ಬೇಕಾಗುವ ಪದಾರ್ಥಗಳು :: ಚಿಕನ್- ಅರ್ಧ ಕೆಜಿ, ಪುದೀನ- 1 ಬಟ್ಟಲು, ಈರುಳ್ಳಿ- 1, ಅರಿಶಿನ ಪುಡಿ- ಸ್ವಲ್ಪ, ಗರಂ ಮಸಾಲ ಪುಡಿ- ಅರ್ಧ ಚಮಚ, ಕಾಳು ಮೆಣಸಿನ ಪುಡಿ- ಕಾಲು ಚಮಚ, ಕರಿಬೇವು- ಸ್ವಲ್ಪ, ಚಕ್ರಮೊಗ್ಗು- 1, ದಾಲ್ಚಿನ್ನಿ ಅಥವಾ ಚಕ್ಕೆ – ಸ್ವಲ್ಪ, ಲವಂಗ – 5, ಏಲಕ್ಕಿ- 2, ಶುಂಠಿ- ಸ್ವಲ್ಪ, ಬೆಳ್ಳುಳ್ಳಿ- ಸ್ವಲ್ಪ, ಹಸಿ ಮೆಣಸಿನಕಾಯಿ- 5, ಕೊತ್ತಂಬರಿ ಸೊಪ್ಪು- ಸ್ವಲ್ಪ ಅಡುಗೆ ಎಣ್ಣೆ – ಸ್ವಲ್ಪ, ಉಪ್ಪು- ರುಚಿಗೆ ತಕ್ಕಷ್ಟು ಮಾಡುವ ವಿಧಾನ :: ಒಂದು ಮಿಕ್ಸಿ ಜಾರ್’ಗೆ ಪುದೀನ, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನ ಕಾಯಿ, ಶುಂಠಿ ಹಾಗೂ ಬೆಳ್ಳುಳ್ಳಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಟ್ಟುಕೊಲ್ಳಿ. ಈಗ ಒಲೆ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಎಣ್ಣೆ ಹಾಕಿ ಚಕ್ಕೆ, ಲವಂಗ, ಕಾಳು ಮೆಣಸು, ಪಲಾವ್ ಎಲೆ, ಚಕ್ಕೆ, ಚಕ್ರಮೊಗ್ಗು, ಹಾಗೆ ಸಣ್ಣದಾಗಿ ಕತ್ತರಿಸಿಕೊಂಡಿರುವ ಈರುಳ್ಳಿ ಹಾಕಿ ಫ್ರೈ ಮಾಡಿಕೊಳ್ಳಿ. ಈರುಳ್ಳಿ ಹಾಕಿ 2 ನಿಮಿಷ ಫ್ರೈ…
ಲೇಖಕ: admin
ಮಂಗಳೂರು ಮೇ 17 NEWS DESK : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಇವರ ಆಶ್ರಯದಲ್ಲಿ ಸುಮಾರು 36 ಕೋಟಿ ರೂ. ವೆಚ್ಚದಲ್ಲಿ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭ ಸ್ಪೀಕರ್ ಯು.ಟಿ. ಖಾದರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಜಿಲ್ಲಾಧಿಕಾರಿ ಮಲೈ ಮುಗಿಲನ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.
ಸುಂಟಿಕೊಪ್ಪ ಮೇ 17 NEWS DESK : ಸುಂಟಿಕೊಪ್ಪದಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ 26ನೇ ವರ್ಷದ ಡಿ.ಶಿವಪ್ಪ ಸ್ಮಾರಕ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಡಿ.ಶಿವಪ್ಪ ಅವರ ಮೊಮ್ಮಗ ವಿಶಾಲ್ ಶಿವಪ್ಪ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಧ್ವಜಾರೋಹಣ ನೇರವೇರಿಸಿ ಚೆಂಡನ್ನು ಒದೆಯುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಬ್ಲೂ ಬಾಯ್ಸ್ ಯುವಕ ಸಂಘದ 39ನೇ ವರ್ಷ ಹಾಗೂ ಡಿ. ಶಿವಪ್ಪ ಸ್ಮಾರಕ 26ನೇ ವರ್ಷದ ಫುಟ್‍ಬಾಲ್ ಪಂದ್ಯಾವಳಿಯಲ್ಲಿ ಮೊದಲ ದಿನದ ಪಂದ್ಯ ಅತಿಥೇಯ ಬ್ಲೂ ಬಾಯ್ಸ್ ಯೂತ್ ಕ್ಲಬ್ ಮತ್ತು ಪನ್ಯ ಎಫ್.ಸಿ. ಪನ್ಯ ತಂಡದ ನಡುವೆ ಮೊದಲ ಪಂದ್ಯ ನಡೆಯಿತು, ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಶಬ್ಬಿರ್, ರಫೀಕ್ ಖಾನ್, ವಸಂತಿ, ಮಾಜಿ ಅಧ್ಯಕ್ಷ ಕೆ.ಇ.ಕರೀಂ ಹಾಗೂ ಬ್ಲೂಬಾಯ್ಸ್ ಯೂತ್ ಕ್ಲಬ್ ಆಲಿಕುಟ್ಟಿ, ಗೌರವಧ್ಯಕ್ಷ ಟಿ.ವಿ.ಪ್ರಸನ್ನ, ಬಿ.ಕೆ.ಪ್ರಶಾಂತ್, ಕುಶಾಲನಗರ ಉದ್ಯಮಿ ಬ್ಲೆಸ್ಜಿಕ್ರಾಸ್ತ,…
ನಾಪೋಕ್ಲು ಮೇ 17 NEWS DESK : ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ರಜಾ ದಿನಗಳನ್ನು ಸದುಪಯೋಗ ಪಡಿಸಿಕೊಳ್ಳಲು ಬೇಸಿಗೆ ಶಿಬಿರ ಸಹಕಾರಿಯಾಗಿದೆ ಎಂದು ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಎಂ.ಬಿ.ಹಮೀದ್ ಹೇಳಿದರು. ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ, ಗ್ರಾಮ ಪಂಚಾಯಿತಿ ಅರಿವು ಕೇಂದ್ರ, ಗ್ರಾಮ ಪಂಚಾಯಿತಿ ಹೊದ್ದೂರು ಸಂಯುಕ್ತ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿದ್ದ ಹತ್ತು ದಿನದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಮಾತನಾಡಿ, ಹಿಂದಿನ ದಿನಗಳಲ್ಲಿ ರಜಾ ಅವಧಿಯಲ್ಲಿ ಮಕ್ಕಳು ಸಂಬಂಧಿಕರ ಮನೆಗಳಿಗೆ, ಸಮಾರಂಭಗಳಿಗೆ ತೆರಳಿ ಸಂಸ್ಕೃತಿ, ಆಚಾರ, ವಿಚಾರಗಳನ್ನು ತಿಳಿದುಕೊಳ್ಳುತ್ತಿದ್ದರು. ಆದರೆ ಇದೀಗ ಟಿವಿ, ಮೊಬೈಲ್ ನಿಂದಾಗಿ ದಾರಿತಪ್ಪುತ್ತಿರುವ ಮಕ್ಕಳನ್ನು ಸರಿದಾರಿಗೆ ತರಲು ಬೇಸಿಗೆ ಶಿಬಿರವು ಸಹಕಾರಿಯಾಗಿದೆ ಈ ಶಿಬಿರದಲ್ಲಿ ಮಕ್ಕಳಿಗೆ ಚಟುವಟಿಕೆ ಮೂಲಕ ಜ್ಞಾನ ತುಂಬ ಕೆಲಸವನ್ನು ಮಾಡಲಾಗುತ್ತಿದೆ ಎಂದರು. ಎಸ್ ಡಿಎಂ ಸಿ ಸದಸ್ಯ…
ಮಡಿಕೇರಿ ಮೇ 17 NEWS DESK : ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರು 12 ತಿಂಗಳುಗಳ ಅಪ್ರೆಂಟಿಸ್(ಶಿಶಿಕ್ಷು) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿಯೊಂದಿಗೆ ಐಟಿಐ ವಿಭಾಗದ ಫಿಟ್ಟರ್, ಟರ್ನರ್, ಮೆಷಿನಿಷ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಕಾರ್ಪೆಂಟರ್, ಫೌಂಡ್ರಿಮೆನ್, ಶೀಟ್ ಮೆಟಲ್‍ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿಎನ್‍ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಮೆಕಾನಿಕ್ ರೆಫ್ರಿಜರೇಷನ್ ಮತ್ತು ಏರ್ ಕಂಡಿಷ್ನಿಂಗ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜೂನ್, 02 ಕೊನೆಯ ದಿನವಾಗಿದೆ. ನಿಗಧಿತ ಅರ್ಜಿ ನಮೂನೆಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಪ.ಜಾತಿ, ಪ.ಪಂಗಡ, ಓಬಿಸಿ, ಅಂಗವಿಕಲ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಮತ್ತು ಪಾನ್‍ಕಾರ್ಡ್ ಜೆರಾಕ್ಸ್ ಪ್ರತಿ, ಎನ್‍ಟಿಸಿ ಪ್ರಮಾಣ ಪತ್ರ ಮತ್ತು ಒಂದು ಪಾಸ್‍ಪೋರ್ಟ್ ಭಾವಚಿತ್ರ ಸಲ್ಲಿಸಬೇಕು. ಅಭ್ಯರ್ಥಿಯು https://apprenticeshipindia.gov.in/candidate-registration ಈ ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಮತ್ತು ನೋಂದಣಿ ಸಂಖ್ಯೆಯನ್ನು…
ಮಡಿಕೇರಿ ಮೇ 17 NEWS DESK : ವಿರಾಜಪೇಟೆ-ಪೊನ್ನಂಪೇಟೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕ ವಾರ್ಷಿಕ ಆದಾಯ ಪ್ರವರ್ಗ-1, ಪ.ಜಾ/ಪ.ವರ್ಗ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.1 ಲಕ್ಷ, ಅರ್ಜಿಯನ್ನು http://shp.karnataka.gov.in/bcwd ನಲ್ಲಿ ಸಲ್ಲಿಸುವುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ…
ಕುಶಾಲನಗರ ಮೇ 16 NEWS DESK : ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾದ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದಲ್ಲಿ ಮೇ 17 ರಂದು ಐದನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಪಟ್ಟಣದ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸಂಜೆ 4 ಗಂಟೆಗೆ ಶ್ರೀ ಬಸವೇಶ್ವರರ ಭಾವಚಿತ್ರದೊಂದಿಗೆ ನಂದಿಧ್ವಜದೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದರು. ಮೆರವಣಿಗೆಯ ಬಳಿಕ ಸಂಜೆ 4.30 ರ ನಂತರ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಬಸವ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಯ ನುಡಿಯಾಡಲಿದ್ದು, ವಿರಾಜಪೇಟೆಯ ಅರಮೇರಿ- ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವಿವಿಧ ಮಠಾಧೀಶರಾದ ಕನ್ನಡ…
ನಾಪೋಕ್ಲು ಮೇ 16 NEWS DESK : ಶಾಲಾ ಪರಿಸರ ಹಾಗೂ ವಿದ್ಯಾರ್ಥಿಗಳ ಸಾಧನೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಪ್ರಗತಿಯನ್ನು ಮೌಲ್ಯಮಾಪನ ಮಾಡುವಂತಹ ದ್ದು ಬಹುಮುಖ್ಯವಾಗಿದೆ ಎಂದು ಮರ್ಕಜುಲ್ ಗ್ಲೋಬಲ್ ಕೌನ್ಸಿಲ್ ನ ಸಹಾಯಕ ನಿರ್ದೇಶಕ ಮರ್ಜೂಕ್ ಸಹದಿ ಹೇಳಿದರು. ಕೊಟ್ಟಮುಡಿಯ ಮರ್ಕಜುಲ್ ಶಾಲೆಯಲ್ಲಿ ಮರ್ಕಜುಲ್ ಹಿದಾಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಗೈಡಿಂಗ್ ಗ್ರೇಸ್ ಎಂಬ ಶೀರ್ಷಿಕೆಯಲ್ಲಿ ನಡೆದ ಪೋಷಕರ ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ಶಿಸ್ತು ಎಂಬ ವಿಷಯದ ಕುರಿತು ಮಾತನಾಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರವೂ ಕೂಡ ಪ್ರಮುಖವಾದದಾಗಿದೆ ಮಕ್ಕಳ ಮಾನವ ವೈಜ್ಞಾನಿಕ ಬೆಳವಣಿಗೆಗೆ ಪೋಷಕರು ಹಾಗೂ ಶಿಕ್ಷಕರು ಸಮಾನ ಪಾತ್ರ ವಹಿಸಬೇಕು ಎಂದರು ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಖಾದರ್ ಮಾತನಾಡಿ ನವೀನ ಶೈಕ್ಷಣಿಕ ತಂತ್ರಗಳು ಮೂಲಕ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಪೋಷಕರ ಸಹಕಾರ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಕಾರ್ಯಕ್ರಮದ…
ಮಡಿಕೇರಿ ಮೇ 16 NEWS DESK : ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗದಾಮಪ್ಪ ಹೇಳಿದರು. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ 2025-26 ನೇ ಸಾಲಿನ ಉಚಿತ ಬೇಸಿಗೆ ಶಿಬರ ಉದ್ಘಾಟಿಸಿ ಮಾತನಾಡಿದರು. ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕøತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ…
ಮಡಿಕೇರಿ ಮೇ 16 NEWS DESK : ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಸಂಬಂಧ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆಯನ್ನು ಕೈಗೊಳ್ಳಲು ಮೇ, 25 ರವರೆಗೆ ವಿಸ್ತರಿಸಲಾಗಿದ್ದು, ಮೇ, 20 ರೊಳಗೆ ಶೇ.100 ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಮೇ, 25 ರವರೆಗೆ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಅವಕಾಶ ಮಾಡಿದೆ. ಆದರೂ ಸಹ ಮೇ, 20 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸಮೀಕ್ಷೆ ಬ್ಲಾಕ್ ವ್ಯಾಪ್ತಿಯಲ್ಲಿ ಮೇ 26 ರಿಂದ 28 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ನಿಗದಿಪಡಿಸಲಾಗಿದೆ. ಹಾಗೆಯೇ ಮೇ 19 ರಿಂದ 28 ರವರೆಗೆ ಆನ್‍ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಮೇ 26 ರಿಂದ 28 ರವರೆಗೆ ನಡೆಯುವ ವಿಶೇಷ ಶಿಬಿರದಲ್ಲಿ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ…






