*ಮೈದಾನ 1* ಚೆಪ್ಪುಡಿರ ಮತ್ತು ಕರ್ತಮಾಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ಸಾಧಿಸಿತು. ಚೆಪ್ಪುಡಿರ ಪರ ವಚನ್ 2, ಚೇತನ್ ಚಿಣ್ಣಪ್ಪ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕರ್ತಮಾಡ ತರುಣ್ ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾದಂಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇಚಿಯಂಡ ತಂಡ ಜಯ ಸಾಧಿಸಿತು. ಮೇಚಿಯಂಡ ಪರ ವಿನಿತ್ ನಾಣಯ್ಯ ಹಾಗೂ ಸುನೀಲ್ ನಾಣಯ್ಯ ಗೋಲು ದಾಖಲಿಸಿದರು. ಮಾದಂಡ ಪರ ಸೈನಾ ಪೊನ್ನಪ್ಪ 1 ಗೋಲು ಬಾರಿಸಿದರು. ಮಾದಂಡ ಮಿಲನ್ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳ್ಳಂಡ ಮತ್ತು ಬೊಟ್ಟೋಳಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಬೊಟ್ಟೋಳಂಡ ಜಯ ಸಾಧಿಸಿತು. ಬೊಟ್ಟೋಳಂಡ ಪರ ಸೂರಜ್ ಅಯ್ಯಪ್ಪ ಹಾಗೂ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಬೊಳ್ಳಂಡ ಪರ ರತುಲ್ ತಿಮ್ಮಯ್ಯ 1 ಗೋಲು ಬಾರಿಸಿದರು.…
ಲೇಖಕ: admin
ಮಡಿಕೇರಿ ಏ.19 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತ ಕಾರ್ಯಾಗಾರ ನಡೆಯಿತು. ಕಾಲೇಜು ಸೇಮಿನಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವೃತ್ತಿಪರ ಕೋರ್ಸ್‍ಗಳಲ್ಲಿ ವಿವಿಧ ಸಾಕಷ್ಟು ವಿಪುಲ ಅವಕಾಶಗಳಿದ್ದು, ಗುರುಗಳ ಮಾರ್ಗದರ್ಶನ ಮತ್ತು ಸಲಹೆಗಳನ್ನು ಪಡೆದುಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದರು. ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ವಿಷಯ ಅರಿಯಬೇಕು. ಜೀವನದಲ್ಲಿ ಪರಿಪೂರ್ಣತೆಯನ್ನು ಪಡೆಯಲು ಶಾಲಾ ಹಂತದಲ್ಲಿಯೇ ವೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೆ. ಡಾ.ಬಿ.ರಾಘವ, ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಅತ್ಯವಶ್ಯಕ ಎಂದರು. ಮಹಾನಗರಗಳಲ್ಲಿ ವಿದ್ಯಾರ್ಥಿಗಳು ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿರುತ್ತಾರೆ. ಆದರೆ ಗ್ರಾಮೀಣ…
ಬೆಂಗಳೂರು ಏ.19 NEWS DESK : ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಕಾರ್ಯಾಗಾರ ಇಂದು ನಡೆಯಿತು. ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ವಿನಯ್ ಸಹಸ್ರಬುದ್ಧೆ, ಮಾಜಿ ಸಂಸದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್, ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಏ.19 NEWS DESK : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.27 ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. 1975ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. 1972 ಮ್ಯುನಿಚ್ ಒಲಂಪಿಕ್ಸ್, 1973 ವಿಶ್ವಕಪ್, 1976 ಮಾಂಟ್ರಿಲ್ ಒಲಂಪಿಕ್ಸ್ ನ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿದ ಖ್ಯಾತಿ ಇವರದ್ದು. ವಿಶ್ವಕಪ್ ಹಾಕಿ ಭೂಪಟದಲ್ಲಿ ಭಾರತ ಹಾಕಿ ತಂಡದ ಹೆಸರನ್ನು ಅಜರಾಮರಗೊಳಿಸಿದ ಕೊಡಗಿನ ವೀರ, 1975 ವಿಶ್ವಕಪ್ ಹಾಕಿ ವಿಜೇತ ತಂಡದ ಆಟಗಾರ ಪೈಕೇರ ಕಾಳಯ್ಯ, 1980 ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನಾಯಕ, ಭಾರತ ತಂಡದ ತರಬೇತುದಾರ, ವಿಶ್ವಕಪ್…
ಮಡಿಕೇರಿ ಏ.19 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಜೇಶ್ ತೇನನ, ಎರಡನೇ ಬಾರಿಗೆ ಕಾರ್ಯದರ್ಶಿಯಾಗಿ ಉದಯ್ ಪೇರಿಯನ, ಖಜಾಂಚಿಯಾಗಿ ನವೀನ್ ಅಂಬೆಕಲ್, ಜಂಟಿ ಕಾರ್ಯದರ್ಶಿಯಾಗಿ ಕೊಡಪಾಲು ಗಣಪತಿ, ನಿರ್ದೇಶಕರುಗಳಾಗಿ ಪೇರಿಯನ ಜಯಾನಂದ, ಚಿಲ್ಲನ ಗಣಿಪ್ರಸಾದ್, ಕೊಡಗನ ಹರ್ಷ, ಕುಯ್ಯಮುಡಿ ಅಶ್ವಿನಿ ಕುಮಾರ್, ಬೇಕಲ್ ಬಿಪಿನ್, ಪುಳಕಂಡ್ರ ಸುದೀಪ್, ಕುಯ್ಯಮುಡಿ ರಂಜು ಪಾಣತ್ತಲೆ, ಜಗದೀಶ್ ಮಂದಪ್ಪ, ಕೊಂಬಾರನ ರೋಷನ್, ಮೊಟ್ಟನ ಕರುಣ, ಪುದಿಯನೆರವನ ರೇವತಿ ರಮೇಶ್ ಹಾಗೂ ಕುಂಬುಗೌಡನ ಜಲಜ ವಿನೋದ್ ನೇಮಕಗೊಂಡಿದ್ದಾರೆ. ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ನೂತನ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆನಂದ್ ಕರಂದ್ಲಾಜೆ ಅವರು ಗೌಡ ಸಮಾಜಗಳ…
ಸುಂಟಿಕೊಪ್ಪ, ಏ.19 NEWS DESK : ಶುಭಶುಕ್ರವಾರದ ಅಂಗವಾಗಿ ಸಂತ ಮೇರಿ ಶಾಲಾ ಸಭಾಂಗಣದಲ್ಲಿ ಕ್ರೈಸ್ತ ಭಾಂದವರು ಆರಾಧನೆ, ದ್ಯಾನ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರುಗಳಾದ ವಿಜಯಕುಮಾರ್ ಹಾಗೂ ಕನ್ಯಾಸ್ತ್ರಿಯರು ವಿಶೇಷ ಪ್ರಾರ್ಥನೆ ನೇರವೇರಿಸಿದರು. ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ದಿನದ ಸಾಂಘ್ಯವನ್ನು ನೇರವೇರಿಸಿದರು. ಮಧ್ಯಾಹ್ನ ಸಂತ ಅಂತೋಣಿ ಶಾಲಾವರಣದಿಂದ ದೇವಾಲಯದಿಂದ ಕ್ರೈಸ್ತ ಶಿಲುಬೆ ಮೆರವಣಿಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.
ನಾಪೋಕ್ಲು ಏ.19 NEWS DESK : ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಭಾಗ್ಯವತಿ ಗ್ರಾಮ ಪಂಚಾಯಿತಿ ಸದಸ್ಯರ ಪೋಷಕರ ದಾನಿಗಳ ಜೊತೆಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು ಅಂಗನವಾಡಿ ಕೇಂದ್ರ ಉತ್ತಮ ಮಟ್ಟದಲ್ಲಿ ನಡೆಯಲು ಕಾರಣಕರ್ತರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಹೇಳಿದರು. ನಾಪೋಕ್ಲು ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಲ್ಲಮಾವಟ್ಟಿ ವೃತ್ತದ ಹಳೆ ತಾಲ್ಲೂಕು ಅಂಗನವಾಡಿ ಕೇಂದ್ರದ ಗ್ರಾಜುಯೇಷನ್ ಡೇ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು. ಭಾಗ್ಯವತಿ ಅವರು ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸುವಂತಾಗಲಿ ಎಂದು ಆಶಿಸಿದರು. ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಪ್ರೊ.ಕಲ್ಯಾಣ ಪೂಣಚ್ಚ ಉದ್ಘಾಟಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯುವರಾಜ್, ಮೇಪಡಂಡ ಸವಿತಾ ಕೀರ್ತನ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸೀತಾಲಕ್ಷ್ಮಿ, ದಂತ ವೈದ್ಯೆ ನೂರ್ ಫಾತಿಮಾ, ಬಾಲ ವಿಕಾಸ ಸಮಿತಿಯವರು ದಾನಿಗಳು…
ನಾಪೋಕ್ಲು ಏ.19 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ 25ನೇ ವರ್ಷದ ಮುದ್ದಂಡ ಕಪ್ 2025, ಹಾಕಿ ಪಂದ್ಯಾವಳಿಯಲ್ಲಿ ಹಲವರು ದಿನನಿತ್ಯ ಕಾರ್ಯನಿರ್ವಹಿಸಿ ಶ್ರಮಿಸುತ್ತಿದ್ದಾರೆ. ಇದರಲ್ಲಿ ವೀಕ್ಷಕ ವಿವರಣೆ ಕೊಡುವುದು ಸುಲಭದ ಮಾತಲ್ಲ. ಕ್ರೀಡೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿರಬೇಕು ಮಾತ್ರವಲ್ಲದೆ ಎಲ್ಲವನ್ನು ಸರಿದೂಗಿಸಿಕೊಂಡು ಮುನ್ನಡೆಸುವ ಜಾಣ್ಮೆಯು ಅಷ್ಟೇ ಮುಖ್ಯವಾಗಿದೆ. ಹಾಕಿ ಪಂದ್ಯಾವಳಿಯಲ್ಲಿ ಈ ಕಾರ್ಯವನ್ನು ಖ್ಯಾತ ಕ್ರೀಡಾ ವೀಕ್ಷಕ (ವರದಿ) ವಿವರಣೆಗಾರೂ ಹಾಗೂ ಬರಹಗಾರರು ಆಗಿರುವ ಚೆಪ್ಪುಡೀರ ಕಾರ್ಯಪ್ಪ ಹಾಗೂ ಮಾಳೇಟಿರ ಶ್ರೀನಿವಾಸ್ ಇವರ ಜೊತೆ ಚೋಕಿರ ಅನಿತಾ, ಬೊಟ್ಟೋಳಂಡ ಸೌಮ್ಯ, ಮೂಡೆರ ಹರೀಶ್ ಕಾಳಯ್ಯ, ಕುಲ್ಲೇಟಿರ ಅರುಣ್ ಬೇಬ, ಅಜ್ಜೇಟಿರ ವಿಕ್ರಮ್ ಹಾಗೂ ಚೆಯ್ಯಂಡ ಬನಿತ್ ಬೋಜಣ್ಣ ಇವರನ್ನು ಒಳಗೊಂಡ ವೀಕ್ಷಕ ವಿವರಣೆ ತಂಡ ಮುದ್ದಂಡ ಹಾಕಿ ಹಬ್ಬದಲ್ಲಿ ಅದ್ಭುತವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಏ.19 NEWS DESK : ಪಾಲೂರು ಗ್ರಾಮದ ಶ್ರೀಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಏ.13 ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಂತರ ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನೆರವೇರಿತು. ಮರುದಿನ ಪಟ್ಟಣಿ ಹಬ್ಬ ಉತ್ಸವದ ಅಂಗವಾಗಿ ಬೆಳಿಗ್ಗೆ ತುಲಾ ಭಾರಸೇವೆ ಸೇರಿದಂತೆ ವಿವಿಧ ಹರಕೆ ಸೇವೆ ಕಾಣಿಕೆಗಳನ್ನು ಒಪ್ಪಿಸಿ ಮಧ್ಯಾಹ್ನ ಎತ್ತು ಪೆÇೀರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು ಜರುಗಿ ಮಹಾಮಂಗಳಾರತಿ ತೀರ್ಥ, ಪ್ರಸಾದ ವಿತರಣೆ ಮತ್ತು ಉತ್ಸವದಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಜೋಡಿ ದೇವರ ನೃತ್ಯೋತ್ಸವ ನಡೆಯಿತು. ದೇವಾಲಯದ ಮುಖ್ಯ ಅರ್ಚಕ ದೇವಿಪ್ರಸಾದ್, ತಂತ್ರಿಗಳಾಗಿ ಕೃಷ್ಣ ಮತ್ತು ಸತ್ಯಮೂರ್ತಿ ಸರಳಾಯ, ಕೃಷ್ಣಮೂರ್ತಿ ಇನ್ನಿತರರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಜಾತ್ರಾ…
ಮೈಸೂರು NEWS DESK ಏ. 18: ಕರ್ನಾಟಕ ಸಾಂಸ್ಕೃತಿಕ ಹಾಗೂ ಪಾರಂಪರಿಕ ರಾಜಧಾನಿ ಮೈಸೂರಿನಲ್ಲಿ ನಡೆಯುತ್ತಿರುವ ಮರಗಳ ಮಾರಣಹೋಮವನ್ನು ತೀವ್ರವಾಗಿ ಖಂಡಿಸಿರುವ *ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಅವರು ಈ ಸಂಬಂಧ ನಿರ್ಧಾರ ಮರು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ನಜರಾಬಾದ್ ವ್ಯಾಪ್ತಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ವೃತ್ತದ ಬಳಿ 40 ಮರಗಳನ್ನು ಕಡಿದಿರುವ ಬಗ್ಗೆ ಇನ್ನಷ್ಟು ಮರಗಳಿಗೆ ಕೊಡಲಿ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಯದುವೀರ್ ಒಡೆಯರ್, “ಮರ”ಮೇಧ ನಿಲ್ಲಿಸಲು ನಡೆಯುತ್ತಿರುವ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದು ಸಾಧುವಲ್ಲ. ಪರಿಸರ ಹಾಗೂ ಪ್ರಕೃತಿಯನ್ನು ಸಂರಕ್ಷಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಯಾವುದೇ ಕಾರಣಕ್ಕೂ ನಾವು ಮರಗಳನ್ನು ಕಡಿಯಲು ಬಿಡುವುದಿಲ್ಲ. ಒಂದು ವೇಳೆ ಈ ರೀತಿಯ ಕ್ರಮಗಳನ್ನು ಕೈಗೊಳ್ಳಲೇಬೇಕಾಗುತ್ತದೆ ಎಂದು ತಿಳಿಸಿದರೆ ಇದಕ್ಕೆ ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಂಸದರು ತಿಳಿಸಿದ್ದಾರೆ. ಪರಿಸರ ತಜ್ಞರು,…






