ಮಡಿಕೇರಿ NEWS DESK ಆ.17 : ವಿಶ್ವಛಾಯಾಗ್ರಾಹಣ ದಿನಾಚರಣೆ ಅಂಗವಾಗಿ ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಸ್ಪಧೆ೯ಗಳಲ್ಲಿ ವಿಜೇತರ ವಿವರ ಹೀಗಿದೆ >>> ಅತ್ಯುತ್ತಮ ಮಾನವೀಯ ಛಾಯಾಚಿತ್ರಕ್ಕಾಗಿ ಸಂಘದ ಗೌರವ ಸಲಹಗಾರ ಬಿ.ಜಿ.ಅನಂತಶಯನ ಅವರು ನೀಡಿರುವ ದತ್ತಿ ಪ್ರಶಸ್ತಿಗೆ ಪತ್ರಕರ್ತ ವಿಘ್ನೇಶ್ ಭೂತನಕಾಡು ಅವರು ತೆಗೆದ ಛಾಯಾಚಿತ್ರ ಆಯ್ಕೆಯಾಗಿದೆ. ಅತ್ಯುತ್ತಮ ಸುದ್ದಿ ಚಿತ್ರಕ್ಕಾಗಿ ಸುಂಟಿಕೊಪ್ಪದ ಪತ್ರಕತ೯ ಕೆ.ಎಸ್.ಅನಿಲ್ ಕುಮಾರ್ (ಪ್ರಥಮ) ಹಾಗೂ ವಿಶ್ವಕುಮಾರ್ ಗುಡ್ಡೆಹೊಸೂರು ದ್ವಿತೀಯ ಬಹುಮಾನ ಗಳಿಸಿದ್ದಾರೆ. ಜಲಜಲಜಲಧಾರೆ ವಿಷಯದ ಅತ್ಯುತ್ತಮ ವಿಡಿಯೋ ಸ್ಪಧೆ೯ಯಲ್ಲಿ ಮಡಿಕೇರಿಯ ಮಹಮ್ಮದ್ ಹನೀಫ್ (ಪ್ರಥಮ), ವಿರಾಜಪೇಟೆಯ ಉಷಾಪ್ರೀತಂ (ದ್ವಿತೀಯ) ಆಯ್ಕೆಯಾಗಿದ್ದಾರೆ. ಮಳೆಗಾಲದ ಸಂಕಷ್ಟಗಳು ವಿಷಯದ ಕುರಿತ ಸಾವ೯ಜನಿಕರಿಗಾಗಿನ ರೀಲ್ಸ್ ಸ್ಪಧೆ೯ಯಲ್ಲಿ ಭಾಗೀರಥಿ ಹುಲಿತಾಳ (ಪ್ರಥಮ) ಹಾಗೂ ಕುಶಾಲನಗರದ ರಮ್ಯ ಮಾಚಯ್ಯ (ದ್ವಿತೀಯ) ಆಯ್ಕೆಯಾಗಿದ್ದಾರೆ. ವಿಜೇತರಿಗೆ ಇದೇ ಮಂಗಳವಾರ ವಿಶ್ವಛಾಯಾಗ್ರಹಣ ದಿನದಂದು ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ. ವಿಶ್ವಛಾಯಾಗ್ರಹಣ ದಿನದ ಸಂದಭ೯ ಕೊಡಗಿನ ಹಿರಿಯ ಛಾಯಾಗ್ರಾಹಕರಾದ ಮಹಮ್ಮದ್ ಹನೀಫ್…
ಲೇಖಕ: admin
ಮಡಿಕೇರಿ NEWS DESK ಆ.17 : ಕೊಡಗು ಜಿಲ್ಲೆಯಲ್ಲಿ ಮತ್ತೆ ಗಾಳಿ ಸಹಿತ ಮಳೆ ಬಿರುಸುಗೊಂಡಿದ್ದು, ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜ್ ಗೆ ಆ.18 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಕಳೆದ ಎರಡು ತಿಂಗಳುಗಳ ವ್ಯಾಪಕ ಮಳೆಯಿಂದ ತೀವ್ರ ಹಾನಿ ಅನುಭವಿಸಿದ್ದ ಕೊಡಗಿನಲ್ಲಿ ಒಂದೆರಡು ದಿನ ಮಳೆ ಬಿಡುವು ನೀಡಿತ್ತು. ಆದರೆ ಭಾನುವಾರದಿಂದ ಮತ್ತೆ ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದೆ. ಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಮರ, ಬರೆ, ವಿದ್ಯುತ್ ಕಂಬ ಬಿದ್ದ ಘಟನೆಗಳು ನಡೆದಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದ್ದು, ಎತ್ತರ ಮತ್ತು ತಗ್ಗು ಪ್ರದೇಶ ಹಾಗೂ ನದಿ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ. ರಜೆಯ ಕಾರಣ ಜಿಲ್ಲೆಗೆ ಆಗಮಿಸಿದ್ದ ಸಾವಿರಾರು ಪ್ರವಾಸಿಗರು ನಿರಂತರ ಮಳೆಯಿಂದ…
ಸುಂಟಿಕೊಪ್ಪ NEWS DESK ಆ.17: ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಬಾಳೆಕಾಡು ರಸ್ತೆ ತಿರುವಿನಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಬಸ್ ಮತ್ತು ಕುಶಾಲನಗರ ಕಡೆಗೆ ಸಾಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಕಾರು ಚಾಲಕ ರಂಜಿತ್ ಹಾಗೂ ಪ್ರಯಾಣಿಕ ಕುಮಾರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂಪಾಜೆ NEWS DESK ಆ.17 : ಯುವ ಜನಾಂಗ ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಳ್ಳಬೇಕು, ದೇಶಪ್ರೇಮ ಬೆಳೆಸಿಕೊಳ್ಳಬೇಕು ಮತ್ತು ಹೋರಾಟಗಾರರನ್ನು ಸ್ಮರಿಸಿಕೊಳ್ಳಬೇಕು ಎಂದು ನಿವೃತ್ತ ಯೋಧ ಕೀಲಾರು ಸಚಿನ್ ವಿಶ್ವನಾಥ್ ಅವರು ಕರೆ ನೀಡಿದ್ದಾರೆ. ಸಂಪಾಜೆ ಸಯುಕ್ತ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಾಲೇಜ್ ನ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಯೋಧ ಕೀಲಾರು ಸಚಿನ್ ಅವರು ಯುವ ಜನಾಂಗ ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ದೇಶಪ್ರೇಮ ಮೆರೆಯಬೇಕು, ಸ್ವಾತಂತ್ರ್ಯಕ್ಕೋಸ್ಕರ ಹೋರಾಟ ಮಾಡಿ ಬಲಿದಾನಗೈದ ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ಎಂ.ಶಂಕರನಾರಾಯಣ ಭಟ್ ಅವರು ವಿದ್ಯಾರ್ಥಿಗಳು ನಮ್ಮ ದೇಶದ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಅರಿತುಕೊಳ್ಳಬೇಕು. ಉತ್ತಮ ಮೌಲ್ಯಗಳಿಂದ ಜೀವನ ನಡೆಸಬೇಕು ಎಂದು ಹೇಳಿದರು. ನಬಾರ್ಡ್ ನ ನಿವೃತ್ತ ಸಹಾಯಕ ಮಹಾ ಪ್ರಬಂಧಕ ಎಂ.ಸಿ.ನಾಣಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ತಂದೆ, ತಾಯಿಗಳಿಗೆ ಹಾಗೂ ಹಿರಿಯರಿಗೆ ಗೌರವ ನೀಡಬೇಕು.…
ಮಡಿಕೇರಿ NEWS DESK ಆ.17 : ಇತ್ತೀಚಿನ ವರ್ಷಗಳಲ್ಲಿ ಆನೆ ಮಾನವ ಸಂಘರ್ಷ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಜನ್ಮದಿನದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಕೂಟದ 117ನೇ ಪುಸ್ತಕ, ಬರಹಗಾರ್ತಿ ಚೀಯಕಪೂವಂಡ ಶ್ವೇತನ್ ಚಂಗಪ್ಪ ಅವರು ರಚಿಸಿರುವ “ಕೊಡಗ್ಲ್ ಆನೆ-ಮಾಲವ ಪಣಂಗಲ್” ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಆನೆ ಮಾನವ ಸಂಘರ್ಷದಿAದ ಕೇವಲ ಮಾನವನಿಗೆ ಮಾತ್ರ ಹಾನಿಯಾಗುತ್ತಿಲ್ಲ, ಆನೆಗಳಿಗೂ ಹಾನಿಯಾಗುತ್ತಿದೆ. ಸಮಸ್ಯೆಯ ಗಂಭೀರತೆ ಮತ್ತು ಕಾರಣಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸಬೇಕು. ಅರಣ್ಯ ನಾಶ, ಟಿಂಬರ್ ಲಾಬಿ, ಆಹಾರದ ಕೊರತೆ, ಮಾನವನ ಅತಿಕ್ರಮಣ, ಮಿತಿ ಮೀರುತ್ತಿರುವ ಪ್ರವಾಸಿಗರ ಸಂಖ್ಯೆ, ಅತಿಯಾದ ತ್ಯಾಜ್ಯ ಎಂಬಿತ್ಯಾದಿ ವಿಚಾರಗಳು ಕಾಡಾನೆಗಳ ದಾಳಿಗೆ ಕಾರಣವಾಗುತ್ತಿದೆಯೇ ಎನ್ನುವ ಕುರಿತು ಚಿಂತನೆ ನಡೆಯಬೇಕು.…
NEWS DESK ಕೊಡವ ಮಕ್ಕಡ ಕೂಟ ಸಂಘಟನೆಯನ್ನು ಹುಟ್ಟು ಹಾಕಿ ಕೊಡಗಿನ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ಬೆಳವಣಿಗೆಗಾಗಿ ಶ್ರಮ ಪಡುತ್ತಿರುವ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಆಗಸ್ಟ್ 17 ರಂದು ತಮ್ಮ 43ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊಡವ ಮಕ್ಕಡ ಕೂಟ ರಚನೆಯಾಗಿ 12 ವರ್ಷಗಳಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಅಯ್ಯಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ದಾಖಲೆಯ 117 ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆ ಇವರದ್ದಾಗಿದ್ದು, ಯುವ ಬರಹಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಸರಕಾರದ ಅನುದಾನವಿಲ್ಲದಿದ್ದರೂ ಸಾಹಿತ್ಯದ ಬೆಳವಣಿಗೆಗೆ ಒತ್ತು ನೀಡುತ್ತಿದ್ದಾರೆ. ದಾನಿಗಳ ನೆರವಿನಿಂದ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯ ಸುಮಾರು 117 ಪುಸ್ತಕಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಿದ್ದಾರೆ. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಬೊಳ್ಳಜಿರ ಬಿ.ಅಯ್ಯಪ್ಪ ಅವರು, 2024ನೇ ಇಸವಿಯ ಒಂದು ವರ್ಷದಲ್ಲಿ ಒಟ್ಟು 27 ಪುಸ್ತಕಗಳನ್ನು…
ಮಡಿಕೇರಿ ಆ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾಟ್ರ್ಸ್, ಮಡಿಕೇರಿ, ಎಚ್ಡಿಎಫ್ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ…
ಮಡಿಕೇರಿ ಆ.16 NEWS DESK : ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಆ.19 ರಂದು ಮಂಗಳವಾರ ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಆಯೋಜಿಸಲಾಗಿದೆ. ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ವಿಶ್ವಛಾಯಾಗ್ರಹಣ ದಿನಾಚರಣೆಯನ್ನು ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ.,ಕೊಡಗು ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಉದ್ಯಮಿ ಹೆನ್ರಿಕ್ ಮಾರ್ಟಿನ್, ಬಿಜೆಪಿ ಯುವ ಮುಖಂಡ ಚಂದ್ರಶೇಖರ್ ಹೇರೂರು, ಗುಡ್ಡೆಹೊಸೂರು ಪಂಚಾಯತ್ ಯೂತ್ ಮೂವ್ ಮೆಂಟ್ ಕಾರ್ಯದರ್ಶಿ ಎಂ.ಎಸ್. ರಂಜಿತ್, ಕುಶಾಲನಗರ ಗೌಡ ಸಮಾಜ ಅಧ್ಯಕ್ಷರಾದ ಸಿ.ಎಂ.ಗಣಿಪ್ರಸಾದ್, ಗುಡ್ಡೆಹೊಸೂರು ಗ್ರಾಪಂ ಸದಸ್ಯ ನಿತ್ಯಾನಂದ ಕುಡೆಕಲ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಬಿ.ಜಿ. ಅನಂತಶಯನ, ಭಾರತೀಯ ಕಾಫಿ ಮಂಡಳಿ ಮಾಜಿ…
ಮಡಿಕೇರಿ ಆ.16 NEWS DESK : ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಕಾರ್ಯಾರಂಭಿಸಲಿರುವ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ಘಟಕ (ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್) (ಎಂ.ಟಿ.ಯು) ವಾಹನಗಳನ್ನು ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಕೋμï ಟ್ರಸ್ಟ್, ಸ್ವಚ್ಛ ಭಾರತ್ ಮಿಷನ್ (ಗ್ರಾ.) ಮತ್ತು ಕೊಡಗು ಜಿಲ್ಲಾಪಂಚಾಯತ್ ಸಹಯೋಗದೊಂದಿಗೆ ಕಾರ್ಯಾರಂಭಿಸಲಿರುವ 3 ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್ (ಎಂ.ಟಿ.ಯು) ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರಿದರು. :: ಏನಿದು ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್ :: ಕೊಡಗು ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ವಾಹನಗಳನ್ನು ಪರಿಚಯಿಸಿದೆ. ಜಿಲ್ಲೆಯಲ್ಲಿ ಈಗಾಗಲೇ ಮಡಿಕೇರಿ ತಾಲೂಕಿನ ಭಾಗಮಂಡಲ ಮತ್ತು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಾಣಮಾಡಿ ಕಾರ್ಯಾರಂಭಿಸಲಾಗಿದೆ. ಮಲತ್ಯಾಜ್ಯ ಸಂಸ್ಕರಣಾ…
ಮಡಿಕೇರಿ ಆ.16 NEWS DESK : ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದ್ದಲ್ಲಿ ಶ್ರೀಕೃಷ್ಣನ ಮಹತ್ವ ಬಗ್ಗೆ ಅರಿವಾಗುತ್ತದೆ. ಆ ದಿಸೆಯಲ್ಲಿ ಶ್ರೀಕೃಷ್ಣನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಚಿಂತಕರಾದ ಚಿ.ನಾ.ಸೋಮೇಶ್ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಶ್ರೀಕೃಷ್ಣ ಒಂದು ರೀತಿ ವಿಶಿಷ್ಟ ಚೇತನರಾಗಿದ್ದು, ವಿಶ್ವದ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದರು. ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದು ಸೋಮೇಶ್ ಅವರು ನುಡಿದರು. ಜೀವನವು ನಿಂತ ನೀರಾಗದೆ…






