ಲೇಖಕ: admin

ಮಡಿಕೇರಿ NEWS DESK ಏ.26 : ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಶ್ರೀ ಅರ್ಧನಾರೀಶ್ವರ ದೇವಾಲಯದ ವಾರ್ಷಿಕೋತ್ಸವವು ಏ.27ರಿಂದ ಮೇ1ರ ವರೆಗೆ ನಡೆಯಲಿದೆ. ಉತ್ಸವದ ಅಂಗವಾಗಿ ಏ.27ರ ಆದಿತ್ಯವಾರ ಬೆಳಿಗ್ಗೆ 6.30ಗಂಟೆಗೆ ಬೊಟ್ಲಪ್ಪ ದೇವಾಲಯದಿಂದ ತೀರ್ಥ ತರುವುದು, ಗಣಪತಿ ಹೋಮ, ದೇವರಿಗೆ ಅಭಿಷೆೆÃಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6ಗಂಟೆಗೆ ದೇವರ ಭಂಡಾರ ತರುವುದು, ದೇವರು ಬಲಿಬರುವುದು, ಬೆಳಕು, ಅನ್ನಸಂತರ್ಪಣೆ ನಡೆಯಲಿದೆ. ಏ.28ರ ಸೋಮವಾರ ಬೆಳಿಗ್ಗೆ 5 ಗಂಟೆಗೆ ದೇವರು ನೃತ್ಯ ಬಲಿ ಬರುವುದು, 10 ಗಂಟೆಗೆ ಹಬ್ಬದ ಕಟ್ಟು ಮುರಿಯುವುದು, ಮಹಾಪೂಜೆ, ದೇವರ ನೆರಪು ಬಲಿ ಬರುವುದು, ವಸಂತಪೂಜೆ, ದೇವರ ಶಯನ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಗಂಟೆಗೆ ದೇವರ ಜಳಕ ಕಾರ್ಯ ನಡೆಯಲಿದೆ. ಬಳಿಕ ದೇವರ ನೃತ್ಯ ಬಲಿ ನಡೆಯಲಿದ್ದು, ನಂತರ ಅನ್ನಸಂತರ್ಪಣೆಯಾಗಲಿದೆ. ಏ.29ರ ಮಂಗಳವಾರ ಬೆಳಗ್ಗೆ 10ಗಂಟೆಗೆ ಶುದ್ಧ ಕಲಶ, ಮಹಾಪೂಜೆ, ಅನ್ನಸಂತರ್ಪಣೆ. ಏ.30ರÀ ಬುಧವಾರ ಸಂಜೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೋತಬರುವುದು, ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಲಿದೆ.…

Read More

ಮಡಿಕೇರಿ NEWS DESK ಏ.26 : ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ನಮ್ಮ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ನಗರದ ಮಹದೇವಪೇಟೆಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದರು. ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಬಶೀರ್, ಪ್ರಧಾನ ಕಾರ್ಯದರ್ಶಿ ಪಿ.ಕೆ.ಖಾಲಿದ್, ಕೋಶಾಧಿಕಾರಿ ಅಬ್ದುಲ್ ಹಮೀದ್ ಫೈಝಿ, ಟ್ರಸ್ಟಿಗಳಾದ ಎಂ.ಯು.ಅಬ್ದುಲ್ ಮಜೀದ್, ಕೆ.ಎಂ.ಹನೀಫ್ ಹಾಗೂ ಒ.ಹೆಚ್.ಸಿದ್ಧಿಕ್ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.25 NEWS DESK : ಹಾಕಿ ಪ್ರೇಮಿಗಳನ್ನು ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವ ಕುತೂಹಲಕಾರಿ ಘಟ್ಟವನ್ನು ಪ್ರವೇಶಿಸಿದೆ. ಶುಕ್ರವಾರದ ರೋಚಕ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ನೆಲ್ಲಮಕ್ಕಡ, ಮಂಡೇಪಂಡ, ಚೇಂದಂಡ ಮತ್ತು ಕುಪ್ಪಂಡ ತಂಡಗಳು ಸೆಮಿಫೈನಲ್ ಹಂತವನ್ನು ಪ್ರವೇಶಿಸಿವೆ. ತೀವ್ರ ಪೈಪೋಟಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೆಲ್ಲಮಕ್ಕಡ ತಂಡ 3-1 ಗೋಲುಗಳ ಅಂತರದಿಂದ ಬಲಿಷ್ಠ ಕೂತಂಡ ತಂಡದ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್ ಹಂತಕ್ಕೇರಿತು. ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ನೆಲ್ಲಮಕ್ಕಡ ತಂಡದ ವೀಕ್ಷಿತ್ ಸೋಮಯ್ಯ ಒಂದು ಗೋಲು ಗಳಿಸಿದರೆ, ಸಚಿನ್ 2 ಸೊಗಸಾದ ಗೋಲುಗಳನ್ನು ಬಾರಿಸಿ ತಂಡದ ಗೆಲುವನ್ನು ಖಾತರಿ ಪಡಿಸಿದರು. ಎದುರಾಳಿ ಕೂತಂಡ ಪರವಾಗಿ ಸಜನ್ ದೇವಯ್ಯ ಅವರು ಒಂದು ಗೋಲನ್ನಷ್ಟೆ ಗಳಿಸಲು ಶಕ್ತರಾದರು. ಪಂದ್ಯದಲ್ಲಿ ಕೂತಂಡ ಬೋಪಣ್ಣ ಪಂದ್ಯ ಪುರುಷೋತ್ತಮ ಗೌರವವನ್ನು ಪಡೆದುಕೊಂಡರು. ಮಂಡೇಪಂಡ-ಕರವಂಡ-ದ್ವಿತೀಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಂಡೇಪಂಡ ತಂಡ 6-0 ಗೋಲುಗಳ ಭಾರೀ ಅಂತರದಿಂದ ಕರವಂಡ ತಂಡವನ್ನು…

Read More

ಮಡಿಕೇರಿ ಏ.25 NEWS DESK : ಕಾಡಾನೆ ದಾಳಿಯಿಂದ ರೈತರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಗುಂದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಿಣ್ಣಪ್ಪ (76) ಎಂಬುವವರೇ ಮೃತ ದುರ್ದೈವಿ. ಗುರುವಾರ ಮಧ್ಯರಾತ್ರಿ ಮನೆಯ ಸಮೀಪ ಏನೋ ಶಬ್ಧವಾಗುತ್ತಿದೆ ಎಂದು ಬಾಗಿಲು ತೆರೆದು ಹೊರ ಬಂದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ಚಿಣ್ಣಪ್ಪ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕಾಡಾನೆ ವಿರುದ್ಧ ಅರಣ್ಯ ಇಲಾಖೆ ಸೂಕ್ತ ಕಾರ್ಯಾಚರಣೆ ನಡೆಸಲಿದೆ ಎಂದು ಭರವಸೆ ನೀಡಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯ ಸಚಿವರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.  ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು…

Read More

ಮಡಿಕೇರಿ ಏ.25 NEWS DESK : ಭೂರಹಿತ ಬಡವರ್ಗದ ಮಂದಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಎಐಬಿಎಸ್‍ಪಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್ ಹಾಗೂ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಡಳಿತ ಭವನದವರೆಗೆ ಅಧಿಕ ಸಂಖ್ಯೆಯ ನಿವೇಶನ ರಹಿತರು ಘೋಷಣೆಗಳ ಸಹಿತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಕ್ಷದ ಪ್ರಮುಖರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಸ್ವಂತ ಸೂರಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ತೋಟಗಳ ಲೈನ್ ಮನೆಗಳಲ್ಲಿ ಬದುಕು ನಡೆಸುತ್ತಿರುವ ಬಡ ಶೋಷಿತ ಕಾರ್ಮಿಕ ವರ್ಗ ಸ್ವಂತ ನೆಲೆಗಾಗಿ ಹೋರಾಟಗಳನ್ನು ನಡೆಸುತ್ತಲೆ ಬಂದಿದೆ. ಸಾವನ್ನಪ್ಪಿದವರಿಗೆ ಕನಿಷ್ಟ ಗೌರವಯುತ ಅಂತಿಮ ಸಂಸ್ಕಾರಕ್ಕೆ ಸ್ಮಶಾನದ ಜಾಗವೂ ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಎಐಬಿಎಸ್‍ಪಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ಮಾತನಾಡಿ, ಹೊದ್ದೂರು ಮತ್ತು ಮೂರ್ನಾಡು ಗ್ರಾಮ ಪಂಚಾಯ್ತಿ…

Read More

ಮಡಿಕೇರಿ ಏ.25 NEWS DESK : ಗುರುವಾರ ಕೊನೆಯುಸಿರೆಳೆದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಅವರ ಅಂತಿಮ ಸಂಸ್ಕಾರ ಇಂದು ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ನಗರದಲ್ಲಿ ನಡೆಯಿತು. ಸಚಿವ ಕೆ.ಜೆ.ಜಾರ್ಜ್ ಅವರು ನಗರಕ್ಕಾಗಮಿಸಿ, ಇಲ್ಲಿನ ಸ್ಟೀವರ್ಟ್ ಹಿಲ್ ಬಳಿಯ ಮನೆಯಲ್ಲಿ ತಮ್ಮ ಸ್ನೇಹಿತ ಮಿಟ್ಟು ಚಂಗಪ್ಪ ಅವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು ಮತ್ತು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಬೆಳಗ್ಗೆ 10 ಗಂಟೆಗೆ ಗಾಂಧಿ ಮೈದಾನಕ್ಕೆ ಮಿಟ್ಟು ಚಂಗಪ್ಪ ಅವರ ಪಾರ್ಥಿವ ಶರೀರವನ್ನು ಸ್ಥಳಾಂತರಿಸಿ, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸ್‍ರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಅರಕಲಗೋಡು ಶಾಸಕ ಎ.ಮಂಜು, ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಬಿಜೆಪಿಯ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ…

Read More

ಮಡಿಕೇರಿ ಏ.25 NEWS DESK : ಮಹಿಳೆಯರು ಸ್ವ ಉದ್ಯೋಗದಿಂದ ಪ್ರಗತಿ ಗೊಂಡರೆ ದೇಶವು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಹಿಳಾ ಕೃಷಿಕರು, ಬರಹಗಾರ್ತಿ ಸಹನಾ ಕಾಂತಬೈಲು ಹೇಳಿದರು.ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಮಾಜ ಕಾರ್ಯ ವಿಭಾಗ ವತಿಯಿಂದ ರತ್ನ ಶ್ರೀ ಜ್ಞಾನ ವಿಕಾಸ ಕೇಂದ್ರ ಕೊಯನಾಡು ಸಹಭಾಗಿತ್ವದಲ್ಲಿ ಕೊಯನಾಡು ಶ್ರೀ ಗಣೇಶ್ ಕಲಾ ಮಂದಿರದಲ್ಲಿ  ನಡೆದ  ಮಹಿಳಾ ಸಬಲೀಕರಣ ಮತ್ತು ನೀರಿನ ಸಂರಕ್ಷಣೆ  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು, ಮಾತನಾಡಿದರು. ಮನೆಯಲ್ಲಿಯೇ ಕೋಳಿ ಸಾಕಾಣಿಕೆ, ಹಪ್ಪಳ ಸಂಡಿಗೆ ಇತ್ಯಾದಿ ತಯಾರಿಸಿ ಮಾರಾಟ ಮಾಡುವುದರಿಂದ ಮಹಿಳೆಯರು ಆರ್ಥಿಕವಾಗಿ ಮುಂದುವರಿಯಲು ಸಾಧ್ಯ ಎಂದರು. ನೀರಿನ ಮಿತ ಬಳಕೆಯಿಂದಲೂ ಜಲ ಸಂಪತ್ತನ್ನು ಉಳಿಸಲು ಸಾಧ್ಯ ಹಾಗೂ ಯಾವೆಲ್ಲ ಕ್ಷೇತ್ರದಲ್ಲಿ ಮಹಿಳೆಯರು ಸಬಲರಾಗಬಹುದು ಎಂಬುದನ್ನು ವಿವರಿಸಿದರು.  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಮಧುಕರ್ ಮಾತನಾಡಿ, ಸಮಾಜ ಕಾರ್ಯ ಶಿಕ್ಷಣ ಇದೊಂದು ವೃತ್ತಿ ಬದುಕಿನ ಅವಕಾಶವಾಗಿದೆ. ಸಮಾಜ…

Read More

ಸುಂಟಿಕೊಪ್ಪ ಏ.25 NEWS DESK  : 7ನೇ ಹೊಸಕೋಟೆ ಗ್ರಾ.ಪಂ ಆವರಣದಲ್ಲಿ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮೊಂಬತ್ತಿ ಹಿಡಿದು ಸಂತಾಪ ಸೂಚಿಸಿದರು. ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲತಾ ಬಸವರಾಜ್ ರವರ ನೇತೃತ್ವದಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮ್ ಗ್ರಾಮದಲ್ಲಿ ತೀವ್ರ ವಾದಿಗಳು ನಡೆಸಿದ ಅತಿ ಕ್ರೂರ ಆಕ್ರಮಣವನ್ನು ಹಾಗೂ ಅಮಾಯಕರ ಬಲಿ ಪಡೆದ ಕ್ರಮವನ್ನು ಖಂಡಿಸಿ ಮೃತರ ಭಾವಚಿತ್ರಗಳನ್ನು ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ಮೊಂಬತ್ತಿ ಬೆಳಗಿಸಿ, ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಪಿ.ಸೋಮಚಂದ್ರ, ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್, ಸದಸ್ಯರುಗಳಾದ ರಮೇಶ್, ಸಿದ್ಧೀಕ್, ಒಕ್ಕೂಟದ ಸದಸ್ಯರುಗಳಾದ ರಶ್ಮಿ, ಉಷಾ ಶ್ರೀಧರ್, ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.

Read More

ಮಡಿಕೇರಿ NEWS DESK ಏ.25 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿರುವ ದಾಳಿ ಅಮಾನವೀಯವಾಗಿದ್ದು, ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಾತ್ಯತೀತ ಜನತಾದಳದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿಕಿರಣ್ ಶೆಟ್ಟಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿ ಖಂಡನೀಯ, ಅಮಾಯಕ ಪ್ರವಾಸಿಗರ ಸಾವಿಗೆ ಜೆಡಿಎಸ್ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಭಾರತವನ್ನು ಭಯೋತ್ಪಾದಕ ಮುಕ್ತ ದೇಶವನ್ನಾಗಿ ಮಾಡಲು ಅಗತ್ಯವಿರುವ ಕಠಿಣ ಕಾನೂನು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಅಮಾಯಕ ನಾಗರೀಕರ ಹಾಗೂ ಯೋಧರ ಹತ್ಯೆಯಾಗುವುದನ್ನು ತಪ್ಪಿಸಬೇಕು. ಇನ್ನು ಮುಂದೆ ಭದ್ರತಾ ವ್ಯವಸ್ಥೆ ವೈಫಲ್ಯವಾಗದಂತೆ ಮತ್ತು ಗುಪ್ತಚರ ಇಲಾಖೆ ಸಕ್ರಿಯವಾಗುವಂತೆ ಕ್ರಮ ಕೈಗೊಳ್ಳಬೇಕು. ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಮಾಡುವುದು ಅಧರ್ಮದ ಕಾರ್ಯವಾಗಿದ್ದು, ದೇಶದ್ರೋಹಿಗಳಿಗೆ ಯಾರೂ ಬೆಂಬಲ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ದೇಶದ ಭದ್ರತೆಗಾಗಿ ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು ಮತ್ತು ಉಗ್ರರ ನಿಗ್ರಹಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ಸೂಚಿಸಬೇಕು ಎಂದು ರವಿಕಿರಣ್ ಶೆಟ್ಟಿ ತಿಳಿಸಿದ್ದಾರೆ.

Read More

ಕುಶಾಲನಗರ ಏ.25 NEWS DESK : ವಿಶ್ವ ಸಾಕು ಪ್ರಾಣಿಗಳ ಅಂಗವಾಗಿ ಕುಶಾಲನಗರ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಮೇ 4 ರಂದು ಸಾಕು ನಾಯಿ ಮತ್ತು ಬೆಕ್ಕು ಗಳ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ.  ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ  ಣಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಕೊಡಗು ಜಿಲ್ಲೆಯ ಎಲ್ಲರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಎಲ್ಲ ನಾಯಿ, ಬೆಕ್ಕಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ  ಚಿತ್ರ ರಮೇಶ್ 9342202405 ಮತ್ತು ನೇಹಾ ಜಗದೀಶ್ 9845044645 ಸಂಪರ್ಕಿಸಬಹದಾಗಿದೆ. ಮೊದಲು ಬಂದ 50 ಸ್ಪರ್ಧಿಗಳಿಗೆ ಮಾತ್ರ ಅವಕಾಶವಿರುತ್ತದೆ. 3 ವಿವಿಧ ರೀತಿಯಲ್ಲಿ ಆಯ್ಕೆ ಮಾಡಿ ನಾಯಿ ಮತ್ತು ಬೆಕ್ಕು ವಿಭಾಗದಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದು ಕ್ಲಬ್ ನ ಅಧ್ಯಕ್ಷೆ ಚಿತ್ರ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More