ಮಡಿಕೇರಿ NEWS DESK ಜೂ.22 : “ಒಂದು ಭೂಮಿ – ಒಂದು ಆರೋಗ್ಯ ” ಎನ್ನುವ 2025 ರ ಅಂತಾರಾಷ್ಟ್ರೀಯ ಯೋಗ ದಿನದ ಧ್ಯೇಯ ವಾಕ್ಯದೊಂದಿಗೆ ಮಡಿಕೇರಿಯ ಸಂತ ಜೋಸೆಫರ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಯೋಗ ಮಾಡುವ ಮೂಲಕ ಗಮನ ಸೆಳೆದರು. ಸಂಸ್ಥೆಯ ಪ್ರಾಚಾರ್ಯರಾದ ಸಿಸ್ಟರ್ ರೋಜಾ ಅವರು ‘ದೇಹ, ಮನಸ್ಸು ಮತ್ತು ಆತ್ಮಗಳ ಹೊಂದಾಣಿಕೆಗೆ ಯೋಗ ಬಹಳ ಸಹಕಾರಿ’ ಎನ್ನುವ ಅಂಶವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ಏಕಾಗ್ರತೆಯನ್ನು ಬೆಳೆಸಲು ಮತ್ತು ಆತ್ಮ ವಿಶ್ವಾಸವನ್ನು ಹೆಚ್ಚಿಸಲು ಅತ್ಯಂತ ಪರಿಣಾಮಕಾರಿ ವ್ಯಾಯಾಮ ಯೋಗವಾಗಿದೆ. ಈ ಸಂಸ್ಥೆಯಲ್ಲಿ ಯೋಗ ತರಗತಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಯೋಗವನ್ನು ಮುಂದುವರಿಸಿಕೊಂಡು ಹೋಗುವಂತೆ ಕರೆ ನೀಡಿದರು. ವಿದ್ಯಾಸಂಸ್ಥೆಯ ವಿವಿಧ ವಿಭಾಗಗಳ ವಿದ್ಯಾರ್ಥಿವೃಂದಗಳ ನಾಯಕ -ನಾಯಕಿಯರು ಯೋಗ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಕೂಡ ಯೋಗ ಮಾಡಿದರು.
ಲೇಖಕ: admin
ಮಡಿಕೇರಿ NEWS DESK ಜೂ.22 : ಯೋಗದಲ್ಲಿನ ಡಿಂಬಾಸನ ಭಂಗಿಯಲ್ಲಿ 30 ನಿಮಿಷ 5 ಸೆಕೆಂಡ್ ಗಳ ಪ್ರದಶ೯ನದ ಮೂಲಕ ಮದೆನಾಡಿನ ವಿದ್ಯಾಥಿ೯ನಿ ಬಿ.ಕೆ. ಸಿಂಚನಾ ಗಿನ್ನೀಸ್ ವಿಶ್ವ ದಾಖಲೆಗೆ ಸೇಪ೯ಡೆಯಾಗಲು ಅಹ೯ತೆ ಪಡೆದಿದ್ದಾಳೆ. ಕೊಡಗು ಪತ್ರಕರ್ತರ ಸಂಘ (ರಿ) ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಶನಿವಾರ ಸಂಜೆ ಆಯೋಜಿತ ವಿನೂತನ ಕಾಯ೯ಕ್ರಮದಲ್ಲಿ ಬಿ.ಸಿ. ಕೀತಿ೯ಕುಮಾರ್ , ರೇಣುಕಾ ಅವರ ಪುತ್ರಿ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ಗೆ ಒಳಪಟ್ಟ ಮದೆನಾಡು ಬಿಜಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಬಿ.ಕೆ. ಸಿಂಚನ ಈ ವಿಶಿಷ್ಟ ಸಾಧನೆ ಮಾಡಿ ಗಮನ ಸೆಳೆದಳು. ಯೋಗಾಸನದ ‘ಡಿಂಬಾಸನ’ ಭಂಗಿಯಲ್ಲಿ ಇಲ್ಲಿಯವರೆಗೆ ಆಸ್ಟ್ರೀಯಾದ 32 ವಷ೯ದ ಸ್ಚೇಫಿನಿ ಮಿಲಿಂಗರ್ ಎಂಬ ಯೋಗಪಟು , 30 ನಿಮಿಷ 3 ಸೆಕೆಂಟ್‌ಗಳ ಕಾಲ ಸ್ಥಿರವಾಗಿರುವ ಮೂಲಕ ಗಿನ್ನಿಸ್ ವಿಶ್ವದಾಖಲೆ ಮಾಡಿದ್ದರು. ಈ ದಾಖಲೆಯನ್ನು 2 ಸೆಕೆಂಡ್‌ಗಳಷ್ಟು ಉತ್ತಮ ಪಡಿಸುವ ಮೂಲಕ…
ಮಡಿಕೇರಿ NEWS DESK ಜೂ.22 : ರೋಟರಿ ವಲಯ 6 ರ ಸಹಾಯಕ ಗವನ೯ರ್ ಆಗಿ ಪಾರುವಂಗಡ ದಿಲನ್ ಚಂಗಪ್ಪ ಆಯ್ಕೆಯಾಗಿದ್ದಾರೆ. ಗೋಣಿಕೊಪ್ಪಲು ರೋಟರಿ ಕ್ಲಬ್ ಸದಸ್ಯರಾಗಿರುವ ಧಿಲನ್ ರೋಟರಿಯಲ್ಲಿ 10 ವಷ೯ಗಳ ಸೇವಾ ಅನುಭವ ಹೊಂದಿದ್ದಾರೆ. ಪಾರುವಂಗಂಡ ಸನ್ನಿ ಮೊಣ್ಣಪ್ಪ ಮತ್ತು ಸರಸ್ವತಿ ದಂಪತಿ ಪುತ್ರರಾಗಿರುವ ಧಿಲನ್ ಪೊನ್ನಂಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷರಾಗಿ ಕೂ ಕಾಯ೯ನಿವ೯ಹಿಸುತ್ತಿದ್ದು, ಗೋಣಿಕೊಪ್ಪ ದಸರಾ ಸಾಂಸ್ಕೖತಿಕ ಸಮಿತಿಯ ಅಧ್ಯಕ್ಷರಾಗಿಯೂ ಕಾಯ೯ನಿವ೯ಹಿಸಿದ್ದಾರೆ. ಈ ಮೊದಲು ಬೆಂಗಳೂರು ಕೊಡವ ಸಮಾಜದ ನಿದೇ೯ಶಕರಾಗಿಯೂ ಧಿಲನ್ ಕಾಯ೯ನಿವ೯ಹಿಸಿದ್ದಾರೆ. ಜೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಲ್ಲಿ ಕೂಡ ಸೇವಾ ಅನುಭವ ಕೂಡ ಹೊಂದಿರುವ ಧಿಲನ್ ಪ್ರಸ್ತುತ ರೋಟರಿ ಅವಧಿಯಲ್ಲಿ ಗೋಣಿಕೊಪ್ಪ, ವಿರಾಜಪೇಟೆ, ರೋಟರಿ ಮಡಿಕೇರಿ, ರೋಟರಿ ಮಿಸ್ಟಿ ಹಿಲ್ಸ್ ಮತ್ತು ರೋಟರಿ ಮಡಿಕೇರಿ ವುಡ್ಸ್ ಕ್ಲಬ್ ಗಳಿಗೆ ಸಹಾಯಕ ಗವನ೯ರ್ ಆಗಿ ಕಾಯ೯ನಿವ೯ಹಿಸಲಿದ್ದಾರೆ.
ಮಡಿಕೇರಿ ಜೂ.21 NEWS DESK : ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಟಿ.ಬಿ.ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಧಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಹಿಂದಿನ ಸಾಲಿನ ಅಧ್ಯಕ್ಷರಾದ ಸಿ.ಕೆ.ಉದಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರ ಆಯ್ಕೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಸಹಕಾರ ಇಲಾಖೆಯ ಅಧಿಕಾರಿ ಸುದೀಪ್ ಕಾರ್ಯನಿರ್ವಹಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಜರಿದ್ದು, ಅಧ್ಯಕ್ಷರಿಗೆ ಶುಭ ಕೋರಿದರು. ಸಂಘದ ಉಪಾಧ್ಯಕ್ಷೆ ಗೌರಮಣಿ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ, ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಅರುಣ್ ರಾವ್, ಸಂಘದ ನಿರ್ದೇಶಕರಾದ ಕೆ.ಎಸ್.ಕೃಷ್ಣೇಗೌಡ, ಟಿ.ಎ.ರವಿಚಂದ್ರ, ಟಿ.ಜಿ.ರವಿಕುಮಾರ್, ಹೆಚ್.ಸಿ.ಮೂರ್ತಿ,…
ಕೊಡ್ಲಿಪೇಟೆ ಜೂ.21 NEWS DESK : ಕಿರಿಕೂಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೊಡ್ಲಿಪೇಟೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಎಸ್‌ಜಿಎಸ್ ವಿದ್ಯಾಪೀಠದ ಕಾರ್ಯದರ್ಶಿ ಕೆ.ಪಿ.ನಂಜುಂಡಯ್ಯ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್.ತನುಜ, ಉಪನ್ಯಾಸಕರದ ಚಂದ್ರಶೇಖರ್ ಹಾಗೂ ಭಾಗ್ಯ ಹಾಜರಿದ್ದರು. ಸ್ಪಂದನ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ವಿವಿಧ ಭಂಗಿಗಳ ಯೋಗ ಪ್ರದರ್ಶಿಸಿ ಗಮನ ಸೆಳೆದರು.
ಮಡಿಕೇರಿ ಜೂ.21 NEWS DESK : ವಿವಿಧ ಭ್ರಷ್ಟಾಚಾರದ ಪ್ರಕರಣಗಳು ಸಾಬೀತಾಗುತ್ತಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿದು ಚುನಾವಣೆಯನ್ನು ಎದುರಿಸಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಪ್ರಕರಣಗಳು ನಡೆಯುತ್ತಲೇ ಇದೆ. ಇದು ಸಾಬೀತಾಗುತ್ತಿದ್ದರೂ ಅಧಿಕಾರದಲ್ಲಿ ಮುಂದುವರಿದಿರುವ ಸರ್ಕಾರ ಭಂಡ ಸರ್ಕಾರವೆಂದು ಆರೋಪಿಸಿದರು. ರಾಜ್ಯದ ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ಹಗರಣವಾಗಿರುವುದನ್ನು ಸರ್ಕಾರವೆ ಒಪ್ಪಿಕೊಂಡಿದೆ, ಮುಡಾ ಹಗರಣ ಮುಖ್ಯಮಂತ್ರಿಗಳಿಗೆ ಸುತ್ತಿಕೊಳ್ಳುತ್ತಿರುವ ಹಂತದಲ್ಲೆ, ಮುಡಾದಿಂದ ಪಡೆದ ನಿವೇಶನಗಳನ್ನು ಹಿಂದಕ್ಕೆ ನೀಡುವ ಮೂಲಕ ಮಗದೊಮ್ಮೆ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಂತಾಗಿದೆ. ಇದೀಗ ವಸತಿ ಯೋಜನೆಯಡಿ ಮನೆಗಳಿಗಾಗಿ ಲಂಚ ಪಡೆಯುವ ವಿಚಾರ ಅವರದೇ ಸರ್ಕಾರದ ಶಾಸಕರಾದ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರ ಆಡಿಯೋದಿಂದ ಬಹಿರಂಗಗೊಂಡಿದೆ ಎಂದು ಲೇವಡಿ ಮಾಡಿದರು. ಬೆಂಗಳೂರು ಕೊಡವ ಸಮಾಜಕ್ಕೆ ಈ ಹಿಂದಿನ ಮುಖ್ಯಮಂತ್ರಿ ಸದಾನಂದ ಗೌಡ ಅವರ ಅವಧಿಯಲ್ಲೆ ಜಾಗ…
ಕೂಡಿಗೆ ಜೂ.21 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್, ಗೈಡ್ಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ಆಶ್ರಯದಲ್ಲಿ “ಒಂದು ಭೂಮಿಗೆ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯ (ಥೀಮ್) ದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಮಾರ್ಗದರ್ಶನದಲ್ಲಿ ವಿವಿಧ ಪ್ರಾಣಾಯಾಮದೊಂದಿಗೆ ವಿವಿಧ ಭಂಗಿಗಳ ಆಸನಗಳ ಮೂಲಕ ಯೋಗ ಪ್ರದರ್ಶಿಸಿ ಗಮನ ಸೆಳೆದರು. ಮಕ್ಕಳು ವಿವಿಧ ಭಂಗಿಯ ಯೋಗಾಸನಗಳನ್ನು ಪ್ರದರ್ಶಿಸಿದರು. ಯೋಗ ದಿನದ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಯೋಗವು ನಮ್ಮ ಮನಸ್ಸು, ದೇಹ ಮತ್ತು ಭೂಮಿಯನ್ನು ಸಂಪರ್ಕಿಸುವ ಮೂಲಕ ದೈಹಿಕ, ಮಾನಸಿಕ ಆರೋಗ್ಯ ದೃಢತೆಗೆ ಸಹಕಾರಿಯಾಗಿದೆ ಎಂದರು. ರಂಗಭೂಮಿ ಕಲಾವಿದ ಭರಮಣ್ಣ ಬೆಟಗೇರಿ ಮಾತನಾಡಿ, ಯೋಗ ಎನ್ನುವುದು ಬರಿಯ ಆಸನ, ಪ್ರಾಣಾಯಾಮ ಧ್ಯಾನವಷ್ಟೇ ಅಲ್ಲ, ಅದೊಂದು ಬದುಕಿನ ಮಾರ್ಗ. ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ನಿರಂತರವಾಗಿ ಅಭ್ಯಾಸ ಮಾಡಿಕೊಂಡು ಉತ್ತಮ…
ಮಡಿಕೇರಿ ಜೂ.21 NEWS DESK : ಪೊನ್ನಂಪೇಟೆಯ ಮದರ್ಸ್ ಆರ್ಮ್ ಮೊಂಟೆಸ್ಸರಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುಟಾಣಿ ಮಕ್ಕಳು ವಿವಿಧ ಭಂಗಿಗಳ ಯೋಗವನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು, ಅಲ್ಲದೆ ಇತರರಿಗೆ ಮಾದರಿಯಾದರು. ಶಿಕ್ಷಕರು ಹಾಗೂ ಸಿಬ್ಬಂದಿಗಳು ಕೂಡ ಪುಟಾಣಿಗಳೊಂದಿಗೆ ಯೋಗ ಮಾಡಿದರು. ಯೋಗಾಸನದ ಮಹತ್ವವನ್ನು ವಿವರಿಸಿದ ಮದರ್ಸ್ ಆರ್ಮ್ ಮೊಂಟೆಸ್ಸರಿ ಶಾಲೆಯ ಸಂಸ್ಥಾಪಕಿ ವಿದ್ಯಾಶ್ರೀ ಅಶೋಕ್ ಭಟ್ ಅವರು ಆರೋಗ್ಯಕರ ಜೀವನಕ್ಕೆ ಬಾಲ್ಯದಿಂದಲೇ ಯೋಗಾಭ್ಯಾಸ ಮಾಡಿಸುವುದು ಅತ್ಯಗತ್ಯವಾಗಿದೆ. ಜೀವನ ಶೈಲಿಯನ್ನು ಉತ್ತಮಗೊಳಿಸಲು ಯೋಗ ಸಹಕಾರಿಯಾಗಿದೆ ಎಂದರು. ತರಬೇತುದಾರರಾದ ಪ್ರೇಕ್ಷ ಭಟ್, ಶಾಲಾ ಸಿಬ್ಬಂದಿಗಳಾದ ಸೌಮ್ಯ ಬಿ., ಜಮುನಾ, ಶರಣ್ಯ, ಸಿಲ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಜೂ.21 NEWS DESK : ವಾಣಿಜ್ಯ ಹಾಗೂ ಸಹಕಾರ ಬ್ಯಾಂಕುಗಳು ತಮ್ಮ ಲಾಭಾಂಶದ ಗುರಿ ಜೊತೆಗೆ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಯಾಂಕುಗಳು, ಕೃಷಿಕರು, ಉದ್ಯಮಿಗಳು, ಸಣ್ಣ ಉದ್ಯಮಿಗಳು, ವ್ಯಾಪಾರಸ್ಥರು, ಗುಡಿ ಕೈಗಾರಿಕೆ… ಹೀಗೆ ಪ್ರತಿಯೊಬ್ಬರಿಗೂ ಸಾಲ ನೀಡುವುದರ ಜೊತೆಗೆ ಬ್ಯಾಂಕುಗಳ ಗುರಿ ಮತ್ತು ಪ್ರಗತಿ ಸಾಧಿಸುವಂತಾಗಬೇಕು. ಹಾಗೆಯೇ ಎಲ್ಲರನ್ನು ಒಳಗೊಂಡ ಸಾಧನೆ ಅತೀ ಮುಖ್ಯ ಎಂದು ಸಂಸದರು ಪ್ರತಿಪಾದಿಸಿದರು. ಬ್ಯಾಂಕುಗಳು ಕೇಂದ್ರ ಸರ್ಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬ್ಯಾಂಕುಗಳ ವಾಣಿಜ್ಯ, ವ್ಯಾಪಾರ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಹೀಗೆ ಆದ್ಯತಾ ವಲಯಕ್ಕೂ ಹೆಚ್ಚಿನ ಅವಕಾಶ ಮಾಡಬೇಕು ಎಂದು ಸಂಸದರು ನುಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವಲ್ಲಿ ಬ್ಯಾಂಕುಗಳು…
ಮಡಿಕೇರಿ ಜೂ.21 NEWS DESK : ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಕಾರಣಾಂತರಗಳಿಂದ ಮುಚ್ಚಲ್ಪಟ್ಟಿದ್ದ ಶಾಲೆಯನ್ನು ತಾವೂರು ಗ್ರಾಮಸ್ಥರು ಹಾಗೂ ಸಾರ್ವಜನಿಕರ ಮನವಿಯ ಮೇರೆಗೆ ಶಿಕ್ಷಣ ಇಲಾಖೆ ಪುನರ್ ಆರಂಭಿಸಿದೆ. ಪ್ರಸ್ತುತ ಶಾಲೆಗೆ ಆರು ಮಕ್ಕಳು ದಾಖಲಾಗಿದ್ದು, ಮಕ್ಕಳಿಗೆ ಶಾಲಾ ಕಿಟ್ ನೀಡುವುದರ ಮೂಲಕ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಸರಕಾರವು ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಲ್ಲಿ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಡಿಡಿಪಿಐ ರಂಗಧಾಮಯ್ಯ, ಬಿಇಓ ದೊಡ್ಡೆಗೌಡರು, ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ಸದಸ್ಯ…






