ಲೇಖಕ: admin

ಕುಶಾಲನಗರ ಜೂ.26 NEWS DESK : ವಿದ್ಯಾರ್ಥಿಗಳು ತಮ್ಮ 10ನೇ ತರಗತಿಯ ಒಳಗೆ ಕನ್ನಡದ ಬಗ್ಗೆ ಚೆನ್ನಾಗಿ ಅರಿಯಬೇಕು. ಕನ್ನಡದಲ್ಲಿ ಮಾತನಾಡುವುದು, ಓದುವುದು ಮತ್ತು ಬರೆಯುವುದು ಅಭ್ಯಾಸ ಮಾಡಿದಾಗ ಮಾತ್ರ ಕನ್ನಡ ಭಾಷೆಯನ್ನು ಉಳಿಸಿ, ಬೆಳಸಲು ಸಾಧ್ಯ. ಶಾಲೆಗಳಲ್ಲಿ ಮತ್ತು ಮನೆಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು ಎಂದು ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸೂದನ ರಾಘವಯ್ಯ ದತ್ತಿ ನಿಧಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಕನ್ನಡದ ಬಗ್ಗೆ ಯಾವುದೇ ತಾತ್ಸಾರ ಭಾವನೆ ಮೂಡದ ಹಾಗೆ ವಾತಾವರಣ ನಿರ್ಮಾಣವಾಗಬೇಕು. ಕನ್ನಡದ ಬದಲಾಗಿ ಬೇರೆ ಯಾವುದೇ ಭಾಷೆಯಿಲ್ಲ. ಕನ್ನಡಕ್ಕೆ ತನ್ನದೇ ಆದ ಸ್ಥಾನಮಾನವಿದೆ. ಅದನ್ನು ಬೆಳೆಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು. ತುಂಬಾ ಮಕ್ಕಳಿಗೆ ಕಾಲೇಜಿಗೆ ಬಂದರು ಕಾಗುಣಿತ ಗೊತ್ತಿರುವುದಿಲ್ಲ. 10ನೇ ತರಗತಿ ಒಳಗೆ ಕನ್ನಡವನ್ನು ಚೆನ್ನಾಗಿ ಅಭ್ಯಾಸ…

Read More

ಮಡಿಕೇರಿ ಜೂ.26 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಪ್ರೇರಣಾ ಅನುಭವಾಧಾರಿತ ಕಲಿಕಾ ತರಬೇತಿ ಕಾಯಾ೯ಗಾರದಲ್ಲಿ ಕೊಡಗು ಜಿಲ್ಲೆಯ ವಿದ್ಯಾಥಿ೯ಗಳಾದ ಭವಿಷ್ಯ ಎಮ್ (ಕೊಡಗು ವಿದ್ಯಾಲಯ, ಹತ್ತನೇ ತರಗತಿ ( 2024–25), ಹರ್ಷಿತ್ ಪೊನ್ನಪ್ಪ ಟಿ.ಎಲ್ (ಸೆಂಟ್ ಜೋಸೆಫ್ ಹೈ ಸ್ಕೂಲ್, ಮಡಿಕೇರಿ) ಮತ್ತು ಪಿ.ಎಸ್. ಪೊನ್ನಮ್ಮ (ಸಹಾಯಕ ಶಿಕ್ಷಕಿ, ಕೊಡಗು ವಿದ್ಯಾಲಯ) ಭಾಗವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ 2020ರ ಭಾಗವಾಗಿ ಯುವಕರಲ್ಲಿ ನಾಯಕತ್ವ ಗುಣಗಳು ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾಯಾ೯ಗಾರ ರೂಪುಗೊಂಡಿತ್ತು. ಜೂನ್ 15 ರಿಂದ 21 ರವರೆಗೆ ನರೇಂದ್ರ ಮೋದಿಯವರು ಪ್ರಾಥಮಿಕ ವಿದ್ಯಾಭ್ಯಾಸ ಪಡೆದ ಗುಜರಾತಿನ ವಡ್ನಗರದ ಶಾಲೆಯಲ್ಲಿ ಈ ಕಾಯಾ೯ಗಾರ ಆಯೋಜಿತವಾಗಿತ್ತು. ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಜೊತೆಗೆ ಸಂಯೋಜಿಸಿ, ಭಾರತವನ್ನು 2047ರ ಒಳಗೆ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನದಲ್ಲಿ ತರಬೇತಿ ನೀಡಲಾಯಿತು. ಪ್ರತಿ ವಾರ ದೇಶದ ಆಯ್ದ ರಾಜ್ಯಗಳಿಂದ 20 ವಿದ್ಯಾರ್ಥಿಗಳು ಮತ್ತು…

Read More

ಮಡಿಕೇರಿ ಜೂ.26 NEWS DESK : ಮಡಿಕೇರಿ ಮಲ್ಲಿಕಾರ್ಜುನ ನಿವಾಸಿ, ನಗರಸಭೆಯ ನಿವೃತ್ತ ನೌಕರ ಕೆ.ಹೋಬಳಿ ಅನಾರೋಗ್ಯದಿಂದ ಇಂದು ನಿಧನರಾದರು. ಮೃತರ ಅಂತ್ಯಕ್ರಿಯೆ ಜೂ.27 ರಂದು ಮಡಿಕೇರಿಯಲ್ಲಿ ನೆರವೇರಲಿದೆ.

Read More

ಮಡಿಕೇರಿ NEWS DESK ಜೂ.25 : ಕೊಡಗು ಜಿಲ್ಲೆಯಲ್ಲಿ ಮತ್ತೆ ಗಾಳಿಮಳೆ ಬಿರುಸುಗೊಂಡಿದೆ. ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜೂ.26 ರಂದು ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಗಾಳಿ ವೇಗವಾಗಿ ಬೀಸುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 7 ಇಂಚು, ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ 6 ಇಂಚು, ಮಡಿಕೇರಿ ತಾಲ್ಲೂಕಿನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ 5 ಇಂಚಿಗೂ ಅಧಿಕ ಮಳೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾರಂಗಿ ಜಲಾಶಯದಿಂದ ಹೆಚ್ಚುವರಿ 5 ಕ್ಯೂಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಭಾರೀ ಗಾಳಿಯಿಂದ ಗ್ರಾಮೀಣ ಭಾಗದಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿದೆ. ನದಿತೀರ, ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಆತಂಕದ ವಾತಾವರಣವಿದ್ದು, ಜಿಲ್ಲಾಡಳಿತ ಹಾಗೂ ಸ್ಥಳೀಯ…

Read More

ಮಡಿಕೇರಿ NEWS DESK ಜೂ.25 : ಸೈಬರ್ ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿ ರೂ.7 ಲಕ್ಷ ವಸೂಲಿ ಮಾಡಿದ ಆರೋಪದಡಿ ಓರ್ವ ಬಾಲಕ ಸೇರಿದಂತೆ ಐವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದ ನಿವಾಸಿ ಪರಶಿವಮೂರ್ತಿ ಎಂಬುವವರು ನೀಡಿದ ದೂರಿನನ್ವಯ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಹಾಲೇರಿ ಗ್ರಾಮದ ಇಬ್ರಾಹಿಂ ಬಾದ್ ಷಾ (25), ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಬಳಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ (19), ಬೆಂಗಳೂರಿನ ಬನಶಂಕರಿಯ ಸಂಗೀತಾ (30), ಕುಶಾಲನಗರ ತಾಲ್ಲೂಕಿನ ದ್ರಾವಿಡ ಕಾಲೋನಿಯ ಚರಣ್.ಸಿ.ಕೆ (19) ಹಾಗೂ ಓರ್ವ ಬಾಲಕನನ್ನು ಬಂಧಿಸಲಾಗಿದೆ. 2024 ನವೆಂಬರ್ ತಿಂಗಳಿನಲ್ಲಿ ಪರಶಿವಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಸೈಬರ್ ಪೊಲೀಸರು ಎಂದು ಪರಿಚಯಿಸಿಕೊಂಡು ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೇಸೆಜ್/ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿದೆ. ನೀವು ಹಣವನ್ನು ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ಕರೆದುಕೊಂಡು ಹೋಗಿ ಜೈಲಿಗೆ…

Read More

ಮಡಿಕೇರಿ ಜೂ.25 NEWS DESK : ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ಮುಖಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲೂ ಕಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ ಅವರು ಟೀಕಿಸಿದ್ದಾರೆ.  ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿ-ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷಗಳು’ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇಂದ್ರದಲ್ಲಿ ಪ್ರಧಾನಿ ಹುದ್ದೆ ಮತ್ತು ಸರಕಾರದ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಇಂದಿರಾಗಾಂಧಿ ಅವರು 1975ರ ಜೂ. 25ರಂದು ಸಂವಿಧಾನಕ್ಕೆ 5 ತಿದ್ದುಪಡಿಗಳನ್ನು ತರುವು ಮೂಲಕ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಇದನ್ನು ವಿರೋಧಿಸಿದ ಜನ ಸಂಘ, ಸಂಘ ಪರಿವಾರದ ಹಲವಾರು ಮುಖಂಡರ ಸಹಿತ ಲಕ್ಷಾಂತರ ಮಂದಿ ಹೋರಾಟಗಾರರನ್ನು ಯಾವುದೇ ಕಾರಣಗಳಿಲ್ಲದೇ ಜೈಲಿಗೆ ಅಟ್ಟುವ ಮೂಲಕ ಸಂವಿಧಾನವನ್ನೇ ಇಂದಿರಾ ಗಾಂಧಿ ತಮ್ಮ ಮುಷ್ಟಿಯಲ್ಲಿಡಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದರು.  ರಾಜ್ಯದ ಕಾಂಗ್ರೆಸ್ ಸರಕಾರ…

Read More

ಮಡಿಕೇರಿ ಜೂ.25 NEWS DESK :  ಕೊಡಗು ಸಹಾಯಕ ಔಷಧ ನಿಯಂತ್ರಕರಾಗಿ ಮೈಸೂರು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಷರೀಫ್ ಅವರನ್ನ ಪ್ರಭಾರ ಆಗಿ ನಿಯೋಜಿಸಲಾಗಿದೆ. ಕಳೆದ ಐದು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಹಾಯಕ ಔಷಧ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಮಾಗಣಗೇರಿ ವರ್ಗಾವಣೆ ಹಿನ್ನಲೆ ಷರೀಫ್ ಅವರನ್ನು ನೇಮಿಸಲಾಗಿದೆ. ಮಂಗಳವಾರ ಅಧಿಕಾರ ವಹಿಸಿಕೊಂಡ ಷರೀಫ್ ಅವರನ್ನು ಕೊಡಗು ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಅಭಿನಂದಿಸಿದರು. ನಂತರ ಅಧ್ಯಕ್ಷ ಅಂಬೆಕಲ್ಲು ಜೀವನ್ ನೇತೃತ್ವದಲ್ಲಿ  ಕೆಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಕೊಡಗು ಔಷಧ ವ್ಯಾಪಾರಿಗಳ ಸಂಘದ ಹಿರಿಯ ಸದಸ್ಯ ಅಂಬೇಕಲ್ ಕುಶಾಲಪ್ಪ, ಸಂಘದ ಉಪಾಧ್ಯಕ್ಷ ಅಂಬೇಕಲ್ ವಿನೋದ್, ಖಜಾಂಚಿ ಪ್ರಸಾದ್ ಗೌಡ, ಜಂಟಿ-ಕಾರ್ಯದರ್ಶಿ ವಸಂತ್, ಸದಸ್ಯರಾದ ಶಶಿಧರ್ ರೈ, ಧನಂಜಯ ಶಾಸ್ತ್ರೀ, ಸುರೇಶ್ ಬಿಳಿಗೇರಿ ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.25 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಜೂನ್, 26 ಮತ್ತು 27 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜೂನ್, 26 ರಂದು ಬೆಳಗ್ಗೆ 11.30 ಗಂಟೆಗೆ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ವಿವಿಧ ಪ್ರದೇಶ ವೀಕ್ಷಿಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಿದ್ದಾರೆ. ಜೂನ್, 27 ರಂದು ಬೆಳಗ್ಗೆ 9.30 ಗಂಟೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 9.45 ಗಂಟೆಗೆ ತಾಲ್ಲೂಕು ಆಡಳಿತ ಸೌಧ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಗೆ ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಬೆಳಗ್ಗೆ…

Read More

ಸುಂಟಿಕೊಪ್ಪ ಜೂ.25 NEWS DESK : ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕೀಟಶಾಸ್ತ್ರಜ್ಞ ಮಂಜುನಾಥ್‍, ಮಲೇರಿಯಾ ಜ್ವರವನ್ನು ಶೀಘ್ರವಾಗಿ ಪತ್ತೆ ಹಚ್ಚುವ ಮೂಲಕ ಪೀಡಿತ ವ್ಯಕ್ತಿಯನ್ನು ಗುಣಪಡಿಸಬಹುದೆಂದು ತಿಳಿಸಿದರು. ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆ ಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರ ಹಾಗೂ ಡೆಂಗ್ಯೂ ಜ್ವರ, ಚಿಕೂನ್ ಗುನ್ಯಾ, ಜ್ವರ ಹಾಗೂ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಪರಿಸರ ಸ್ವಚ್ಛತೆಯ ಬಗ್ಗೆ ನೀರಿನ ಸ್ವಚ್ಛತೆಯ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭ ಮಾದಾಪುರ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಶಾ, ಡಾ.ದರ್ಶನ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ವಿಶ್ವಜ್ಞಾ, ಶಿವಪ್ಪ, ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಮಾರ್ಗರೇಟ್ ಆಳ್ವ, ಗ್ರೀಷ್ಮ ಸುಶೀಲ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸಿಂಧು, ಮನೋಜ್, ಶಫಿನಾ, ಶ್ವೇತಾ, ಮೇನಕಾ, ಪ್ರೀತಿ, ಚೈತ್ರ, ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Read More

ಮಡಿಕೇರಿ NEWS DESK ಜೂ.25 : ಮಡಿಕೇರಿ ನಗರದ ಸುದರ್ಶನ ಬಡಾವಣೆಯ ನಿವಾಸಿ, ಆರೋಗ್ಯ ಇಲಾಖೆಯ ನಿವೃತ್ತ ನೌಕರ ಮುತ್ತಪ್ಪ ರೈ (92) ಅವರು ವಯೋಸಹಜವಾಗಿ ಇಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೂ.26 ರಂದು ಮೃತರ ಅಂತ್ಯಕ್ರಿಯೆ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.

Read More