ಮಡಿಕೇರಿ ಜು.1 NEWS DESK : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2025-26ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು…
ಲೇಖಕ: admin
ಮಡಿಕೇರಿ ಜು.1 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 10 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಜುಲೈ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net ಈ-ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಪುತ್ತೂರು ಜು.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್ ಗಳನ್ನು ಪಡೆದು ದಾಖಲೆಯನ್ನು ನಿರ್ಮಿಸಿದ್ದಾರೆ. ಕಾಲೇಜಿನ ಡಾಟಾ ಸೈನ್ಸ್ ವಿಭಾಗಕ್ಕೆ 4, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಕ್ಕೆ 2 ಮತ್ತು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಕ್ಕೆ ಒಂದು ಇಂಜಿನಿಯರಿಂಗ್ ಪರೀಕ್ಷೆ ಫಲಿತಾಂಶ ಪ್ರಕಟ : ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 7 ರ‍್ಯಾಂಕ್ ಲಭಿಸಿರುತ್ತದೆ. 4 ವರ್ಷಗಳ ಕೆಳಗೆ ನೂತನವಾಗಿ ಆರಂಭವಾದ ಡಾಟಾ ಸೈನ್ಸ್ ವಿಭಾಗದ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮಾಡಿದ್ದು ಒಂದು ಚಿನ್ನದ ಪದಕದ ಜೆತೆಗೆ ಒಟ್ಟು 4 ರ‍್ಯಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಸುಚಿತಾ ಇವರು 9.60 ಸಿಜಿಪಿಎ ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್ ಹಾಗೂ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಅದೇ ವಿಭಾಗದ ಪ್ರಜ್ಞಾಶಂಕರಿ 9.52 ಸಿಜಿಪಿಎ…
ಮಡಿಕೇರಿ ಜು.1 NEWS DESK : ಮಡಿಕೇರಿ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ನಿವಾಸಿ ಮುದ್ದಂಡ ಕಾವೇರಮ್ಮ ಪಿ. (98) (ತಾಮನೆ ತಂಬುಕುತ್ತೀರ) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಜು.2 ರಂದು ಬೆಳಿಗ್ಗೆ 11 ಗಂಟೆಗೆ ಸೂರ್ಲಬ್ಬಿಯ ಮುದ್ದಂಡ ಐನ್ ಮನೆಯಲ್ಲಿ ನಡೆಯಲಿದೆ. ಕಾವೇರಮ್ಮ ಅವರ ನಿಧನಕ್ಕೆ ಮುದ್ದಂಡ ಕುಟುಂಬಸ್ಥರು ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಜು.1 NEWS DESK : ಶ್ರೀ ಕಂಚಿಕಾಮಾಕ್ಷಿ ಬಾಲಕ ಮಂಡಳಿ 62ನೇ ವರ್ಷದ ದಸರಾ ಮಂಟಪ ಸಮಿತಿಯ ಅಧ್ಯಕ್ಷರಾಗಿ ಲೋಹಿತ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜು NEWS DESK.1 : ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ 2025ನೇ ಸಾಲಿನ ದಸರಾ ಮಂಟಪ ಸಮಿತಿ ಅಧ್ಯಕ್ಷರಾಗಿ ಆಪಾಡಂಡ ವಿನೋದ್ ಕಾರ್ಯಪ್ಪ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜು.1 NEWS DESK : ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಕರುಗಳು ಸೇರಿದಂತೆ ನಾಲ್ಕು ಹಸುಗಳು ಸಾವನ್ನಪ್ಪಿರುವ ಘಟನೆ ಸಂಪಾಜೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಕೊಯನಾಡಿನಲ್ಲಿ ನಡೆದಿದೆ. ಕೊಯನಾಡು ಶ್ರೀಗಣಪತಿ ದೇವಾಲಯದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಧ್ಯರಾತ್ರಿ ವಾಹನ ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ. ಜಾನುವಾರುಗಳನ್ನು ಸಾಕುವ ಮಾಲೀಕರು ಅವುಗಳ ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ತೋರಬೇಕು ಮತ್ತು ಹೆದ್ದಾರಿಯಲ್ಲಿ ಮೇಯಲು ಬಿಡಬಾರದು ಎಂದು ಪ್ರಾಣಿ ಪ್ರಿಯರು ಮನವಿ ಮಾಡಿದ್ದಾರೆ.
ಸಿದ್ದಾಪುರ ಜು.1 NEWS DESK : ಇಕ್ರಾ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗ ಶಿಬಿರದಲ್ಲಿ ಪಾಲ್ಗೊಂಡು ಯೋಗದ ಮಹತ್ವವನ್ನು ತಿಳಿದುಕೊಂಡರು. ಯೋಗಾ ತರಬೇತುದರಾದ ಶಿಕ್ಷಕಿ ಎನ್.ಎ.ವಿದ್ಯಾ ಮಾತನಾಡಿ, ದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಎಲ್ಲಾ ಕಡೆ ಆಚರಿಸಲಾಗುತ್ತಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯವಶ್ಯಕವಾಗಿದೆ ಎಂದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಕಲಿಕಾ ಶಿಬಿರಗಳಲ್ಲಿ ಪಾಲ್ಗೊಂಡು ಯೋಗಾಭ್ಯಾಸದ ಮಹತ್ವವನ್ನು ತಿಳಿದುಕೊಳ್ಳಬೇಕೆಂದರು. ಇಕ್ರಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಯು.ಅಬ್ದುಲ್ ರಜಾಕ್ ಮಾತನಾಡಿ, ಮಾನಸಿಕ, ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗಾಭ್ಯಾಸವು ಬಹಳ ಸಹಕಾರಿ ಆಗಲಿದೆ. ಎಲ್ಲರೂ ಸಹ ತಮ್ಮ ಜೀವನದುದ್ದಕ್ಕೂ ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಈ ಸಂದರ್ಭ ನೂರಾರು ವಿದ್ಯಾರ್ಥಿಗಳು ಯೋಗಭ್ಯಾಸದಲ್ಲಿ ಪಾಲ್ಗೊಂಡು ತಮ್ಮ ಪ್ರದರ್ಶನ ತೋರಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳು, ವಿದ್ಯಾರ್ಥಿಗಳು, ಪಾಲ್ಗೊಂಡಿದ್ದರು.
ಬೆಂಗಳೂರು ಜು.1 NEWS DESK : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಸುಳ್ಳು ಮತ್ತು ಊಹಾ ಪತ್ರಿಕೋದ್ಯಮ ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದರು. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು…
ಮಡಿಕೇರಿ ಜು.1 NEWS DESK : ಕೊಡಗು ಪತ್ರಕರ್ತರ ಸಂಘದಿಂದ ಜಿಲ್ಲೆಯ ಹತ್ತು ಮಂದಿ ಪತ್ರಕರ್ತರಿಗೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಹಾಗೂ ಗಣ್ಯರು ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. :: ಪ್ರಶಸ್ತಿ ವಿಜೇತರು :: ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕುಡೆಕಲ್ ಸಂತೋಷ್ ಅವರ ಇರುವುದೊಂದೇ ಕ್ರೀಡಾಂಗಣ ಅದಕ್ಕೂ ಗ್ರಹಣ ಎಂಬ ವರದಿ, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾರ್ಥ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ…






