ಲೇಖಕ: admin

ಮಡಿಕೇರಿ ಏ.26 NEWS DESK : ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಹಾಕಿ ಪಂದ್ಯಾವಳಿಯ ಫೈನಲ್ಸ್‍ನಲ್ಲಿ ಕಂಬೀರಂಡ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನ ಸಂಖ್ಯೆ 2ರಲ್ಲಿ ಕಂಬೀರಂಡ ಮತ್ತು ಕೇಚೆಟ್ಟಿರ ತಂಡಗಳ ನಡುವೆ ನಡೆದ ರೋಚಕ ಅಂತಿಮ ಪಂದ್ಯಾವಳಿಯಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ತಲಾ ಎರಡು ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 2-1 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯಭೇರಿ ಬಾರಿಸಿತು. ಕಂಬೀರಂಡ ಪರ ಪೊನ್ನಮ್ಮ 2 ಗೋಲು ದಾಖಲಿಸಿದರು. ಕೇಚೆಟ್ಟಿರ ಪರ ತೇಜಸ್ವಿ ಹಾಗೂ ಪಾರ್ವತಿ ತಲಾ 1 ಗೋಲು ಬಾರಿಸಿದರು. ಕೇಚೆಟ್ಟಿರ ಪಾರ್ವತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಏ.21 ರಿಂದ ನಡೆದ ಮಹಿಳೆಯರ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 56 ಕೊಡವ ಮಹಿಳಾ…

Read More

ಮಡಿಕೇರಿ ಏ.26 NEWS DESK : ಹದಿನಾಲ್ಕರ ಹರೆಯದ ಪೋರ, ಗೋಲ್ ಕೀಪರ್ ಮಂಡೇಪಂಡ ದ್ಯಾನ್ ಬೆಳ್ಯಪ್ಪ ಅವರ ಅತ್ಯಮೋಘ ಆಟದ ಪ್ರದರ್ಶನದಿಂದ ಮಂಡೇಪಂಡ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪ್ರವೇಶಿಸಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪ್ರಶಸ್ತಿಗಾಗಿ 3 ಬಾರಿಯ ಛಾಂಪಿಯನ್ ಬಲಿಷ್ಠ ಚೇಂದಂಡ ತಂಡವನ್ನು ಎದುರಿಸಲಿದೆ. ‘ಶೂಟೌಟ್’ನಲ್ಲಿ  ಎದುರಾಳಿ, ಮೂರು ಬಾರಿಯ ಕೌಟುಂಬಿಕ ಹಾಕಿ ಪಂದ್ಯಾವಳಿ ಛಾಂಪಿಯನ್ ನೆಲ್ಲಮಕ್ಕಡ ತಂಡದ ಎರಡು ಗೋಲಿನ ಅವಕಾಶಗಳನ್ನು ಗೋಲಿ ಮಂಡೇಪಂಡ ಡ್ಯಾನ್ ಬೆಳ್ಯಪ್ಪ ವಿಫಲಗೊಳಿಸುತ್ತಿರುವಂತೆಯೇ ಮಂಡೇಪಂಡ ತಂಡ 5-4 ಗೋಲುಗಳ ಅಂತರದ ಮಹತ್ವದ ಗೆಲುವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸೆಮಿಫೈನಲ್‍ನಲ್ಲಿ ಚೇಂದಂಡ ತಂಡ 3-1 ಗೋಲುಗಳ ಅ0ತರದಿಂದ ಎದುರಾಳಿ ಕುಪ್ಪಂಡ (ಕೈಕೇರಿ) ತಂಡವನ್ನು ಮಣಿಸಿ ಫೈನಲ್‍ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿತು. ಮಂಡೇಪಂಡ-ನೆಲ್ಲಮಕ್ಕಡ- ಆಕ್ರಮಣಕಾರಿ ಆಟದ ಪ್ರದರ್ಶನ ಕಂಡ ಮೊದಲ ಸೆಮಿಫೈನಲ್‍ನಲ್ಲಿ ಮಂಡೇಪಂಡ ಮತ್ತು ನೆಲ್ಲಮಕ್ಕಡ ತಂಡಗಳು ಆರಂಭದಿಂದಲೆ ಪಂದ್ಯದ ಮೇಲೆ ಹಿಡಿತ ಸಾಧಿಸಿ ಗೋಲುಗಳಿಸುವ ಪ್ರಯತ್ನಕ್ಕೆ ಇಳಿಯುವುದರೊಂದಿಗೆ ಪಂದ್ಯದ…

Read More

ಮಡಿಕೇರಿ ಏ.26 NEWS DESK : ಚೆಯ್ಯಂಡಾಣೆಯ ಚೇಲವಾರ ಗ್ರಾಮದ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಮೇ 3 ಮತ್ತು 4 ರಂದು ದ್ವಿತೀಯ ವರ್ಷದ ನೇಮೋತ್ಸವ ನಡೆಯಲಿದೆ. ಮೇ 3 ರಂದು  ಬೆಳಿಗ್ಗೆ 7 ಗಂಟೆಗೆ ಗಣಪತಿ ಪೂಜೆ, ಸಂಜೆ 5 ಗಂಟೆಗೆ ದೈವಗಳ ಭಂಡಾರ ತೆಗೆಯುವುದು, 6 ಗಂಟೆಗೆ ಮಂತ್ರವಾದಿ ಗುಳಿಗ ದೈವದ ಕೋಲ, ರಾತ್ರಿ 9 ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ, 10.30 ಗಂಟೆಗೆ ಪಾಷಾಣಮೂರ್ತಿ ದೈವದ ಕೋಲ, ರಾತ್ರಿ 2 ಗಂಟೆಗೆ ಮಯೊಂತಿ ದೈವದ ಕೋಲ ಜರುಗಲಿದೆ. ಮೇ 4 ರಂದು ಬೆಳಿಗ್ಗೆ 7 ಗಂಟೆಗೆ ಕಾರ್ಣಿಕ ದೈವ ಸ್ವಾಮಿ ಕೊರಗಜ್ಜ ದೈವದ ಕೋಲ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೈವಗಳ ಸೇವೆಯನ್ನು ನಡೆಸಿಕೊಟ್ಟು ಶ್ರೀ ದೈವಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವಿಶೇಷ ಸೂಚನೆ : ನೇಮೋತ್ಸವದಲ್ಲಿ ಫೋಟೋ,…

Read More

ಮಡಿಕೇರಿ ಏ.26 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಸೀಟ್ ಫೀಡರ್‍ನಲ್ಲಿ ಏ.29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಂಗಳೂರು ರಸ್ತೆ, ತಾಳತ್ಮನೆ, ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ರೇಸ್‍ಕೋರ್ಸ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ಸ್ಟೋನ್ ಹಿಲ್, ಎಲ್.ಐ.ಸಿ ರಸ್ತೆ, ಹೊಸ ಬಡಾವಣೆ, ರಿಮೈಂಡ್ ಹೋಮ್ ಹಿಂಭಾಗ, ಡೈರಿ ಫಾರಂ, ಎಫ್.ಎಂ.ಸಿ ಕಾಲೇಜು ರಸ್ತೆ, ಕನ್ನಿಕಾ ಬಡಾವಣೆ, ಮೈತ್ರಿ ಜಂಕ್ಷನ್, ವಿದ್ಯಾನಗರ, ಮುಳಿಯ ಬಡಾವಣೆ, ಹಿಮವನ ಬಡಾವಣೆ, ಕೋರ್ಟ್ ರಸ್ತೆ, ಜಿಲ್ಲಾ ಪಂಚಾಯತ್ ಕಟ್ಟಡ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಏ.26 NEWS DESK : ಕೊಡವ ಸಮುದಾಯ ಅತ್ಯಂತ ಚಿಕ್ಕ ಸಮುದಾಯವಾಗಿದ್ದು, ಕೊಡವ ಜನಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಕೊಡವ ಕುಟುಂಬ ತಂಡಗಳ ನಡುವಿನ ಮುದ್ದಂಡ ಕಪ್ ಹಾಕಿ ಉತ್ಸವದ ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಕೊಡವ ಕುಟುಂಬಗಳು ಕನಿಷ್ಟ ಮೂರು ಮಕ್ಕಳನ್ನಾದರು ಹೊಂದುವ ಮೂಲಕ ಕೊಡವ ಜನಾಂಗದ ಅಭ್ಯುದಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಕೊಡಗಿನ 1176 ಕೊಡವ ಕುಟುಂಬಗಳ ಪೈಕಿ 396 ಕುಟುಂಬ ತಂಡಗಳು ಕೌಟುಂಬಿಕ ಹಾಕಿ ಉತ್ಸವದಲ್ಲಿ ಪಾಲ್ಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಹಾಕಿ ಉತ್ಸವದೊಂದಿಗೆ ಸಮುದಾಯದ ಸಂಘಟನೆಯೊಂದಿಗೆ, ಕೊಡಗಿನ ಉಜ್ವಲ ಭವಿಷ್ಯಕ್ಕಾಗಿ ಇತರ ಎಲ್ಲಾ ಸಮಾಜ ಬಾಂಧವರೊಂದಿಗೆ ಸೌಹಾರ್ದತೆಯಿಂದ ಮುನ್ನಡೆಯೋಣವೆಂದು ತಿಳಿಸಿದರು. ಮುದ್ದಂಡ ಕಪ್ ಹಾಕಿ ಉತ್ಸವದ ಗೌರವಾಧ್ಯಕ್ಷ ಮುದ್ದಂಡ ದೇವಯ್ಯ ಅವರು ಮಾತನಾಡಿ, ಬೆಳ್ಳಿ ಹಬ್ಬದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಉತ್ಸವದ ಆರಂಭದಲ್ಲೆ ಮೆರಥಾನ್…

Read More

ಮಡಿಕೇರಿ ಏ.26 NEWS DESK : ಶಿಕ್ಷಣದ ಗುರಿ ಕೇವಲ ಅಂಕಗಳಿಗೆ, ರ್ಯಾಂಕ್ ಗಳಿಕೆಗೆ ಸಿಮೀತವಾಗಬಾರದು. ಅದರ ಜೊತೆಯಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಅಮೂಲ್ಯ ಸಂಪತ್ತಾಗಿ ಪರಿವರ್ತನೆಯಾಗಬೇಕು. ಈ ರೀತಿಯ ಮಾರ್ಪಾಡು ಮಾಡುವವರು ಮತ್ತು ಹೊಂದುವವರು ನಿಜವಾದ ದೇಶಪ್ರೇಮಿಗಳು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ನ ದೊಡ್ಡ ಉದ್ದೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸರ್ವಜನಾಂಗದವರಿಗೆ ಪ್ರಯೋಜನ ಆಗಬೇಕು, ಈ ಸಂಸ್ಥೆ ಇತರರಿಗೆ ಪ್ರೇರಣೆಯಾಗಬೇಕು. ಸರ್ಕಾರದಿಂದ ಯಾವುದೇ ಸಂದರ್ಭದಲ್ಲಿ ಸಹಕಾರ ಸಿಗಲಿದೆ ಎಂದರು. ಉತ್ತಮ ಸಮಾಜ ದೇಶಕ್ಕೆ ಅತ್ಯಗತ್ಯ, ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಪ್ರೀತಿ, ವಿಶ್ವಾಸ ಸಂಪಾದಿಸಬೇಕು. ಸಮಾಜ ಕಟ್ಟುವುದಕ್ಕಾಗಿ ಯುವ…

Read More

ಪುತ್ತೂರು ಏ.26 NEWS DESK : ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ಖಂಡಿಸಿ, ವಿವೇಕಾನಂದ ವಿಧ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಕಾಲೇಜಿನ ಎಬಿವಿಪಿ ಘಟಕದ ಸಂಯುಕ್ತ ಆಶ್ರಯದಲ್ಲಿ ಜಾಥಾ ನಡೆಯಿತು. ಕಾಲೇಜಿನ ವಿಧ್ಯಾರ್ಥಿಗಳು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಅವರ ಮುಂದಾಳುತ್ವದಲ್ಲಿ ಕಾಲೇಜು ಆವರಣದಿಂದ ನೆಹರೂ ನಗರದ ವರೆಗೆ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನೆಹರೂ ನಗರದಲ್ಲಿ ವಿದ್ಯಾರ್ಥಿ ನಾಯಕರು ಘಟನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿ, ನಾವೆಲ್ಲರೂ ಒಗ್ಗಟ್ಟಾಗದೇ ಇದ್ದರೆ ಮುಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಬಹುದು, ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡದೆ ಸರ್ಕಾರವು ನಡೆಸುವ ಕಾರ್ಯಾಚರಣೆಗೆ ನಮ್ಮೆಲ್ಲರ ಸಹಕಾರವನ್ನು ನೀಡೋಣ ಎಂದರು. ಧರ್ಮಾಂಧತೆಗೆ ಅವಕಾಶವನ್ನು ನೀಡದೆ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ನಮ್ಮಿಂದಾದ ಸಹಕಾರವನ್ನು ನೀಡೋಣ ಎಂದರು. ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಈ ಸಂದರ್ಭದಲ್ಲಿ…

Read More

ಮಡಿಕೇರಿ ಏ.26 NEWS DESK : ಪ್ರಾದೇಶಿಕ ಅಸಮತೋಲನ ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ ಅಸಮತೋಲನ ನಿವಾರಣೆ ಬಗ್ಗೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ರಾಜ್ಯದಲ್ಲಿ ಹಿಂದಿನ ಬಾಂಬೆ ಪ್ರೆಸಿಡೆನ್ಸಿ, ಹೈದರಾಬಾದ್ ಕರ್ನಾಟಕ, ಕೊಡಗು ಮತ್ತು ಹಳೇ ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿದ ಜಿಲ್ಲೆಗಳು ವಿಭಿನ್ನತೆಯಿಂದ ಕೂಡಿವೆ. ಈ ಪ್ರದೇಶದಲ್ಲೂ ಅಂತರ್ ಜಿಲ್ಲಾ ಅಸಮತೋಲನತೆ ಇವೆ ಎಂದು ನಂಜುಂಡಪ್ಪ ವರದಿ ನೀಡಿದ್ದು, ಸಮಿತಿಯು ಅಂತಹ ಅಸಮತೋಲನೆ ಹಾಗೂ ವಿಶೇಷವಾಗಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ನಡುವಿನ ಅಸಮಾನತೆ…

Read More

ಮಡಿಕೇರಿ ಏ.26 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಅಮಾಯಕರ ಸಾವಿಗೆ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಕಳೆದ 11 ವರ್ಷಗಳಿಂದ ಭಯೋತ್ಪಾದಕರ ದಾಳಿಯಿಂದ ಭಾರತ ಮುಕ್ತವಾಗಿಲ್ಲ. ಕೇಂದ್ರ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಭದ್ರತಾ ಲೋಪ ಎದ್ದು ಕಾಣುತ್ತಿದ್ದು, ಗಡಿಯಲ್ಲಿ ನುಸುಳುಕೋರರು ಸುಲಭವಾಗಿ ದೇಶವನ್ನು ಪ್ರವೇಶಿಸುತ್ತಿದ್ದಾರೆ ಎನ್ನುವ ಸಂಶಯ ಮೂಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಮ್ಮು ಕಾಶ್ಮೀರ ಸೇರಿದಂತೆ ಭಾರತ ದೇಶ…

Read More

ಮಡಿಕೇರಿ  ಏ.26 NEWS DESK : ಮಕ್ಕಳಲ್ಲಿ ಶಿಸ್ತು ಸಜ್ಜನಿಕೆ ಸರಳತೆ ಬೆಳೆಯಲು ಬೇಸಿಗೆ ಶಿಬಿರಗಳು ಸಹಾಯಕಾರಿಯಾಗಿದೆ. ಮಕ್ಕಳ ಮೊದಲ ಗುರುಗಳಾಗಿರುವ ಪೋಷಕರು ಸದಾ ಮಕ್ಕಳಿಗೆ  ಸ್ಫೂರ್ತಿಯಾಗಿರಬೇಕು ಎಂದು ಹಿರಿಯ ಪತ್ರಕತ೯ ಜಿ. ಚಿದ್ವಿಲಾಸ್ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ  ಸಮಾಗಮ  ಹೆಸರಿನ  ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಚಿದ್ವಿಲಾಸ್, ಪೋಷಕರಿಂದ ಸ್ಪೂತಿ೯ ಪಡೆದ  ಮಕ್ಕಳು ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಅೂಬಿಪ್ರಾಯಪಟ್ಟರಲ್ಲದೇ,  ನೀರಿನ ಮಹತ್ವದ ಅರಿವು, ಮೊಬೈಲ್ ನ ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯ ತೊಂದರೆಗಳ ಬಗ್ಗೆ ಪ್ರೇರಣದಾಯಕವಾದ ಮಾತುಗಳನ್ನು ಅವರು ಹೇಳಿದರು. ಗೌರವ ಅತಿಥಿಯಾಗಿ ಆಗಮಿಸಿದ  ರಾಷ್ಟ್ರೀಯ  ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಡಾ.ಪುಷ್ಪ ಕುಟ್ಟಣ್ಣ  ಮಾತನಾಡಿ ಶಾಲಾ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಹಪಠ್ಯ ಚಟುವಟಿಕೆಗಳು ಕೂಡ ತುಂಬಾ ಅವಶ್ಯಕ ಕೊಡಗು ವಿದ್ಯಾಲಯ ಸಹ ಇದಕ್ಕೆ ಪೂರಕವಾದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ ಎಂದು ಶ್ಲಾಘಿಸಿದರು.  ಕಳೆದ 20ದಿನಗಳಿಂದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಬೇಸಿಗೆ …

Read More