ಮಡಿಕೇರಿ NEWS DESK ಮೇ 17 : ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿಪೂಜೆ ನೆರವೇರಿಸಲು ದಿನಾಂಕ ನಿಗಧಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಮಾರ್ಚ್ ಅಂತ್ಯದ ವರೆಗಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಶಾಸಕರು ಕೊಯನಾಡು ಬಳಿ ಬರೆಕುಸಿತದಿಂದ ಶಾಲಾ ಕಟ್ಟಡ ಹಾನಿಯಾಗಿತ್ತು. ಈ ಹಿನ್ನೆಲೆ ಸಂಪಾಜೆ ಶಾಲೆಗೆ ವಿದ್ಯಾರ್ಥಿಗಳು ಹೋಗುತ್ತಿದ್ದರು. ಆದ್ದರಿಂದ ಅಲ್ಲಿನ ಸ್ಥಳೀಯರು ಪಕ್ಕದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಅವಕಾಶ ಮಾಡಬೇಕು ಎಂದು ಮನವಿ ಮಾಡಿದ್ದರು. ಅದರಂತೆ ಜಾಗ ಗುರುತಿಸಲಾಗಿದ್ದು, ಕೂಡಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಚಾಲನೆ…
ಲೇಖಕ: admin
ಮಡಿಕೇರಿ ಮೇ 17 NEWS DESK : ಬೆಟ್ಟಗೇರಿ ಗ್ರಾಮ ಪಂಚಾಯ್ತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿಯ ಅಧ್ಯಕ್ಷ ಪ್ರವೀಣ್ ನಾಯಕ್ ಅವರು ಆಗ್ರಹಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟಗೇರಿಯಲ್ಲಿ ನೆಲೆಸಿರುವ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಕಲಚೇತನ ಮಹಿಳೆ ವೀಣಾ ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ. ಹೀಗಿದ್ದೂ ಆರೋಪಿಗಳ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿಲ್ಲ. ಈ ಕಾರಣದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸುತ್ತಿರುವುದಾಗಿ ತಿಳಿಸಿದರು. ವಿಕಲಚೇತನರ ರಾಜ್ಯ ಸಮಿತಿಯಲ್ಲಿ 6860 ಸದಸ್ಯರುಗಳಿದ್ದು, ಕಾರ್ಯಕರ್ತರ ಸಂಕಷ್ಟಗಳನ್ನು ರಾಜ್ಯ ಸಮಿತಿ ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಪ್ರಯತ್ನ ನಡೆಸಲಿದೆ ಎಂದರು. *ಪ್ರತಿಭಟನೆ ಎಚ್ಚರಿಕೆ* ಕೊಡಗು ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಕೆ.ಎ.ಮಹೇಶ್ವರ ಅವರು ಮಾತನಾಡಿ, ವಿಕಲಚೇತನ ಮಹಿಳೆ…
ಕುಶಾಲನಗರ, ಮೇ 17 NEWS DESK : ಶಿರಂಗಾಲ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ಪಡೆದು ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ಹೆಚ್.ಜೆ.ನಾಗರಾಜ್ ನೇಮಕಗೊಂಡಿದ್ದಾರೆ. ಪ್ರಾಂಶುಪಾಲರ ಹುದ್ದೆಗೆ ನಡೆದ ಕೌನ್ಸಿಲಿಂಗ್ ನಲ್ಲಿ ನಾಗರಾಜ್, ಕೂಡಿಗೆ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದರು. ಕೂಡಿಗೆ ಕಾಲೇಜಿಗೆ ಆಗಮಿಸಿದ ನೂತನ ಪ್ರಾಂಶುಪಾಲ ನಾಗರಾಜ್, ಪ್ರಭಾರ ಪ್ರಾಂಶುಪಾಲರಾದ ನಾಗಪ್ಪ ಯಾಲಕ್ಕಿಕಟ್ಟೆ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸೋಮಶೇಖರ್, ಮಾಜಿ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ, ಶಿರಂಗಾಲ ಕಾಲೇಜಿನ ಪ್ರಾಂಶುಪಾಲ ಸೋಮಚಂದ್ರ, ಕೂಡಿಗೆ ಗ್ರಾ.ಪಂ.ಮಾಜಿ ಅಧ್ಯಕ್ಷ ಟಿ.ಕೆ.ವಿಶ್ವನಾಥ್,ಶಿಕ್ಷಕರ ಸಂಘಟನೆಯ ಪ್ರಮುಖರಾದ ಸಿ.ಟಿ.ಸೋಮಶೇಖರ್, ಎಂ.ರಂಗಸ್ವಾಮಿ, ಎಸ್.ಎ.ಯೋಗೇಶ್, ಸಿಆರ್‍ಪಿ ಕೆ.ಶಾಂತಕುಮಾರ್, ನಾಗರಾಜ್ ಇತರರು ಇದ್ದರು.
ಮಡಿಕೇರಿ ಮೇ 17 NEWS DESK : ಲೋಕ ಕಲ್ಯಾಣಕ್ಕಾಗಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಜಪಯಜ್ಞ ಸಮಿತಿ ವತಿಯಿಂದ ನಡೆಯುತ್ತಿರುವ ಅತಿರುದ್ರ ಜಪಯಜ್ಞ ಮೇ 21ರಂದು ಕಾವೇರಿ ತೀರದಲ್ಲಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ಸನ್ನಿಧಿಯಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 21 ರಂದು ಶ್ರೀರಾಮಲಿಂಗೇಶ್ವರ ದೇವಾಲಯದಲ್ಲ್ಲಿ ಶ್ರೀ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜರ ನೇತೃತ್ವದಲ್ಲಿ ಶ್ರೀ ಚಂಡಿಕಾ ಹೋಮ, ಎರಡು ಆವರ್ತದ ಶ್ರೀರುದ್ರ ಜಪ ಹಾಗೂ ಮಹಾ ಪ್ರಸಾದ ವಿನಿಯೋಗ ನಡೆಯಲಿದೆ. ಮೇ 20 ರಂದು ಮಡಿಕೇರಿಯ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಶ್ರೀ ರುದ್ರ ಹೋಮ, ಮೂರು ಆವರ್ತ ಶ್ರೀ ರುದ್ರ ಜಪ ಹಾಗೂ ಸಭಾ ಕಾರ್ಯಕ್ರಮ ಜರುಗಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ ಕೋಟ್ಯಧಿಕ ಶ್ರೀ ರುದ್ರ ಜಪ ಕೈಂಕರ್ಯವು ಕಳೆದ ಐದು ವರ್ಷಗಳಿಂದ ರಾಜ್ಯದ…
ಮಡಿಕೇರಿ ಮೇ 17 NEWS DESK : ಮಡಿಕೇರಿ ತಾಲ್ಲೂಕಿನ ಅರೆಕಾಡು ಹೊಸ್ಕೇರಿ ರಸ್ತೆಯ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಕಳೆದ ಕೆಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿತ್ತು. ಹೊಂಡ, ಗುಂಡಿಗಳಿಂದ ಕೂಡಿದ್ದ ರಸ್ತೆಯ ಅಭಿವೃದ್ಧಿಗಾಗಿ ಇತ್ತೀಚೆಗೆ “ಕೊಡವ ವೆಲ್‍ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಅನುದಾನವನ್ನು ಮೀಸಲಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು ಗ್ರಾಮದ ಯಾವುದೇ ಸಮಸ್ಯೆಗಳಿದ್ದಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿದೆ, ಈ ಬಗ್ಗೆ ಗ್ರಾಮಸ್ಥರು ಕೂಡ ಗಮನ ಹರಿಸಬೇಕೆಂದರು. ಇದೇ ಸಂದರ್ಭ ಅರೆಕಾಡು – ಭಗವತಿ ದೇವಾಲಯ ಮತ್ತು ಕುಕ್ಕೇರ ಐನ್ ಮನೆ ರಸ್ತೆಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡವ ವೆಲ್‍ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ…
ಮಡಿಕೇರಿ ಮೇ 17 NEWS DESK : ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಸಾಗಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಸಾಲ ಸೌಲಭ್ಯವನ್ನು ಒದಗಿಸುತ್ತಿದ್ದು, ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದು ಮಾಯಮುಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಕರೆ ನೀಡಿದ್ದಾರೆ. ಮಾಯಮುಡಿಯಲ್ಲಿ ಮಹಿಳೆಯರೇ ತಯಾರಿಸಿದ ವಿವಿಧ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಸ್ವಾಲಂಬಿಗಳಾಗಿ ಜೀವನ ಸಾಗಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ತಯಾರಿಸುವ ಉತ್ಪನ್ನಗಳಿಗೆ ಗ್ರಾ.ಪಂ ಮಾರುಕಟ್ಟೆ ಕಲ್ಪಿಸುವ ಪ್ರಯತ್ನ ಮಾಡಲಿದೆ ಎಂದು ಭರವಸೆ ನೀಡಿದರು. ದಿನನಿತ್ಯ ಬೇಡಿಕೆ ಇರುವ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು. ತಾವು ತಯಾರಿಸಿದ ವಸ್ತುಗಳಿಗೆ ಸೂಕ್ತ ಬೆಲೆ ಸಿಗಬೇಕಾದರೆ ಗ್ರಾಮ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲೂ ಮಾರುಕಟ್ಟೆ ವ್ಯವಸ್ಥೆ ಲಭಿಸಬೇಕು. ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಗೆ ಸ್ವಂತ ಉದ್ದಿಮೆ ಸ್ಥಾಪಿಸಲು ವಿವಿಧ ರೀತಿಯ ಸಹಾಯಧನದ ರೂಪದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಜೇನು ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು…
ವಿರಾಜಪೇಟೆ ಮೇ 17 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವೀರಮಡಿವಾಳ ಮಾಚಿದೇವರ ಸಂಘದ ನೂತನ ಅಧ್ಯಕ್ಷರಾಗಿ ವಿರಾಜಪೇಟೆಯ ಡಿ.ಪಿ.ರಾಜೇಶ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಪುರಭವನದಲ್ಲಿ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಪಾಧ್ಯಕ್ಷರಾಗಿ ಗಿರಿಜಾ ಕಾಶಿ, ಡಿ.ಜಿ.ಕೇಶವ, ಪ್ರದಾನ ಕಾರ್ಯದರ್ಶಿಯಾಗಿ ಎಂ.ಆರ್.ಮಹಾದೇವ್, ಕಾರ್ಯದರ್ಶಿಯಾಗಿ ಎಂ.ಕೆ.ಗಣೇಶ್, ಅಭಿಷೇಕ್, ಖಜಾಂಚಿಯಾಗಿ ಡಿ.ಟಿ.ವನಿತ ವಸಂತ, ನಿರ್ದೆಶಕರಾಗಿ ಎಂ.ವಿ.ಸತೀಶ್‍ಕುಮಾರ್, ಎಂ.ಬಿ.ರವಿ, ವೇಣು ಬಲ್ಯಮಂಡೂರು, ಡಿ.ಸಿ.ಗಿರೀಶ್, ಎಂ.ಆರ್.ವಿನಿತ್ ಕುಮಾರ್, ಎಂ.ಎ.ರಮ್ಯ, ದೇವರಾಜ್ ಆಯ್ಕೆಯಾಗಿದ್ದಾರೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಕೆ.ರವಿಕುಮಾರ್, ಕ್ರೀಡಾಕೂಟ ಸಮಿತಿ ಅಧ್ಯಕ್ಷರಾಗಿ ಎಂ.ಕೆ.ನಿತೀನ್ ಆಯ್ಕೆಗೊಂಡಿದ್ದಾರೆ.
ಮಡಿಕೇರಿ ಮೇ 17 NEWS DESK : ನಗರದ ಮಹಾಬೋಧಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ನಗರದ ಕಾಫಿಕೃಪಾ ಕಟ್ಟಡದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷರಾದ ಎಸ್. ಸಿ. ಸತೀಶ್, ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರು ಅನುಭವಿಸಿದ ಕಷ್ಟ, ದಲಿತರ ಏಳಿಗೆಗೆ ಕೈಗೊಂಡ ಕಾರ್ಯ, ಸಂವಿಧಾನ ರಚನೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಎಸ್.ಗಣಪತಿ, ನಿರ್ದೇಶಕರಾದ ಹೆಚ್.ಎಸ್ ಪ್ರತಾಪ್, ಜಯಪ್ಪ ಹಾನಗಲ್, ಶಾರದ ನಾಗರಾಜ್, ಗೀತಾ ಜನಾರ್ಧನ್, ಗಾಯತ್ರಿ ನರಸಿಂಹ, ರಾಜು, ದೇವಕಿ ಉಪಸ್ಥಿತರಿದ್ದರು.
ವಿರಾಜಪೇಟೆ ಮೇ 17 NEWS DESK : ಭಗವದ್ಗೀತೆಯಲ್ಲಿನ ಜೀವನ ಮೌಲ್ಯ ಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಭೂ ಸೇನೆಯ ನಿವೃತ್ತ ಕ್ಯಾಪ್ಟನ್ ಬಿ.ವಿ.ಭವಾನಿ ಶಂಕರ್ ಬೋರ್ಕಾರ್ ಅಭಿಪ್ರಾಯಪಟ್ಟರು. ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಂಗಣದಲ್ಲಿ ಜರುಗಿದ ಕೊಡಗು ಬಾಲವಲೀಕಾರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ಮಕ್ಕಳ ವೈದಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏನನ್ನಾದರೂ ಕಲಿಯಬೇಕಾದರೆ ಮೊದಲು ಆತನಲ್ಲಿ ಶ್ರದ್ಧೆ ಹಾಗೂ ಕಲಿಯುವ ಆಸಕ್ತಿ ಇರಬೇಕು. ಇದರೊಂದಿಗೆ ಕಲಿಯುವ ಸಂದರ್ಭದಲ್ಲಿ ಏಕಾಗ್ರತೆಯು ಅತಿ ಮುಖ್ಯವಾಗಿದ್ದು. ಗುರುಗಳು ಬೋಧಿಸಿದ್ದನ್ನು ಉತ್ತಮ ರೀತಿಯಲ್ಲಿ ಶ್ರವಣ ಮಾಡಿಕೊಳ್ಳಬೇಕು. ಶ್ರವಣ ಮಾಡಿಕೊಂಡದ್ದನ್ನು ಮನದಲ್ಲಿ ಮೇಲಿಂದ ಮೇಲೆ ಮನನ ಮಾಡಿಕೊಳ್ಳಬೇಕು. ಮನನ ಮಾಡಿಕೊಂಡ ನಂತರ ಅದನ್ನು ಅನುಷ್ಠಾನಗೊಳಿಸಬೇಕು. ಈ ರೀತಿ ಕಲಿತಂತಹ ಸಂದರ್ಭದಲ್ಲಿ ಮಾತ್ರ ಕಲಿತಂತಹ ವಿಚಾರವೂ ನಮ್ಮಲ್ಲಿ ಉಳಿಯುತ್ತದೆ. ಕಲಿಕೆಯ ಮೊದಲ ಹಂತವೇ ಏಕಾಗ್ರತೆ. ಮನಸ್ಸು ಚಂಚಲವಾಗಿದ್ದರೆ ಏನನ್ನು ಕಲಿಯಲು ಸಾಧ್ಯವಿಲ್ಲ.…
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ 8 ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ. 1101 ಮೆಟ್ಟಿಲುಗಳನ್ನು ಹೊಂದಿರುವ ಬೆಟ್ಟವನ್ನು ಉತ್ತರ ದಕ್ಷಿಣವಾಗಿ ಎರಡು ಕಡೆಯಿಂದ ಹತ್ತಬಹುದು. ಬೆಟ್ಟದ ಮೇಲೆ ಸಿದ್ದೇಶ್ವರ ಸ್ವಾಮಿಯ ಪಾದವನ್ನು ಕಾಣಬಹುದು. ಈ ಬೆಟ್ಟದ ತುದಿಯಲ್ಲಿ ಒಂದು ಗೋಪುರವಿದೆ. ಅಲ್ಲೇ ಪಕ್ಕದಲ್ಲಿ ಗಂಗಮ್ಮ ಕೊಳ ಇದೆ. ಬೆಟ್ಟದ ಕೆಳಗೆ ಒಂದು ಬಸವಣ್ಣನ ಗುಡಿ ಇದೆ. ಇತಿಹಾಸ :: ಹಿಂದೆ ಈ ಪ್ರಾಂತ್ಯ ಮೊದಲು ಅರಣ್ಯವಾಗಿತ್ತು. ಸಿದ್ಧರು ಅನೇಕ ವರ್ಷ ತಪಸ್ಸು ಮಾಡಿ ಸಿದ್ದಿಯಾದ ಸ್ಥಳವೇ ಯಾದಪುರವಾಯಿತೆಂದು ಪ್ರಚಲಿತದಲ್ಲಿ ಇದೆ. ಒಂದು ದಂತಕಥೆಯ ಪ್ರಕಾರ, ಒಮ್ಮೆ ಒಬ್ಬ ಸನ್ಯಾಸಿಯು ಈ ಹಳ್ಳಿಯ ಮೂಲಕ ಹಾದು ಹೋಗುತ್ತಿದ್ದಾಗ ಓರ್ವ ಮಹಿಳೆಯು ತನ್ನ ಮಗುವನ್ನು ಕಳೆದುಕೊಂಡು ದುಃಖಿಸುತ್ತಿರುತ್ತಾಳೆ. ಆಕೆಯ ಮಗುವಿನ ಸಾವಿಗೆ ಕಾರಣ ತಿಳಿದಾಗ ಗ್ರಾಮಸ್ಥರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳ…






