ಚೆಟ್ಟಳ್ಳಿ ಏ.16 NEWS DESK : ಶ್ರೀಮಂಗಲ-ಚೆಟ್ಟಳ್ಳಿ ಶ್ರೀ ಭಗವತಿ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಏ.14 ರಂದು ಪಟ್ಟಣಿ ಹಬ್ಬದ ಅಂಗವಾಗಿ ಅಂದು ಮೂಲ ನೆಲೆಯಲ್ಲಿ ಪೂಜೆಸಲ್ಲಿಸಲಾಯಿತು. ಮುಳ್ಳಂಡ ಐನ್ ಮನೆಯಿಂದ ತಕ್ಕರಾದ ಮುಳ್ಳಂಡ ಕರಣ್ ಕಾವೇರಪ್ಪ ದೇವರ ಭಂಡಾರವನ್ನು ಊರಿನವರ ಸಮ್ಮುಖದಲ್ಲಿ ದುಡಿಕೊಟ್ಟ್ ಹಾಗೂ ವಾಲಗ ಎತ್ತ್ ಪೋರಾಟದೊಂದಿಗೆ ದೇವಾಲಯಕ್ಕೆ ತರಲಾಯಿತು. ವಿಶೇಷ ಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಮಳೆದೇವರೆಂದೇ ಹೆಸರುವಾಸಿಯಾದ ಭಗವತಿ ದೇವಿಯ ಉತ್ಸವದಂದು ಹೆಚ್ಚಾಗಿ ಮಳೆ ಸುರಿಯುವ ಮೂಲಕ ದೇವರ ಶಕ್ತಿಯನ್ನು ಪ್ರದರ್ಶನಕ್ಕೆ ಕಾರಣವಾಯಿತು. ಏ.15 ರ ದೊಡ್ಡ ಹಬ್ಬದಂದು ಮಧ್ಯಾಹ್ನ ದೇವ ಭಂಡಾರವನ್ನು ದೇವಾಲಯಕ್ಕೆ ತರಲಾಯಿತು. ದೇವಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆಯನ್ನು ನೆರವೇರಿಸಲಾಯಿತು. ನಂತರ ಕೋವಿಗೆ ಪೂಜೆ ಸಲ್ಲಿಸಿ ತೆಂಗಿನ ಕಾಯಿಗೆ ಗುಂಡುಹೊಡೆಯುವ ಸ್ಪರ್ಧೆ ಹಾಗೂ ಚೌರಿಯಾಟ್ ನಡೆಯಿತು. ದೇವರ ಬೊಳಕ್ ಮರವನ್ನು ತೆಗೆದು ಗರ್ಭಗುಡಿಯಲ್ಲಿಡಲಾಯಿತು. ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು.
ಲೇಖಕ: admin
ಸೋಮವಾರಪೇಟೆ ಏ.16 NEWSDESK : ಪವಿತ್ರ ತಪೋವನ ಕ್ಷೇತ್ರ ಮನೆಹಳ್ಳಿ ಮಠ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು ಬೇಡಿಕೆ ಈಡೇರಿಸಿಕೊಳ್ಳುವ ಜತೆ ನಿಷ್ಠೆ ಮತ್ತು ಶ್ರದ್ಧೆ ಇರುವಂತದ್ದೇ ಪವಿತ್ರ ಕ್ಷೇತ್ರ ಎಂದು ತುಮಕೂರು ಸಿದ್ಧಗಂಗಾ ಮಠಾಧೀಶ ಶ್ರೀಸಿದ್ಧಲಿಂಗ ಮಹಾ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಂಕನಹಳ್ಳಿ ತಪೋವನ ಕ್ಷೇತ್ರದ ಧಾರ್ಮಿಕ ಹಾಗೂ ಗುರುವಂದನಾ ಸಮಾರಂಭದ ಸಾನಿಧ್ಯ ವಹಿಸಿದ್ದ ಅವರು ಆಶೀರ್ವಚನ ನೀಡಿದರು. ಭಾರತೀಯ ಸಂಸ್ಕೃತಿ ಆಧ್ಯಾತ್ಮ ಮತ್ತು ಸಾತ್ವಿಕತೆಯ ತಳಹದಿಯ ಮೇಲೆ ರೂಪಿತವಾಗಿದ್ದು;ಸಂಸ್ಕೃತಿಯಲ್ಲಿ ಋಷಿಮುನಿಗಳ ಪಾತ್ರ ಮುಖ್ಯವಾಗಿದೆ. ಭಾರತ ಧರ್ಮಕ್ಕೆ ಹೆಸರಿರುವಂತದ್ದು.ವಿಶ್ವಕ್ಕೆ ಶಾಂತಿ ಬಯಸುವ ದೇಶ.ವಸುದೈವಕ ಕುಟುಂಬಕಂ ಎಂಬುದು ಭಾರತಕ್ಕೆ ಅನ್ವಯಸುತ್ತದೆ.”ಭಾ” ಎಂದರೆ ಬೆಳಕು. “ರತ” ಎಂದರೆ ಬದುಕುವುದು.ಭಾರತ ಬೆಳಕಿನಲ್ಲಿ ಬದುಕುವಂತಹ, ಎಲ್ಲರ ಹಿತ ಬಯಸುವ ದೇಶ.ಧಾರ್ಮಿಕತೆ ಭಾರತದ ಹೆಸರಿನಲ್ಲಿದೆ.ಕರ್ನಾಟಕದ ಪ್ರಗತಿಗೆ ಮೈಸೂರು ರಾಜರು ಕೊಟ್ಟ ಕೊಡುಗೆ ಅನನ್ಯ.ಕೊಡಗಿನ ಪಾವಿತ್ರತೆ ಉಳಿಸುವ ಜವಾಬ್ದಾರಿ ಜನರಲ್ಲಿದೆ ಎಂದರು. ಸಮ್ಮುಖದಲ್ಲಿದ್ದ ಅರಮೇರಿ ಕಳಂಚೇರಿ ಮಠಾಧೀಶ ಶ್ರೀಶಾಂತಮಲ್ಲಿಕಾರ್ಜುನಸ್ವಾಮೀಜಿ ಆಶಯ ನುಡಿಗಳನ್ನಾಡಿ, ಇತಿಹಾಸವನ್ನು ಹುಟ್ಟುಹಾಕಿ ಮತ್ತೆ ಜೀವಂತಿಕೆ ಕೊಟ್ಟು 25…
ಮಡಿಕೇರಿ ಏ.16 NEWS DESK : ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಹಾಗೂ ತಾಲ್ಲೂಕು ಸಂಘಗಳು ತೀವ್ರವಾಗಿ ವಿರೋಧಿಸಿವೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರುಗಳು ಸಚಿವ ಸಂಪುಟದಲ್ಲಿ ಮಂಡನೆಯಾದ ವರದಿ ಅವೈಜ್ಞಾನಿಕ ಸಮೀಕ್ಷೆಯಿಂದ ಕೂಡಿದ್ದು, ರಾಜ್ಯದಲ್ಲಿ ಒಕ್ಕಲಿಗರ ಸಂಖ್ಯೆ ಕೇವಲ 61 ಲಕ್ಷ ಎಂಬ ಅಂಶ ಶುದ್ಧ ಸುಳ್ಳು ಎಂದು ಟೀಕಿಸಿದ್ದಾರೆ. ನಾನು ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷನಾಗಿದ್ದೇನೆ, ಆದರೆ ನನ್ನ ಮನೆಗೆ ಯಾವುದೇ ಸಮೀಕ್ಷಾ ತಂಡ ಬಂದಿಲ್ಲ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಪಡೆದಿಲ್ಲ. ನನ್ನನ್ನೇ ನಿರ್ಲಕ್ಷಿಸಿರುವಾಗ ಉಳಿದ ಒಕ್ಕಲಿಗರ ಮಾಹಿತಿಯನ್ನು ಸಮರ್ಪಕವಾಗಿ ಸಂಗ್ರಹಿಸಿರಲು ಹೇಗೆ ಸಾಧ್ಯ ಎಂದು ಎಸ್.ಎಂ.ಚಂಗಪ್ಪ ಪ್ರಶ್ನಿಸಿದ್ದಾರೆ. ವರದಿಯಲ್ಲಿ ಒಕ್ಕಲಿಗರನ್ನು…
ಮಡಿಕೇರಿ ಏ.16 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.21 ರಿಂದ ಮಹಿಳೆಯರ 5ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. ಮುದ್ದಂಡ ಹಾಕಿ ಉತ್ಸವದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಪಾಲ್ಗೊಳ್ಳಲಿದ್ದಾರೆ. 56 ಮಹಿಳಾ ತಂಡಗಳ ನಡುವೆ ರೋಚಕ ಪಂದ್ಯಗಳು ನಡೆಯಲಿವೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸೋಮವಾರಪೇಟೆ ಏ.16 NEWS DESK : ಶನಿವಾರಸಂತೆ ಹೋಬಳಿ ವ್ಯಾಪ್ತಿ ಯಲ್ಲಿರುವ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಭಕ್ತಿಯಿಂದ ಗುರುಸಿದ್ಧ ವೀರೇಶ್ವರ ಹಾಗೂ ಕ್ಷೇತ್ರ ನಾಥ ಶ್ರೀ ವೀರಭದ್ರ ಸ್ವಾಮಿಯ ಜಾತ್ರಾಮಹೋತ್ಸವ ನಡೆಯಿತು. ಶ್ರೀ ಗುರುಸಿದ್ಧವೀರೇಶ್ವರಸ್ವಾಮಿಯವರ ದಿವ್ಯ ಪ್ರಕಾಶದಲ್ಲಿ ಶ್ರೀ ಕ್ಷೇತ್ರಾಧ್ಯಕ್ಷರಾದ ಶ್ರೀ ಮಹಾಂತ ಶಿವಲಿಂಗಸ್ವಾಮಿಗಳವರ ಸದ್ವಿಚ್ಛೆಯ ಮೇರೆಗೆ ಮೂರು ದಿನಗಳ ಕಾಲ ನಡೆದ ಜಾತ್ರಾಮಹೋತ್ಸವದಲ್ಲಿ ಶ್ರೀ ಮದನಾಧಿ ಅನಘ ನಿರಂಜನ ಜಂಗಮ ಶ್ರೀ ಸ್ವಾಮಿಯವರ ಸೂರ್ಯ ಮಂಡಲೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರೇಶ್ವರಸ್ವಾಮಿಯವರ ಪ್ರೀತ್ಯರ್ಥ ದುಗ್ಗಳ ಹಾಗೂ ಅಗ್ನಿಕೊಂಡೋತ್ಸವ ಸೇವೆ, ಚಂದ್ರಮಂಡಲೋತ್ಸವ, ಅಡ್ಡಪಲ್ಲಕ್ಕಿ ಉತ್ಸವ, ಶ್ರೀ ಪ್ರಸನ್ನ ತಪೋವನೇಶ್ವರಿ ಅಮ್ಮನವರ ಪ್ರೀತ್ಯರ್ಥ ಮುತ್ತೈದೆ ಸೇವೆ, ಸುಮಂಗಲಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ, ದಾಸೋಹ ಸೇವೆ, ಶ್ರೀಸ್ವಾಮಿಯವರ “ಪ್ರಾಕಾರ ಪಲ್ಲಕ್ಕಿ ಉತ್ಸವ” ದೊಂದಿಗೆ “ಮಹಾರಥೋತ್ಸವ” ಶ್ರೀ ವೃಷಭಲಿಂಗೇಶ್ವರಸ್ವಾಮಿಯವರ ಸನ್ನಿದಾನದಲ್ಲಿ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಶನಿವಾರಸಂತೆ ಹೋಬಳಿ ವ್ಯಾಪ್ತಿ ಯಲ್ಲಿರುವ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠವು ಧಾರ್ಮಿಕತೆಯ…
ಮಡಿಕೇರಿ ಏ.16 NEWS DESK : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಂತರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ, ಜಿಲ್ಲಾ ಜಮಾಯತ್ ಉಲಾಮ ಅಧ್ಯಕ್ಷರಾದ ಸೈಯದ್ ಶಿಹಾಬುದ್ಧೀನ್ ಹೈದ್ರೂಸಿ, ಜಿಲ್ಲಾ ಉಲಾಮ ಅಧ್ಯಕ್ಷ ಕಿಲ್ಲೂರು ತಂಙಳ್, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಎಂ.ಬಿ.ಹಮೀದ್, ಯೂಸುಫ್ ಹಾಜಿ ಎಮ್ಮೆಮಾಡು, ವಿಟ್ಲದ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ , ಸಮಿತಿಯ ಉಪಾಧ್ಯಕ್ಷರಾದ ಕೆ.ಎ.ಯಾಕುಬ್,…
ಸುಂಟಿಕೊಪ್ಪ ಏ.16 NEWS DESK : ನಾರ್ಗಾಣೆ ಗ್ರಾಮದ ಶ್ರೀದೇವಿಯ ಅಣ್ಣಪ್ಪಸ್ವಾಮಿ ದೇವಾಲಯದಲ್ಲಿ 36ನೇ ವರ್ಷದ ಧರ್ಮ ದೈವದ ನೇಮೋತ್ಸವವು 2 ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. 14.ರಂದು ರಾತ್ರಿ ಭಂಡಾರ ಮೆರವಣಿಗೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ನಂತರ ಆಧಿದೇವತೆ ಕಲ್ಲುರ್ಟಿ(ಪಾಷಣಮೂರ್ತಿ) ದೈವದ ನೇಮೋತ್ಸವವು ನಡೆದು ಭಕ್ತಾಧಿಗಳಿಗೆ ದರ್ಶನ ನೀಡಿತು. ಧರ್ಮ ದೈವವಾದ ಅಣ್ಣಪ್ಪ, ಪಂಜುರ್ಲಿ ದೈವದ ಗಗ್ಗರ ಸೇವೆ ನೇಮವು ನೇರವೇರಿತು. ಮರುದಿನ ಬೆಳಿಗ್ಗೆ ಚಾಮುಂಡೇಶ್ವರಿ ಹಾಗೂ ಬಲ ಬಂಟ ಗುಳಿಗ ರಾಜ ದೈವದ ಜೋಡಿ ಕೋಲವು ನಡೆಯಿತು. ನಂತರ ಧರ್ಮ ದೈವದ ಹರಕೆ ಅರ್ಪಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಿತು. ನೇಮೋತ್ಸವದ ಅಂಗವಾಗಿ ದೇವಾಲಯದ ಆವರಣದ ವ್ಯಾಪ್ತಿಯಲ್ಲಿ ತಳಿರು ತೋರಣ, ವಿದ್ಯುತ್ ದೀಪಗಳಿಂದ ಸಿಂಗಾರಿಸಲಾಗಿತು. ದೇವಾಲಯ ಪ್ರಮುಖರಾದ ಬಿ.ಡಿ.ರಾಜು ರೈ ಹಾಗೂ ಶಿವಪ್ರಸಾದ್ ರೈ ಕುಟುಂಬಸ್ಥರು ಇದ್ದರು. ಸುತ್ತ ಮುತ್ತಲ್ಲ ಗ್ರಾಮ ಸೇರಿದಂತೆ ವಿವಿಧೆಡೆಯಿಂದ…
ಮಡಿಕೇರಿ ಏ.16 NEWS DESK : ವಿಶ್ವಕಲಾ ದಿನಾಚರಣೆಯ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ರಾಜಾಸೀಟ್ ನಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ 25 ಶಿಬಿರಾರ್ಥಿಗಳು ಕಲಾ ಶಿಕ್ಷಕರೊಂದಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಮೂಲಕ ವಿಶ್ವ ಕಲಾ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ದಿನದ ವಿಶೇಷತೆಯ ಕುರಿತು ಮಾತನಾಡಿದ ಶಿಕ್ಷಕಿ ವಿಶ್ಮ, ಈ ಜಗತ್ತಿನಲ್ಲಿ ಪ್ರತಿಯೊಬ್ಬರೂ ಸಹ ಒಂದಲ್ಲ ಒಂದು ರೀತಿಯ ಕಲಾವಿದರಾಗಿದ್ದಾರೆ. ಶೈಕ್ಷಣಿಕವಾಗಿ ಕೂಡ ಕಲೆ ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಭಾವನಾತ್ಮಕ ರೀತಿಯಲ್ಲಿ ಬುದ್ಧಿ ಬೆಳೆಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಚಿತ್ರ ಕಲಾ ಸಂಪನ್ಮೂಲ ವ್ಯಕ್ತಿಗಳಾದ ಟಿ. ಬಿ ಪ್ರಸನ್ನ ಕುಮಾರ್, ಪ್ರದೀಪ್ ಪವನ್, ಸಂಜಯ್ ಕೆ ಮತ್ತು ಗುರು ಹಿರೇಮಠ್ ಅವರು ಈ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ಹೈದರಾಬಾದ್ ನಿಂದ ಮಡಿಕೇರಿ ಗೆ ಪ್ರವಾಸ ಬಂದಿದ್ದ ಕಲಾವಿದ ಶರೀಫ್ ಕೂಡ ಈ ಸಮಾರಂಭದಲ್ಲಿ ಪಾಲ್ಗೊಂಡು ತನ್ನ ಕಲೆಯ ಸೊಬಗನ್ನು ಕುಂಚದಲ್ಲಿ ಮೂಡಿಸಿದ್ದು ವಿಶೇಷವಾಗಿತ್ತು. ಕೊಡಗು ವಿದ್ಯಾ…
ಸುಂಟಿಕೊಪ್ಪ ಏ.16 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಂಯುಕ್ತಾಶ್ರಯದಲ್ಲಿ ಮೇ 10 ಮತ್ತು 11 ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಸುಂಟಿಕೊಪ್ಪ ಜಿಯಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ತೀರ್ಮಾನಿಸಿದೆ. ಸುಂಟಿಕೊಪ್ಪ ಸಂತಮೇರಿ ಶಾಲಾ ಸಭಾಂಗಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಜಿಯಂಪಿ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ರೋಮನ್ ಕ್ಯಾಥೋಲಿಕ್ 14ನೇ ವರ್ಷದ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಸ್ಥಾಪಕ ಅಧ್ಯಕ್ಷ ವಿ.ಎ.ಲಾರೆನ್ಸ್, ಉಪಾಧ್ಯಕ್ಷ ಜೋಕಿಂವಾಸ್, ಖಜಾಂಚಿ ಜೇಮ್ಸ್ ಡಿಸೋಜ, ಕ್ರೀಡಾ ಕಾರ್ಯದರ್ಶಿ ಪ್ರಭು, ದಾಸ್,…
ಮಡಿಕೇರಿ ಏ.16 NEWS DESK : ಮೂರ್ನಾಡು 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಪರಾಣೆ ಮಾರ್ಗದಲ್ಲಿ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಏಪ್ರಿಲ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.






