ಲೇಖಕ: admin

ಮಡಿಕೇರಿ ಏ.30 NEWS DESK : ಸುಂಟಿಕೊಪ್ಪದ ಸಯ್ಯಿದ್ ಮುಹಮ್ಮದಲಿ ಶಿಹಾಬ್ ತಂಙಳ್ ಅರಬಿಕ್ ಕಾಲೇಜ್ ನ ದಶಮಾನೋತ್ಸವ ಹಾಗೂ 2ನೇ ಪದವಿ ಪ್ರದಾನ ಸಮಾರಂಭ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಕೆ.ಎಂ.ಇಬ್ರಾಹಿಂ ಮಾಸ್ಟರ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಪಾಣಕ್ಕಾಡಿನ ನೌಫಲ್ ಅಲಿ ಶಿಹಾಬ್ ತಂಙಳ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಯ್ಯಿದ್ ಮುಹಮ್ಮದಲಿ ಶಿಹಾಬ್ ತಂಙಳ್ ಅರಬಿಕ್ ಕಾಲೇಜ್ ವಿದ್ಯಾರ್ಥಿಗಳಿಗೆ ಧಾರ್ಮಿಕ ಲೌಕಿಕ ಶಿಕ್ಷಣವನ್ನು ನೀಡುತ್ತಾ ಬರುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳು ಕನ್ನಡ, ಇಂಗ್ಲಿಷ್, ಉರ್ದು, ಅರಬಿಕ್ ಮತ್ತು ಮಲಯಾಳಂ ಪಂಚ ಭಾಷೆ ಪರಿಜ್ಞಾನವನ್ನು ಹೊಂದುತ್ತಿರುವುದು ಶ್ಲಾಘನೀಯ ಎಂದರು. ಉಲಮಾಗಳು ಜನಸೇವಕರಾಗಿರುವುದರಿಂದ ಎಲ್ಲಾ ಭಾಷೆಗಳಲ್ಲಿ ದೇಶವಿದೇಶಗಳಲ್ಲಿ ಪ್ರವಾದಿ (ಸ್ವ) ರ ಶ್ರೇಷ್ಠ ಸಂದೇಶಗಳನ್ನು ಸಾರಲು ಮತ್ತು ಜನಸೇವೆ ಮಾಡಲು ಅನುಕೂಲವಾಗುತ್ತದೆ. ಈ ಸಂಸ್ಥೆಯು ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಣ, ಆಹಾರ, ವಸತಿ ಇನ್ನಿತರ ಸೌಲಭ್ಯಗಳನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದೆ. ಇದರಿಂದ ಬಡ ಮತ್ತು…

Read More

ಮಡಿಕೇರಿ ಏ.30 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ) ಸಂಘದ ವತಿಯಿಂದ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕ ಸಹಯೋಗದೊಂದಿಗೆ ಸಮಾಜ ಬಾಂಧವರ ಸಮ್ಮಿಲನ ಮತ್ತು ಕ್ರೀಡೋತ್ಸವ ಸಂಭ್ರಮದಿಂದ ನಡೆಯಿತು. ಮುಂಜಾನೆ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ನಂತರ ಕ್ರೀಡಾ ಜ್ಯೋತಿಯನ್ನು ಬೆಂಗಳೂರು ಕುಲಾಲ ಸಮಾಜದ ಮಾಜಿ ಉಪಾಧ್ಯಕ್ಷ ಹಾಗೂ  ನಿವೃತ ಯೋಧ ಕೆ.ಎ0.ಚಿನ್ನಪ್ಪ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್  ಉದ್ಘಾಟಿಸಿದರು. ನಂತರ ಮಾತನಾಡಿದ ಮೂಲ್ಯರ ಯಾನೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರ ಕಷ್ಟಕಾರ್ಪಣ್ಯಕ್ಕೆ ನಾವೆಲ್ಲರೂ ಕೈಜೋಡಿಸುತ್ತೇವೆ. ಮಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಪ್ರಾರಂಭವಾಗುವ ಮಹಿಳಾ ಹಾಸ್ಟೆಲ್ ನಲ್ಲಿ ಕೊಡಗಿನ ಮಹಿಳಾ ಕುಲಬಾಂಧವರಿಗೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.  ವೇದಿಕೆಯಲ್ಲಿ  ಮಂಗಳೂರು ಶ್ರೀದೇವಿ ದೇವಸ್ಥಾನ ಅಧ್ಯಕ್ಷ ಸದಾಶಿವ ಕುಲಾಲ್ , ದಕ್ಷಿಣ ಕನ್ನಡ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳಪತಿ…

Read More

ಮಡಿಕೇರಿ ಏ.30 NEWS DESK : ಮಡಿಕೇರಿಯ ವಾಂಡರರ್ಸ್ ಸ್ಟೋರ್ಟ್ಸ್ ಕ್ಲಬ್ ವತಿಯಿಂದ ದಿ. ಸಿ.ವಿ. ಶಂಕರ್ ಸ್ವಾಮಿ ಸ್ಮರಣಾರ್ಥ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 31ನೇ ವರ್ಷದ ಉಚಿತ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿರುವ ಶಿಬಿರಾರ್ಥಿಗಳಿಗೆ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿತ್ತು.  ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯಿ) ಟರ್ಫ್ ಮೈದಾನದಲ್ಲಿ ಪಂದ್ಯಾವಳಿ ನಡೆಯಿತು. ಶಿಬಿರಾರ್ಥಿಗಳ ಪೈಕಿ ಬಾಲಕರ ವಿಭಾಗದಲ್ಲಿ ಸೀನಿಯರ್, ಜೂನಿಯರ್, ಸಬ್ ಜೂನಿಯರ್ ಹಾಗೂ ಬಾಲಕಿಯರ ವಿಭಾಗದಲ್ಲಿ ಜೂನಿಯರ್ ಮತ್ತು ಸೀನಿಯರ್ ವಿಭಾಗಗಳಾನ್ನಾಗಿ ಮಾಡಿ ಆಡಿಸಲಾಯಿತು. ವಿಜೇತ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳಿಗೆ ಮೇ 1 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು. ಇದರೊಂದಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳನ್ನು ಕೂಡ ನಡೆಸಲಾಗಿದ್ದು, ವಿಜೇತರಿಗೆ ಬಹುಮಾನಗಳೊಂದಿಗೆ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ಕೂಡ ನೀಡಲಾಗುವುದು. ಇಂದಿನ ಪಂದ್ಯಾವಳಿ ಸಂದರ್ಭ ಶಿಬಿರದ ಸಂಚಾಲಕ ಬಾಬು ಸೋಮಯ್ಯ, ತರಬೇತುದಾರರುಗಳಾದ ಬೊಪ್ಪಂಡ ಶ್ಯಾಂ ಪೂಣಚ್ಚ, ಕುಡೆಕಲ್ ಸಂತೋಷ್, ಗಣೇಶ್, ಕೇನೇರ ಕಾವ್ಯ, ನಾಟೋಳಂಡ ಸುರೇಶ್, ಬಿದ್ದಂಡ ನರೇನ್,…

Read More

ಮಡಿಕೇರಿ ಏ.30 NEWS DESK : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ11 ರಿಂದ ಆರಂಭವಾಗಲಿರುವ ಅತಿರುದ್ರ ಜಪಯಜ್ಞ ಕೈಂಕರ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 21ರಂದು ಜಪಯಜ್ಞ ಸಾಂಗತಗೊಳ್ಳಲಿರುವ ಕಣಿವೆಯ ಶ್ರೀ ರಾಮಲಿಂಗೇಶ್ವರ ಸನ್ನಿಧಿಗೆ ಕೊಡಗು ಜಪಯಜ್ಞ ಸಮಿತಿಯ ನಿಯೋಗದೊಂದಿಗೆ ತೆರಳಿದ ಅವರು ಶ್ರೀ ಚಂಡಿಕಾ ಹೋಮದ ಸಿದ್ಧತೆಗಳ ಕುರಿತು ಪರಿಶೀಲಿಸಿದರು. ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಮೇ 21 ರಂದು ಕಣಿವೆಗೆ ಆಗಮಿಸುವರು. ಅಂದು ಋತ್ವಿಜರಿಂದ ಎರಡು ಆವರ್ತ ಶ್ರೀ ರುದ್ರ ಜಪ ನಡೆಯುವುದು ಎಂದರು. ಮೇ 11 ರಂದು ಬೆಳಿಗ್ಗೆ 6.30 ಗಂಟೆಗೆ ಜಪಯಜ್ಞ ಆರಂಭಗೊಳ್ಳಲಿದ್ದು, ಅಂದು ಅರುಣೋದಯದ ಸಮಯಕ್ಕೆ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಪ್ರಶಾಂತ್ ಆಚಾರ್ಯರು ಇದರ ನೇತೃತ್ವವನ್ನು ವಹಿಸಲಿದ್ದಾರೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ನಡೆಯದ ಇಂಥಹ ಜಪಯಜ್ಞದ…

Read More

ಸುಂಟಿಕೊಪ್ಪ ಏ.30 NEWS DESK : ಐಗೂರು ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಮುತ್ತಪ್ಪ ದೇವರ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ ಮಲಯರಕಲ್ ಮತ್ತು ಮುತ್ತಪ್ಪನ್ ವೆಳ್ಳಾಟಂ, ಗುಳಿಗಪ್ಪನ ದೇವಾಲಯದಿಂದ ಚಂಡೆ ಮೇಳದೊಂದಿಗೆ ದೈವ ನರ್ತನ ನಡೆಯಿತು. ನಂತರ ತಿರುವಪ್ಪನ್ ವೆಳ್ಳಾಟಂ ಮತ್ತು ಕಳಸ ಆಗಮನದ ನಂತರ ರಾತ್ರಿ ಅನ್ನದಾನ ನೆರವೇರಿತು. ಮರುದಿನ ಮುಂಜಾನೆಯಿಂದಲೇ ಗುಳಿಗನ ಕೋಲ, ಮುತ್ತಪ್ಪ ದೇವರ ಕೋಲ, ಕುಟ್ಟಿಚಾತನ್ ಕೋಲ, ಪೋದಿ ಕೋಲ, ಗುರು ಶ್ರೀ ತರ್ಪಣ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸಮಿತಿ ಅಧ್ಯಕ್ಷರು ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಏ.30 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಫಾಕ್ ಪ್ರಚೋದಿತ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಖಂಡಿಸಿ, ಇದಕ್ಕೆ ದಿಟ್ಟ ಉತ್ತರವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮೇ1 ರಂದು ಸಂಜೆ ವಿವಿಧ ಸಂಘಟನೆಗಳಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್, ನ್ಯಾಷನಲ್ ಮೆಡಿಕೋಸ್ ಅಸೊಸಿಯೇಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ನೀಮಾ ಸೇರಿದಂತೆ ವಿವಿಧ ಸಂಘಟನೆಗಳು ಒಗ್ಗೂಡಿ ಮೆರವಣಿಗೆಯನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು. ಜಾತಿ, ಮತ, ಧರ್ಮಗಳನ್ನು ಮೀರಿ ನಾವೆಲ್ಲರೂ ಭಾರತೀಯರು ಎನ್ನುವ ಒಂದೇ ಘೋಷವಾಕ್ಯದೊಂದಿಗೆ ಸಂಜೆ 6 ಗಂಟೆಗೆ ನಗರದ ಇಂದಿರಾಗಾಂಧಿ ವೃತ್ತದಿಂದ ಕ್ಯಾಂಡಲ್ ಲೈಟ್ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆ ನಗರದ ಮುಖ್ಯ ಬೀದಿಗಳಿಗಾಗಿ ಹಾದು, ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಈ ಸಂದರ್ಭ ಮಾನವ ಸರಪಳಿಯನ್ನು ರಚಿಸಿ ಭಯೋತ್ಪಾದನೆಯ ವಿರುದ್ಧ ನಾವೆಲ್ಲರು ಸಂಘಟಿತರಾಗಿದ್ದೇವೆ ಎನ್ನುವುದನ್ನು ಸಾರಲಾಗುತ್ತದೆ ಎಂದು ಹೇಳಿದರು. ಪಾಕಿಸ್ತಾನಿ ಪ್ರಚೋದಿತ ಭಯೋತ್ಪಾದಕತೆಯನ್ನು ಪ್ರತಿಯೊಬ್ಬರು ಖಂಡಿಸಬೇಕಾಗಿದೆ. ಏಳೆಂಟು…

Read More

ಸೋಮವಾರಪೇಟೆ ಏ.30 NEWS DESK : ಬಸವಣ್ಣನವರ ತತ್ವ, ಆದರ್ಶಗಳು ಪಾಲನೆಯಾಗಲಿ, ಜಾತ್ಯಾತೀತ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಸೋಮವಾರಪೇಟೆ ಬಸವ ಬಳಗ, ತಾಲ್ಲೂಕು ಆಡಳಿತ, ಹಿರಿಯ ನಾಗರಿಕರ ಟ್ರಸ್ಟ್, ಸಾಹಿತ್ಯ ಪರಿಷತ್ತು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ಪಟ್ಟಣದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬಸವೇಶ್ವರ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರರ 892 ನೇ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 12ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣದ ಸಂಕಲ್ಪ ತೊಟ್ಟಿದ್ದರು. ಇಂದು ನಾವು ಅವರ ಜಯಂತಿ ಆಚರಿಸುವುದು ಮಾತ್ರವಲ್ಲ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು, ಜಾತ್ಯಾತೀತ ಮನೋಭಾವನೆ ರೂಡಿಸಿಕೊಳ್ಳಬೇಕು ಎಂದರು.  ವಿಶ್ವದಲ್ಲಿ ಮೊದಲ ಭಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದವರು ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಇರುವ ಏಕೈಕ ಬಸವೇಶ್ವರರ ಪ್ರತಿಮೆ ಇದ್ದಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದರು. ರಸ್ತೆಗೆ ಬಸವೇಶ್ವರರ ನಾಮಕರಣ :: ಬಸವೇಶ್ವರರ ಪ್ರತಿಮೆ ಇರುವ ವೃತ್ತಕ್ಕೆ ಅಧಿಕೃತವಾಗಿ ಬಸವೇಶ್ವರ…

Read More

ಮಡಿಕೇರಿ ಏ.30 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 6 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ ಎಂದು ದೇವಾಲಯದ ಟ್ರಸ್ಟಿ ಜಿ.ಕಿರಣ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಲಿದೆ ಎಂದರು. 11.45ಕ್ಕೆ ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಲಿದೆ. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ…

Read More

ಮಡಿಕೇರಿ ಏ.30 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ “ಚಳವಳಿ ಮತ್ತು ಸಾಹಿತ್ಯ ಅಂತರ್ ಸಂಬಂಧ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕರ್ನಾಟಕ ಸರ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಅಲ್ಲಾರಂಡ ರಂಗಚಾವಡಿ ಸಹಕಾರದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ವಿಶೇಷ ಉಪನ್ಯಾಸ ನೀಡಿ, ಕಾಯಕ ಜೀವಿಗಳ ಶ್ರಮಕ್ಕೆ ತಕ್ಕ ಪ್ರತಿಫಲವಿರಲಿಲ್ಲ. ಜಾತಿ ಧರ್ಮದ ಕಾರಣಕ್ಕಾಗಿ ಕೊಲ್ಲುವುದು ಮಹಾಪಾತಕಗಳು ಎಂದು ಶರಣರು ಈ ಹಿಂದೆಯೇ ಹೇಳಿದ್ದಾರೆ ಎಂದರು. ಪಂಪನ “ಮನುಷ್ಯ ಜಾತಿ ತಾನೊಂದೆ ವಲಂ”, ಕನಕದಾಸರ ” ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ?” ಎಂಬ ನುಡಿಗಳನ್ನಾಡುತ್ತಾ, ಅರಿವು ಮತ್ತು ಆಚಾರವನ್ನು ಕುರಿತಂತೆ ಸಮ್ಯಕ್ ಜ್ಞಾನಿಗಳಲ್ಲದವರ ಮುಖ ನೋಡಲಾಗದು, ನಾಮವ ಹೊತ್ತು ತಿರುಗುವ…

Read More

ಮಡಿಕೇರಿ ಏ.30 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್-ಗೈಡ್ಸ್ ಭವನದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಗ್ರರ ದಾಳಿಗೆ ಸಿಲುಕಿ ಹತ್ಯೆಗೀಡಾದ ಅಮಾಯಕರಿಗೆ ಸಂತಾಪ ಸೂಚಿಸಲಾಯಿತು. ಭಯೋತ್ಪಾದಕರು ನಡೆಸಿದ ಅಮಾನುಷ ಕೃತ್ಯವನ್ನು ಸಭೆ ಖಂಡಿಸಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯು ಅವರು ಭಾರತ ದೇಶದಿಂದ ಭಯೋತ್ಪಾದನೆ ಸಂಪೂರ್ಣವಾಗಿ ನಿಮೂರ್ಲನೆಯಾಗಬೇಕು ಮತ್ತು ದೇಶದ ಒಳಿತಿಗಾಗಿ ಸರ್ವರು ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಸಂಸ್ಥೆಯ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಗೈಡ್ಸ್ ವಿಭಾಗದ ತರಬೇತಿ ಆಯುಕ್ತ ಮೈಥಿಲಿರಾವ್, ಖಜಾಂಚಿ ಟಿ.ಎನ್.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದು, ಭಯೋತ್ಪಾದಕರ…

Read More