ರಾತ್ರಿ ಸುರಿದ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಲಬುರ್ಗಿ ಜಿಲ್ಲೆಯ ನಿವಾಸಿ ರವಿ ಎಂಬವರ ಪತ್ನಿ ಸುಷ್ಮಾ (37) ಹಾಗೂ 3 ಮಕ್ಕಳು ವಾಸವಿದ್ದರು. ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಸುಷ್ಮಾ ಮೃಪಟ್ಟಿದ್ದಾರೆ. ಮೃತರ ಸಹೋದರ ಅಕ್ಷಯ್ ಗೆ ಭುಜ ಭಾಗಕ್ಕೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Read More

ಮಡಿಕೇರಿ ಜು.25 NEWS DESK : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಆಗಸ್,್ಟ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ದೂರವಾಣಿ ಸಂಖ್ಯೆ 9482894676 ಇವರನ್ನು ಅಥವಾ ಮುಖ್ಯ ಶಿಕ್ಷಕರು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ದೂರವಾಣಿ ಸಂಖ್ಯೆ: 8618546009 ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜು.25 NEWS DESK : ‘ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕು ಘೋಷಣೆಯಾಗಿ 7 ವರ್ಷ ಕಳೆದಿದೆ. ಆ ದಿಸೆಯಲ್ಲಿ ಸರ್ಕಾರ ಪ್ರಜಾಸೌಧ ಹೆಸರಿನಲ್ಲಿ ಎರಡು ಆಡಳಿತ ಸೌಧ ನಿರ್ಮಾಣಕ್ಕೆ ತಲಾ 8.65 ಕೋಟಿ ರೂ.ವನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆಯೂ ಸಹ ಆಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.’ ಕೊಡಗು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ ಪೊನ್ನಂಪೇಟೆಯ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ಮಾತನಾಡಿದರು. ಸರ್ಕಾರ ಭೂಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಲ್ಪಿಸುತ್ತಿರುವ ಹಿನ್ನೆಲೆ ತಹಶೀಲ್ದಾರರ ಕಚೇರಿಯಲ್ಲಿ ಯಾವ ರೀತಿ ಅಪ್‍ಡೇಟ್ ಮಾಡಿದ್ದಾರೆ ಎಂಬ ಬಗ್ಗೆ ಸಚಿವರು ಮಾಹಿತಿ ಪಡೆದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ತಂದಿದ್ದು, ಅವುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ…

Read More

ಮಡಿಕೇರಿ ಜು.25 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜು.26 ರಂದು 09.30 ರಿಂದ ಸಂಜೆ 5.00 ಗಂಟೆಯವರೆಗೆ ಸದರಿ ಫೀಡರ್‍ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಆರ್ಜಿ, ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಜು.25 NEWS DESK : ಕೊಡಗಿನ ಮೂಲ ನಿವಾಸಿ ಕೊಡವ ಭಾಷಿಕ ಕೊಯವ ಸಮಾಜದ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅಗತ್ಯ ಆರ್ಥಿಕ ನೆರವು ಒದಗಿಸಬೇಕೆಂದು ಕೋರಿ ಕೊಯವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇಂದು ಶಾಸಕರ ಸೋಮವಾರಪೇಟೆಯ ನಿವಾಸದ ಕಚೇರಿಯಲ್ಲಿ ಭೇಟಿಯಾದ ಕೊಯವ ಸಮಾಜದ ಪ್ರಮುಖರು ಮೂರ್ನಾಡಿನಲ್ಲಿ ಕಟ್ಟಡ ನಿರ್ಮಿಸಲು ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಲಾಗಿದೆ. ಸಣ್ಣ ಸಮುದಾಯದ ಅಭ್ಯುದಯಕ್ಕಾಗಿ ಆರ್ಥಿಕ ನೆರವು ನೀಡುವಂತೆ ಕೋರಿದರು. ಮನವಿ ಸ್ವೀಕರಿಸಿದ ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರಲ್ಲದೆ ಸರಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು. ಕೊಡಗಿನಲ್ಲಿರುವ ಸಣ್ಣ ಸಣ್ಣ ಸಮುದಾಯಗಳು ಬೆಳವಣಿಗೆ ಹೊಂದಬೇಕು, ಸಮುದಾಯಗಳ ಅಭಿವೃದ್ಧಿಗೆ ಸರಕಾರದ ನೆರವು ಸದಾ ಇರುತ್ತದೆ. ಕಟ್ಟಡದ ಭೂಮಿ ಪೂಜೆಗೆ ಖುದ್ದು ಬರುವುದಾಗಿ ಹೇಳಿದರು. ಕೊಡವ ಭಾಷಿಕ ಕೊಯವ ಸಮಾಜದ ಅಧ್ಯಕ್ಷ ಜಿಲ್ಲಂಡ ದಾದು ಮಾದಪ್ಪ, ಉಪಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ,…

Read More

ಕುಶಾಲನಗರ ಜು.25 NEWS DESK : ಕುಶಾಲನಗರ ಮಾಜಿ ಸೈನಿಕರ ಸಂಘ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಹಾಗೂ ಕುಶಾಲನಗರ ಸ್ಥಳೀಯ‌ ಸಂಸ್ಥೆಯ ವತಿಯಿಂದ ಜು.26 ರಂದು “ಕಾರ್ಗಿಲ್ ವಿಜಯೋತ್ಸವ” ನಡೆಯಲಿದೆ. ಬೆಳಿಗ್ಗೆ 10.30ಕ್ಕೆ‌ ಮುಳ್ಳುಸೋಗೆಯ ಮಾಜಿ ಸೈನಿಕರ ಸಂಘದ ಕಛೇರಿಯ ಆವರಣದಲ್ಲಿ ವಿಜಯೋತ್ಸವದಲ್ಲಿ ವೀರ‌ ಮರಣ ಹೊಂದಿದ ಸೈನಿಕರ ಸೇವೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಗುವುದು. ಸಂಘದ ಅಧ್ಯಕ್ಷ ಕ್ಯಾಪ್ಟನ್ ಡಿ.ಕೆ. ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಸುಬೇದಾರ್ ಮೇಜರ್ ಎಸ್.ಆರ್.ಮಾದಪ್ಪ, ಕೋಶಾಧಿಕಾರಿ ಹವಾಲ್ದಾರ್ ಎನ್.ಎಸ್.ನರೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಇದೇ ವೇಳೆಯಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಲಾಗಿದೆ.

Read More

ಮಡಿಕೇರಿ ಜು.26 NEWS DESK : ಕರ್ನಾಟಕ ನಾಟಕ ಅಕಾಡೆಮಿಯ 2025-26ನೇ ಸಾಲಿನ ಎಚ್‌. ವಿ.ವೆಂಕಟಸುಬ್ಬಯ್ಯ ದತ್ತಿ ಪುರಸ್ಕಾರವು ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾಮದ ಪಿ.ಎ.ಮಂಜಪ್ಪ (ಮಂಜು ಕೊಡಗು) ಅವರಿಗೆ ಲಭಿಸಿದೆ. ಐತಪ್ಪ ಮತ್ತು ಲೀಲಾ ಅವರ ಪುತ್ರರಾದ ಇವರು 1994-95ರಲ್ಲಿ ನೀನಾಸಂನ ರಂಗಶಿಕ್ಷಣ ಕೇಂದ್ರದಲ್ಲಿ ತರಬೇತಿ ಪಡೆದರು. ಬಳಿಕ, ನೀನಾಸಂ ತಿರುಗಾಟದಲ್ಲಿ 2 ವರ್ಷ ನಟರಾಗಿ, ತಂತ್ರಜ್ಞರಾಗಿ ಕೆಲಸ ಮಾಡಿದರು. ಬೆಂಗಳೂರಿನ ಸಮುದಾಯ ತಂಡದಲ್ಲಿ, ಚಿತ್ರದುರ್ಗದ ಕಲಾಶಾಲೆ ಜಮುರಾ ಕಲಾವೇದಿಕೆಯಲ್ಲಿ ಅಧ್ಯಾಪಕರಾಗಿಯೂ ಕೆಲಸ ಮಾಡಿದ್ದ ಇವರು ಏಕಲವ್ಯ, ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇನ್ನೂ ಮೊದಲಾದ ಸ್ವಯಂಸೇವಾ ಸಂಸ್ಥೆಗಳಲ್ಲಿ ಸುಮಾರು 5 ವರ್ಷಗಳ ಕಾಲ ತರಬೇತುದಾರರಾಗಿ ಕೆಲಸ ಮಾಡಿದ್ದಾರೆ. 2002ರಿಂದ ಹೆಗ್ಗೋಡಿನ ನೀನಾಸಂ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಜು ಕೊಡಗು ವಿನ್ಯಾಸಕ್ಕೆ ಸಂಬಂಧಿಸಿದಂತೆ ಇವರು ಬರೆದಿರುವ ‘ಆಹಾರ್ಯ-ಅಭಿನಯ’ ಪುಸ್ತಕವು ಹಂಪಿ ವಿಶ್ವವಿದ್ಯಾನಿಲಯದಿಂದ ಪ್ರಕಟಗೊಂಡು ಅಲ್ಲಿನ ಮತ್ತು ಇತರ ರಂಗಶಿಕ್ಷಣ ಕೇಂದ್ರಗಳಿಗೆ ಪಠ್ಯವಾಗಿರುವುದು ವಿಶೇಷ. ಒಟ್ಟು 37 ನಾಟಕಗಳನ್ನು ಅವರು…

Read More

ಮಡಿಕೇರಿ NEWS DESK ಜು.25 : ದೇವರಕೊಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ. ಮಧ್ಯಾಹ್ನ 12.50 ಗಂಟೆ ಸುಮಾರಿನಲ್ಲಿ ಮಡಿಕೇರಿಯಿಂದ ಸುಳ್ಯದ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಸಂಪಾಜೆಯ ಶರತ್ ಕೀಲಾರು, ತಾಜುದ್ದೀನ್ ಸೇರಿದಂತೆ ಯುವಕರ ತಂಡ ನಾಲ್ಕು ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟೊತ್ತಿಗಾಗಲೇ ನಾಲ್ವರೂ ಮೃತಪಟ್ಟಿರುವುದು ದೃಡಪಟ್ಟಿದೆ.

Read More

ಮಡಿಕೇರಿ ಜು 25 NEWS DESK : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ  ಜು.26 ರಂದು ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾಹಿತಿ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ಪಾವನ  ಇವೆಂಟ್ಸ್ ನಿಂದ ದೇಶಭಕ್ತಿ ಗೀತೆ ಕಾಯ೯ಕ್ರಮ  ಇದೇ ಸಂದಭ೯ಆಯೋಜಿತವಾಗಿದ್ದು ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮಕ್ಕೆ ಶಕ್ತಿ ಪ್ರತಿಷ್ಟಾನ, ಪತ್ರಿಕಾಭವನ ಟ್ರಸ್ಟ್, ಕೊಡಗು ಔಷಧಿ ವ್ಯಾಪಾರಸ್ಥರ ಸಂಘ, ಭಾರತೀಯ  ಮೆಡಿಕಲ್  ಅಸೋಸಿಯೇಷನ್ ನ ಕೊಡಗು ಘಟಕ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು,…

Read More

ಮಡಿಕೇರಿ NEWS DESK ಜು.25 : ದೇವರಕೊಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ.

Read More