ಲೇಖಕ: admin

ಮಡಿಕೇರಿ NEWS DESK ಜು.26 : ಟ್ಯಾಂಕರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ದಕ್ಷಿಣ ಕೊಡಗಿನ ಗೋಣಿಕೊಪ್ಪಲು ಸಮೀಪದ ದೇವರಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಬನಶಂಕರಿ ಮೂಲದ ಗೋಕುಲ್ (24) ಹಾಗೂ ಚೇತನ್ (24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಕೇರಳಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಗೋಣಿಕೊಪ್ಪಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ NEWS DESK ಜು.26 : ಹಿಮಾಚಲ ಪ್ರದೇಶದ ಎತ್ತರದ ಕಿನ್ನೌರ್ ನ ತಾಶಿಗಂಗ್ ಮತಗಟ್ಟೆ, ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ದೂರದ ಮಾಲೋಗಾಂವ್ ಮತಗಟ್ಟೆ ಮತ್ತು ಗುಜರಾತ್‌ನ ಗಿರ್ ರಾಷ್ಟ್ರೀಯ ಉದ್ಯಾನವನದ ಏಕೈಕ ಮತದಾರನಿಗಾಗಿ ನಿರ್ಮಿಸಲಾದ ಮತಗಟ್ಟೆಗಳ ಮಾದರಿಯಲ್ಲಿ, ಪ್ರತಿ ಕೊಡವ ವಂಶಾವಳಿ ಪೀಠ (“ಬಲ್ಯಮನೆ”) ಮತ್ತು ಪ್ರತಿ ಕೊಡವ ಆಧ್ಯಾತ್ಮಿಕ ಪೀಠಗಳಿಗೆ (“ಮಂದ್”) ಪ್ರತ್ಯೇಕ ವಿಶೇಷ ಕೊಡವ ಮತಗಟ್ಟೆಗಳನ್ನು ಸ್ಥಾಪಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಭಾರತದ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಈ ಪ್ರಮುಖ ಬೇಡಿಕೆಯ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ. ಕೊಡವ ಜನಾಂಗೀಯ ಲೋಕದ  ಅಧಮನೀಯ ಧ್ವನಿ ಮತ್ತು ಸಾಕ್ಷಿಪ್ರಜ್ಞೆಯಾಗಿರುವ ಸಿ.ಎನ್.ಸಿ, ತೀವ್ರ ಕಾಳಜಿಯೊಂದಿಗೆ, ಹಿಮಾಚಲ ಪ್ರದೇಶದ ಎತ್ತರದ ಕಿನ್ನೌರ್ ನ ತಾಶಿಗಂಗ್ ಮತಗಟ್ಟೆ, ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ದೂರದ ಮಾಲೋಗಾಂವ್ ಮತಗಟ್ಟೆ ಮತ್ತು ಗುಜರಾತ್‌ನ ಗಿರ್ ರಾಷ್ಟ್ರೀಯ ಉದ್ಯಾನವನದ ಏಕೈಕ…

Read More

ಕುಶಾಲನಗರ ಜು.25 NEWS DESK : ಶಾಲಾ- ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ರಾಷ್ಟ್ರ ಭಕ್ತಿ, ಉತ್ತಮ ನಾಯಕತ್ವ ಗುಣ, ಸಹನೆ, ತಾಳ್ಮೆಯ ಶಕ್ತಿಯನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ವೇದಿಕೆ ಕಲ್ಪಿಸುತ್ತದೆ’ ಎಂದು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಹೇಳಿದರು. ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ಪಟ್ಟಣದ ಕೊಡವ ಸಮಾಜದ ಸಭಾಂಗಣದಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಏರ್ಪಡಿಸಿರುವ ಒಂದು ವಾರ ಕಾಲದ ಸ್ಕೌಟ್ಸ್,ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಸಂಸ್ಥೆಯಾದ ಸ್ಕೌಟ್ಸ್,ಗೈಡ್ಸ್ ಸಂಸ್ಥೆಯು ಬೆಳೆದು ಬಂದ ದಾರಿಯನ್ನು ವಿವರಿಸಿದರು. ಪ್ರಸಕ್ತ ವರ್ಷ ರಾಜ್ಯದಲ್ಲಿ 8.5 ಲಕ್ಷ ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ದೃಷ್ಟಿಯಾಗಿರಿಸಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಹಲವು…

Read More

ಮಡಿಕೇರಿ ಜು.25 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹಾರಂಗಿ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದ ಇಇ ಮಹೇಶ್, ಎಇಇ ಪುಟ್ಟಸ್ವಾಮಿ, ಎಇ ಕಿರಣ್ ದೇವಯ್ಯ ಇತರರು ಇದ್ದರು.

Read More

​ವಿರಾಜಪೇಟೆ ಜು.25 NEWS DESK : ಕೊಡವ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯನ್ನು ಇಂದಿನ ಯುವ ಪೀಳಿಗೆಗೆ ತಲುಪಿಸಿ, ಅದನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಕೊಡವ ಜನಾಂಗದ ಪ್ರತಿಯೊಬ್ಬರ ಮೇಲಿದೆ ಎಂದು ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ​ವಿರಾಜಪೇಟೆಯ ಒಂಟಿಅಂಗಡಿ ಭಾಗದಲ್ಲಿರುವ ಕೊಡವ ಸಂಸ್ಥೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಕೃತಿ ಕಾರ್ಯಕ್ರಮದಲ್ಲಿ ‘ಪತ್ತಾಯ’ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊಡವ ಸಾಹಿತ್ಯ ಅಕಾಡೆಮಿಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಕೃತಿ ಹಾಗೂ ಭಾಷೆಯ ಮಹತ್ವವನ್ನು ಸಾರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ‘ಪತ್ತಾಯ’ ಬಿಡುಗಡೆಯಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಮಾತ್ರ ಸಮುದಾಯದ ಬಾಂಧವರಲ್ಲಿ ನಮ್ಮ ಪುರಾತನ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಲು ಸಾಧ್ಯ. ಆಧುನಿಕ ಯುಗದ ಪ್ರಭಾವದಿಂದ ಇಂದಿನ ಯುವ ಪೀಳಿಗೆ ನಮ್ಮ ಭಾಷೆ, ಸಾಹಿತ್ಯ ಹಾಗೂ ಆಚಾರ-ವಿಚಾರಗಳಿಂದ ದೂರವಾಗುತ್ತಿರುವುದು ಕಳವಳಕಾರಿ ಎಂದರು. ಕೊಡವ ಸಂಸ್ಕೃತಿಯನ್ನು ಉಳಿಸುವ ಕಾರ್ಯ ಕೇವಲ…

Read More

​ಗೋಣಿಕೊಪ್ಪ ಜು.25 NEWS DESK : ವಿದ್ಯಾರ್ಥಿಗಳು ಕೈಗೊಂಡ ಪ್ರತಿಭಟನೆಗೆ ಬೆಂಬಲವಾಗಿ ಹಾಗೂ ಕೇಂದ್ರ ಬಿಜೆಪಿ ನಾಯಕತ್ವ ಮತ್ತು ಪೊಲೀಸರು, ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯದ ವಿರುದ್ದ ಗೋಣಿಕೊಪ್ಪದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್, ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಹಾಗೂ ವಿವಿಧ ಪೋಷಕ ಘಟಕಗಳ ಜಂಟಿ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆ ತಳೆಯುತ್ತಿರುವುದು ಖಂಡನೀಯ. ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ವಿದ್ಯಾರ್ಥಿಗಳನ್ನು ‘ಉಗ್ರಗಾಮಿಗಳು’ ಎಂದು ಹೇಳಿರುವುದು ಪ್ರಜಾಪ್ರಭುತ್ವಕ್ಕೆ ಬಂದೊದಗಿದ ದೊಡ್ಡ ದುರಂತ,” ಎಂದು ಕಿಡಿಕಾರಿದರು. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಎಸಗಿರುವ ಈ ಅನ್ಯಾಯ ಇನ್ನೊಂದಿಲ್ಲ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ​ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರಾದ ಮಿದೇರಿರ ನವೀನ್, ಬ್ಲಾಕ್…

Read More

ವಿರಾಜಪೇಟೆ ಜು.25 NEWS DESK : ಕೊಡಗು ವಿಶ್ವವಿದ್ಯಾಲಯ ನಡೆಸಿದ 2026ನೇ ಸಾಲಿನ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಪೆರುಂಬಾಡಿಯ ಸಂಶುಲ್ ಉಲಮ ಎಜುಕೇಶನ್ ಅಕಾಡೆಮಿಯ ಎಸ್‌ಇಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 3 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಎಸ್ ಈ ಎ ಕಾಲೇಜು ಪ್ರಾಂಶುಪಾಲೆ ಭಾನುಮತಿ ಮಾತನಾಡಿ, ವಿದ್ಯಾರ್ಥಿಗಳ ಪರಿಶ್ರಮ, ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನ ಮತ್ತು ಪೋಷಕರ ನಿರಂತರ ಸಹಕಾರವೇ ಈ ಯಶಸ್ಸಿನ ಪ್ರಮುಖ ಕಾರಣವಾಗಿದೆ. ಹಲವು ವರ್ಷಗಳಿಂದಲೂ ವಿವಿಧ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವುದರೊಂದಿಗೆ ತಾಲೂಕು, ಜಿಲ್ಲೆ, ರಾಜಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಪ್ರತಿಭಾನ್ವಿತರಾಗಿ ಉನ್ನತ ಶಿಕ್ಷಣದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಲು ಹೆಚ್ಚಿನ ಸಹಕಾರ ನೀಡಬೇಕೆಂದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿಪಿಎಂ…

Read More

ಸೋಮವಾರಪೇಟೆ ಜು.25 NEWS DESK : ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ 2026-27ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ನಡೆಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಚುನಾವಣೆಯಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಎಂ.ಎಂ.ಯಶ್ವಂತ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಈ ರೀತಿಯ ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಭಾರತದ ಚುನಾವಣೆಯ ವಿವಿಧ ಹಂತಗಳ ಪರಿಚಯವಾಗುವುದಲ್ಲದೆ, ಉತ್ತಮ ನಾಯಕರುಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನವನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಈ ಸಂದರ್ಭ ಸಹ ಶಿಕ್ಷಕರಾದ ಎಸ್.ಎಸ್.ರಂಜಿನಿ, ರೇಖಾ, ಶೋಭ, ಗುಲಾಬಿ, ಸಿಬ್ಬಂದಿ ದಿನೇಶ್ ಇದ್ದರು.

Read More

ಮಡಿಕೇರಿ ಜು.25 NEWS DESK : “ನೀಟ್” ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಯುವ ಸಮೂಹ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ವಾಯ್ಸ್ ಆಫ್ ಯೂತ್ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿತು. ನೀಟ್ ಪರೀಕ್ಷಾ ಪ್ರಕರಣದ ಹಿನ್ನೆಲೆ ವಾಟ್ಸ್ ಗ್ರೂಪ್ ಆಗಿ ವಾಯ್ಸ್ ಆಫ್ ಯೂತ್   ಗ್ರೂಪ್ ಅಸ್ತಿತ್ವಕ್ಕೆ ಬಂದಿದ್ದು, ಶನಿವಾರದಂದು ಇದರ ಸದಸ್ಯ ವಿದ್ಯಾರ್ಥಿಗಳು ಹಾಗೂ ಕೆಲ ಸಾರ್ವಜನಿಕರು ಮುಖಕ್ಕೆ “ಕೆಂಪು-ಕಪ್ಪು” ಬಣ್ಣವನ್ನು ಬಳಿದುಕೊಂಡು ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಯುವ ಸಮೂಹ ಪ್ರಶ್ನಿಸುವ ಮನೋಭಾವÀವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಾಯ್ಸ್ ಆಫ್ ಯೂತ್‍ನ ಸದಸ್ಯೆ ಗೌರಿ ಮಂಡೀರ ಮಾತನಾಡಿ, ವಾಯ್ಸ್ ಆಫ್ ಯೂತ್ ಎನ್ನುವುದು ಯಾವುದೇ ರಾಜಕೀಯ ಪಕ್ಷವಲ್ಲ, ಶಿಕ್ಷಣ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹರಡಿದ್ದು, ಇದು ಯುವ ಸಮೂಹವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು. ಪ್ರಸ್ತುತ ಇರುವ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ,…

Read More

ಮಡಿಕೇರಿ ಜು.25 NEWS DESK : ಸುಂಟಿಕೊಪ್ಪ ವ್ಯಾಪ್ತಿಯ ಹೊರೂರು, ಮೋದೂರು ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ನಾಲ್ಕು ಕಾಡಾನೆಗಳನ್ನು ತೀವ್ರ ಕಾರ್ಯಾಚರಣೆಯ ಮೂಲಕ ಚೇರಳ ಮೀಸಲು ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖಾ ತಂಡ ಯಶಸ್ವಿಯಾಗಿದೆ. ಕುಶಾಲನಗರ ಅರಣ್ಯ ವಲಯದ ಆನೆಕಾಡು ಶಾಖೆಯ ಹೊರೂರು, ಮೋದೂರು , ಅತ್ತೂರು ನಲ್ಲೂರು ಗ್ರಾಮದ ಕೊರ್ತಿಕಾಡು, ಕಾರೆಕೊಲ್ಲಿ ಗ್ರೀನ್ ಲ್ಯಾಂಡ್, ಮತ್ತಿಕಾಡು, ಟಾಟಾ ಕಾಫಿ ಹಾಗೂ ಮೀನುಕೊಲ್ಲಿ ಶಾಖೆಯ ಚೇರಳ- ಶ್ರೀಮಂಗಲ, ಈರಳ ವಳಮುಡಿ ಗ್ರಾಮಗಳ ಸುತ್ತಮುತ್ತ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಕಾಡಾನೆಗಳ ದಾಳಿಯಿಂದ ವ್ಯಾಪಕ ಕೃಷಿ ಹಾನಿಯಾಗಿದ್ದು, ಕೃಷಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಗ್ರಾಮಿಣ ಭಾಗಗಳಲ್ಲಿ ನಿರಂತರ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮರಳಿ ಅರಣ್ಯಕ್ಕೆ ಅಟ್ಟುವಂತೆ ಗ್ರಾಮಸ್ಥರ ಆಗ್ರಹದ ಹಿನ್ನೆಲೆಯಲ್ಲಿ ಶನಿವಾರ ಅರಣ್ಯ ಇಲಖಾ ಸಿಬ್ಬಂದಿಗಳು ವ್ಯಾಪಕ ಕಾರ್ಯಾಚರಣೆ ನಡಸುವ ಮೂಲಕ ನಾಲ್ಕು ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸಿಎಫ್ ಮಡಿಕೇರಿ ಅಭಿಷೇಕ್ ವಿ. ಅವರ ಮಾರ್ಗದರ್ಶನದಲ್ಲಿ, ಎಸಿಎಫ್ ನವೀನ್ ಕುಮಾರ್ ಮತ್ತು ವಲಯ…

Read More