ಮಡಿಕೇರಿ ಏ.29 NEWS DESK : ಕೊಡಗಿನ ಇತಿಹಾಸ ಪ್ರಸಿದ್ಧ ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬವು ಮೇ 2 ರಿಂದ 4ರ ವರೆಗೆ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ನಡೆಯಲಿದೆ. ಮೇ 2 ರಂದು ರಾತ್ರಿ 9 ಗಂಟೆಗೆ ಶ್ರೀ ದೇವರನ್ನು ಕೊಟ್ಟಿ ಹಾಡುವುದು, 3 ರಂದು ಬೆಳಿಗ್ಗೆ 11.30 ಗಂಟೆಗೆ ಎತ್ತು ಪೋರಾಟ, ರಾತ್ರಿ 9.30 ಗಂಟೆಗೆ ಶ್ರೀ ಶಾಸ್ತಾವು ದೇವರ ಪ್ರಸಿದ್ದ ದೀಪಾರಾಧನೆ [ ಅಂದಿ ಬೊಳಕು] ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ಕಲ್ಯಾಟ ಅಜ್ಜಪ್ಪ ದೇವರ ಕೋಲ ನಡೆಯಲಿದೆ. ಅಪರಾಹ್ನ 12.30 ಗಂಟೆಗೆ ಮಹಾ ಅನ್ನದಾನ ನಡೆಯಲಿದೆ. 1 ಗಂಟೆಗೆ ಶ್ರೀ ವಿಷ್ಣ ಮೂರ್ತಿದೇವರ ಕೋಲ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕ ಮುಖುಸ್ಥರು ಹಾಗು ಆಡಳಿತ ಮಂಡಳಿ ಕೋರಿದೆ.
ಲೇಖಕ: admin
ಮಡಿಕೇರಿ ಏ.29 NEWS DESK : ಸಿಎಸ್‍ಐಆರ್ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಆಡಳಿತಾತ್ಮಕ ಸ್ಥಾನ (Admistrative positions) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ http://cftri.res.in or http://recruitment.cftri.res.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ನಾಪೋಕ್ಲು ಏ.29 NEWS DESK : ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಗೆ ಜಾಗೃತಿ ಕಿರಣ ಕನ್ನಡ ಪಾಕ್ಷಿಕ ಪತ್ರಿಕೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಪತ್ರಿಕೆಯ 11ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಸ್ಥಳೀಯ ಶಾಸಕರಾದ ನಾಡ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಪಿಡಿಓ ಚಂದ್ರಮೌಳಿ ಹಾಗೂ ಉಪಾಧ್ಯಕ್ಷ ರೇಖಾ ಬಿ ಎಸ್ ಹಾಜರಿದು,್ದ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯದ ನಾನ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ‘ಕಾಯಕ ರತ್ನ’ ಪ್ರಶಸ್ತಿ ಹಾಗೂ ಉತ್ತಮ ಆಡಳಿತ ನಿರ್ವಹಣೆಯ ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಜಾಗೃತಿ ಕಿರಣ ಪತ್ರಿಕೆಯ ಪ್ರಧಾನ ಸಂಪಾದಕರು ಯಾಲ್ಪಿ ವಾಲಿ ಭಾಷಾ ತಿಳಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಏ.29 NEWS DESK : ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ. ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯ ಅವರ ‘ಬೆಂದೊಡಲ ಕುಣಿತ” ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.”ವಿಜ್ಞಾನ-ತಂತ್ರಜ್ಞಾನ ರಂಗದಲ್ಲಿ ಮುಂದುವರಿದಿದ್ದೇವೆ ಎಂದು ಹೇಳಿಕೊಳ್ಳುವ ನಾವೇ ಶಿಕ್ಷಣ ರಂಗದಲ್ಲಿ ಕಳೆದ 75ವರ್ಷಗಳಲ್ಲಿ ಹಿಂದುಳಿದವರಾಗಿಯೇ ಉಳಿದಿದ್ದೇವೆ. ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂದು ಮಹಾನಾಯಕ ಡಾ||.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಮಹಿಳೆಯರ ಸುರಕ್ಷಿತತೆ ಮತ್ತು ಸಮಾನತೆಯ ದೃಷ್ಟಿಯಲ್ಲಿ ನಮ್ಮ ರಾಷ್ಟ್ರ ಇನ್ನೂ ಹಿಂದುಳಿದ ರಾಷ್ಟ್ರಗಳ ಪಟ್ಟಿಯಲ್ಲೇ ಉಳಿದಿದೆ. ಶಿಕ್ಷಣ ಎಂಬುದು ಶೋಷಣೆಯನ್ನು ಪ್ರಶ್ನಿಸಲು ಕಲಿಸುತ್ತದೆ. ಆದರೆ, ಇಂದು ನಾವು ಪ್ರಶ್ನಿಸಲು…
ಮಡಿಕೇರಿ NEWS DESK ಏ.28 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಸಂದರ್ಭ ವಿದ್ಯುತ್ ಸ್ಪರ್ಷಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯ ರೈತ ಸಹಕಾರ ಭವನದ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಬಿ.ಬಿ.ಮೋಹನ್ (63)ಮೃತ ದುರ್ದೈವಿಯಾಗಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ 11 ಕೆವಿ ವಿದ್ಯುತ್ ತಂತಿ ತುಳಿದಾಗ ವಿದ್ಯುತ್ ಸ್ಪರ್ಷಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಚೆಸ್ಕಾಂ ಅಭಿಯಂತರರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಏ.28 : ಮಡಿಕೇರಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕಲಾವತಿ ಪಿ. ಹಾಗೂ ಉಪಾಧ್ಯಕ್ಷರಾಗಿ ಮಹೇಶ್ ಜೈನಿ ಅವರು ಆಯ್ಕೆಯಾಗಿದ್ದಾರೆ. ಸುದೀರ್ಘ ಅವಧಿಯಿಂದ ಖಾಲಿ ಇದ್ದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಭರ್ತಿಯಾಗುವ ಮೂಲಕ ಮತ್ತೆ ನಗರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಆರಂಭಗೊಂಡಿದೆ. ಕಳೆದ ಎರಡು ವರ್ಷಗಳಿಂದ ನಗರಸಭೆಯಲ್ಲಿ ತಲೆದೋರಿದ್ದ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಗೊಂದಲ ಬಗೆಹರಿದ ಬೆನ್ನಲ್ಲೆ, ಇಂದು ಚುನಾವಣಾಧಿಕಾರಿಗಳಾದ ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕಿಯೆ ನಡೆಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಉಮೇದುವಾರಿಕೆ ಹಿಂದಕ್ಕೆ ಪಡೆಯುವ ಪ್ರಕ್ರಿಯೆಗಳು ಮುಗಿದ ಬಳಿಕ ಮಧ್ಯಾಹ್ನ 3 ಗಂಟೆಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕಿಯೆ ಕೈ ಎತ್ತುವ ಮೂಲಕ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿಯ ಕಲಾವತಿ ಅವರು ನಗರಸಭೆೆಯಲ್ಲಿರುವ 16 ಬಿಜೆಪಿ ಸದಸ್ಯರು ಹಾಗೂ ಸಂಸದ ಯದುವೀರ್ ಒಡೆಯರ್ ಅವರ ಮತ ಸೇರಿದಂತೆ ಒಟ್ಟು 17 ಮತಗಳನ್ನು ಪಡೆದರು. ಇಷ್ಟೇ ಸಂಖ್ಯೆಯ ಮತಗಳನ್ನು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ…
ಮಡಿಕೇರಿ ಏ.28 : ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯವು ಮೇರಾ ಯುವ್ ಭಾರತ್ (MY Bharat) ಪ್ಲಾಟ್‌ಫಾರ್ಮ್ ಮೂಲಕ ಯುವಕರಿಗಾಗಿ ಒಂದು ವಿಶಿಷ್ಟ ದೇಶ ನಿರ್ಮಾಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. “ವಿಕಸಿತ್ ಭಾರತ್ ವೈಬ್ರಂಟ್ ವಿಲೇಜಸ್” ಎಂಬ ಹೆಸರಿನಲ್ಲಿ ಪರಿಚಿತವಾಗಿರುವ ಈ ಕಾರ್ಯಕ್ರಮವು ಮೇ 15 ರಿಂದ ಮೇ 30 ರವರೆಗೆ ಲೇಹ್ ಲಡಾಖ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಗಡಿಭಾಗದ ಗ್ರಾಮಗಳಲ್ಲಿ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಗೊಂಡ ಯುವಕರು ಈ ಗ್ರಾಮಗಳಲ್ಲಿ 10 ದಿನಗಳು ವಾಸವಿದ್ದು, ಸ್ಥಳೀಯ ಸಂಸ್ಕöÈತಿ, ಸಮುದಾಯಗಳೊಂದಿಗೆ ಸಂವಹನ ಮಾಡಿ, ಗ್ರಾಮೀಣಾಭಿವೃದ್ಧಿಯನ್ನು ಅಧ್ಯಯನ ಮಾಡಿ, ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಿಂದ 15 ಯುವಕರನ್ನು ಆಯ್ಕೆ ಮಾಡಲಿದ್ದು, 21 ರಿಂದ 29 ವರ್ಷದೊಳಿನ ಆಸಕ್ತ ಯುವಕರು ಮೇ 3 ರ ಒಳಗಾಗಿ https://mybharat.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.…
ಮಡಿಕೇರಿ ಏ.28 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ 5 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್‍ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಮಾಸ್ಟರ್ ಟ್ರೈನರ್‍ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ಹೇಳುವ ಮಾಹಿತಿ ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬಂಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ…
ಮಡಿಕೇರಿ ಏ.28 NEWS DESK : ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿರುವ ಕುಟುಂಬಗಳ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮೀಕ್ಷೆ ಆರಂಭವಾಗಿದ್ದು, ರಾಷ್ಟ್ರೀಯ ಸಪಾಯಿ ಕರ್ಮಚಾರಿಗಳ ನಾಯಕ ಐ.ಪಿ.ಡಿ ಸಾಲಪ್ಪ ಅವರ ಕುಲ ಬಾಂಧವರು ಸ್ವಾಭಿಮಾನಕ್ಕಾಗಿ ಅರುಂಧತಿಯಾರ್ ಜಾತಿಗೆ ಸೇರಿದವರೆಂದು ಸಮೀಕ್ಷೆ ಸಂದರ್ಭ ತಿಳಿಸುವಂತೆ ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಕೃಷ್ಣ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಹಾಗೂ ಆದಿ ದ್ರಾವಿಡ ಸಮುದಾಯ ಅರುಂಧತಿಯಾರ್ ಜಾತಿಗೆ ಸೇರಿದೆ. ಇವರು ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿದ್ದು, ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಈ ಹಿಂದೆ ಮಾಡಿದ ಸಮೀಕ್ಷೆ ಕಾರ್ಯದ ಮಾಹಿತಿ ಸರಿಯಾಗಿ ಗೊತ್ತಿಲ್ಲದೆ ಅವಕಾಶ ವಂಚಿತರಾಗಿರುವುದರಿಂದ ಹಲವು ಯೋಜನೆಗಳನ್ನು ಕೈತಪ್ಪಿವೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯು ಸಮರ್ಪಕವಾಗಿ ನಮಗೆ ಸಿಗುತ್ತಿಲ್ಲ. ಎಲ್ಲದರಿಂದಲೂ ನಾವು ವಂಚಿತರಾಗುತ್ತಿದ್ದೇವೆ. ಆದ್ದರಿಂದ ಈಗಾಗಲೇ ಆರಂಭವಾಗಿರುವ ಸಮೀಕ್ಷೆಯಲ್ಲಿ ಅರುಂಧತಿಯಾರ್ ಜಾರಿಗೆ ಸೇರಿದವರೆಂದು ಬರೆಸುವಂತಾಗಬೇಕು ಎಂದು ಹೇಳಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬದವರೆಂದು ಪರಿಗಣಿಸುವ ಮೂಲಕ ನಮಗೆ…
ಸೋಮವಾರಪೇಟೆ ಏ.28 NEWS DESK : ಕೊಡಗು ವಿಶ್ವವಿದ್ಯಾಲಯಯವನ್ನು ರದ್ದುಪಡಿಸುವುದು ಅಥವಾ ವಿಲೀನಗೊಳಿಸುವುದಕ್ಕೆ ಮುಂದಾದರೆ ಅದರ ದುಷ್ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ರಾಜ್ಯ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಜೇಸಿ ವೇದಿಕೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಬೇಕೆಂಬ ಹಕ್ಕೊತ್ತಾಯವನ್ನು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡುವುದಿಲ್ಲ ಎಂದು ಇದೂವರೆಗೆ ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸೇರಲು ಭಯಪಡುತ್ತಿದ್ದಾರೆ ಎಂದರು. ಜನಪ್ರತಿನಿಧಿಗಳು, ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದೆ. ಜಿಲ್ಲೆಯ ಶಾಸಕರುಗಳು ಕೂಡ ಇದರ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸುತ್ತಿಲ್ಲ ಎಂದರು. ಸಭೆಯಲ್ಲಿ ಪಾಲ್ಗೊಂಡಿದ್ದ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಮಾತನಾಡಿ, ಜಿಲ್ಲೆಯ ಇಬ್ಬರು ಶಾಸಕರುಗಳು ವಿಶ್ವವಿದ್ಯಾಲಯವನ್ನು ಉಳಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು. ರೈತರು, ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ-ಪಂಗಡದವರು ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾರೆ. ಕೊಡಗಿನಲ್ಲಿ…






