ಲೇಖಕ: admin

ಮಡಿಕೇರಿ ಮೇ 13 NEWS DESK : ಜಾತಿ ಗಣತಿ ಸಮೀಕ್ಷೆಯ ಸಂದರ್ಭ ಆದಿ ದ್ರಾವಿಡ ಸಮುದಾಯದವರನ್ನು ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎಂದು ನಮೂದಿಸಬೇಕು. ಸಮೀಕ್ಷಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ರಾಜ್ಯದಲ್ಲಿರುವ 12 ಲಕ್ಷದಷ್ಟು ಆದಿದ್ರಾವಿಡ ಸಮುದಾಯದವರು ಜಾತಿ ಗಣತಿಯನ್ನು ಬಹಿಷ್ಕರಿಸಲಿದ್ದಾರೆ ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘ ಎಚ್ಚರಿಕೆ ನೀಡಿದೆ. ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು, ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎದುರಿಸುತ್ತಿರುವ ಜಾತಿ ದೃಢೀಕರಣ ಪತ್ರದ ಸಮಸ್ಯೆಯ ಕುರಿತು ಗಮನ ಸೆಳೆದರು. ಮೀಸಲಾತಿ, ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಯ ವಿಶೇಷ ಜಾತಿಗಣತಿ ನಡೆಯುತ್ತಿದ್ದು, ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳ ಪಟ್ಟಿಯಲ್ಲಿ ವಿಶೇಷವಾಗಿ ಆದಿ ದ್ರಾವಿಡ/ ಆದಿ ಕರ್ನಾಟಕ/ ಆದಿ ಆಂಧ್ರ ಇವುಗಳು 1950ರಲ್ಲಿ ಅಧಿಕೃತವಾಗಿ ಅಧಿಸೂಚನೆಗೊಂಡ ಉಪ ಜಾತಿಗಳು. ಈ ಜಾತಿ ಪ್ರಮಾಣಪತ್ರವನ್ನು ಅಧಿಕೃತವಾಗಿ ಪಡೆದಿರುವುದಕ್ಕೆ 75 ವರ್ಷಗಳ ಇತಿಹಾಸವಿದೆ.…

Read More

ಸುಂಟಿಕೊಪ್ಪ ಮೇ 13 NEWS DESK : ರಕ್ತದಾನವು ಮನುಷ್ಯನ ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಯುವಜನತೆಗೆ ಇದರ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು ಎಂದು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಹೇಳಿದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ 14ನೇ ವರ್ಷ ಟೆನ್ನಿಬಾಲ್ ಕ್ರಿಕೆಟ್ ಪಂದ್ಯಾವಳಿ ಮತ್ತು ಇತರ ಕ್ರೀಡಾಕೂಟಗಳು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭದ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರಕ್ತದಾನಕ್ಕೆ ಯಾವುದೇ ಜಾತಿ ಮತ ಇಲ,್ಲ ಎಲ್ಲರ ರಕ್ತದ ಬಣ್ಣವು ಕೆಂಪಾಗಿದ್ದು, ಈ ಸರಳ ಸತ್ಯವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ವಿವಿಧತೆಯಲ್ಲಿ ಏಕತೆಯನ್ನು ಪಾಲಿಸಿಕೊಂಡು ಪರಸ್ಪರ ಸಾಮರಸ್ಯ ಮತ್ತು ಸೌಹಾರ್ದತೆಯಿಂದ ಬಾಳಬಹುದು ಎಂದು ಕಿವಿಮಾತು ಹೇಳಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಅಧೀನದಲ್ಲಿರುವ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಅನಿಲ್ ಕರುಂಬಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದಾನದ ಮಹತ್ವ ಹೆಚ್ಚಾಗಿ ಪ್ರಚಾರಗೊಳ್ಳುತ್ತಿದ್ದು ವಿಶೇಷ ಸಂದರ್ಭಗಳಲ್ಲಿ ಸಾಮೂಹಿಕ…

Read More

ಕುಶಾಲನಗರ ಮೇ 13 NEWS DESK :  ಪ್ರಕೃತಿ ಆರಾಧನೆ ಮೂಲಕ ನದಿ, ಪರಿಸರಗಳ ಸಂರಕ್ಷಣೆ ಸಾಧ್ಯ ಎಂದು ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ಜಿಲ್ಲಾ ಸಂಘದ ಅಧ್ಯಕ್ಷೆ ರತ್ನ ಯತೀಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ನಮಾಮಿ ಕಾವೇರಿ ಸಹಯೋಗದೊಂದಿಗೆ ಬುದ್ಧ ಪೂರ್ಣಿಮೆ ಸಂದರ್ಭ ನಡೆದ 172 ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದಕ್ಷಿಣ ಭಾರತದ ಜೀವನದಿ ಎನಿಸಿರುವ ಕಾವೇರಿಗೆ ನಮಿಸುವ ಕಾರ್ಯದೊಂದಿಗೆ ನದಿ ಸಂರಕ್ಷಣೆ ಕೆಲಸ ನಿರಂತರವಾಗಿ ಸಾಗಬೇಕಾಗಿದೆ ಎಂದರು. ನಿವೃತ್ತ ಪ್ರಾಂಶುಪಾಲರು ಹಾಗೂ ಪತ್ರಕರ್ತರಾದ ಸಬಲಂ ಭೋಜಣ್ಣ ರೆಡ್ಡಿ ಮಾತನಾಡಿ, ಕಾವೇರಿ ಆರತಿ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಸಾಧ್ಯ ಎಂದರಲ್ಲದೆ, ಸರಕಾರದ ಮೂಲಕ ಕೂಡ ಜಿಲ್ಲೆಯ ಆಯ್ದ ಭಾಗಗಳಲ್ಲಿ ಕಾವೇರಿ ಆರತಿ ನಡೆಸುವಂತಾಗಬೇಕು ಎಂದು ಆಗ್ರಹಿಸಿದರು. ಆ ಮೂಲಕ ಜಿಲ್ಲೆಯ ಸಮಸ್ಯೆಗಳಿಗೆ ಕೂಡ ಶಾಶ್ವತ ಪರಿಹಾರ ಕಾಣಲು ಸಾಧ್ಯ ಎಂದರು. ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಕಾವೇರಿ…

Read More

ಕನಸಿನ ಲೋಕದ ಮಾಯೆಗೆ ಈ “ಇಯರ್ ರಿಂಗ್” ಗಳೇ ಸಾಕ್ಷೀ ಸೊಗಸಾದ ಪಾರಂಪರಿಕ ಡ್ರೀಮ್ ಕ್ಯಾಚರ್ ನಂತೆ ಕಂಗೊಳಿಸುವ ಈ “ಇಯರ್ ರಿಂಗ್” ಎಲ್ಲರ ಗಮನವನ್ನು ತಮ್ಮತ್ತ ಸೆಳೆಯುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಬ್ಯೂಟಿಫುಲ್ ರಿಚ್ ರೆಡ್ ಕಲರ್ ಸ್ಟೋನ್ ಮತ್ತು ಡೆಲಿಕೇಟ್ ಮುತ್ತಿನ ಡ್ರಾಪ್ಲೆಟ್ ನ ಅಧ್ಭುತ ಸಮ್ಮಿಲನ ಈ “ಇಯರ್ ರಿಂಗ್” ಗೆ ಪರಿಪೂರ್ಣ ಲುಕ್ ನೀಡುತ್ತಿದೆ. ಈ ಗೋರ್ಜಿಯಸ್ “ಇಯರ್ ರಿಂಗ್” ನ ತೂಕ ಎಷ್ಟಿದೆ ಎಂಬುದನ್ನು ಊಹಿಸಿ ಹಾಗೂ ಬಹುಮಾನವನ್ನು ಗೆಲ್ಲುವ ಅವಕಾಶವನ್ನು ನಿಮ್ಮದಾಗಿಸಿ. ಹೆಚ್ಚಿನ ಮಾಹಿತಿಗೆ ನಮಗೆ DM ಮಾಡಿ ಅಥವಾ +91 87488 77360 ಎಂಬ ಸಂಖ್ಯೆಗೆ ಕರೆ ಮಾಡಿ. [GL Acharya Jewellers, GLAcharya, Traditional Elegance, Pearl Perfection, Luxury Earrings, Indian Jewellery, KushalNagar, Moodabidri, Hassan, Puttur, Sullia]

Read More

ಮಡಿಕೇರಿ ಮೇ 13 NEWS DESK : ಪೆಮ್ಮಂಡ ಒಕ್ಕದ ವತಿಯಿಂದ ಜೂ.7 ಮತ್ತು 8 ರಂದು ಪೊನ್ನಂಪೇಟೆಯಲ್ಲಿ ಪ್ರಥಮ ವರ್ಷದ ಕೊಡವ ಕುಟುಂಬಗಳ ನಡುವೆ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ “ತೋಕ್ ನಮ್ಮೆ” ಆಯೋಜಿಸಿದೆ ಎಂದು ಕುಟುಂಬದ ಹಿರಿಯರಾದ ಪಿ.ಕೆ.ಪೊನ್ನಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡವ ಕುಟುಂಬಗಳಲ್ಲಿರುವ ಯುವಕ ಯುವತಿಯರಿಗೆ ಶೂಟಿಂಗ್‍ನಲ್ಲಿರುವ ಪ್ರತಿಭೆಯನ್ನು ಹೊರ ಹಾಕಲು ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಪೊನ್ನಂಪೇಟೆಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ 12 ಬೋರ್ ಮತ್ತು .22 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದು ಕುಟುಂಬದಿಂದ ನಾಲ್ಕು ತಂಡಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ತಂಡದಲ್ಲಿ ಇಬ್ಬರಂತೆ ಒಟ್ಟು 8 ಮಂದಿಗೆ ಅವಕಾಶ ಇರುತ್ತದೆ ಎಂದರು. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ರೂ.50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.40 ಸಾವಿರ ಹಾಗೂ ಆಕರ್ಷಕ ಟ್ರೋಫಿ, ತೃತೀಯ ಸ್ಥಾನ…

Read More

ಮಡಿಕೇರಿ ಮೇ 13 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.  ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.  ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ…

Read More

ಮಡಿಕೇರಿ ಮೇ 13 NEWS DESK : ಆರ್‍ಜಿಎಚ್‍ಸಿಎಲ್ ಬೆಂಗಳೂರು ಇವರ ಸೂಚನೆಯಂತೆ ಜಿಲ್ಲೆಯ ಮಡಿಕೇರಿ ನಗರಸಭೆ, ಕುಶಾಲನಗರ ಮತ್ತು ವಿರಾಜಪೇಟೆ ಪುರಸಭೆ ಹಾಗೂ ಸೋಮಾರಪೇಟೆ ಪಟ್ಟಣ ಪಂಚಾಯತಿಗಳಲ್ಲಿ 2021-22 ನೇ ಸಾಲಿನ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯಡಿ (ಬಿಎಲ್‍ಸಿ) ಆಯ್ಕೆಯಾಗಿ ಇದುವರೆಗೂ ಮನೆ ನಿರ್ಮಾಣ ಕಾಮಗಾರಿ ಆರಂಭಿಸದೇ ಇರುವ ಫಲಾನುಭವಿಗಳು ಕಾಮಗಾರಿಯನ್ನು ಆರಂಭಿಸಿ ಜಿಯೋಟ್ಯಾಗ್ ಮಾಡಿಸಿಕೊಳ್ಳಲು ಮೇ 31 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಈ ಪಿಎಂಎವೈ(ಯು) ಯೋಜನೆಯಡಿ 2015-16 ರಿಂದ 2021-22 ನೇ ಸಾಲಿನವರೆಗೆ ಆಯ್ಕೆಯಾಗಿ ಇದುವರೆಗೂ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸದೇ ಇರುವ ಫಲಾನುಭವಿಗಳು ಜುಲೈ, 31 ರೊಳಗೆ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಯೋಜನೆಯ ವಿಷಯ ನಿರ್ವಾಹಕರು ಮತ್ತು ಸಿಎಲ್‍ಟಿಸಿ ಸಿಬ್ಬಂಧಿಗಳನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ತಿಳಿಸಿದ್ದಾರೆ.

Read More

ನಾಪೋಕ್ಲು ಮೇ 13 NEWS DESK : ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಾಲಯದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯವು ಶ್ರದ್ಧಾಭಕ್ತಿಯಿಂದ ಜರುಗಿತು. ಏಳುನೂರು ವರ್ಷ ಪುರಾತನ ಇತಿಹಾಸವಿರುವ ಗ್ರಾಮದ ಧಾರ್ಮಿಕ ಸಾನಿಧ್ಯ ಗೋಪಾಲಕೃಷ್ಣ ದೇವಸ್ಥಾನ. ಶ್ರೀ ಕೃಷ್ಣ ಪರಮಾತ್ಮ ಅವಂದೂರು ಗ್ರಾಮದ ಗ್ರಾಮ ದೇವರು. ಪ್ರಸ್ತುತ ಶ್ರೀ ದೇವರ ಸನ್ನಿಧಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪೂರ್ವ ಭಾವಿ ಕೆಲಸ ಕಾರ್ಯಗಳು ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ. ಕಾಸರಗೋಡಿನ ಪ್ರಸಿದ್ಧ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದೊಂದಿಗೆ ತಂಡದವರಾದ ಮುರಾರಿ ಮತ್ತು ಸ್ಕಂದ ತಂತ್ರಿಗಳು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮದ ವಿಶೇಷ ಪೂಜೆ, ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ಸಿಂಧೂರ ಕಾರ್ಯಾಚರಣೆಯ ಭಾರತೀಯ ಸೇನೆ ಯೋಧರ ಯಶಸ್ಸಿಗೆ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಲಾಯಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ದಿನೇಶ್ ಭಟ್, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕಡ್ಯದ…

Read More

ಮಡಿಕೇರಿ ಮೇ 13 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‍ಆರ್‍ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಸೋಮವಾರಪೇಟೆ :: ಸೋಮವಾರಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಐಗೂರು ಫೀಡರ್‍ನಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ನಿರ್ವಾಹಣಾ ಕಾಮಗಾರಿ ನಡೆಸಬೇಕಿದೆ. ಆದ್ದರಿಂದ ವಿದ್ಯುತ್ ಸರಬರಾಜಿನಲ್ಲಿ…

Read More

ಮಡಿಕೇರಿ ಮೇ 13 NEWS DESK : ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 16 ರಿಂದ 25ರ ವರೆಗೆ ಡಿ ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಂ.ಆಲಿಕುಟ್ಟಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ 26ನೇ ವರ್ಷದ ನಾಕೌಟ್ ಮಾದರಿಯ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಗೋಲ್ಡ್ ಕಪ್ ಕಪ್‍ಗಾಗಿ 25 ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದರು. ಪಂದ್ಯಾವಳಿಯ ಪ್ರಥಮ ಮತ್ತು ದ್ವಿತೀಯ ವಿಜೇತ ತಂಡಕ್ಕೆ ಡಿ.ವಿನೋದ್ ಶಿವಪ್ಪ ಮತ್ತು ಅವರ ಪುತ್ರ ವಿಶಾಲ್ ಶಿವಪ್ಪ ಅವರು ಡಿ.ಶಿವಪ್ಪ ಸ್ಮರಣಾರ್ಥವಾಗಿ 1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ 50 ಸಾವಿರ ನಗದು ಮತ್ತು ಟ್ರೋಫಿ ಜೊತೆಗೆ ವೈಯಕ್ತಿಕ ಬಹುಮಾನವನ್ನು ನೀಡಲಿದ್ದಾರೆ ಎಂದು ಹೇಳಿದರು. ಪ್ರತಿ ನಿತ್ಯ ಮಧ್ಯಾಹ್ನ 3 ಗಂಟೆಯಿಂದ ಎರಡು ಪಂದ್ಯಾವಳಿ ನಡೆಯಲಿದ್ದು, ಭಾನುವಾರ 3 ಪಂದ್ಯ ಆಯೋಜಿಸಲಾಗಿದೆ.…

Read More