ಸುಂಟಿಕೊಪ್ಪ ಜು.5 NEWS DESK : ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗುತ್ತಿದ್ದು, ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆ ಮೇರೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಚಂದ್ರಶೇಖರ್ ಅವರು ಜಿಲ್ಲೆಯಲ್ಲಿ ಅತೀವ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚುಮಳೆಯಾದ ಹಿನ್ನಲೆ ಭೂಮಿಯು ಸಡಿಲತೆಗೊಳ್ಳುತ್ತದೆ ಇಂತಹ ಸಂದರ್ಭಗಳಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡದೆ ಅಪತ್ತು ಸಂಭವಿಸಿದ ಸ್ಥಳದ ತುರ್ತು ಮಾಹಿತಿಯನ್ನು ಸಂಬಂಧಿಸಿದ ಇಲಾಖೆ ರವಾನಿಸಿ ತಮ್ಮಿಂದಾಗುವ ಅಮೂಲ್ಯ ಜೀವಗಳ ರಕ್ಷಣಾ ಕಾರ್ಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಈ ವ್ಯಾಪ್ತಿಯಲ್ಲಿ ಹಲವಷ್ಟು ಕುಗ್ರಾಮಗಳನ್ನು ಹೊಂದಿರುವ ಕೇಂದ್ರವಾಗಿದೆ ಈ…
ಲೇಖಕ: admin
ಮಡಿಕೇರಿ ಜು.5 NEWS DESK : ಕುಶಾಲನಗರದಲ್ಲಿರುವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಆಹಾರ ಸಾಮಾಗ್ರಿಗಳು ಕಳ್ಳತನವಾಗುತ್ತಿದ್ದು, ಇಲ್ಲಿನ ಸಿಬ್ಬಂದಿಗಳಿಂದಲೇ ಈ ಕೃತ್ಯ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಬಿ.ಡಿ.ಅಣ್ಣಯ್ಯ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಗಂಧದಕೋಟೆಯಲ್ಲಿ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿನಿಯರಿಗಾಗಿ ಬಿಸಿಎಂ ವಸತಿ ನಿಲಯವಿದ್ದು, ಇಲ್ಲಿ ಸುಮಾರು 200 ವಿದ್ಯಾರ್ಥಿಗಳಿದ್ದಾರೆ. ವಸತಿ ನಿಲಯಕ್ಕೆ ಬಂದ ಆಹಾರ ಸಾಮಾಗ್ರಿಗಳನ್ನು ಕಳ್ಳತನ ಮಾಡಿ ನರ್ಸಿಂಗ್ ಹಾಸ್ಟೆಲ್ ವೊಂದರಲ್ಲಿ ಇಟ್ಟಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ ಎಂದರು. ಕಳ್ಳತನದ ಕುರಿತು ವಿದ್ಯಾರ್ಥಿನಿಯರು ನೀಡಿದ ಮಾಹಿತಿಯ ಆಧಾರದಲ್ಲಿ ತಾವು ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದೆವು. ತಾಲ್ಲೂಕು ಬಿಸಿಎಂ ಅಧಿಕಾರಿಗೆ ಕರೆ ಮಾಡಿ ಪ್ರಕರಣದ ಕುರಿತು ಮಾಹಿತಿ ನೀಡಿ ಸ್ಥಳಕ್ಕೆ ಬರುವಂತೆ ಕೋರಿಕೊಂಡರೂ ಬಾರದೆ ನಿರ್ಲಕ್ಷ್ಯ ತೋರಿದ್ದಾರೆ. ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಅವರಿಗೆ ದೂರು ನೀಡಿ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದೇವೆ. ಮುಂದಿನ 1 ವಾರದಲ್ಲಿ ಘಟನೆಗೆ ಕಾರಣರಾದವರ ವಿರುದ್ಧ…
ಮಡಿಕೇರಿ ಜು.5 NEWS DESK : ರೋಟರಿ ಕ್ಲಬ್ ಮಡಿಕೇರಿ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ರೋಟರಿ ಕ್ಲಬ್ ಮಡಿಕೇರಿಯ ನೂತನ ಅಧ್ಯಕ್ಷರಾಗಿ ರೋಟರಿಯನ್ ಲಲಿತ ರಾಘವನ್ ಹಾಗೂ ಕಾರ್ಯದರ್ಶಿಯಾಗಿ ಬಿ.ಎಂ.ಸೋಮಣ್ಣ ಅವರು ಅಧಿಕಾರ ಸ್ವೀಕರಿಸಿದರು. ಪಿಡಿಜಿ ರೋಟರಿಯನ್ ಡಾ.ರವಿ ಅಪ್ಪಾಜಿ ಅವರು ಪದಗ್ರಹಣ ಅಧಿಕಾರಿಯಾಗಿ ರೋಟರಿಯನ್ ಸುದಯ್ ನಾಣಯ್ಯ ಅವರಿಂದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು, ನೂತನ ಅಧ್ಯಕ್ಷರು ರೋಟರಿ ಮೌಲ್ಯಗಳನ್ನು ಅರಿತು ಸದಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪಣತೊಡಬೇಕು ಮತ್ತು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪಿಡಿಜಿ ರೋಟರಿಯನ್ ಎಂ.ಎಂ.ಚಂಗಪ್ಪ ಅವರು ರೋಟರಿಯಲ್ಲಿ ಗುರುತಿಸಿಕೊಂಡವರು ಸಮಾಜದೊಂದಿಗೆ ಬೆರೆತು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಮತ್ತು ನೂತನ ಪದಾಧಿಕಾರಿಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು. ರೋಟರಿ ಕ್ಲಬ್ ಮಡಿಕೇರಿಯ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿ…
ಮಡಿಕೇರಿ NEWS DESK ಜು.5 : ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ಸಿಂಗ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರ ಸಭೆ ಬೆಂಗಳೂರಿನಲ್ಲಿ ನಡೆಯಿತು. ಪಕ್ಷದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಬಲವರ್ಧನೆ ಕುರಿತು ಚರ್ಚಿಸಿದರು. ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅತಿಶಿ ಸಿಂಗ್ ಅವರು ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ನಡೆದಿರುವ ದುರಾಡಳಿತದಿಂದ ನಲುಗಿ ಹೋಗಿರುವ ಜನಸಾಮಾನ್ಯನಿಗೆ ಏಕೈಕ ಆಶಾಕಿರಣವಾಗಿ ಉಳಿದಿರುವ ಪಕ್ಷವೆಂದರೆ ಅದು ಆಮ್ ಆದ್ಮಿ ಪಾರ್ಟಿ ಒಂದೇ ಎಂದರು. ದೆಹಲಿಯಲ್ಲಿ ನಾವು ಕಳೆದ ಹತ್ತು ವರ್ಷಗಳಿಂದ ಮಾಡಿರುವ ಸಾಧನೆ ಹಾಗೂ ಪಂಜಾಬ್ ನಲ್ಲಿ ನೀಡುತ್ತಿರುವ ಸ್ವಚ್ಛ, ಪ್ರಾಮಾಣಿಕ ಆಡಳಿತ ವೈಖರಿಯನ್ನು ನೋಡಿದಾಗ ಜನಸಾಮಾನ್ಯರು ಅಧಿಕಾರಕ್ಕೆ ಬಂದಾಗ ಮಾತ್ರ ದೇಶದಲ್ಲಿ ಬದಲಾವಣೆ ಸಾಧ್ಯವಾಗುತ್ತದೆಯೇ ಹೊರತು ಪರಂಪರಾಗತ ಪಕ್ಷಗಳಿಂದ ಸಾಧ್ಯವಿಲ್ಲ ಎನ್ನುವುದು ಸಾಬೀತಾಗುತ್ತಿದೆ. ಜನಸಾಮಾನ್ಯ ಕೂಡ ಮುಖ್ಯಮಂತ್ರಿಯಾಗಬಹುದೆನ್ನುವುದಕ್ಕೆ ನಾನೇ ಉತ್ತಮ ಸಾಕ್ಷಿಯಾಗಿದ್ದೇನೆ. ಇದೇ ರೀತಿಯ ಪರ್ಯಾಯ ರಾಜಕಾರಣವನ್ನು ದೇಶದೆಲ್ಲೆಡೆ ಜನಸಾಮಾನ್ಯರು ಸ್ವಾಗತಿಸುತ್ತಿದ್ದಾರೆ ಎಂದು…
ಮಡಿಕೇರಿ ಜೂ.4 NEWS DESK : ಸಂತೋಷ ಅನ್ನೋದು ಒಂದು ಮನಸ್ಥಿತಿ. ಶ್ರದ್ಧೆ ಮತ್ತು ನಿರಂತರ ಶ್ರಮದಿಂದ ಸಾಧನೆಗೈಯಲು ಸಾಧ್ಯ, ಸತತ ಪ್ರಯತ್ನ ನಮಗೆ ನೀಡುವ ಆನಂದವೇ ನಿಜವಾದ ಸಂತೋಷ ಎಂದು ಸಂತ ಜೋಸೆಫರ ಕಾನ್ವೆಂಟ್ ಸುಪೀರಿಯರ್ ರೆ.ಸಿಸ್ಟರ್ ಮರ್ಸಿ ಜೇಕಬ್ ಅಭಿಪ್ರಾಯಪಟ್ಟರು. ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಆಯೋಜನೆಗೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಖ್ಯಾತ ಉದ್ಯಮಿ ರತನ್ ಟಾಟಾ ಅವರ ಸಾಧನೆಯ ಬಗ್ಗೆ ಮಕ್ಕಳಿಗೆ ಹೇಳುತ್ತಾ, ಸಾಧನೆಗೆ ಶ್ರಮವನ್ನು ಹೊರತುಪಡಿಸಿ ಪರ್ಯಾಯ ವ್ಯವಸ್ಥೆ ಇಲ್ಲ ಎಂಬ ಕಿವಿಮಾತನ್ನು ಹೇಳಿದರು. ಏಕಾಗ್ರತೆಯಿಂದ ಓದಿ ಸಾಧಿಸುವ ಮನೋಬಲ ಎಲ್ಲ ವಿದ್ಯಾರ್ಥಿಗಳಿಗೂ ಬರಲಿ ಎಂದು ಹಾರೈಸಿದರು. ಸಂಸ್ಥೆಯ ಸಂಚಾಲಕರಾದ ಸಿಸ್ಟರ್ ಲೂರ್ದ್ ಮೇರಿ ವಿದ್ಯಾರ್ಥಿ ವೃಂದಕ್ಕೆ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಚಾರ್ಯ ಸಿಸ್ಟರ್ ರೋಜಾ, ಕಳೆದ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದು ಕಾಲೇಜಿಗೆ…
ಮಡಿಕೇರಿ ಜು.5 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜು.10 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಕುಶಾಲನಗರ ಜು.5 NEWS DESK : ತಾಲ್ಲೂಕು ಕೇಂದ್ರವಾದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು – ಈ ಬ್ಯಾಂಕ್ ನ ಹಿರಿಯ ನಿವೃತ್ತ ಅಧಿಕಾರಿ, ಕುಶಾಲನಗರದ ಸೂದನ ರತ್ನಾವತಿ ಪೂಣಚ್ಚ ಉಚಿತ ಬರೆಯುವ ನೋಟ್ ಪುಸ್ತಕಗಳು ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಸೂದನ ರತ್ನಾವತಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೃಢ ಸಂಕಲ್ಪ ತೊಟ್ಟು ಉತ್ತಮ ವ್ಯಕ್ತಿಗಳಾಗಿ ರೂಪುಗೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉತ್ತಮ ಸಂಸ್ಕಾರ ಹಾಗೂ ಸಂಸ್ಕೃತಿ ಬೆಳೆಸಿಕೊಂಡು ಶಿಕ್ಷಣ ನೀಡಿದ ಗುರುಗಳು ಹಾಗೂ ಜನ್ಮ ನೀಡಿದ ತಂದೆ- ತಾಯಿಗಳಿಗೆ ಗೌರವ ನೀಡಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಮಾತನಾಡಿ , ಶಿಕ್ಷಣ ಪ್ರೇಮಿ ಸೂದನ ರತ್ನಾವತಿ ಅವರು ನಮ್ಮ ಸರ್ಕಾರಿ ಶಾಲಾ ಮಕ್ಕಳಿಗೆ ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ವಿತರಿಸುತ್ತಿದ್ದು,…
ಮಡಿಕೇರಿ ಜು.4 NEWS DESK : ನಗರದಲ್ಲಿ ತಾಲ್ಲೂಕು ಕ್ಷಿಪ್ರ ಕಾರ್ಯಪಡೆ ತಂಡದವರು ವಾರ್ಡ್‍ವಾರು ಮನೆ ಮನೆಗಳಿಗೆ ಭೇಟಿ ನೀಡಿ ನೀರಿನ ತಾಣಗಳಲ್ಲಿ ಲಾರ್ವಾ ಉತ್ಪತ್ತಿಯಾಗಿರುವುದನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡುವ ಮೂಲಕ ಡೆಂಗ್ಯೂ ನಿಯಂತ್ರಣ ಕುರಿತು ಅರಿವು ಮೂಡಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಶ್ರೀನಿವಾಸ್ ಮಾತನಾಡಿ, ಡೆಂಗ್ಯೂ ಮಾಸಾಚರಣೆ ನಿಮಿತ್ತ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದರು. ನೀರಿನ ತಾಣಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಖಾಲಿ ಮಾಡಿ ಒರೆಸಿ, ಒಣಗಿಸಿ ನೀರು ಶೇಖರಿಸುವುದು ಮತ್ತು ಮುಚ್ಚಳದಿಂದ ಮುಚ್ಚಿಡುವುದು, ಎಲ್ಲರೂ ಸೊಳ್ಳೆಗಳಿಂದ ರಕ್ಷಣಾತ್ಮಕ ಉಡುಪುಗಳನ್ನು ಧರಿಸುವುದು, ಸೊಳ್ಳೆ ಪರದೆಗಳನ್ನು ಉಪಯೋಗಿಸುವಂತೆ, ತ್ಯಾಜ್ಯ ಪರಿಕರಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಪರಿಸರ ಶುಚಿತ್ವ ಕಾಪಾಡಿಕೊಳ್ಳಲು ಮತ್ತು ಯಾವುದೇ ರೀತಿಯ ಜ್ವರ ಬಂದ ತಕ್ಷಣ ವೈದ್ಯರಲ್ಲಿ ತೋರಿಸಿಕೊಳ್ಳುವಂತೆ ಹೇಳಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚೇತನ್ ಮೇಲ್ವೀಚಾರಣೆ ನಡೆಸಿ, ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜ್ವರ ಮತ್ತು ಗುಣತ್ಮಾಕ ಲಾರ್ವಾ ಸರ್ವೇಕ್ಷಣೆ ನಡೆಸಿ ಜನರಲ್ಲಿ ಆರೋಗ್ಯ ಶಿಕ್ಷಣ ನಿಡುತ್ತಾ ತಂಡದವರು ಕಾರ್ಯನಿರ್ವಹಿಸುತ್ತಿದ್ದು…
ಮಡಿಕೇರಿ ಜು.4 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಜು.5 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್‍ಆರ್‍ಟಿಸಿ ಬಸ್ ಸ್ಟಾಂಡ್, ಹಳೆ ಪ್ರೈವೇಟ್ ಬಸ್ ಸ್ಟಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಜು.4 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 8 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 178 ಮನೆಗಳ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿದರು. ಗಾಳಿಬೀಡು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದ ಶಾಸಕರು, ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗುತ್ತಿದ್ದು, ಮಳೆಗಾಲ ನಂತರ ಮನೆ ನಿರ್ಮಾಣಕ್ಕೆ ಮುಂದಾಗಬಹುದಾಗಿದೆ ಎಂದು ಸಲಹೆ ನೀಡಿದರು. ಸರ್ಕಾರದ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ಇರುವವರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಿದ್ದು, ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಕೋರಿದರು. ಸರ್ಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಕಾರ್ಯಕ್ರಮಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವತ್ತ ಮುಂದಾಗಬೇಕು ಎಂದು ಡಾ.ಮಂತರ್ ಗೌಡ ಅವರು ತಿಳಿಸಿದರು. ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು…






