ಮಡಿಕೇರಿ ಜು.27 NEWS DESK : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ ‘ಆಟಿಲೊಂದು ದಿನ’ ಕಾರ್ಯಕ್ರಮವು ವಿಟ್ಲದ ‘ಅಕ್ಷಯ ಭವನ’ದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬಳಿಕ ಮಾತನಾಡಿದ ಸಂಸ್ಕೃತಿ ಮತ್ತು ಸಾಹಿತ್ಯಗಳ ಪೋಷಣೆಯೊಂದಿಗೆ ಅರೆಭಾಷೆಯನ್ನು ಪುಷ್ಟೀಕರಿಸುವ ಕಾರ್ಯಗಳನ್ನು ಅಕಾಡೆಮಿಯು ನಿರಂತರವಾಗಿ ಮಾಡುತ್ತಿದ್ದು ವಿಟ್ಲ ಜನರಿಗೆ ಅರೆಭಾಷೆ ಮೇಲೆ ಇರುವ ಅಭಿಮಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಸಂಘಟಕರನ್ನು ಅಭಿನಂದಿಸಿದರು. ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಸೌಮ್ಯ ಸುಕುಮಾರ್ ಅವರು ದೀಪ ಪ್ರಜ್ವಲಿಸಿ ಮಾತನಾಡಿ ಸಾಂಸ್ಕೃತಿಕ ಜಾಗೃತಿ ಮತ್ತು ರಕ್ಷಣೆಗಳ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಇಂದಿನ ಅವಶ್ಯಕತೆಯಾಗಿದೆ ಎಂದರು. ಆಟಿ’ ಆಚರಣೆಯಲ್ಲ, ಇತಿಹಾಸದ ನೆನಪು: ಸೀತಾರಾಮ ಕೇವಳ ಸಂಪನ್ಮೂಲ…
ಲೇಖಕ: admin
ಮಡಿಕೇರಿ ಜು.27 NEWS DESK : ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ 143 ಸಂಘ ಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾರ್ಯಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ತೃತೀಯ ವರ್ಷದ 27ನೇ ಕಾರ್ಗಿಲ್ ವಿಜಯ್ ದಿವಸ್ ಹುತಾತ್ಮ ಯೋಧರ ಸ್ಮರಣಾ ಕಾರ್ಯಕ್ರಮಕ್ಕೆ ನಗರದ ಆರ್ಮಿ ಕ್ಯಾಂಟೀನ್ ನ ಹಿರಿಯ ವ್ಯವಸ್ಥಾಪಕ ಲೆಫ್ಟಿನೆಂಟ್ ಕರ್ನಲ್ ಮೊಳ್ಳೇರ ಎಸ್. ಕಾವೇರಿಯಪ್ಪ (ನಿವೃತ್ತ) ಅವರು, ಹುತಾತ್ಮರ ಪ್ರತೀಕವಾಗಿ ನಿಲ್ಲಿಸಲಾಗಿದ್ದ ಸ್ಮಾರಕಕ್ಕೆ ಪುಷ್ಪನಮನದ ಮೂಲಕ ಚಾಲನೆ ನೀಡಿದರು. ಗಡಿ ಕಾಯುವ ಯೋಧರ, ರಾಷ್ಟ್ರದ ಏಕತೆ ಐಕ್ಯತೆಗಾಗಿ ಬಲಿದಾನ ಗೈದ ಯೋಧರ ಪರವಾದ ಘೋಷಣೆಗಳ ನಡುವೆ ಮಡಿಕೇರಿ…
ಸಿದ್ದಾಪುರ NEWS DESK ಜು.27 : ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಮೀಸಲು ಅರಣ್ಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅಕ್ರಮವಾಗಿ ಸಮಾಧಿ ನಿರ್ಮಿಸಿರುವ ಪ್ರಕರಣವನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಹಿಂದೂ ಸುರಕ್ಷಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಗೋರಿಯನ್ನು ತೆರವುಗೊಳಿಸಬೇಕು. ಕೋಮು ಗಲಭೆಗೆ ಪ್ರಚೋದಿಸುತ್ತಿರುವ ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಿದ್ದಾಪುರ–ಮೈಸೂರು ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ವಾಹನಗಳ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಗೋರಿಯನ್ನು ಅಗೆದಾಗ ಯಾವುದೇ ಅವಶೇಷ ಕಂಡು ಬರಲಿಲ್ಲ. ಹಿಂದೂ ಪರ ಸಂಘಟನೆಯ ಚೆಕ್ಕೇರ ಮನು ಅವರು ಮಾತನಾಡಿ, ಹಿಂದೂ ದೇವಾಲಯದ ಆವರಣದಲ್ಲಿ ಖಬರಸ್ಥಾನ ಮಾದರಿಯಲ್ಲಿ ಗೋರಿ ನಿರ್ಮಿಸಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ…
ಚೆಟ್ಟಳ್ಳಿ ಜು.27 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರು ಹಾಗೂ ಜನಪರ ಹೋರಾಟ ಸಮಿತಿಯ ಸಂಚಾಲಕರಾದ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ, ಮಳೆಯ ದೇವರೆಂದೇ ಆರಾಧಿಸಲ್ಪಡುವ ಪಾಡಿ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನೆರವೇರಿಸಲಾಯಿತು. ಈ ವರ್ಷ ಮಳೆ ಅಲ್ಪ ಪ್ರಮಾಣದಲ್ಲಿ ಸುರಿದಿರುವುದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೃಷಿ ಕಾರ್ಯಗಳು ಸುಗಮವಾಗಿ ಸಾಗಲಿ, ರೈತರ ಬದುಕಿಗೆ ಸಮೃದ್ಧಿ ದೊರಕಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಈ ಸಂದರ್ಭ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪೇರಿಯನ ಪೂರ್ಣಚ್ಚ, ನಿರ್ದೇಶಕರಾದ ಬಟ್ಟೀರ ಶರಿನ್, ಕೊಂಗೇಟಿರ ವಾಣಿ ಕಾಳಪ್ಪ,…
ಮಡಿಕೇರಿ NEWS DESK ಜು.27 : ಮಳೆಯ ಪರಿಣಾಮ ನಗರದ ಸಂಪಿಗೆಕಟ್ಟೆ ನಿವಾಸಿ ಪೂವಪ್ಪ ಎಂಬುವವರ ವಾಸದ ಮನೆಯ ಎದುರಿನ ತಡೆಗೋಡೆ ಕುಸಿತಗೊಂಡಿದೆ. ಸೋಮವಾರ ಬೆಳಗ್ಗೆ ಅಂದಾಜು 20 ಅಡಿ ಆಳದ ಮಣ್ಣು ಕುಸಿತವಾಗಿದ್ದು, ಮನೆ ಮಂದಿ ಆತಂಕಕ್ಕೆ ಒಳಗಾಗಿದ್ದಾರೆ. ಮಣ್ಣು ಮತ್ತೆ ಕುಸಿಯದಂತೆ ತಡೆಯಲು ಹೊದಿಕೆ ಹಾಸಿ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ತಹಶೀಲ್ದಾರ್ ಶ್ರೀಧರ್ ಹಾಗೂ ನಗರಸಭೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ನಗರಸಭೆ ವತಿಯಿಂದಲೂ ಟಾರ್ಪಲ್ ವಿತರಣೆ ಮಾಡಲಾಗಿದ್ದು, ತಡೆಗೋಡೆ ಕುಸಿತದಿಂದ ಲಕ್ಷ ರೂ. ನಷ್ಟ ಉಂಟಾಗಿದೆ. ನಗರಸಭೆ ವತಿಯಿಂದ ತಡೆಗೋಡೆ ಮರು ನಿರ್ಮಾಣ ಮಾಡಿಕೊಡುವಂತೆ ಮನೆ ಮಂದಿ ಮನವಿ ಮಾಡಿದರು.
ವಿರಾಜಪೇಟೆ NEWS DESK ಜು.27 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ಸುಸಜ್ಜಿತ ಕಟ್ಟಡ, ನುರಿತ ಉಪನ್ಯಾಸಕರು, ಉತ್ತಮ ಗ್ರಂಥಾಲಯ, ಇಂಡಸ್ಟ್ರಿಯಲ್ ವಿಸಿಟ್ ಕಾರ್ಯಕ್ರಮ, ಇಂಟರ್ನ್ಶಿಪ್ ಹಾಗೂ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಳ್ಳುವಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಮಾತ್ರವಲ್ಲದೆ ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವೃತ್ತಿ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕಚೇರಿಯ ವೇಳೆಯಲ್ಲಿ ಕಾಲೇಜಿಗೆ ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಮಡಿಕೇರಿ NEWS DESK ಜು.26 : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಗರದ ಕೊಡಗು ವಿದ್ಯಾಲಯದ, ಎನ್ ಸಿಸಿ ಕೆಡೆಟ್‌ಗಳು ಫೀಲ್ಡ್ ಮಾರ್ಷಲ್ ಕೆ.ಎಂ.ಕಾಯ೯ಪ್ಪ ಪ್ರತಿಮೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಕೊಡಗು ವಿದ್ಯಾಲಯದ ಎನ್.ಸಿ.ಸಿ. ಕೆಡೆಟ್‌ಗಳು ಪ್ರತಿಮೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಶಾಲೆಯ ಪ್ರಾಂಶುಪಾಲರಾದ ಕೆ. ಎಸ್. ಸುಮಿತ್ರಾ ಮಾತನಾಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದು ಮತ್ತು ನಾಗರಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮುಖ್ಯವೆಂದು ಹೇಳಿದರು.
ಮಡಿಕೇರಿ NEWS DESK ಜು.26 : ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ನಗರಸಭೆ ಬಳಿ ಇರುವ ಯುದ್ಧ ಸ್ಮಾರಕದ ಬಳಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶೃದ್ಧಾಂಜಲಿ ಸಲ್ಸಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯ್ ಸ್ಥಾನಿಯ ಆಯುಕ್ತರಾದ ಮುತ್ತಪ್ಪ ಜಿಲ್ಲಾ ಖಜಾಂಚಿ ಮುದ್ದಪ್ಪ, ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ನೀಲಮ್ಮ, ಹಾಗೂ ಕಾರ್ಯದರ್ಶಿ ಚಂದ್ರಶೇಖರ್ ಹಾಜರಿದ್ದರು.
ಮಡಿಕೇರಿ NEWS DESK ಜು.26 : ಲಯನ್ಸ್ ಕ್ಲಬ್ ಮಡಿಕೇರಿ ವತಿಯಿಂದ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ದೇಶದ ಸೇವೆಗಾಗಿ ತಮ್ಮ ಅತ್ಯುನ್ನತ ಬಲಿದಾನ ನೀಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಅನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ಕುಮಾರ್ ಎಲ್.ಮಾತನಾಡಿ, ಭಾರತೀಯ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯ, ಶೌರ್ಯ ಮತ್ತು ದೇಶಭಕ್ತಿ ಸದಾ ಸ್ಮರಣೀಯ, ಕಾರ್ಗಿಲ್ ವೀರರ ತ್ಯಾಗವು ಮುಂದಿನ ಪೀಳಿಗೆಗೂ ರಾಷ್ಟ್ರೀಯ ಏಕತೆ ಮತ್ತು ಸೇವೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಸದಾ ಸ್ಪೂರ್ತಿಯಾಗಿರುತ್ತದೆ ಎಂದು ಹೇಳಿದರು. ಲಯನ್ಸ್ ಕ್ಲಬ್ ಸದಸ್ಯ ಬೊಳ್ಳಪ್ಪ ಕೆ.ಎ. ಅವರು ಕಾರ್ಗಿಲ್ ಯುದ್ಧದ ಐತಿಹಾಸಿಕ ಮಹತ್ವ, ಭಾರತೀಯ ಸೇನೆ ಎದುರಿಸಿದ ಸವಾಲುಗಳು ಹಾಗೂ ಯುದ್ಧದ ಸಮಯದಲ್ಲಿ ಯೋಧರು ಮೆರೆದ ಸಾಹಸ ಮತ್ತು ದೃಢಸಂಕಲ್ಪದ ಕುರಿತು ಮಹತ್ವದ ಮಾಹಿತಿ ನೀಡಿದರು. ಕ್ಲಬ್‌ನ ಕಾರ್ಯದರ್ಶಿ ಮಧುಕರ್ ಕೆ., ಕೋಶಾಧಿಕಾರಿ ನವೀನ್ ಅಂಬೆಕಲ್, ನಿರ್ದೇಶಕರಾದ ಜೆ.…
ಮಡಿಕೇರಿ NEWS DESK ಜು.26 : ವಿರಾಜಪೇಟೆ ತಾಲ್ಲೂಕಿನ ಆನಂದಪುರ ಸಮೀಪದ ಕಾಫಿ ತೋಟವೊಂದರಲ್ಲಿ ಹೆಣ್ಣಾನೆಯ ಮೃತದೇಹ ಪತ್ತೆಯಾಗಿದೆ. ಆಹಾರ ಅರಸುತ್ತಾ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ತಾಯಿಯನ್ನು ಕಳೆದುಕೊಂಡ ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿದ್ದ ದೃಶ್ಯ ಕಂಡು ಬಂತು. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ಮತ್ತು ಅಂತಿಮ ಸಂಸ್ಕಾರಕ್ಕೆ ಕ್ರಮ ಕೈಗೊಂಡರು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದರು.






