ನವದೆಹಲಿ ಮೇ 13 NEWS DESK : ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪಂಜಾಬ್ನ ಆದಮ್‌ಪುರ ವಾಯುನೆಲೆಗೆ ಭೇಟಿ ನೀಡಿದ್ದು, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ. ಇಂದು ಬೆಳಿಗ್ಗೆ, ಎಎಫ್‌ಎಸ್ ಆದಮ್‌ಪುರ ಹೋಗಿ ನಮ್ಮ ವೀರ ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ನಮ್ಮ ರಾಷ್ಟ್ರಕ್ಕಾಗಿ ಮಾಡುತ್ತಿರುವ ಸೇವೆಗೆ ಇಡೀ ದೇಶ ಅವರಿಗೆ ಶಾಶ್ವತವಾಗಿ ಕೃತಜ್ಞವಾಗಿದೆ ಎಂದು ಮೋದಿ ಹೇಳಿದ್ದಾರೆ.
ಲೇಖಕ: admin
ಮಡಿಕೇರಿ ಮೇ 13 NEWS DESK : ಮಹಾಮೈತ್ರಿ ಬುದ್ಧ ವಿಹಾರದ ಪದಾಧಿಕಾರಿಗಳು ಹಾಗೂ ದಲಿತ ಸಂಘರ್ಷ ಸಮಿತಿಯ ಪ್ರಮುಖರು ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಬಳಿಯ ದಂಡಳ್ಳಿ ಮಾದ್ರೆ ಗ್ರಾಮದಲ್ಲಿ ಅರಳಿ ಗಿಡ ನೆಟ್ಟು ಬುದ್ಧ ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಮಹಾಮೈತ್ರಿ ಬುದ್ಧ ವಿಹಾರ ನಿರ್ಮಾಣ ಮಾಡಲು ಹೊರಟಿರುವ ಮಾದ್ರೆ ಗ್ರಾಮದ ಜಾಗದಲ್ಲಿ ಭಗವಾನ್ ಗೌತಮ ಬುದ್ಧರ ಜನ್ಮದಿನದ ಅಂಗವಾಗಿ ಬೋಧಿವೃಕ್ಷದ ಸಂಕೇತವಾದ ಅರಳಿ ಗಿಡ ನೆಟ್ಟು ಬುದ್ಧ ಸಂದೇಶವನ್ನು ಸ್ಮರಿಸಿದರು. ಮಹಾಮೈತ್ರಿ ಬುದ್ಧ ವಿಹಾರದ ಸಂಯೋಜಕರು ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಭಗವಾನ್ ಬುದ್ಧ ಮಹಾಮೈತ್ರಿ ಟ್ರಸ್ಟ್ ವತಿಯಿಂದ ಈ ಜಾಗದಲ್ಲಿ ಅಂಬೇಡ್ಕರ್ ಭವನ ಹಾಗೂ ಬುದ್ಧ ವಿಹಾರ ಧ್ಯಾನ ಮಂದಿರವನ್ನು ಸ್ಥಾಪಿಸಲಾಗುವುದು. ಆ ಮೂಲಕ ಜನರಲ್ಲಿ ವೈಚಾರಿಕತೆಯ ಪ್ರಜ್ಞೆ ಮೂಡಿಸಲಾಗುವುದು. ಭಗವಾನ್ ಬುದ್ಧರ ಆಶಯದಂತೆ ವೃದ್ಧಾಶ್ರಮವನ್ನು ನಿರ್ಮಿಸಿ ವಯೋವೃದ್ಧರ ಆರೈಕೆ ಮಾಡಲಾಗುವುದು ಮತ್ತು ಸಮಾಜಕ್ಕೆ ಜನಸೇವೆಯ ಸಂದೇಶವನ್ನು ನೀಡಲಾಗುವುದು. ಜನಪರ ಕಾರ್ಯಕ್ರಮ…
ನಾಪೋಕ್ಲು ಮೇ 13 NEWS DESK : ಮೊಬೈಲ್ ವೈದ್ಯಕೀಯ ಘಟಕವನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ವಿರಾಜಪೇಟೆಯ ತಮ್ಮ ಕಚೇರಿ ಆಭರಣದಲ್ಲಿ ಉದ್ಘಾಟಿಸಿದರು. ಬಳಿಕ ಘಟಕದ ವಾಹನವನ್ನು ಚಾಲನೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಬೆಂಗಳೂರು ಮೂಲದ ಟ್ರಾನ್ಸ್ ಫಾರ್ಮಿಂಗ್ ಟುಮಾರೊ ಫೌಂಡೇಶನ್ (ಟಿಟಿಎಫ್) ಎನ್‍ಜಿಎನ್ ಆನಂದ ರಾವ್, ಸಂಸ್ಥಾಪಕ ಆಸ್ಟೆರ್ ವಾಲೆಂಟಿಯರ್ಸ್ ಹಾಗೂ ಸೊಲ್ಯೂಷನ್ಸ್ ಅವರ ಸಹಯೋಗದಲ್ಲಿ ಮೊಬೈಲ್ ಮೆಡಿಕಲ್ ಯೂನಿಟನ್ನು ಕೊಡಗಿಗೆ ಕಲ್ಪಿಸಿಕೊಟ್ಟಿದ್ದಾರೆ. ಈ ಘಟಕವು ಕೊಡಗಿನ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚರಿಸಲಿದ್ದು, ಜನರಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸುತ್ತದೆ. ಇದು ಅಧಿಕ ರಕ್ತದೊತ್ತಡ, ಮಧುಮೇಹ, ಬಿಎಂಐ, ತೂಕ, ಈ.ಸಿ.ಜಿ ಮುಂತಾದ ಪರೀಕ್ಷೆಗಳನ್ನು ನಡೆಸಲಿದ್ದು, ಇದು ಒಬ್ಬ ವೈದ್ಯರು, ನರ್ಸ್ ಹಾಗೂ ಚಾಲಕರ ತಂಡವನ್ನು ಒಳಗೊಂಡಿರುತ್ತದೆ. ಒಂದು ದಿವಸಕ್ಕೆ ಒಂದು ಗ್ರಾಮದಂತೆ ನಿರಂತರ 10 ವರ್ಷಗಳ ಅವಧಿಗೆ ಕಾರ್ಯ ನಿರ್ವಹಿಸಲಿದೆ. ಇದು ಕೊಡಗಿನ…
ಮಡಿಕೇರಿ ಮೇ 13 NEWS DESK : ಪೊನ್ನಂಪೇಟೆ ಭಾಗದ ಕೆ ಬಾಡಗ ಪಂಚಾಯಿತಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಶಾಸಕರನ್ನು ಬರಮಾಡಿಕೊಂಡ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಮತ್ತು ಗ್ರಾಮಸ್ಥರು ತಮ್ಮ ಹಲವು ಅಭಿವೃದ್ಧಿ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ವಿಶೇಷವಾಗಿ ಕೆ.ಬಾಡಗ ಗ್ರಾಮ ಪಂಚಾಯಿತಿ ಈಗ ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ಬದಲಾಗಿ, ಸೂಕ್ತ ನಿವೇಶನ ಗುರುತಿಸಿ ಅಥವಾ ಪರ್ಯಾಯ ಕಟ್ಟಡದ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮ ಪ್ರಮುಖ ಬೇಡಿಕೆಯನ್ನು ವಿವರಿಸಿದರು. ಇದೇ ಸಂದರ್ಭ ಗ್ರಾಮಸ್ಥರು ಕೂಡ ತಮ್ಮ ಮನವಿಯನ್ನು ಸಲ್ಲಿಸಿದರು. ಶಾಸಕರು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕೆ.ಬಾಡಗ ವಲಯ ಅಧ್ಯಕ್ಷ ಚಿಮಣ್ಣಮಾಡ ರವಿ, ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಡಿಕೇರಿ ಮೇ 13 NEWS DESK : ಕೊಡಗು ಜಿಲ್ಲೆಯ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಮಡಿಕೇರಿಗೆ 2025-26 ನೇ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಎಸ್‍ಎಸ್‍ಎಲ್‍ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಮೇ 28 ರೊಳಗೆ ನೇರವಾಗಿ ಸಂಸ್ಥೆಗೆ ತೆರಳಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ 08272-298357 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಸುಂಟಿಕೊಪ್ಪ ಮೇ 13 NEWS DESK : ಜೀವನವನ್ನು ಕ್ರೀಡಾಸ್ಫೂರ್ತಿ ಯಿಂದ ತೆಗೆದುಕೊಂಡಾಗ ಈ ಜೀವನದ ಗೆಲುವು ಮತ್ತು ಸಾಧನೆ ನಮ್ಮದಾಗುತ್ತದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸಂತ ಅಂತೋಣಿಯವರ ಚರ್ಚ್ ಸಂಯುಕ್ತಾಶ್ರಯದಲ್ಲಿ ಆಯೋಜಿತ 14ನೇ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮತ್ತು ಇತರ ಕ್ರೀಡಾಕೂಟಗಳು ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಮಕ್ಕಳು ಮತ್ತು ಯುವ ಸಮೂಹ ಸೋತು ಗೆಲ್ಲೂವ ಕ್ರೀಡಾ ಮನೋಬಾವವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಂತ ಅಂತೋಣಿ ಚರ್ಚ್ ಧರ್ಮಗುರು ರೇ.ಫಾ.ವಿಜಯ ಕುಮಾರ್ ಆಶೀರ್ವಚನ ನೀಡಿ, ಕ್ರೀಡಾಕೂಟ ಯಶಸ್ವಿಯಾಗಿದೆ. ಸಂಘಟನೆಯಲ್ಲಿ ಶಕ್ತಿ ಇದೆ. ಸಮಾನಮನಸ್ಕರಾಗಿ ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂಬುದನ್ನು ಕ್ರೀಡಾಕೂಟ ನಿರೂಪಿಸಿದೆ ಎಂದು ಬಣ್ಣಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ವಹಿಸಿದ್ದರು.…
ಸೋಮವಾರಪೇಟೆ ಮೇ 13 NEWS DESK : ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ, ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ನಾನು ಶಾಸಕನಾಗಿದ್ದ ಸಂದರ್ಭ 11 ತಜ್ಞ ವೈದ್ಯರು ಸೇರಿದಂತೆ ಅರವಳಿಕೆ ತಜ್ಞರು, ರೇಡಿಯಾಲಿಜಿಸ್ಟ್ ಕೆಲಸ ನಿರ್ವಹಿಸುತ್ತಿದ್ದರು. ಮಡಿಕೇರಿ ಮೆಡಿಕಲ್ ಕಾಲೇಜಿನಿಂದ ಹೆಚ್ಚುವರಿಯಾಗಿ ವೈದ್ಯರು ಆಸ್ಪತ್ರೆಯಲ್ಲಿ ಕೆಲಸ ಮಾಡಲು ಅವಕಾಶ ಮಾಡಲಾಗಿತ್ತು. ಆದರೆ ಈಗ 4 ವೈದ್ಯರು ಮಾತ್ರ ಇದ್ದಾರೆ. ರೋಗಿಗಳು ಸಾಲುಗಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಸ್ಥಳೀಯ ಶಾಸಕ ಹೆಚ್ಚಿನ ಮುತುವರ್ಜಿ ವಹಿಸಿ ತಜ್ಞವೈದ್ಯರ ನೇಮಕ ಮಾಡಿಸಬೇಕಾಗಿದೆ ಎಂದು ಒತ್ತಾಯಿಸಿದರು. ಈ ಸಂದರ್ಭ ಬಿಜೆಪಿ ಪ್ರಮುಖರಾದ ಎಸ್.ಆರ್.ಸೋಮೇಶ್, ಶರತ್‍ಚಂದ್ರ, ಕಿಬ್ಬೆಟ್ಟ ಚಂದ್ರು, ಯೋಗೇಶ್, ಸುಧಾಕರ್ ಇದ್ದರು.
ಮಡಿಕೇರಿ ಮೇ 13 NEWS DESK : ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜೂನ್ 6 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ…
ಮಡಿಕೇರಿ NEWS DESK ಮೇ 12 : ದೋಣಿ ಮಗುಚಿದ ಪರಿಣಾಮ ಇಬ್ಬರು ಯುವಕರು ನೀರುಪಾಲಾದ ಘಟನೆ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಕೂರುಳಿ ಬಳಿಯ ಕಡಿಯತ್ತೂರು ದೋಣಿ ಕಡವು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಭಾಗಮಂಡಲ ಸಮೀಪದ ಚೇರಂಬಾಣೆಯ ಪಾಕ ಗ್ರಾಮದ ಮುಕ್ಕಾಟಿ ವಿಠಲ ಎಂಬುವವರ ಪುತ್ರ ಅಯ್ಯಪ್ಪ (18)ಹಾಗೂ ಐವತ್ತೋಕ್ಲು ಗ್ರಾಮದ ಪರಮೇಶ್ ಎಂಬುವವರ ಪುತ್ರ ಗಿರೀಶ್ (16) ಸಾವನ್ನಪ್ಪಿರುವ ದುರ್ದೈವಿಗಳು. ಸ್ನೇಹಿತರೊಂದಿಗೆ ಅಯ್ಯಪ್ಪ ಹಾಗೂ ಗಿರೀಶ್ ಅವರುಗಳು ಎಮ್ಮೆಮಾಡು ಕೂರುಳಿ ಬಳಿಯ ಕಡಿಯತ್ತೂರು ದೋಣಿ ಕಡವು ಗ್ರಾಮಕ್ಕೆ ತೆರಳಿದ್ದರು. ಕೂರುಳಿ ಕಡೆಯಿಂದ ಕಡಿಯತ್ತೂರು ಗ್ರಾಮಕ್ಕೆ ದೋಣಿಯಲ್ಲಿ ಸಾಗುವಾಗ ದೋಣಿ ಮಗುಚಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಹೊಳೆಯಲ್ಲಿ ಮುಳುಗಿದ ಯುವಕರಿಗಾಗಿ ಶೋಧ ಕಾರ್ಯ ನಡೆಸಿದ ಸಂದರ್ಭ ಗಿರೀಶ್ ನ ಮೃತದೇಹ ಪತ್ತೆಯಾಗಿ ಹೊರತೆಗೆಯಲಾಗಿದೆ. ಅಯ್ಯಪ್ಪನ ಮೃತದೇಹದ ಪತ್ತೆಕಾರ್ಯ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮೇ 12 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಇಂದು ಪಾಡಿನಾಡ್ ನ ಕಕ್ಕಬೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಜನಜಾಗೃತಿ ಮೂಡಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕಕ್ಕಬೆ ಜಂಕ್ಷನ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದ ಸದಸ್ಯರು ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು 2025-26ರ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮಸಂಜಾತ ಕೊಡವರಿಗೆ ಪ್ರತ್ಯೇಕ “ಕೋಡ್ ಮತ್ತು ಕಾಲಮ್” ಅನ್ನು ಸೇರಿಸಲು ಕೇಂದ್ರ ಗೃಹ ಮಂತ್ರಾಲಯ ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯೋಗವನ್ನು ಒತ್ತಾಯಿಸುವುದಾಗಿ ತಿಳಿಸಿದರು. 1871-72 ರಿಂದ 1931 ರವರೆಗೆ ಜನಗಣತಿಯು ನಿಖರ ಮತ್ತು ವೈಜ್ಞಾನಿಕವಾಗಿತ್ತು. ಕೊಡವರನ್ನು ಕೊಡವಲ್ಯಾಂಡ್‍ನ ಏಕ-ಜನಾಂಗೀಯ,…






