ಮಡಿಕೇರಿ ಜು.25 NEWS DESK : ವಿರಾಜಪೇಟೆಯ ಪುರಸಭೆ ಕಾಮಗಾರಿಗಳಿಗೆ ನೂತನವಾಗಿ ಖರೀದಿಸಿದ ಬ್ಯಾಕ್ ಹೋಲ್ ಲೋಡರ್ ಯಂತ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪುರಸಭೆ ಕಚೇರಿ ಆವರಣದಲ್ಲಿ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕರು, ತೀವ್ರ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ವಿರಾಜಪೇಟೆ ಪುರಸಭೆಗೆ ಈ ಯಂತ್ರದ ಅವಶ್ಯಕತೆ ಇದ್ದು, ಇದರ ಸೇರ್ಪಡೆಯೊಂದಿಗೆ ಪುರಸಭೆಯ ಕಾಮಗಾರಿಗಳು ಮತ್ತಷ್ಟು ವೇಗ ಪಡೆಯಲು ಸಹಕಾರಿಯಾಗಲಿದೆ. ಇದರ ಸದುಪಯೋಗವನ್ನು ಪುರಸಭೆಯ ಅಧಿಕಾರಿಗಳು ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದ ಮಾನ್ಯ ಶಾಸಕರು, ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕಾರ್ಯನಿರ್ವಹಿಸಬೇಕೆಂದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಉಪಾಧ್ಯಕ್ಷೆ ಫಜಿಯ ತಬಸಂ, ಮುಖ್ಯ ಅಧಿಕಾರಿ ನಾಚಪ್ಪ, ಪುರಸಭೆ ಸದಸ್ಯರುಗಳು, ನಾಮನಿರ್ದೇಶಿತ ಸದಸ್ಯರು, ಸಿಬ್ಬಂದಿ ವರ್ಗದವರು, ಪುರಸಭೆ ಕಾರ್ಮಿಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜು.25 NEWS DESK : 2025 -26ನೇ ಸಾಲಿನ ದಸರ ದಶಮಂಟಪ ಸಮಿತಿಯ ಮೊದಲ ಸಭೆಯು ಕೋಟೆಮಹಾಗಣಪತಿ ದೇವಾಲಯದ ಸಮಿತಿಯ ನೇತೃತ್ವದಲ್ಲಿ ಮಡಿಕೇರಿಯ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನ ದೀಪ ಬೆಳಗುವ ಮೂಲಕ ಗಣ್ಯ ಅಥಿಗಳು ಉದ್ಘಾಟಿಸಿದರು. ಸಭೆಯಲ್ಲಿ ಕರಗೋತ್ಸವ ವ್ಯವಸ್ಥೆಯಲ್ಲಿ ಆಗಬೇಕಾದ ಬದಲಣೆಯ ಕುರಿತು ಚರ್ಚೆ ನಡೆದಿದ್ದು, ಇದರಲ್ಲಿ ರಸ್ತೆಗಳ ಅಭಿವೃದ್ಧಿ, ಲೈಟಿಂಗ್ ವ್ಯವಸ್ಥೆ, ಸಮಯಕ್ಕೆ ಸರಿಯಾಗಿ ಬಹುಮಾನ ವಿತರಣೆ, ಕರಗಳ ಮುಂದೆ ಕುಣಿವುದನ್ನ ತಡೆಯಬೇಕು, ಬಹುಮಾನ ತೀರ್ಪನ್ನು ಗೌಪ್ಯವಾಗಿಟ್ಟು ಪ್ರಕಟಿಸಬೇಕು, ಕರಗ ಕಟ್ಟುವ ಸ್ಥಳದ ಶುದ್ಧತೆಯನ್ನ ಕಾಪಾಡುವ ನಿಟ್ಟಿನಲ್ಲಿ ದಶಮಂಟಪ ಸಮಿತಿ ಎಚ್ಚರ ವಹಿಸಬೇಕು. ಕರಗಗೋತ್ಸವ ಆರಂಭವಾದ ದಿನದಿಂದ ದಸರಾ ಕೊನೆಯ ದಿನದವರೆಗೆ ಲೈಟಿಂಗ್ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು, ಹೆಚ್ಚು ಅನುದಾನತರುವಲ್ಲಿ ಸಮಿತಿ ಪ್ರಮುಖ್ಯತೆ ವಹಿಸಬೇಕು ಸೇರಿದಂತೆ ಹಲವು ಬದಲಾವಣೆಗಳ ಕುರಿತು ಚರ್ಚೆ ನಡೆಸಲಾಯಿತು. ಕೋಟೆ ಮಹಾಗಣಪತಿ ದೇವಾಲಯದ ಗೌರವ ಅಧ್ಯಕ್ಷರಾದ ಬಿ.ಎಂ.ರಾಜೇಶ್ ಮಾತನಾಡಿ, ಈ ಬಾರಿ ದಸರಾವನ್ನ ಬಹಳ ಅಚ್ಚುಕಟ್ಟಾಗಿ ಮಾಡುವ…
ಮಡಿಕೇರಿ ಜು.25 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ 2025 ರ ಅಕ್ಟೋಬರ್, 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ:…
ಮಡಿಕೇರಿ ಜು.25 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ.5 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾμÉ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್, 05 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ,…
ಮಡಿಕೇರಿ ಜು.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ, ಸಮೀಕ್ಷೆಯ ರೂಪುರೇಷೆಗಳನ್ನು ಸುದೀರ್ಘವಾಗಿ ಚರ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಪ್ರಮುಖ ಸೂಚನೆ ನೀಡಿದರು. ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ ಆರ್ ನಾಯ್ಕ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಲ್ಲಿ ಪುಷ್ಯ ಮಳೆ ನಿರಂತರವಾಗಿ ಸುರಿಯುತ್ತಿದೆ. ಅವಧಿಗೂ ಮೊದಲೇ ಅಧಿಕ ಮಳೆಯಾಗಿರುವುದರಿಂದ ಜಿಲ್ಲಾವ್ಯಾಪಿ ಶೀತದ ವಾತಾವರಣವಿದೆ. ಮಡಿಕೇರಿಯಲ್ಲಿ ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮಂಜಿನ ನಗರಿ ಮಡಿಕೇರಿ ದೇಶ, ವಿದೇಶಗಳ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಹಸಿರ ವಾತಾವರಣ ಮತ್ತು ತಂಪಾದ ಹವಾಗುಣ. ಬೇಸಿಗೆಯಲ್ಲಿ ಪ್ರವಾಸಿಗರಿಂದ ತುಂಬಿ ಹೋಗುವ ಮಡಿಕೇರಿ ಮಳೆಗಾಲದಲ್ಲೂ ಮಾನ್ಸೂನ್ ಟೂರಿಸಂ ಹೆಸರಿನಲ್ಲಿ ಆಕರ್ಷಿಸುತ್ತಿತ್ತು. ಆದರೆ ಪ್ರಸ್ತುತ ವರ್ಷ ಅತಿಯಾದ ಗಾಳಿಮಳೆ ಮತ್ತು ಮೈಕೊರೆಯುವ ಚಳಿಯಿಂದ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿದೆ. ಇದರಿಂದ ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತಿರುವವರ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ನಷ್ಟ ಅನುಭವಿಸುತ್ತಿದ್ದಾರೆ. ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟು ಕಳೆದ ಒಂದು ತಿಂಗಳಿನಿಂದ ಚೇತರಿಕೆ ಕಾಣುತ್ತಿಲ್ಲ. ಅತಿಯಾದ ಮಳೆ, ಮಂಜು ಮತ್ತು ಚಳಿಯಿಂದ ರಸ್ತೆಗಳಲ್ಲಿ ಜನರ…
ಮಡಿಕೇರಿ ಜು.24 NEWS DESK : ವಿಧಾನಸಭೆಯ ಉಪ ಸಭಾಧ್ಯಕ್ಷರು ಹಾಗೂ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಮತ್ತು ವಿಧಾನಸಭೆಯ ಅರ್ಜಿ ಸಮಿತಿ ತಂಡದ ಸದಸ್ಯರು ನಗರದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಯನ್ನು ವೀಕ್ಷಿಸಿದರು. ವಿಧಾನಸಭೆಯ ಅರ್ಜಿ ಸಮಿತಿ ತಂಡದ ಸದಸ್ಯರಾದ ಎ.ಮಂಜು, ಡಾ.ಮಂತರ್ ಗೌಡ, ಯು.ಬಿ.ಬಣಕಾರ್, ಸಿ.ಎನ್.ಬಾಲಕೃಷ್ಣ, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ಕೆ.ಸಿ.ಶ್ರೀನಿವಾಸ, ಮಹೇಶ್ ಟೆಂಗಿನಕಾಯಿ, ಎಸ್.ಮುನಿರಾಜು, ಡಾ.ಅವಿನಾಶ್ ಉಮೇಶ್ ಜಾದವ ಇತರರು ಭೇಟಿ ನೀಡಿ ತಡೆಗೋಡೆ ಪರಿಶೀಲಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ ಇತರರು ಇದ್ದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ತಡೆಗೋಡೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಹೆದ್ದಾರಿ ಹಾಗೂ ತಡೆಗೋಡೆಗೆ ಯಾವುದೇ ರೀತಿ ತೊಂದರೆಯಾಗದಂತೆ ಮಳೆಯ ಮತ್ತು ಚರಂಡಿ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಲಾಗಿದೆ ಎಂದು ಡಾ.ಮಂತರ್…
ಕುಶಾಲನಗರ ಜು.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರದ ಕೊಡವ ಸಮಾಜದ ಆವರಣದಲ್ಲಿ 1954ನೇ ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿದ್ದು, 7ನೇ ದಿನ ಕಾವೇರಿ ಮಹಾ ಆರತಿ ಬಳಗ ಹಾಗೂ ನಮಾಮಿ ಕಾವೇರಿ ಸಹಯೋಗದಲ್ಲಿ ಮದ್ಯವರ್ಜನ ಶಿಬಿರಾರ್ಥಿಗಳು ಕಾವೇರಿ ನದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಕಾವೇರಿಗೆ ಆರತಿ ಬೆಳಗಿದರು. ಪಟ್ಟಣದ ಕೊಡವ ಸಮಾಜದಿಂದ ಹೊರಟು ರಥಬೀದಿಯ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಶಿಬಿರಾರ್ಥಿಗಳು ಮಧ್ಯ ವ್ಯಸನದಿಂದ ಆಗುವ ದುಷ್ಪರಿಣಾಮದ ಕುರಿತು ಬಿತ್ತಿಫಲಕಗಳನ್ನು ಹಿಡಿಯುವುದರೊಂದಿಗೆ ಘೋಷಣೆ ಕೂಗಿದರು. ನಂತರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿದರು. ಈ ವೇಳೆ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿಯ ಸಂಚಾಲಕ ಚಂದ್ರಮೋಹನ್ ಮಾತನಾಡಿ, ಯಾವುದೇ ಚಟ ಮನುಷ್ಯನನ್ನು ಅಂಧನನ್ನಾಗಿ ಮಾಡುತ್ತದೆ. ಮನುಷ್ಯ ಜೀವನವನ್ನು ಸಂಪೂರ್ಣವಾಗಿ…
ಮಡಿಕೇರಿ ಜು.24 NEWS DESK : ನಾಪೊಕ್ಲುವಿನಲ್ಲಿ ಸಿಎಂ ಟ್ರಾವೆಲ್ಸ್ ಮತ್ತು ಹಮದಾನಿ ಕಲೆಕ್ಷನ್ಸ್ ಅನ್ನು ಚೀಫ್ ಅಮೀರ್ ಸಯ್ಯಿದ್ ಶರಫುದ್ದೀನ್ ತಂಙಳ್ ಅಲ್ ಹಿಮಮಿ ಎರುಮಾಡ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಶ್ರಫ್ ಅಹ್ಸನೀ ಉಸ್ತಾದ್ ಅನ್ವಾರುಲ್ ಹುದ ವಿರಾಜಪೇಟೆ ಪ್ರಾರ್ಥನೆ ಸಲ್ಲಿಸಿದರು. ನಾಪೋಕ್ಲು ಟೌನ್ ಶಾಫಿ ಮಸ್ಜಿದ್ ಅಧ್ಯಕ್ಷರಾದ ಎಂ.ಎಚ್ ಅಬ್ದುಲ್ ರಹಿಮಾನ್, ಶಾದುಲಿ ಸಕಾಫಿ ಕೊಳಕೇರಿ ಹಾಗೂ ಹಲವಾರು ಹಲವರು ಪಾಲ್ಗೊಂಡಿದ್ದರು. ಪವಿತ್ರ ಉಮ್ರಾ ನಿರ್ವಹಣೆಯಲ್ಲಿ 20 ವರ್ಷಗಳ ಅನುಭವ ಹೊಂದಿರುವ ಸಿ.ಎಂ ಮುಹಮ್ಮದ್ ಮುಸ್ಲಿಯಾರ್ ಮತ್ತು ಮುಹಮ್ಮದ್ ಯಾಸೀನ್ ಸಅದಿ ಅಲ್ ಅಫ್ಲಲೀ ರ ನೇತೃತ್ವದಲ್ಲಿ ಉಮ್ರಾ ಗ್ರೂಪ್ ಎಲ್ಲಾ ತಿಂಗಳೂ ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ಅಧೀನದಲ್ಲಿ ನಡೆಯಿತ್ತಿರುವ ಮರ್ಕಜ್ ಟ್ರ್ಯಾವೆಲ್ ಮಾರ್ಟ್ ಉಮ್ರಾ ಗ್ರೂಪ್ ಇನ್ನು ಮುಂದೆ ನಾಪೋಕ್ಲುವಿನಿಂದಲೇ ಹೊರಡಲಿದೆ.
ಮಡಿಕೇರಿ ಜು.24 NEWS DESK : ಮಡಿಕೇರಿಯಲ್ಲಿರುವ ಯುವ ಭವನವನ್ನು ಕೊಡಗು ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರ ಮಾಡುವಂತೆ ಯುವ ಘಟಕದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ಮನವಿ ಮಾಡಿದರು. ನಗರದ ಸುದರ್ಶನ ಅತಿಥಿಗೃಹದಲ್ಲಿ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾದ ಪಿ.ಪಿ.ಸುಕುಮಾರ್ ಯುವ ಭವನದ ಕುರಿತಾಗಿ ಚರ್ಚೆ ನಡೆಸಿದರು.






