ಮಡಿಕೇರಿ ಜೂ.26 NEWS DESK : ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರು ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಕಾಳಜಿ ಕೇಂದ್ರಕ್ಕೆ ಬರಲು ಸೂಚಿಸಿದರು.
ಲೇಖಕ: admin
ನಾಪೋಕ್ಲು ಜೂ.27 NEWS DESK : ಯವಕಾಪಾಡಿ ಗ್ರಾಮದಲ್ಲಿ ಬಾರಿ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿ ನಷ್ಟ ಸಂಭವಿಸಿದೆ. ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಯವಕಾಪಾಡಿ ಗ್ರಾಮದ ನಿವಾಸಿ ಚೆಂಗಪ್ಪ ಅವರ ವಾಸದ ಮನೆಯ ಶೀಟ್ ಹಾರಿ ಹೋಗಿ ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ನಾಪೆÇೀಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ವರದಿ : ದುಗ್ಗಳ ಸದಾನಂದ.
*ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಚೀನಾದ ನೈಋತ್ಯ ಗುಯಿಝೌ ಪ್ರಾಂತ್ಯದಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮ ಹೆದ್ದಾರಿ ಸೇತುವೆ ಕುಸಿದು ಸಂಪರ್ಕ ಕಡಿತಗೊಂಡಿದೆ. ಮುರಿದ ಸೇತುವೆಯಲ್ಲಿ ಸರಕು ಸಾಗಣೆ ಟ್ರಕ್ ನೇತಾಡುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಜುನಿ ನಗರದ ಕ್ಸಿಯಾಮೆನ್-ಚೆಂಗ್ಡು ಎಕ್ಸ್‌ಪ್ರೆಸ್‌ವೇಯ ಭಾಗವಾಗಿರುವ ಸೇತುವೆಯಲ್ಲಿ ನಡೆದಿದೆ.*
ಕುಶಾಲನಗರ ಜೂ.26 NEWS DESK : ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಿತು. ಹಿಂದಿನ ಸಾಲಿನ ಕ್ಲಬ್ ಅಧ್ಯಕ್ಷ ದೇವರಗುಂಡ ಪ್ರವೀಣ್ ಸೋಮಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಾಲಿನ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್, ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯು ಅಧಿಕಾರ ವಹಿಸಿಕೊಂಡರು. ಮಾಜಿ ಜಿಲ್ಲಾ ಗವರ್ನರ್ ಎಂ.ಬಿ. ಸದಾಶಿವ ಅವರು ನೂತನ ಪದಾಧಿಕಾರಿಗಳಿಗೆ ಮತ್ತು ನೂತನ ಸಾಲಿನ ಆಡಳಿತ ಮಂಡಳಿ ಸದಸ್ಯರಿಗೆ ಪದಗ್ರಹಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸರಕಾರದ ಯೋಜನೆ ತಲುಪಲಾಗದ ಗ್ರಾಮೀಣ ಸ್ಥಳಗಳಿಗೆ, ಫಲಾನುಭವಿಗಳಿಗೆ ತಲುಪಿಸುವಲ್ಲಿ ಲಯನ್ಸ್ ಮೂಲಕ ನೆರವಾಗುತ್ತದೆ. ಸೇವೆಯೇ ಮುಖ್ಯ ಧ್ಯೇಯವಾಗಿಸಿಕೊಂಡಿರುವ ಲಯನ್ಸ್ ಸಂಸ್ಥೆ ಬಡವರು, ಅಶಕ್ತರ ಪಾಲಿನ ಆಶಾಕಿರಣವಾಗಿದೆ, ಸೇವೆಯ ರಾಯಭಾರಿಗಳಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಕ್ರಿಯ, ಸಮಾಜ ಸೇವೆಯ ಗುಣಗಳನ್ನು ಹೊಂದಿರುವವರು ಹೆಚ್ಚು ಸದಸ್ಯರಾಗಬೇಕಿದೆ ಎಂದು ಕರೆ ನೀಡಿದರು. ಲಯನ್ಸ್…
ಮಡಿಕೇರಿ ಜೂ.26 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 92.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 62.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1327.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 644.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79 ಮಿ.ಮೀ. ಕಳೆದ ವರ್ಷ ಇದೇ ದಿನ 90.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1879.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 923.78 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 130.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 85.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1360.40 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 622.95 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 141.29 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ನಾಪೋಕ್ಲು ಜೂ.26 NEWS DESK : ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಅಜ್ಜಿಮುಟ್ಟದಲ್ಲಿರುವ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಪರಿಕರವನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಮುಖ್ಯ ಶಿಕ್ಷಕಿ ಪುಷ್ಪವತಿ, ನಾಪೋಕ್ಲು ಘಟಕದ ಶೌರ್ಯ ಮಾಸ್ಟರ್ ದಿವ್ಯ ಬಾಳೆಯಡ, ಸದಸ್ಯರಾದ ಶ್ಯಾಮಲಾ, ಚಂದ್ರಕಲಾ, ರಮ್ಯಾ, ಶಂಕರ, ಶರವಣ ಜೊತೆಗೆ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.26 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಭಾರತಿ ಯೋಗ ಗುರು ಕೆ.ಕೆ.ಮಹೇಶ್ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ನಂತರ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಅಧ್ಯಕ್ಷ ಟಿ.ಕೆ.ಸುಧೀರ್, ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಪ್ರಾಂಶುಪಾಲರಾದ ಸತ್ಯ ಸುಲೋಚನಾ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜೂ.26 NEWS DESK : ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಎನ್‌ಡಿಆರ್‌ಎಫ್ 10 ಸಹಾಯಕ ಕಮಾಂಡೆಂಟ್ ಕಿರಣ್ ಕುಮಾರ್ ಭೇಟಿ ನೀಡಿದರು. ಈಗಾಗಲೇ ನಿಯೋಜನೆಗೊಂಡಿರುವ ಎನ್‌ಡಿಆರ್‌ಎಫ್ ತಂಡದ ಸನ್ನದ್ಧತೆಯನ್ನು ಪರಿಶೀಲಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ ಅವರೊಡನೆ ಸಮಾಲೋಚನೆ ನಡೆಸಿದರು.
ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿ, ಅಲ್ಲಿನ ಸ್ಥಳೀಯರಿಂದ ಮಾಹಿತಿ ಪಡೆದರು. ಕುಶಾಲನಗರದ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದರು. ನಂತರ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿ, ಮಳೆ ಹಾನಿ ಸಂಬಂಧ ಸರ್ಕಾರದಿಂದ ನಿಯಮಾನುಸಾರ ಪರಿಹಾರ ದೊರೆಯಲಿದೆ ಎಂದು ಸಚಿವರು ಹೇಳಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಸ್ಥಳೀಯ ಜನಪ್ರತಿನಿಧಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಇತರರು ಇದ್ದರು.
ಕಾರ್ಕಳ ಜೂ.26 NEWS DESK : ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT-2025) ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಸಂಸ್ಥೆಯ ವಿದ್ಯಾರ್ಥಿ ಎಂ.ಮೋಹಿತ್ ರಾಷ್ಟ್ರಮಟ್ಟದಲ್ಲಿ 4ನೇ ರ‍್ಯಾಂಕ್ (ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ‍್ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (IISಇಖ) ಪ್ರವೇಶ ಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮೋಹಿತ್ ಅವರ ಸಾಧನೆ ಸಂತೋಷದ ಸಂಗತಿಯಾಗಿದೆ. ಉಳಿದಂತೆ ಎಂ.ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್ 1718 ( ಕೆಟಗರಿ ರ‍್ಯಾಂಕ್ 314), ತೇಜಸ್ ವಿ ನಾಯಕ್ 2423 ( ಕೆಟಗರಿ ರ‍್ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್.ಎಂ 6961, ಎನ್. ಸುದರ್ಶನ್ ಕಾಮತ್ 7322,…






