ಲೇಖಕ: admin

ಮಡಿಕೇರಿ, NEWS DESK ಅ.2: ಮಡಿಕೇರಿಯ ಉದ್ಯಮಿ ಹಾಗೂ ಕೊಡಗು ಚೇಂಬರ್ ಆಫ್ ಕಾಮರ್ಸ್‌ನಲ್ಲಿ ಹಲವು ವರ್ಷಗಳ ಕಾಲ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ವೆಂಕಟೇಶ್ ಪೈ ಅವರು ಇಂದು ಮುಂಜಾನೆ 3 ಗಂಟೆಗೆ ನಿಧನರಾದರು. ಇತ್ತೀಚೆಗೆ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಕುಟುಂಬಸ್ಥರು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ವೆಂಕಟೇಶ್ ಪೈ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Read More

ಸುಂಟಿಕೊಪ್ಪ, NEWS DESK ಅ.2: ಕೊಡಗು ಸುರಕ್ಷಾ ಆಂದೋಲನ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಜನ ಜಾಗೃತಿ ಆಂದೋಲನ ರಥಕ್ಕೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಶುಕ್ರವಾರ ಅಪರಾಹ್ನ ಸಿದ್ಧಾಪುರದಿಂದ ಸುಂಟಿಕೊಪ್ಪಕ್ಕೆ ಆಗಮಿಸಿದ ಜನ ಜಾಗೃತಿ ಆಂದೋಲನ ರಥವನ್ನು ಕನ್ನಡ ವೃತ್ತದ ಬಳಿ ಸ್ವಾಗತಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಬಿ. ಭಾರತೀಶ್ ಅವರು, ರಾಷ್ಟ್ರದ ಸುರಕ್ಷತೆ ಕೇವಲ ಸರ್ಕಾರದ ಕೆಲಸವಲ್ಲ, ದೇಶದ ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹೇಳಿದರು. ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆಗೆ ಧಕ್ಕೆ ತರುತ್ತಿರುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಹಾಗೂ ರಾಷ್ಟ್ರೀಯ ಸುರಕ್ಷತೆಯನ್ನು ಕಾಯುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಸೆ.28ರಿಂದ ಅ.9ರವರೆಗೆ ಜನ ಜಾಗೃತಿ ಜನಾಂದೋಲನ ರಥಯಾತ್ರೆ ನಡೆಯುತ್ತಿದೆ. ಅ.9ರಂದು ಗಾಂಧಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಪ್ರತಿಯೊಬ್ಬರೂ ಜನಜಾಗೃತಿ ಜನಾಂದೋಲನದಲ್ಲಿ ಪಾಲ್ಗೊಂಡು ದೇಶ ರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ…

Read More

ಮಡಿಕೇರಿ, NEWS DESK ಅ.2: ಪೊನ್ನಂಪೇಟೆ ಕೊಡವ ಸಮಾಜದ 39ನೇ ವಾರ್ಷಿಕ ಮಹಾಸಭೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಎಂ. ಮೋಟಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಮಹಾಸಭೆಯಲ್ಲಿ ಪಾಲ್ಗೊಂಡಿದ್ದ ಸುಮಾರು 600 ಸದಸ್ಯರು ಕೊಡವ ಸಮಾಜದ ಅಭಿವೃದ್ಧಿ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಸಲಹೆಗಳನ್ನು ನೀಡುವುದರೊಂದಿಗೆ ಅಗತ್ಯ ಸಹಕಾರದ ಭರವಸೆ ನೀಡಿದರು. ಕೊಡವ ಸಮಾಜದ ಅಂಗ ಸಂಸ್ಥೆಯಾದ ಅಪ್ಪಚ್ಚ ಕವಿ ವಿದ್ಯಾಲಯದಲ್ಲಿ 7ರಿಂದ 10ನೇ ತರಗತಿಯವರೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಅಲ್ಲದೆ, ಕೊಡವ ಸಮಾಜದ ಸದಸ್ಯರ ಮಕ್ಕಳಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.99.2 ಅಂಕ ಗಳಿಸಿದ ನೆಲ್ಲಿಮಾಡ ಟಿ. ಸಿದ್ಧಾಂತ್ ಕಾವೇರಪ್ಪ, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.99.33 ಅಂಕ ಗಳಿಸಿದ ಕಾಟಿಮಾಡ ಡಿ. ಭಾಷಿತ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಜ್ಜಿಕುಟ್ಟೀರ ಎಂ. ಜಶ್ ಕಾವೇರಿಯಪ್ಪ ಅವರಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.…

Read More

ಮಡಿಕೇರಿ NEWS DESK ಅ.2 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ಅ.3 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬ್ಯಾಡಗೊಟ್ಟ ಗ್ರಾಮದ ಬೂತ್ ಸಂಖ್ಯೆ 21ರಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಸೋಮವಾರಪೇಟೆಯ ಬಿಜೆಪಿ ಕಚೇರಿಯಲ್ಲಿ ಮುದ್ರಿಸಲಾಗಿದೆ ಎನ್ನಲಾದ 63 ಮತದಾರರ ನಮೂನೆ-7ಗಳನ್ನು ಬಿಎಲ್‌ಓಗೆ ಸಲ್ಲಿಸಿರುವ ವಿಚಾರವು ಬಹಿರಂಗಗೊ0ಡಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬ0ಧಪಟ್ಟ ಬಿಎಲ್‌ಎಗಳ ಹಾಗೂ ಇತರ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಅಲ್ಲದೆ, ಪ್ರಕರಣದ ಸಂಪೂರ್ಣ ತನಿಖೆಯನ್ನು ರಾಜ್ಯಮಟ್ಟದ ವಿಶೇಷ ತನಿಖಾ ತಂಡದ…

Read More

ಮಡಿಕೇರಿ, NEWS DESK ಅ.1: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರು ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ಸಂದರ್ಭದಲ್ಲಿ ಸರಳವಾಗಿ ಸನ್ಮಾನಿಸಲಾಯಿತು. ಕಡ್ಲೇರ ತುಳಸಿ ಮೋಹನ್ ಅವರಿಗೆ ‘ಸ್ಟಾರ್ ಆಫ್ ಕರ್ನಾಟಕ’ ರಾಜ್ಯ ಪ್ರಶಸ್ತಿ, ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿ ಹಾಗೂ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ವಿವಿಧ ಗೌರವಗಳು ಲಭಿಸಿವೆ. ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಇಂಡಿಯನ್ ಸೋಶಿಯಲ್ ವರ್ಕರ್ಸ್ ಅಸೋಸಿಯೇಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಸಹಭಾಗಿತ್ವದಲ್ಲಿ ಕುಂದಾಪುರದಲ್ಲಿ ನಡೆದ ‘ಸಂಸ್ಕೃತ ಉತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ’ದಲ್ಲಿ ಪ್ರದಾನ ಮಾಡಲಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿಯನ್ನು ಜನಸೇವಾ ಫೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ…

Read More

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ ನಡೆದ ಅಂಡರ್-19 ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವು ಚಿನ್ನದ ಪದಕ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್‌ಶಿಪ್‌ ತನ್ನದಾಗಿಸಿಕೊಂಡಿತು. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಿ.ಕೆ. ತೇಜಸ್ ತಂಡದ ಗೆಲುವಿನಲ್ಲಿ ಭಾಗಿಯಾಗಿದ್ದಾರೆ. ವಿರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮದ ದಿವಂಗತ ಪಿ.ಸಿ. ಕಿನಿಶ್ ಹಾಗೂ ವಿಂಧ್ಯಾ ದಂಪತಿಯ ಪುತ್ರರಾದ ತೇಜಸ್, ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ವ್ಯಾಸಂಗ ಮಾಡುತ್ತಿದ್ದಾರೆ. ತೇಜಸ್ ಅವರ ಸಾಧನೆಗೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ. ವೀಣಾ ಅವರು ಆಡಳಿತ ಮಂಡಳಿ ಹಾಗೂ ಕಾಲೇಜಿನ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಎಲ್.ಆರ್. ರಾಘವೇಂದ್ರ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ…

Read More

ಮಡಿಕೇರಿ ಅ.1 NEWS DESK : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ-2026 ಪಾಕ್ಷಿಕ ಕಾರ್ಯಕ್ರಮಕ್ಕೆ ವಿರಾಜಪೇಟೆ ತಾ.ಪಂ.ಇ.ಒ.ರಾಜೇಶ ಅವರು ಚಾಲನೆ ನೀಡಿದರು. ಒಂದು ದಿನ ಒಂದು ಗಂಟೆ ಎಲ್ಲರೂ ಒಟ್ಟಿಗೆ ಶ್ರಮದಾನ “(ಏಕ್ ದೀನ್ ಏಕ್ ಗಂಟ ಏಕ್ ಸಾತ್) ಕಾರ್ಯಕ್ರಮವು ಪೊನ್ನಂಪೇಟೆ ಮುಖ್ಯ ರಸ್ತೆ ಬದಿಯಲ್ಲಿ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಶ್ರಮದಾನ ಕೈಗೊಂಡು ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸ್ವಚ್ಚತಾ ಕಾರ್ಯದಲ್ಲಿ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಎಮ್.ಡಿ.ಶ್ರೀನಿವಾಸ್, ಸಹಾಯಕ ಲೆಕ್ಕಾಧಿಕಾರಿಗಳಾದ ಗಣೇಶ್ ಕುಮಾರ್, ಎಸ್‍ಬಿಎಂ ಸಂಯೋಜಕರಾದ ಸೂರಜ್ ಹಾಗೂ ತಾ.ಪಂ.ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Read More

ಮಡಿಕೇರಿ ಅ.1 NEWS DESK :  ಕೊಡಗು ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ 2026ರ ಸೆಪ್ಟೆಂಬರ್ ಮಾಹೆಯಲ್ಲಿ ಮಡಿಕೇರಿ, ವಿರಾಜಪೇಟೆ, ಗೋಣಿಕೊಪ್ಪ, ಕುಶಾಲನಗರದ ವ್ಯಾಪ್ತಿಯಲ್ಲಿ ಬೇಕರಿ, ಹೋಟೆಲ್‍ಗಳಿಗೆ ಸಾರ್ವಜನಿಕ ದೂರು ಮತ್ತು ಅನಿರೀಕ್ಷಿತ ತಪಾಸಣೆ ನಡೆಸಲಾಗಿದೆ. ಕುಶಾಲನಗರದಲ್ಲಿ 6 ಹೋಟೆಲ್‍ಗಳಿಗೆ ನೋಟೀಸ್ ನೀಡಲಾಗಿದೆ. ಹಾಗೆಯೇ 12 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಗೋಣಿಕೊಪ್ಪ ಮತ್ತು ವಿರಾಜಪೇಟೆಯಲ್ಲಿ 7 ಬೇಕರಿ ಮತ್ತು ಹೋಟೆಲ್‍ಗಳಿಗೆ ಭೇಟಿ ನೀಡಿ ನೋಟೀಸ್ ನೀಡಲಾಗಿದೆ. 20 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದರಲ್ಲಿ ಕೇರಳ ಮೂಲದ 6 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಮಡಿಕೇರಿ ವ್ಯಾಪ್ತಿಯಲ್ಲಿ ಸಾರ್ವಜನಿಕ ದೂರು ಆಧಾರದ ಮೇಲೆ 3 ಹೋಟೆಲ್‍ಗಳಿಗೆ ಭೇಟಿ ನೀಡಿ ನೋಟೀಸ್ ನೀಡಲಾಗಿದೆ. ಹಾಗೆಯೇ ಸ್ವಚ್ಛತೆಯನ್ನು ಪಾಲಿಸುವಂತೆ ಸೂಚಿಸಲಾಗಿದೆ. ಈ ಎಲ್ಲಾ ಹೋಟೆಲ್ ಮತ್ತು ಬೇಕರಿಗಳಿಗೆ ಸ್ವಚ್ಛತೆಯನ್ನು ಪಾಲಿಸುವಂತೆ, ಶುದ್ದ ನೀರು ಪೂರೈಸುವಂತೆ, ಆಹಾರ ತಯಾರು ಮಾಡುವವರ ವೈದ್ಯಕೀಯ ಪರೀಕ್ಷೆ ಮಾಡಿಸುವಂತೆ ಹಾಗೂ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಬಳಸದಂತೆ, ಆಹಾರ ಪದಾರ್ಥಗಳ…

Read More

ಮಡಿಕೇರಿ ಅ.1 NEWS DESK : ಇಂದಿನ ಮಕ್ಕಳಿಗೆ ಶಿಕ್ಷಣ ಹಾಗೂ ವಿವಿಧ ಕೌಶಲ್ಯಗಳ ತರಬೇತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಜೊತೆಗೆ ಮಾನವೀಯ ಮೌಲ್ಯಗಳು, ಕುಟುಂಬ ಸಂಬಂಧಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕøತಿಯನ್ನು ಕಲಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೀರ್ಘಾಯುಷ್ಯದ ಯುಗ: ಸುದೀರ್ಘ ಜೀವನಕ್ಕಾಗಿ ಜೀವನ ಕ್ರಮಗಳ ಮರು ಚಿಂತನೆ ಎಂಬ ಘೋಷವಾಕ್ಯದೊಂದಿಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಮಕ್ಕಳ ಜತೆ ಪೋಷಕರು ಬೆರೆಯಬೇಕು. ಯಾವುದೇ ಸಂದರ್ಭದಲ್ಲಿ ‘ನನ್ನ ತಂದೆ-ತಾಯಿ ನನಗೆ…

Read More

ಮಡಿಕೇರಿ, NEWS DESK ಅ.1: ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಮಡಿಕೇರಿ ವುಡ್ಸ್‌ನ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ ಸೋಮಯ್ಯ ಅವರು, ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯಲ್ಲೂ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ವೇಣುಗೋಪಾಲ್ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗಳಿಗೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆ ಹೆಚ್ಚಾದಂತೆ ಇಂತಹ ಕ್ರೀಡಾಕೂಟಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸುವುದಾಗಿ ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ…

Read More