ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ. ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಎರಡು ದಿನಗಳಿಂದ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮೈಕೊರೆಯುವ ಚಳಿ, ಗಾಳಿ ಸಹಿತ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿಯಿಂದ ಉತ್ತಮ ಮಳೆೆಯಾಗುತ್ತಿದ್ದು, ದಟ್ಟ ಮಂಜು ಕವಿದಿರುವ ಪರಿಣಾಮ ಹೊಂಡ ಗುಂಡಿಗಳ ರಸ್ತೆಯಲ್ಲಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದೊಂದು ದಿನದ ಅವಧಿಯಲ್ಲಿ 78 ಮಿ.ಮೀ. ಮಳೆ ದಾಖಲಾಗಿದೆ. ಕ್ಷೇತ್ರ ವ್ಯಾಪ್ತಿ ಮತ್ತು ನದಿ ಪಾತ್ರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ. ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ದೊಡ್ಡ ಗಾತ್ರದ ಬಿದಿರು ಬುಡ ಸಹಿತ ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯವಸ್ತಗೊಂಡಿತ್ತು. ಮoಗಳವಾರ ರಾತ್ರಿ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಮನೆಯ ಗೋಡೆ…
ಲೇಖಕ: admin
ಮಡಿಕೇರಿ NEWS DESK ಜು.29 : ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಕಾಫಿ ಎಸ್ಟೇಟ್‌ನಲ್ಲಿ ಇಂದು ನಡೆದಿದೆ. ಕಾಫಿ ತೋಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ ಮರದಡಿಯಲ್ಲಿ ಸಿಲುಕಿದ ಮಹಿಳಾ ಕಾರ್ಮಿಕರಾದ ಪರ್ಬಿನ ಖಾತುನ್ (29) ಹಾಗೂ ಅಲಿಮಾನ್ (48) ಮೃತಪಟ್ಟಿದ್ದಾರೆ. ಘಟನೆಯಿಂದ ಗಾಯಗೊಂಡಿರುವ ಇಬ್ಬರು ಮಹಿಳಾ ಕಾರ್ಮಿಕರಾದ ಅಲಿಷಾ ಖಾತುನ್ (35) ಹಾಗೂ ಮಂಗಳ ಸಬ್ಬರ್ (28) ಅವರಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂರ್ತಿ, ಮಾದಾಪುರ ಉಪಠಾಣೆ, ಸೋಮವಾರಪೇಟೆ ಪಟ್ಟಣ ಠಾಣಾ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಜು.29 : ಸಮಾಜ ಸೇವಕ ಹಾಗೂ ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ ಅವರಿಗೆ ಕೊಡಗು ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕೆಂದು ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ (ಎಐಟಿಯುಸಿ) ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಅನೇಕ ವರ್ಷಗಳಿಂದ ಕಾರ್ಮಿಕ ವರ್ಗದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿರುವ ನಾಪಂಡ ಮುತ್ತಪ್ಪ ಅವರು ಜಿಲ್ಲಾಧ್ಯಕ್ಷರಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟರ ಏಳಿಗೆಯನ್ನು ಸದಾ ಬಯಸುವ, ಸಾಮಾಜಿಕ ಕಳಕಳಿಯೊಂದಿಗೆ ನೊಂದವರಿಗಾಗಿ ಸದಾ ಮಿಡಿಯುವ ಮತ್ತು ಹೋರಾಟದ ಮನೋಭಾವವನ್ನು ಹೊಂದಿರುವ ಮುತ್ತಪ್ಪ ಅವರು ಸರ್ವ ಜನಾಂಗದ ಪ್ರೀತಿಯ ನಾಯಕರಾಗಿದ್ದಾರೆ. ಜಾತಿ ಮತ ಭೇದವಿಲ್ಲದೆ ಎಲ್ಲರ ಕಷ್ಟಗಳಿಗೂ ಸ್ಪಂದಿಸುವ ಜನಸ್ನೇಹಿಯಾಗಿರುವ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದರೆ ಪಕ್ಷ ಸಂಘಟನೆಗೆ ಮಾತ್ರವಲ್ಲದೆ ಜನಸೇವೆಗೆ ಮತ್ತಷ್ಟು ಶಕ್ತಿ ತುಂಬಿದoತ್ತಾಗುತ್ತದೆ.…
ಮಡಿಕೇರಿ NEWS DESK ಜು.29 : ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆದರೆ ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೂರು ವಾರಗಳ ಹಿಂದೆ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯ ಇಳಿಜಾರು ಭಾಗ ಕುಸಿತಗೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅಂದಿನಿ0ದ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಸ್ತೆ ದುರಸ್ತಿ ಕಾರ್ಯ ವಿಳಂಬದಿ0ದಾಗಿ ನಗರದಲ್ಲಿ ವಾಹನದಟ್ಟಣೆ ಎದುರಾಗಿ ಸಂಚಾರ ವ್ಯವಸ್ಥೆ ಅಸ್ತವ್ಯವಸ್ತಗೊಂಡಿತ್ತು. ಇದು ವಾಹನ ಚಾಲಕರ, ವರ್ತಕರ ಹಾಗೂ ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಕಾಮಗಾರಿಯನ್ನು ಚುರುಕುಗೊಳಿಸಿತು. ಇನ್ನು ಒಂದು ವಾರದ ಕಾಮಗಾರಿ ಬಾಕಿ ಉಳಿದಿದೆ. ಈ ನಡುವೆ ವಾಹನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದಿನಿ0ದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಸ್ ಸೇರಿದಂತೆ ಲಘು ವಾಹನಗಳು ಹಳೇ ಖಾಸಗಿ ಬಸ್ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮಾರ್ಗವಾಗಿ…
ವಿರಾಜಪೇಟೆ NEWS DESK ಜು.29 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ಸುಸಜ್ಜಿತ ಕಟ್ಟಡ, ನುರಿತ ಉಪನ್ಯಾಸಕರು, ಉತ್ತಮ ಗ್ರಂಥಾಲಯ, ಇಂಡಸ್ಟ್ರಿಯಲ್ ವಿಸಿಟ್ ಕಾರ್ಯಕ್ರಮ, ಇಂಟರ್ನ್ಶಿಪ್ ಹಾಗೂ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಳ್ಳುವಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಮಾತ್ರವಲ್ಲದೆ ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವೃತ್ತಿ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕಚೇರಿಯ ವೇಳೆಯಲ್ಲಿ ಕಾಲೇಜಿಗೆ ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 100% result internship Assistance CONTACT : 94480 37928,…
ಮಡಿಕೇರಿ NEWS DESK ಜು.28 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯoಡ ವೀಣಾ ಅಚ್ಚಯ್ಯ, ಜಿಲ್ಲಾ ಸಮಿತಿಯ ನಾಯಕರುಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ ಫ್ಯಾನ್ಸಿ ಪಾರ್ವತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಿ.ಆರ್.ಪುಷ್ಪಲತಾ ಅವರು ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷೆ ಜಿ.ಆರ್.ಪುಷ್ಪಲತಾ, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷ ಶೌಕತ್ ಆಲಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮತ್ತಿತರ ಪ್ರಮುಖರು ಫ್ಯಾನ್ಸಿ ಪಾರ್ವತಿ ಅವರಿಗೆ ಆದೇಶ ಪತ್ರ ನೀಡಿದರು. ಮಹಿಳಾ ಕಾಂಗ್ರೆಸ್ಸಿನ ವಿವಿಧ ಹುದ್ದೆಗಳಲ್ಲಿ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿರುವ ಫ್ಯಾನ್ಸಿ ಪಾರ್ವತಿ ಅವರು…
ಮಡಿಕೇರಿ NEWS DESK ಜು.27 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025 ನೇ ವರ್ಷದಲ್ಲಿ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ, ನಗದು ಪುರಸ್ಕಾರ ಪ್ರಶಸ್ತಿ ಯೋಜನೆ, ಹಾಗೆಯೇ 2026-27ನೇ ಸಾಲಿಗೆ ಗುರಿ ಒಲಂಪಿಕ್ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಮುಂದುವರೆದು 2025-206ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಅರ್ಹ ಕ್ರೀಡಾ ಪಟುಗಳು ಅರ್ಜಿಯನ್ನು ಅಧಿಕೃತ ಜಾಲತಾಣ https://sevasindu.karnataka.gov.in ಮೂಲಕ ಕಡ್ಡಾಯವಾಗಿ ಆನ್‍ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸಹಾಯವಾಣಿ 155265 ನ್ನು ಸಂಪರ್ಕಿಸಬಹುದು ಎಂದು…
ವಿರಾಜಪೇಟೆ ಜು.27 NEWS DESK : ಮೂಲತಃ ವಿ.ಬಾಡಗ ಗ್ರಾಮದ ನಿವಾಸಿಯೂ ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಳವಂಡ ಆಶಿಕ ಪೃಥ್ವಿ ಹಾಗೂ ಅವರ ಸ್ನೇಹಿತರು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಈ ಸಾಮಾಜಿಕ ಸೇವೆಯನ್ನು ಕೈಗೊಂಡ ಮಳವಂಡ ಆಶಿಕ ಪೃಥ್ವಿ ಮತ್ತು ಅವರ ಮಿತ್ರವೃಂದಕ್ಕೆ ಶಾಲೆಯ ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಶ್ಲಾಘನೆ ವ್ಯಕ್ತಪಡಿಸಿದರು.
ವಿರಾಜಪೇಟೆ ಜು.27 NEWS DESK : ಕಾರ್ಗಿಲ್ ಯುದ್ದದಲ್ಲಿ ನಮ್ಮ ಅನೇಕ ವೀರ ಯೋಧರು ಹುತಾತ್ಮರಾಗಿದ್ದು ದೇಶಕ್ಕಾಗಿ ಅವರ ಬಲಿದಾನ ಅತ್ಯಂತ ಹಿರಿದು. ಆದರಿಂದ ಆ ದಿನದ ಯುದ್ದದಲ್ಲಿ ದಿಟ್ಟ ಪರಾಕ್ರಮ ತೋರಿದ ವೀರ ಯೋದರನ್ನು ಕಾರ್ಗಿಲ್ ವಿಜಯ ದಿವಸ್‍ದಂದು ನೆನಪಿಸಿಕೊಂಡು ಅವರಿಗೆ ನಮನ ಸಲ್ಲಿಸುವುದು ಎಲ್ಲಾರ ಕರ್ತವ್ಯವಾಗಿದೆ ಎಂದು ವಿರಾಜಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ವಿರಾಜಪೇಟೆ ಮಿನಿ ವಿಧಾನ ಸೌಧದ ಬಳಿ ಇರುವ ಯೋಧರ ಸ್ಮಾರಕದಲ್ಲಿ ಹುತಾತ್ಮ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಗಗನ ಮುಟ್ಟುವಂತಿರುವ ಬೆಟ್ಟಗಳ ಸಾಲು, ಕೊರೆಯುವ ಚಳಿ ಇದರ ನಡುವೆ ನಮ್ಮ ಯೋಧರು ದೇಶ ಕಾಯುವ ಕೆಲಸವನ್ನು ಭಾರತಾಂಭೆಯ ಸೇವೆ ಎಂದು ಭಾವಿಸಿ ದೇಶಕ್ಕಾಗಿ ಪ್ರಾಣವನ್ನು ಮುಡಿಪಿಡುತ್ತಾರೆ. ಅದೇ ರೀತಿ ಪಾಕ್ ದೇಶದ ಕುತಂತ್ರವನ್ನು ಹತ್ತಿಕ್ಕಲು ನಮ್ಮ ಸೇನೆಯ ಯೋಧರು ಕಾರ್ಗಿಲ್ ಹೋರಾಟದಲ್ಲಿ ಕೆಚ್ಚೆದೆಯಿಂದ…
ವಿರಾಜಪೇಟೆ ಜು.27 NEWS DESK : ಜೆನ್ ಶಿಟೋ ರಿಯೋ ಕರಾಟೆ ಅಕಾಡೆಮಿಯ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ 29ನೇ ಅಖಿಲ ಭಾರತ ಶಿಟೋ ರಿಯೋ ಕರಾಟೆ-ಡೋ ಚಾಂಪಿಯನ್‍ಶಿಪ್-2026 ರಲ್ಲಿ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಪೆರುಂಬಾಡಿಯ ಜೆನ್ ಸಿಟೋರಿಯೋ ಸ್ಕೂಲ್ ಆಫ್ ಇಂಡಿಯಾ ಕರಾಟೆ ಶಾಲೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಸ್ಥಳೀಯ ಸಂಸ್ಥೆಯ ಒಟ್ಟು 22 ಕರಾಟೆ ಪಟುಗಳು ಕುಮಿತೆ ಹಾಗೂ ಕಟಾ ವಿಭಾಗಗಳಲ್ಲಿ ಅಮೋಘ ಪ್ರದರ್ಶನ ನೀಡಿ ವಿವಿಧ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಚಿನ್ನ ಹಾಗೂ ಬೆಳ್ಳಿ ಪದಕಗಳ ಗರಿ: ಪಂದ್ಯಾವಳಿಯ ಕುಮಿತೆ ಹಾಗೂ ಕಟಾ ಎರಡೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈತನ್ಯ ಪಿ.ವಿ. ಅವರು ಎರಡೂ ವಿಭಾಗಗಳಲ್ಲೂ ಚಿನ್ನದ ಪದಕಗಳನ್ನು ಪಡೆದು ಅತ್ಯುತ್ತಮ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದೇ…






