ಲೇಖಕ: admin

ಮಡಿಕೇರಿ ಜೂ.24 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಜೂನ್, 28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ‘ಸಿಇಟಿ’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ (ನ್ಯೂ ಸೀಟ್ ಸೆಲೆಕ್ಷನ್ ಪ್ರೋಸೆಸ್) ಕಾರ್ಯಾಗಾರ ನಡೆಯಲಿದೆ. ಆದ್ದರಿಂದ ಎಲ್ಲಾ ಯುಜಿ ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಹಾಜರಾಗಿ ಸೀಟು ಹಂಚಿಕೆಯ ಮಾರ್ಗದರ್ಶನದ ಕಾರ್ಯಗಾರ ಸದುಪಯೋಗ ಪಡೆಯಲು ಕೋರಿದೆ. ಜಿಲ್ಲೆಯ ಮತ್ತು ನೆರೆ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ಪಿಯುಸಿ, ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿದ್ದು, ಸಿಇಟಿ ಪರೀಕ್ಷೆ ಬರೆದಿರುವ ತಮ್ಮ ಕಾಲೇಜಿನ ವಿದ್ಯಾರ್ಥಿಗಳ ಗಮನಕ್ಕೆ ತರಲು ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸಹಕರಿಸುವಂತೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಕೆ.ಐ.ಪರಶಿವಮೂರ್ತಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.24 NEWS DESK : 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜೂ.27 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ(ಆತ್ಮ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26 ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‍ನಲ್ಲಿ ಪರಿಣತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.30 ಸಾವಿರ ಗೌರವ ಧನ ನೀಡಲಾಗುವುದು. ಈ ಹುದ್ದೆಗೆ ಅರ್ಹರಿರುವ ಆಭ್ಯರ್ಥಿಗಳು ಜುಲೈ, 05 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆತ್ಮ ವಿಭಾಗ, ಕೊಡಗು…

Read More

ಮಡಿಕೇರಿ ಜೂ.24 NEWS DESK :  ಕೇಂದ್ರ ಸರ್ಕಾರದಿಂದ ‘ಮಿಷನ್ ಶಕ್ತಿ’ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ “ಜಿಲ್ಲಾ ಮಹಿಳಾ ಸಬಲೀಕರಣ ಘಟಕ” ಹಾಗೂ “ಸಖಿ ಒನ್ ಸ್ಟಾಫ್ ಸೆಂಟರ್” ನಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಲಿ ಇರುವ ಹುದ್ದೆಗಳಿಗೆ ವಿದ್ಯಾರ್ಹತೆ ನಿಗದಿಪಡಿಸಿ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಡಿಇಒ ಮತ್ತು ಪ್ರೋಗ್ರಾಮ್ ಅಸಿಸ್ಟೆಂಟ್ ಫಾರ್ ಪಿಎಂಎಂವಿವೈ (1 ಹುದ್ದೆ), ಐಟಿ/ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 3 ವರ್ಷದ ಡಾಟಾ ಮ್ಯಾನೇಜ್‍ಮೆಂಟ್, ಟೈಪಿಂಗ್ ತಿಳಿದಿರಬೇಕು. ಸ್ವೀಪರ್/ಗಾರ್ಡ್ ಫಾರ್ ಸಖಿ ಒನ್ ಸ್ಟಾಪ್ ಸೆಂಟರ್(1 ಹುದ್ದೆ) ಮಡಿಕೇರಿ 24/7(ಹಗಲು ಮತ್ತು ರಾತ್ರಿ ಸಿಪ್ಟ್), ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು. 2 ವರ್ಷದ ಅನುಭವ ಹೊಂದಿರಬೇಕು. ಪಾರಾಲೀಗಲ್ ಪರ್ಸನಲ್/ಲಾಯರ್(1 ಹುದ್ದೆ) ಕಾನೂನು ಪದವಿ ಪಡೆದಿರಬೇಕು(2-3 ವರ್ಷದ ಅನುಭವ). ಅರ್ಜಿ ಸಲ್ಲಿಸಲು ಜುಲೈ, 07 ಕೊನೆಯ ದಿನವಾಗಿದೆ. ಸಂದರ್ಶನದ ದಿನಾಂಕ ನಂತರ ತಿಳಿಸಲಾಗುವುದು.…

Read More

ಮಡಿಕೇರಿ ಜೂ.24 NEWS DESK : ನಾಪೋಕ್ಲು ಹೋಬಳಿಯ ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಎಂಬುವವರ ವಾಸದ ಮನೆಯ ಮೇಲ್ಛಾವಣಿ  ಗಾಳಿ ಮಳೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಡಿಕೇರಿ ಜೂ.24 NEWS DESK : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ದರಾದ ಚೆಟ್ಟಡ್ಕ ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಹೊಸಪಟ್ಟಣದ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಯಲ್ಲಿನ ವಿಚಾರಗಳು ಹಾಗೂ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹೊಸಪಟ್ಟಣ, ವಿರೂಪಾಕ್ಷ ಪುರ ವ್ಯಾಪ್ತಿಯಲ್ಲಿ ಹುಲಿಗಳೆರಡು ಕಾಣಿಸಿಕೊಂಡು ಕಾಡಂಚಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳು ನಿಗಾವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ಜೀವಹಾನಿ ಆಗದಂತೆ ತುರ್ತು ಕ್ರಮ ವಹಿಸುವಂತೆ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಒತ್ತಾಯಿಸಿದರು. ದಾಸವಾಳ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಅಳವಡಿಸಿರುವ ರೈಲ್ವೆ ಬ್ಯಾರಿಕೇಡ್ ಹಾಳಾಗಿದ್ದು, ಸರಿಪಡಿಸಬೇಕೆಂದು ಗ್ರಾಮಸ್ಥರಾದ ಸಚಿನ್ ಆಗ್ರಹಿಸಿದರು. ಮೀನುಕೊಲ್ಲಿ, ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕಾಡು ಮರಗಳ ಹನನವಾಗುತ್ತಿದೆ. ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂದು ಮಾವಾಜಿ ರವಿ ನೇರವಾಗಿ ಆರೋಪಿಸಿದರು. ಈ ಬಗ್ಗೆ ಜಂಟಿ ಕಾರ್ಯಾಚರಣೆ ಮಾಡಿ ಮರಗಳ್ಳರನ್ನು…

Read More

ಮಡಿಕೇರಿ ಜೂ.24 NEWS DESK : ವಿರಾಜಪೇಟೆ ಹೋಬಳಿ ಪೊದಕೋಟೆ ಗ್ರಾಮದಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಗ್ರಾಮದ ನಿವಾಸಿ ಹೆಚ್.ಕೆ.ಬಾಬು ವಾಸದ ಮನೆಯು ಮಳೆಯಿಂದಾಗಿ ಭಾಗಶಃ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು, ಸಹಾಯಕ ಅಭಿಯಂತರರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

Read More

ವಿರಾಜಪೇಟೆ ಜೂ.24 NEWS DESK : ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ಪ್ರಭಾರ ಉಪನಿರ್ದೇಶಕರಾಗಿ ತಾತಂಡ ಜ್ಯೋತಿ ಪ್ರಕಾಶ್ ನೇಮಕಗೊಂಡಿದ್ದಾರೆ. ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ ಅವರು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸೇವೆಯಲ್ಲಿ ಹಿರಿತನ ಹೊಂದಿರುವ, ಪ್ರಸ್ತುತ ವಿರಾಜಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿ ಅವರು ಪ್ರಭಾರಿ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

Read More

ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಲೋಪಮುದ್ರ ದೃಷ್ಟಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಸೌಮ್ಯ ಗಣೇಶ್ ನಾಣಯ್ಯ, ಇಂದು ನಾವು ಕಣ್ಣಿನ ತೊಂದರೆ ಇರುವವರಿಗೆ ಸ್ಕ್ರೀನಿಂಗ್ ಟೆಸ್ಟ್ ಮಾಡುತ್ತಿದ್ದೇವೆ. ಹೆಚ್ಚಿನ ಜನರಿಗೆ ಕಣ್ಣಿನ ತೊಂದರೆಯ ಬಗ್ಗೆ ತಿಳಿದಿರುವುದಿಲ್ಲ. ಬಿಪಿ, ಶುಗರ್, ಇನ್ನಿತರ ಆರೋಗ್ಯ ಸಮಸ್ಯೆಗಳಿದ್ದರೆ ಕಣ್ಣಿಗೆ ಯಾವ ರೀತಿಯ ಪರಿಣಾಮಗಳಾಗುತ್ತದೆ ಎಂಬುವುದು ತಿಳಿದಿರುವುದಿಲ್ಲ. ಆದರಿಂದ ಸ್ಕ್ರೀನಿಂಗ್ ಟೆಸ್ಟ್ ಬಹಳ ಮುಖ್ಯವಾಗಿದ್ದು, ಸ್ಕ್ರಿನಿಂಗ್ ಟೆಸ್ಟ್ ಮಾಡಿ ಹೆಚ್ಚಿನ ಚಿಕೆತ್ಸೆಯ ಅವಶ್ಯಕತೆ ಇದ್ದರೆ ನಮ್ಮ ಮುಖ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತೇವೆ. ವಿರಾಜಪೇಟೆ ಕೊಡವ ಸಮಾಜ ಒಂದೊಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.  ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಎ.ಮನು ಕುಮಾರ್ ಮಾತನಾಡಿ, ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ…

Read More

ಮಡಿಕೇರಿ ಜೂ.24 NEWS DESK : ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಟೋಳಿ ಗುಂಡಿಕೆರೆಯ ಮಸೀದಿ ಮುಂಭಾಗದಿಂದ ಬೇಟೋಳಿ ಸರ್ಕಾರಿ ಶಾಲೆಯವರೆಗೆ ಮತ್ತು ಸ್ಥಳೀಯ ಅಲ್ಪಸಂಖ್ಯಾತ ಕುಟುಂಬಸ್ಥರುಗಳ ಮನೆಗಳಿಗೆ ಹಾದು ಹೋಗುವ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಕ್ಷೇತ್ರದ ನಿರಂತರ ಅಭಿವೃದ್ಧಿಯ ಭಾಗವಾಗಿ, ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಅನುದಾನ ರೂ.30 ಲಕ್ಷದ ಅನುದಾನದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ  ನಿರ್ಮಾಣವಾಗಿದೆ. ಗ್ರಾಮಸ್ಥರ ಮನವಿ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ರಸ್ತೆ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಪಿ.ಎ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ…

Read More