ಲೇಖಕ: admin

ಕುಶಾಲನಗರ ಆ.15 NEWS DESK : ಕೊಡಗು ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸೈನಿಕ ಶಾಲೆಯ ಜನರಲ್ ತಿಮಯ್ಯ ಪರೇಡ್ ಮೈದಾನದಲ್ಲಿ ಶಾಲೆಯ ಪ್ರಾಂಶುಪಾರಾದ ಕರ್ನಲ್ ಅಮರ್ ಜೀತ್ ಸಿಂಗ್ ಧ್ವಜಾರೋಹಣ ನೆರವೇರಿ, ಗೌರವ ವಂದನೆ ಸ್ವೀಕರಿಸಿದರು. ನಂತರ ಶಾಲೆಯಲ್ಲಿನ ವೀರಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕರ್ನಲ್ ಅಮರ್ ಜೀತ್ ಸಿಂಗ್,  ಶಿಸ್ತು, ನಿಷ್ಠೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡು ಸುಭದ್ರ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಜೀವಿತದ ಪ್ರತಿ ಕ್ಷಣದಲ್ಲಿಯೂ ದೇಶಪ್ರೇಮವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕೆಂದು ತಿಳಿಸಿದರು. ಶಾಲೆಯಲ್ಲಿನ ಸರ್ವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಆದರ್ಶ ನಾಗರೀಕರಾಗಬೇಕೆಂದು ತಿಳಿ ಹೇಳಿದರು. ಶಾಲೆ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್ ಹಾಗೂ ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲೆಯ ಪ್ರಥಮ ಮಹಿಳೆ ದಿವ್ಯಾಸಿಂಗ್, ಬೋಧಕ, ಬೋಧಕೇತರ…

Read More

ಸೋಮವಾರಪೇಟೆ ಆ.15 NEWS DESK : ಸುರಿಯುವ ಮಳೆಯ ನಡುವೆಯೂ ತಾಲ್ಲೂಕು ಆಡಳಿತದಿಂದ 79ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಾಲ್ಲೂಕು ದಂಡಾಧಿಕಾರಿ ಕೃಷ್ಣಮೂರ್ತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು,  ಮಹಾನಾಯಕರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಏಕತೆಗೆ ಭಂಗ ಬರಬಾರದು, ಸಾಮರಸ್ಯ ಒಡೆಯಬಾರದು, ಭಾತೃತ್ವ ಹಾಗೂ ಸಹೋದರತೆಯಿಂದ ಇರಬೇಕೆಂದರು. ಮೂಲಭೂತ ರಾಜಕೀಯ ಸಂಹಿತೆಗಳು, ಪ್ರಜೆಗಳ ಹಕ್ಕುಗಳು, ಅಧಿಕಾರ ಹಾಗೂ ಕರ್ತವ್ಯಗಳನ್ನು ನಿಗದಿಪಡಿಸಲು  ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲಕ ನಡೆಯುತ್ತಿರುವುದು ಗಮನಾರ್ಹವೆಂದರು.  ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆದಂ, ಚೌಡ್ಲು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ  ಜಯಂತಿ, ಉಪಾಧ್ಯಕ್ಷೆ ಮೋಹಿನಿ, ಚೌಡ್ಲು ಗ್ರಾಮ ಪಂಚಾಯತಿ ಸದಸ್ಯ…

Read More

ಮಡಿಕೇರಿ ಆ.15 NEWS DESK : ಮೊದಲ ಸ್ವಾತಂತ್ರ್ಯ ಹೋರಾಟಕ್ಕೂ ಮೊದಲು ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಆರಂಭವಾಗಿತ್ತು. ಅಂದು ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದ ಅಮರ ಸುಳ್ಯ ದಂಗೆ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿತು ಎಂದು ನಿವೃತ್ತ ಸೇನಾಧಿಕಾರಿ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ತಿಳಿಸಿದ್ದಾರೆ. ನಗರದ ಸುದರ್ಶನ ವೃತ್ತದ ಬಳಿ ಇರುವ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಯ ಆವರಣದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಅಂಗಸಂಸ್ಥೆಗಳ ವತಿಯಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹಿರಿಯರ ತ್ಯಾಗ ಬಲಿದಾನವನ್ನು ನಮ್ಮ ಇಂದಿನ ಪೀಳಿಗೆ ನೆನಪಿಸಿಕೊಳ್ಳಬೇಕು. ಅವರು ಹಾಕಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಹಿರಿಯರ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ಇಂದಿನ ಯುವ ಜನತೆ ಜವಾಬ್ದಾರಿಯಿಂದ ನಾಡು ಮತ್ತು ದೇಶ ಕಟ್ಟುವ…

Read More

ಭಾಗಮಂಡಲ NEWS DESK ಆ.15 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯದ ಪ್ರಬಾರ ಕಾರ್ಯನಿರ್ವಹಣಾ ಅಧಿಕಾರಿಗಳು ಹಾಗೂ ಮಡಿಕೇರಿ ತಾಲ್ಲೂಕು ಕಛೇರಿ ಚುನಾವಣಾ ಶಿರಸ್ತೇದಾರರಾದ ಎನ್.ಜಿ.ಚಂದ್ರಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು, ದೇವಾಲಯದ ಸಿಬ್ಬಂದಿವರ್ಗ, ಅರ್ಚಕರು, ತಕ್ಕಮುಖ್ಯಸ್ಥರು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಮುಖಂಡರು ಹಾಗೂ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

Read More

ಮಡಿಕೇರಿ ಆ.15 NEWS DESK : ಮಡಿಕೇರಿ ನಗರ ಚೇಂಬರ್ ಘಟಕದಿಂದ ನಗರದ ಚೌಕಿ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಏಕ ಬಳಕೆ ಮುಕ್ತ ಪ್ಲಾಸ್ಟಿಕ್ ನಗರ ಎಂಬ ಘೋಷಣೆಯ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ 2ಲೀಟರ್ ವರೆಗಿನ ಕುಡಿಯುವ ನೀರಿನ ಬಾಟಲಿಯನ್ನು ಬಳಸದಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರ ಚೇಂಬರ್ ನ ನಿರ್ದೇಶಕರು ಮತ್ತು ವರ್ತಕರು ಉಪಸ್ಥಿತರಿದ್ದರು. ನಗರ ಘಟಕ ಅಧ್ಯಕ್ಷರಾದ ಸಂತೋಷ್ ಅನ್ವೇಕರ್ ಸ್ವಾಗತಿಸಿ ವಂದಿಸಿದರು.

Read More

ಮಡಿಕೇರಿ ಆ.15 NEWS DESK : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮುಸ್ತಫ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ವಿತರಿಸಲಾಯಿತು.

Read More

ಮಡಿಕೇರಿ ಆ.15 NEWS DESK : ಪಾಲಿಬೆಟ್ಟ ಉಪ ಅಂಚೆ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಚೆ ಕಚೇರಿಯ ಉಪ ಪೋಸ್ಟ್ ಮಾಸ್ಟರ್ ಹೆಚ್.ಬಿ.ಗಣೇಶ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಕ್ಲಬ್‍ನ ಸಿ.ಎಂ.ಹ್ಯಾರಿಸ್, ಸಬ್ ಇನ್ಸ್‍ಪೆಕ್ಟರ್ ಮಂಜುನಾಥ್, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಯಂಗ್ ಇಂಡಿಯಾ ಕ್ಲಬ್‍ನ ಸದಸ್ಯರು, ಅಂಚೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.

Read More

ವಿರಾಜಪೇಟೆ ಆ.15 NEWS DESK : ವಿರಾಜಪೇಟೆ ಪುರಸಭೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಭಾರತೀಯರ ಪಾಲಿಗೆ ಇಂದು ಅತ್ಯಂತ ಶುಭದಿನ. ಪರಕೀಯರ ಆಳ್ವಿಕೆಯನ್ನು ಹೊಡೆದೋಡಿಸಿ ಭಾರತೀಯರೇ ನಮ್ಮ ದೇಶವನ್ನು ಆಳಲು ಆರಂಭಿಸಿದ ಐತಿಹಾಸಿಕ ದಿನ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರೆಲ್ಲ ನೀಡಿದ ತ್ಯಾಗ, ಬಲಿದಾನವನ್ನು ನಾವೆಲ್ಲರೂ ಸ್ಮರಿಸಲೇಬೇಕು. ಅವರೆಲ್ಲರಿಗೂ ವಂದಿಸುತ್ತಾ, ಸ್ಮರಿಸುತ್ತಾ, ಅವರ ಕೆಚ್ಚೆದೆಯ ಹೋರಾಟವನ್ನು ನೆನೆದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರೆ, ಅದಕ್ಕೆ ನಿಜವಾದ ಅರ್ಥ ದೊರೆತಂತಾಗುತ್ತದೆ ಎಂದು ಬಣ್ಣಿಸಿದರು.  ಈ ಸಂದರ್ಭ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ತಾಲೂಕು ದಂಡಾಧಿಕಾರಿಗಳು ಹಾಗೂ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು ಹಾಗೂ ಸದಸ್ಯರುಗಳು, ಆಹ್ವಾನಿತ ಗಣ್ಯರು, ಪುರಸಭೆಯ ಪ್ರಮುಖರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಆ.15 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ನಗರಸಭಾ ಸದಸ್ಯ ಮುಸ್ತಫ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಬ್ಬರು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನಂತರ ಸಿಹಿ ಹಂಚಿದರು. ದೇವಾಲಯ ಟ್ರಸ್ಟ್ ನ ಪದಾಧಿಕಾರಿಗಳು, ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಜ್ಯೋತಿ ಯುವಕ ಸಂಘದ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಆ.15 : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಸಹಾಯಕ ಅಭಿಯಂತರರು ಹಾಗೂ ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಪಿ.ಆನಂದನ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಿಲಯದ ಪ್ರಸರಣ ಕಾರ್ಯ ನಿರ್ವಾಹಕರಾದ ಎಂ.ಶಕುಂತಲಾ, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಕೆ.ಪಿ.ಶಿವಾನಂದನ್, ಕೆ.ಟಿ.ನಾಗರಾಜ್, ಕೆ.ಎಸ್.ಉದಯಕುಮಾರ್, ಬಿ.ಕೆ. ಲೋಕೇಶ್, ಹೆಚ್.ಆರ್.ಜೀವನ್ ಕುಮಾರ್, ಗ್ರಂಥಪಾಲಕ ಪಂಕಜ್ ಕುಡ್ತರ್ಕರ್ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು.

Read More