ಮಡಿಕೇರಿ ಜೂ.27 NEWS DESK : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 40.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 92.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1367.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 737.17 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.28 ಮಿ.ಮೀ. ಕಳೆದ ವರ್ಷ ಇದೇ ದಿನ 160.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1950.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1083 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 103.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1388.50 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 726.45 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಲೇಖಕ: admin
ಮಡಿಕೇರಿ ಜೂ.27 NEWS DESK : ಶಾಂತಳ್ಳಿ ಹೋಬಳಿಯ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕುಂದಳ್ಳಿ – ಪುಷ್ಪಗಿರಿ ಸಂಪರ್ಕಿಸುವ ರಸ್ತೆಯ ಮೇಲೆ ಬರೆ ಕುಸಿದಿದ್ದು, ಒಂದು ವಿದ್ಯುತ್ ಕಂಬ ಮುರಿದು ಹೋಗಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಜೂ.27 NEWS DESK : ಕುಶಾಲನಗರ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ ನದಿ ದಡ ವ್ಯಾಪ್ತಿಯ ಹೊಳೆಕೆರೆ ಪೈಸಾರಿಯ ಪ್ರವಾಹದ ಅಪಾಯದ ಭೀತಿಯಲ್ಲಿರುವ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಗ್ರಾಮದ ನಿವಾಸಿಯಾದ ಬೇಬಿ ಕೋಂ ಸಿದ್ದ ಹಾಗೂ ಅಕ್ಕಣ್ಣಿ ಕೋಂ ಕರ್ಪ ಅವರ ಗುಡಿಸಲಿಗೆ ಕಾವೇರಿ ನದಿ ನೀರು ಬಂದಿದ್ದು, ಕುಟುಂಬದವರು ಸಂಬಂಧಿಕರ ಮನೆಗೆ ತೆರಳಿದ್ದಾರೆ.
ಮಡಿಕೇರಿ ಜೂ.27 NEWS DESK : ಸೋಮವಾರಪೇಟೆ ಪಟ್ಟಣದ ವಿಶ್ವ ಮಾನವ ವಿದ್ಯಾಸಂಸ್ಥೆಯ ಶಾಲಾ ಆವರಣದ ತಡೆಗೋಡೆ ತೀವ್ರ ಗಾಳಿ ಹಾಗೂ ಮಳೆಯಿಂದ ಕುಸಿದಿದೆ.
ಮಡಿಕೇರಿ ಜೂ.27 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಅಂಚಿನ ಕರ್ಣಂಗೇರಿ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ’ ಮತ್ತು ‘3ಡಿ ಕಿರು ತಾರಾಲಯ’ಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಆನಂದ್ ಪ್ರಕಾಶ್ ಮೀನಾ ಇತರರು ಇದ್ದರು. ಕರ್ಣಂಗೇರಿಯ ಸುಮಾರು 7.10 ಏಕರೆ ಪ್ರದೇಶದಲ್ಲಿ 12.26 ಕೋಟಿ ರೂ. ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯ ನಿರ್ಮಾಣವಾಗಲಿದ್ದು, ಕಾಮಗಾರಿ ಪೂರ್ಣಕ್ಕೆ 18 ತಿಂಗಳ ಕಾಲಾವಧಿಯನ್ನು ನಿಗದಿ ಪಡಿಸಲಾಗಿದೆ. ಕಾಮಗಾರಿಯ ಗುತ್ತಿಗೆಯನ್ನು ಬೆಂಗಳೂರಿನ ಎಸ್.ಕೆ. ಕನ್ಸ್ಟ್ರಕ್ಷನ್ ನಿರ್ವಹಿಸಲಿದೆ. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ 7.02 ಕೋಟಿ ವೆಚ್ಚದಲ್ಲಿ ಮತ್ತು 3ಡಿ ಕಿರುತಾರಾಲಯ 5.24 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಉಪ…
ಸುಂಟಿಕೊಪ್ಪ ಜೂ.27 NEWS DESK : ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಾಜಿ ಸೈನಿಕ ಕಂಡಕರೆ ನಿವಾಸಿ ಗಿರೀಶ್ (44) ಅವರ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿಂಧೂ ರಾಜನ್, ಸದಸ್ಯ ಸಿ.ಇ ತೀರ್ಥಕುಮಾರ್ ಇದ್ದರು.
ಮಡಿಕೇರಿ ಜೂ.26 NEWS DESK : ಸಮಾಜಸೇವೆ, ಪರೋಪಕಾರ ವಿಚಾರದಲ್ಲಿ ಕೊಡಗಿನವರ ಛಲ ದೇಶಕ್ಕೇ ಮಾದರಿಯಾಗಿದೆ. ಯಾವುದೇ ಸವಾಲು ಎದುರಾದರೂ ಸ್ಥೈರ್ಯಗೆಡದೇ ಆ ಸವಾಲನ್ನು ಎದುರಿಸಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಶ್ಲಾಘಿಸಿದ್ದಾರೆ. ನಗರದ ರೆಡ್‍ಕ್ರಾಸ್ ಭವನದಲ್ಲಿ ಆಯೋಜಿತ ಭಾರತೀಯ ರೆಡ್‍ಕ್ರಾಸ್‍ನ ಕೊಡಗು ಶಾಖೆಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮವಾದ ಸೇವೆ ನೀಡುವ ಮೂಲಕ ಆ ವ್ಯಕ್ತಿಯ ಏಳಿಗೆಗೆ ರೆಡ್‍ಕ್ರಾಸ್ ಸಂಸ್ಥೆ ಬದ್ದವಾಗಿದೆ. ಅನೇಕ ಸೇವಾ ಯೋಜನೆಗಳ ಮೂಲಕ ಕೊಡಗು ರೆಡ್‍ಕ್ರಾಸ್ ಗಮನ ಸೆಳೆದಿದೆ. ಸ್ವಾರ್ಥ ಬಿಟ್ಟು ಸಮಾಜ ಸೇವಾ ಮನೋಭಾವದಿಂದ ಉತ್ತಮ ಕಾರ್ಯದ ಮೂಲಕ ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ರೆಡ್‍ಕ್ರಾಸ್ ಸದಸ್ಯರ ಕಾರ್ಯವೈಖರಿ ಆದರ್ಶವಾದದ್ದು ಎಂದು ಹೆಮ್ಮೆಯಿಂದ ನುಡಿದರು. ರೆಡ್‍ಕ್ರಾಸ್ ಕರ್ನಾಟಕದ ನಿರ್ದೇಶಕ ಮಹಂತೇಶ್ ಸಭೆಯ ವೀಕ್ಷಕರಾಗಿ ಪಾಲ್ಗೊಂಡು ಮಾತನಾಡಿ, ಅತ್ಯುತ್ತಮ ಕಾರ್ಯಯೋಜನೆಗಾಗಿ ರಾಜ್ಯಪಾಲರಿಂದ ಅತ್ಯುತ್ತಮ ಘಟಕ ಎಂಬ ಪ್ರಶಸ್ತಿ ಪಡೆದ ಕೊಡಗು ಘಟಕದ ಸದಸ್ಯರ ಸೇವೆ ಅನನ್ಯವಾಗಿದೆ…
ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ನಷ್ಟ ಸಂಭವಿಸಿದೆ. ಜಿಲ್ಲೆಯ ಮಳೆಹಾನಿ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ…
ಸೋಮವಾರಪೇಟೆ ಜೂ.26 NEWS DESK : ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸಂಪೂರ್ಣ ಸುಸಜ್ಜಿತಗೊಂಡಿದ್ದು, ರೋಗಿಗಳಿಗೆ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯಗಳು ಲಭ್ಯವಿವೆ ಎಂದು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯೆ ಮಂಜುಳಾ ಹರೀಶ್, ಪ್ರತಿ ಸೋಮವಾರ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿದ್ದು, ರೋಗಿಗಳಿಗೆ ಎಲ್ಲಾ ಅಗತ್ಯ ಔಷಧಿ ಹಾಗೂ ಮಾತ್ರೆಗಳನ್ನು ಸ್ಥಳದಲ್ಲಿಯೇ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಆಸ್ಪತ್ರೆ ನವೀಕರಣ ಕೊನೆಯ ಹಂತದಲ್ಲಿ :: ಶಾಸಕ ಡಾ. ಮಂತರ್‌ಗೌಡ ಅವರು ರಕ್ಷಾ ಸಮಿತಿಯ ಅಧ್ಯಕ್ಷರಾಗಿದ್ದು, ಆಸ್ಪತ್ರೆಯನ್ನು ಇನ್ನಷ್ಟು ಸುಧಾರಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ರೂ. 1.60 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, 17 ಲಕ್ಷ ರೂ. ಮೌಲ್ಯದ ಔಷಧಿ, ಮಾತ್ರೆಗಳು ಹಾಗೂ ಹೈಟೆಕ್ ರಕ್ತ ಪರೀಕ್ಷಾ ಘಟಕಕ್ಕೆ ಅಗತ್ಯವಾದ ರಾಸಾಯನಿಕಗಳನ್ನು ಖರೀದಿ ಮಾಡಲಾಗಿದೆ. ರೋಗಿಗಳಿಗೆ ಎಲ್ಲಾ ರೀತಿಯ…
ಮಡಿಕೇರಿ ಜೂ.26 NEWS DESK : ವಿರಾಜಪೇಟೆಯ ಕುಟ್ಟಂದಿ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಲಾವಿದ ಶಿವಣ್ಣ ಎಸ್. ಅವರಿಗೆ ವಂದೇ ಮಾತರಂ ಲಲಿತಕಲಾ ಅಕಾಡೆಮಿ ಪ್ರತಿವರ್ಷ ನೀಡುವ ಇಂಡಿಯನ್ ಐಕಾನ್ ಅವಾರ್ಡ್ ಹಾಗೂ ನಾಟ್ಯ ಮಯೂರಿ ನೃತ್ಯ ಶಾಲೆ ನೀಡುವ ಕರುನಾಡ ನಾಟ್ಯ ಕಲ್ಪವೃಕ್ಷ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಬೆಂಗಳೂರಿನ ವಿಧಾನಸೌಧದ ಕಲಾಕ್ಷೇತ್ರ ಭವನದಲ್ಲಿ ನಡೆದ ಇಂಡಿಯನ್ ಐಕಾನ್ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ, ಹಿರಿಯ ರಾಜಕಾರಣಿ ಖಾದರ್ ಮತ್ತಿತರ ಪ್ರಮುಖರು ಹಾಜರಿದ್ದರು. ಬೆಂಗಳೂರಿನ ನಯನ ಕಲಾಕ್ಷೇತ್ರದಲ್ಲಿ ನಡೆದ ನಾಟ್ಯ ಮಯೂರಿ ನೃತ್ಯ ಶಾಲೆಯ ಕಾರ್ಯಕ್ರಮದಲ್ಲಿ ಶಿವಣ್ಣ ಎಸ್. ಅವರಿಗೆ ಕರುನಾಡ ನಾಟ್ಯ ಕಲ್ಪವೃಕ್ಷ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭ ಹಿರಿಯ ಚಿತ್ರನಟಿ ಭವ್ಯ, ಪ್ರಮುಖರಾದ ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಣ್ಣ ಎಸ್. ಅವರು ತಮ್ಮ ನಟನೆ ಮತ್ತು ಗಾಯನ ಪ್ರದರ್ಶನದ ಮೂಲಕ ಸಾವಿರಾರು ಕಲಾಭಿಮಾನಿಗಳ ಮೆಚ್ಚುಗೆಗೆ…






