ಮಡಿಕೇರಿ ಜು.9 NEWS DESK : ಯುವ ಕಾಂಗ್ರೆಸ್ ವತಿಯಿಂದ ವಿಕಾಸ್ ಜನ ಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಹಿರಿಯರಿಗೆ ಸ್ವೇಟರ್ ಹಾಗೂ ಬ್ಲಾಂಕೆಟ್ ಗಳನ್ನು ವಿತರಿಸಿ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಕೊಡಗು ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮೈಸಿ ಕತ್ತಾಣಿ, ರಾಹುಲ್ ಮಾರ್ಷಲ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ ಕೊತ್ತೊಳಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡ ಸದಸ್ಯರಾದ ಚಂದ್ರಶೇಖರ್ ಆರ್.ಪಿ, ಮಿನಾಜ್ ಪ್ರವೀಣ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೌಸರ್, ಮಡಿಕೇರಿ ನಗರಸಭ ಸದಸ್ಯರಾದ ಜಗದೀಶ್ ಜಿ.ಸಿ, ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷ ದಿನೇಶ್ ಕೆ.ಆರ್, ಎನ್.ಎಸ್.ಯು.ಐ ಮಡಿಕೇರಿ ಬ್ಲಾಕ್ ಅಧ್ಯಕ್ಷ ಶರಣ್, ಸೇವಾದಳದ ನಜೀರ್, ಹಬೀಬ್, ಶೋಯಬ್ ಸಿದ್ದಾಪುರ, ಮಿಥುನ್ ಸಿದ್ದಾಪುರ, ಜಕ್ರಿಯ,…
ಲೇಖಕ: admin
ಮಡಿಕೇರಿ ಜು.9 NEWS DESK : ಕೋಮು ದ್ವೇಷದ ಭಾವನೆಗಳು ಸಮಾಜದಲ್ಲಿ ದಳ್ಳುರಿಯಾಗಿ ಕಾಣಿಸಿಕೊಳ್ಳುತ್ತಿರುವ ಈ ದಿನಗಳಲ್ಲಿ, ಶಾಂತಿ ಸಹಬಾಳ್ವೆಯನ್ನು ಸಾರಿದ ಸಾಮ್ರಾಟ ಅಶೋಕ ಪ್ರಸ್ತುತ ಎನಿಸಿಕೊಳ್ಳುತ್ತಾನೆ. ಆತನ ಸಂದೇಶಗಳನ್ನು ಜನಮಾನಸಕ್ಕೆ ತಲುಪಿಸುವ ಪ್ರಯತ್ನವಾಗಿ ಜು.13 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬೆಂಗಳೂರಿನಲ್ಲಿ ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಪ್ರದರ್ಶನ ನಡೆಯಲಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಾಜಶೇಖರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಪುರ ಬುದ್ಧಿಸ್ಟ್ ಅಕಾಡೆಮಿ ಆಫ್ ಪರ್ಫಾಮಿಂಗ್ ಆರ್ಟ್‍ನಿಂದ ಅಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ಬೆಂಗಳೂರಿನ ವಸಂತ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಪರಿಕಲ್ಪನೆ ಮತ್ತು ನಿರ್ದೇಶನ ನಾಗಪುರದ ಅಶೋಕ ಜಾಂಬುಲ್ಕರ್ ಹಾಗೂ ನಿರ್ಮಾಣ ನಾಗಪುರದ ಎ.ವಂದನಾ ಜಾಂಬುಲ್ಕರ್ ಅವರದೆಂದು ಮಾಹಿತಿ ನೀಡಿದರು. ‘ಕಳಿಂಗ ಯುದ್ಧ’ದ ಗೆಲುವಿನ ನಂತರ, ಯುದ್ಧದಿಂದ ಉಂಟಾದ ಸಾವು ನೋವುಗಳಿಂದ ಜರ್ಝರಿತನಾದ ಸಾಮ್ರಾಟ್ ಅಶೋಕ ಶಸ್ತ್ರ ತ್ಯಾಗ ಮಾಡಿ ಶಾಂತಿ ಸಹಬಾಳ್ವೆಯನ್ನು…
ಮಡಿಕೇರಿ ಜು.9 NEWS DESK : ನಗರದ ಶ್ರೀ ಚೌಡೇಶ್ವರಿ ದಸರಾ ಮಂಟಪ ಸಮಿತಿಯ ಅಧ್ಯಕ್ಷರಾಗಿ ಜಗದೀಶ್ (ಸೋಮಣ್ಣ) ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಡಿ.ಎಂ.ಮದನ್, ಕಾರ್ಯದರ್ಶಿಯಾಗಿ ಚಿನ್ಮಯ್ ಕಿಗ್ಗಾ, ಸಹ ಕಾರ್ಯದರ್ಶಿಯಾಗಿ ಶರತ್, ಖಜಾಂಚಿಯಾಗಿ ಕುಮಾರ್, ಉಪ ಖಜಾಂಚಿಯಾಗಿ ಅಂಕುಶ್, ಅನಿಲ್ ಕೆಂಚೆಟ್ಟಿ ನೇಮಕಗೊಂಡಿದ್ದಾರೆ.
ಮಡಿಕೇರಿ ಜು.9 NEWS DESK : ಮೈಸೂರು-ಕುಶಾಲನಗರ ಎಕ್ಸ್ಪ್ರೆಸ್ವೇ ಕಾಮಗಾರಿಯ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕುಶಾಲನಗರ ರೈಲು ಸಂಪರ್ಕ ಯೋಜನೆಗೆ ಹಣ ಇಲ್ಲ ಎಂದು ರಾಜ್ಯಸರ್ಕಾರ ಭೂಸ್ವಾಧೀನ ನಡೆಸಿಲ್ಲ. ಕೊಡಗಿನ ರಸ್ತೆಗಳ ಅಭಿವೃದ್ಧಿಗಾಗಿ ಕೇಂದ್ರದ ಗ್ರಾಮ ಸಡಕ್ ಯೋಜನೆಯಡಿ ರಾಜ್ಯಸರ್ಕಾರವೇ ಪ್ರಸ್ತಾವ ಕಳಿಸಬೇಕಿದೆ. ಮೈಸೂರು-ಕುಶಾಲನಗರ ಎಕ್ಸ್ಪ್ರೆಸ್ವೇ ಕಾಮಗಾರಿಯ ನಾಲ್ಕು ಪ್ಯಾಕೇಜ್ ಪೈಕಿ ೩ರಲ್ಲಿ ಕೆಲಸ ಶುರುವಾಗಿದೆ. 1 ಪ್ಯಾಕೇಜ್‌ಗೆ ಪರಿಸರಕ್ಕೆ ಸಂಬಂಧಿಸಿದಂತೆ ಕ್ಲಿಯರೆನ್ಸ್ ಬೇಕಾಗಿದೆ. ಅದು ಬಂದ ಕೂಡಲೇ ಅಲ್ಲಿಯೂ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿರುವ ೨೪ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇರುವುದು ಕೇವಲ ಒಂದೇ ಕ್ಷೇತ್ರದಲ್ಲಿ ಮಾತ್ರ. ವರ್ಷದ ಒಂದು ದಿನ ಮಾತ್ರ ರಾಜಕಾರಣ ಮಾಡಿ, ಉಳಿದೆಲ್ಲ ದಿನಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಇದಕ್ಕೆ…
ಮಡಿಕೇರಿ NEWS DESK ಜು.9 : ಕೊಡಗು ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆಯನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್ ಗಳನ್ನು ತಕ್ಷಣ ನೆಲಸಮಗೊಳಿಸಬೇಕೆಂದು ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಶನ್ ಸಂಸ್ಥೆ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಶನ್ ನ ಅಧ್ಯಕ್ಷ ಕರ್ನಲ್ ಚೆಪ್ಪುಡಿರ ಪಿ.ಮುತ್ತಣ್ಣ ಅವರು ಜಿಲ್ಲೆಯ ವಿವಿಧೆಡೆ ಅಕ್ರಮ ರೆಸಾರ್ಟ್ ಗಳು ತಲೆ ಎತ್ತಿದ್ದು, ಭೂಕುಸಿತ ಪ್ರದೇಶಗಳಲ್ಲಿ ಅಪಾಯವನ್ನು ಎದುರಿಸುತ್ತಿವೆ. ಒಂದು ವೇಳೆ ಭೂಕುಸಿತ ಉಂಟಾಗಿ ರೆಸಾರ್ಟ್ಗಳು ಹಾನಿಗೀಡಾದರೆ ಇವುಗಳಲ್ಲಿ ತಂಗಿರುವ ಪ್ರವಾಸಿಗರು ಹಾಗೂ ಉದ್ಯೋಗಿಗಳು ಸಾವಿಗೀಡಾಗುವ ಸಾಧ್ಯತೆಗಳಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಅನ್ವಯ ಕೊಡಗಿನಲ್ಲಿ ತೋಟ, ಜಮ್ಮಾ, ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪರಿವರ್ತಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ 2018ರಲ್ಲಿ ಕೊಡಗಿನ ಬೆಟ್ಟ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತಗಳ ನಂತರ, ಕರ್ನಾಟಕ ಸರ್ಕಾರವು 2020 ಜೂನ್…
ಮಡಿಕೇರಿ ಜು.9 NEWS DESK : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದ ಗ್ರಾಮ ಅಬ್ಬಿ ಜಲಪಾತ ರಸ್ತೆಯಲ್ಲಿರುವ ಕೊಡಗು ಜಿಲ್ಲಾ ಮಟ್ಟದ ಗೋಶಾಲೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ಪರಿಶೀಲನೆ ನಡೆಸಿದರು. 8 ಎಕ್ರೆ ಜಾಗದ ಸುತ್ತ ಚೈನ್ ಲಿಂಕ್ ಮೆಶ್ ಅಳವಡಿಸುವುದು ಮತ್ತು ನೂತನ ಶೆಡ್ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸಲುಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರಿಗೆ ದೂರವಣಿ ಕರೆ ಮಾಡಿ ಮನವಿ ಸಲ್ಲಿಸಿದರು.
ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿದ್ದ ವಿನಾಯಕ್ ನರ್ವಾಡೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಮಡಿಕೇರಿ ಜು.9 NEWS DESK : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಸೋಮವಾರಪೇಟೆ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರವಾಸ ಮಾಡಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿದರು. ಶಾಂತಳ್ಳಿ ಮತ್ತು ಬೆಟ್ಟದಳ್ಳಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದರು, ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಘೋಷಿಸಿದ ಅವರು, ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದ ಅನಿವಾರ್ಯತೆಯಿದ್ದು, ಪಕ್ಷ ಸಂಘಟನೆಗೆ ಶ್ರಮ ವಹಿಸಬೇಕೆಂದು ಕರೆ ನೀಡಿದರು. ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್ ಗೌಡ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಸ್.ಜಿ.ಮೇದಪ್ಪ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷ ಭಾರತೀಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್, ಮಹೇಶ್ ಜೈನಿ, ವಿ.ಕೆ.ಲೋಕೇಶ್ , ಶಕ್ತಿ ಕೇಂದ್ರ ಅಧ್ಯಕ್ಷರಾದ ಮಧು, ದೇಶರಾಜ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು, ಬೂತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಂಟಿಕೊಪ್ಪ ಜು.9 NEWS DESK : ಸುಂಟಿಕೊಪ್ಪದಲ್ಲಿ ಕಳೆದ 16 ವರ್ಷಗಳಿಂದ ಆಶಾ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಶಿವಮ್ಮ, ಪಾರ್ವತಿ, ಟಿ.ಆರ್.ವೀಣಾ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬಿಳ್ಕೋಡಲಾಯಿತು. ಕಾನ್‍ಬೈಲ್-ನಾಕೂರು ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿದ್ದ ಬಿ.ಎಸ್.ಶಿವಮ್ಮ, ಅತ್ತೂರು ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಿಬಾಣೆಯಲ್ಲಿ ವೀಣಾ, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಪ್ ಭಾಗದಲ್ಲಿ ಆಶಾ ಕಾರ್ಯಕರ್ತೆಯಾರಾಗಿ ಸೇವೆಲ್ಲಿಸುತ್ತಿದ್ದ ಪಾರ್ವತಿ ಅವರುಗಳಿಗೆ ಸಹದ್ಯೋಗಿಗಳು ಫಲ ತಾಂಬೂಲ ನೀಡಿ ಸನ್ಮಾನಿಸಿ ಬೀಳ್ಕೋಟರು.
ಸೋಮವಾರಪೇಟೆ ಜು.9 NEWS DESK : ಕರ್ನಾಟಕ ಒಕ್ಕಲಿಗರ ಸಂಘದ ಸದಸ್ಯತ್ವ ಆಂದೋಲನ ಪ್ರಾರಂಭವಾಗಿದೆ. ಆಸಕ್ತಿಯಿರುವ ಒಕ್ಕಲಿಗರು ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ಸಂಘದ ಕೊಡಗು ಜಿಲ್ಲಾ ನಿರ್ದೇಶಕ ಹೆಚ್.ಎನ್.ರವೀಂದ್ರ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ಮಾತನಾಡಿದ ಅವರು, ಒಕ್ಕಲಿಗರ ಸೌಹರ್ದ ಸಹಕಾರ ಸಂಘದಲ್ಲಿ ಸದಸ್ಯತ್ವ ನೋಂದಣಿ ಫಾರಂ ದೊರೆಯಲಿದ್ದು, 1650 ರೂ.ಗಳನ್ನು ಪಾವತಿಸಿ, ಅರ್ಜಿ ಸಲ್ಲಿಸಬಹುದು. ಎಸ್‍ಎಸ್‍ಎಲ್‍ಸಿ ಮಾಕ್ರ್ಸ್‍ಕಾರ್ಡ್ ಅಥವಾ ಜಾತಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮುಂದಿನ ಎರಡು ತಿಂಗಳ ಕಾಲಾವಕಾಶ ಮಾತ್ರ ಇರುತ್ತದೆ ಎಂದು ಹೇಳಿದರು. ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಒಕ್ಕಲಿಗ ಗೌಡ ಜನಾಂಗದ ವಿದ್ಯಾರ್ಥಿಗಳಿಗೆ ಒಕ್ಕಲಿಗರ ಸಂಘದಿಂದ 5 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಹೇಳಿದರು. ಅರ್ಜಿ ಫಾರಂನೊಂದಿಗೆ ಮಾಕ್ರ್ಸ್ ಕಾರ್ಡ್ ಪ್ರತಿ ಸಲ್ಲಿಸಬೇಕು ಎಂದು ಹೇಳಿದರು. ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಿಸಿದ ನೋಂದಾಯಿತ ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗರ ಸಂಘಕ್ಕೆ ಸಹಾಯಧನ ನೀಡಲಾಗುತ್ತದೆ. ನೊಂದಣಿ…






