ಲೇಖಕ: admin

ಮಡಿಕೇರಿ NEWS DESK ಜು.25 : ಶಿಕ್ಷಣವೇ ಪ್ರತಿಯೊಬ್ಬರ ಜೀವನದ ಬುನಾದಿಯಾಗಿರುತ್ತದೆ, ಉನ್ನತ ಶಿಕ್ಷಣವನ್ನು ಪಡೆಯುವುದರಿಂದ ಉತ್ತಮ ಜೀವನವನ್ನು ಸಾಗಿಸಬಹುದಾಗಿದೆ ಎಂದು ಮಡಿಕೇರಿಯ ಎನ್‌ಸಿಸಿ ಕಮಾಂಡಿ0ಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ 2026 -27ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉನ್ನತ ಶಿಕ್ಷಣದಿಂದಲೇ ಉತ್ತಮ ಜೀವನವನ್ನು ಸಾಗಿಸಬಹುದು ಎನ್ನುವುದನ್ನು ಮನಗೊಂಡು ಎಲ್ಲಾ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು. ಯುವ ಸಮೂಹ 21 ವರ್ಷದವರೆಗೆ ಉತ್ತಮ ಶಿಕ್ಷಣವನ್ನು ಪಡೆದು, 21 ರಿಂದ 40 ವರ್ಷದವರೆಗೆ ಉದ್ಯೋಗದಲ್ಲಿ ಒಳ್ಳೆಯ ಸಾಧನೆ ಮಾಡಬೇಕು. ಈ ಸಾಧನೆಯಿಂದ 40 ರಿಂದ 60ನೇ ವರ್ಷದವರೆಗೆ ಜವಾಬ್ದಾರಿಯುತ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಆದ್ದರಿಂದ ಪದವಿ ಶಿಕ್ಷಣವನ್ನು ಶ್ರೇಷ್ಠ ರೀತಿಯಲ್ಲಿ ಪಡೆಯುವ ಮೂಲಕ ಉತ್ತಮ ಜೀವನ ನಡೆಸುವಂತೆ ಕರ್ನಲ್ ಸಂಜೀವ್ ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.…

Read More

ಮಡಿಕೇರಿ NEWS DESK ಜು.25 : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ನಡೆಸುತ್ತಿರುವ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ದೇಶ ಹಾಗೂ ದೇಶದ ಪ್ರಧಾನಮಂತ್ರಿಗಳಿಗೆ ಅಗೌರವ ತೋರುತ್ತಿರುವುದು ಖಂಡನೀಯವೆಂದು ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿರುವ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ದೇಶದ ಕಾನೂನು ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಪ್ರತಿಭಟನೆಯ ಸಂದರ್ಭ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುವ ಮತ್ತು ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ದೇಶ ಹಾಗೂ ದೇಶದ ಪ್ರಧಾನಮಂತ್ರಿಗಳಿಗೆ ಅಗೌರವ ತೋರಲಾಗುತ್ತಿದೆ ಎಂದು ಟೀಕಿಸಿದ್ದಾರೆ. ದೇಶವ್ಯಾಪಿ ಸಿಜೆಪಿ ಮತ್ತು ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಹಾದಿ ತಪ್ಪುತ್ತಿದೆ. ವಿದ್ಯಾರ್ಥಿಗಳಲ್ಲದವರು ಪ್ರತಿಭಟನೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿ ಮಾಡುತ್ತಿದ್ದಾರೆ. ಈ ಬೆಳವಣಿಗೆ ನೈಜ ವಿದ್ಯಾರ್ಥಿಗಳ ಮನೋಬಲಕ್ಕೆ ಮುಜುಗರವನ್ನುಂಟು ಮಾಡುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಕಾನೂನಿಗೆ ವಿರುದ್ಧವಾದ ವರ್ತನೆಗಳು ಪ್ರತಿಭಟನೆಯ…

Read More

ಮಡಿಕೇರಿ NEWS DESK ಜು.25 : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ತನಿಖೆಗೆ ಆದೇಶಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದರೂ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ ಎಂದು ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಜೆಪಿ ಮತ್ತು ಕಾಂಗ್ರೆಸ್ ನೀಟ್ ಪ್ರಕರಣವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಟೀಕಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಇದು ಕ್ಷಮಿಸಲಾಗದ ಅಪರಾಧವಾಗಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಕಾನೂನು ಪ್ರಕಾರ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ‍್ಯಾಕ್ ನ್ಯಾಯಾಲಯದ ಮೂಲಕ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಈ ಪ್ರಕರಣದ ಹಿಂದೆ ಇರುವವರನ್ನು…

Read More

​ವಿರಾಜಪೇಟೆ ಜು.24 NEWS DESK :  ವಿರಾಜಪೇಟೆ ತಾಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಡಿ ಒಟ್ಟು ರೂ.24 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಾಂಕ್ರೀಟ್ ರಸ್ತೆಗಳನ್ನು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಲೋಕಾರ್ಪಣೆಗೊಳಿಸಿದರು. ​ಬೊಳ್ಳುಮಾಡುಯಿಂದ ಕಾಕೋಟುಪರಂಬುಗೆ ಹೋಗುವ ರಸ್ತೆ, ಪಾಲಚಂಡ ಐನ್ ಮನೆ ಹಾಗೂ ಮಂಡೆಪಂಡ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಸ್ಥಳೀಯ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ರಸ್ತೆಗಳನ್ನು ನಿರ್ಮಿಸಿಕೊಡಲಾಗಿದೆ. ಗ್ರಾಮಸ್ಥರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ, ಸರ್ಕಾರದ ವಿವಿಧ ಅಭಿವೃದ್ಧಿ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. :: ​ಕಾಲೋನಿಗೆ ಭೇಟಿ ಹಾಗೂ ಅಹವಾಲು ಸ್ವೀಕಾರ:: ರಸ್ತೆ ಉದ್ಘಾಟನೆಯ ಬಳಿಕ ಸ್ಥಳೀಯ ನಿವಾಸಿಗಳ ಮನವಿಗೆ ಸ್ಪಂದಿಸಿದ ಶಾಸಕರು, ಹತ್ತಿರದ ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಹಾಗೂ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದ ಅವರು, ಸೂಕ್ತ…

Read More

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80 ರಷ್ಟು ಪೂರ್ಣಗೊಂಡಿದ್ದು, ಇದೇ ಜುಲೈ, 28 ರೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್‍ಐಆರ್ ಪ್ರಗತಿ ಸಂಬಂಧ ನೋಡಲ್ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‍ಐಆರ್ ಸಂಬಂಧ ಗಣತಿ ನಮೂನೆ ವಿತರಣಾ ಕಾರ್ಯವು ಶೇ.100 ರಷ್ಟು ಪೂರ್ಣಗೊಂಡಿದೆ. ಆದರೂ ಸಹ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆ ಪಡೆದು, ಡಿಜಟಲೀಕರಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಪ್ರತೀ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆಯನ್ನು ಪಡೆದು ಡಿಜಿಟಲೀಕರಣದ ಪ್ರಗತಿ ಸಾಧಿಸಬೇಕು. ಅರ್ಹ ಮತದಾರರು ಎಸ್‍ಐಆರ್ ಪ್ರಕ್ರಿಯೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ತಮ್ಮ…

Read More

ಮಡಿಕೇರಿ ಜು.24 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಐ.ಪಿ.ಇ ಗ್ಲೋಬಲ್ ಸಂಸ್ಥೆ ಇವರ ಸಹಯೋಗದೊಂದಿಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕೊಡಗು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಹಾಗೂ ಗರ್ಭಿಣಿಯರ ಪೌಷ್ಟಿಕತೆ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವು ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಮಾತನಾಡಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ (ಬಾಣಂತಿಯರಿಗೆ) ಆರ್ಥಿಕ ನೆರವು ನೀಡುವ ಯೋಜನೆಯಾಗಿದ್ದು, ಇದರಲ್ಲಿ ಮೊದಲನೆಯ ಮಗು ಗಂಡು ಆಗಿರಲಿ ಅಥವಾ ಹೆಣ್ಣು ಆಗಿರಲಿ ರೂ. 5 ಸಾವಿರ, ಎರಡನೇ ಹೆಣ್ಣು ಮಗುವಿಗೆ ರೂ. 6 ಸಾವಿರ ನೀಡುತ್ತಿದ್ದು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ನಿಮ್ಮ ಹಂತದಲ್ಲಿರುವ ಎಲ್ಲಾ ಫಲಾನುಭವಿಗಳಿಗೆ ಈ ಯೋಜನೆಯ ಬಗ್ಗೆ ಮಾಹಿತಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಹೇಳಿ…

Read More

ಮಡಿಕೇರಿ ಜು.24 NEWS DESK : ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿಗೂ ಹಾವು ಕಡಿತದಿಂದ ಜನರು ಸಾವು ನೋವಿಗೆ ತುತ್ತಾಗುತ್ತಿದ್ದು, ಸರಿಯಾದ ಮಾಹಿತಿ ಹೊಂದದೇ ಇರುವುದೇ ಇದಕ್ಕೆ ಕಾರಣವಾಗಿದೆ. ಹಾವು ಕಡಿತದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯ ಕುರಿತಂತೆ ಮಾಹಿತಿ ಹೊಂದುವುದು ಅಗತ್ಯ. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸುವಂತೆ ಸಲಹೆ ನೀಡಿದರು. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಹಾವು ಕಡಿತದಿಂದ ಸಾವು-ನೋವುಗಳು ಸಂಭವಿಸದಂತೆ ತಡೆಯಲು ಅಧಿಕಾರಿಗಳು ಶ್ರಮಿಸಬೇಕು. ಜಿಲ್ಲೆಯ ಮತ್ತು ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಇರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.…

Read More

ಮಡಿಕೇರಿ ಜು.24 NEWS DESK : ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ `ಮೈ ಭಾರತ್’ ಕಾರ್ಯಕ್ರಮದ ಬಗ್ಗೆ ಯುವ ಜನತೆಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನರಿಗಾಗಿ ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ, ನಾಯಕತ್ವ ಶಿಬಿರಗಳು ಹಾಗೂ ಉದ್ಯಮಶೀಲತಾ ಕಾರ್ಯಾಗಾರ ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾಧಿಕಾರಿಗಳು, ‘ಮೈ ಭಾರತ್’ ಡಿಜಿಟಲ್ ವೇದಿಕೆಯ ಮೂಲಕ ಜಿಲ್ಲೆಯ ಯುವಕ-ಯುವತಿಯರು ಸರ್ಕಾರದ ವಿವಿಧ ಇಲಾಖೆಗಳ ಯುವ ಕಲ್ಯಾಣ ಯೋಜನೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಸ್ವಯಂಸೇವಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಯುವಕರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಕಾಲೇಜುಗಳು, ಯುವಕ ಮಂಡಲಗಳು,…

Read More

ಸೋಮವಾರಪೇಟೆ ಜು. 24 NEWS DESK : ಸೋಮವಾರಪೇಟೆ ವಾಕರ್ಸ್ ವಿಂಗ್ ಸಂಸ್ಥೆ ಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆಯಾಗಿದ್ದಾರೆ. ಹಂಪಿಯ ಖಾಸಗಿ ಹೋಟೆಲ್ ನಲ್ಲಿ ಜರುಗಿದ 21ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ದಿನೇಶ್ ಬೆಳ್ಳಿಯಪ್ಪ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಾಜಮುಖಿ ಯಾಗಿ ಕಾರ್ಯ ನಿರ್ವಹಿಸುತ್ತಿರುವ ವಾಕರ್ಸವಿಂಗ್ ಕಾರ್ಯದರ್ಶಿಯಾಗಿ ಎಸ್.ಡಿ.ವಿಜೇತ್, ಖಜಾಂಚಿಯಾಗಿ ಬಿ.ಕೆ.ಉದಯ್ ಕುಮಾರ್ ಆಯ್ಕೆಯಾದರು. ಈ ಸಂದರ್ಭ ಮಾಜಿ ಅಧ್ಯಕ್ಷರುಗಳಾದ ಎ.ಸಿ.ಶಿವಪ್ರಸಾದ್,ಹೆಚ್. ಸಿ. ನಾಗೇಶ್, ಪಿ.ಕೆ.ರವಿ, ಬಿ.ಎಸ್.ಸುಂದರ್, ಮೋಹನ್ ನಿಶಾಂತ್, ನವೀನ್ ಧರ್ಮಪ್ಪ, ಉದಯ ರವಿ, ಹೆಚ್. ಬಿ. ಹೃಶಿಕೇಶ್, ಬಿ.ಸಿ.ವೆಂಕಟೇಶ್, ಬಿ.ಎಮ್.ದಿನೇಶ್, ಬಿ.ಟಿ.ತಿಮ್ಮಶೆಟ್ಟಿ, ಇನ್ನಿತರರು ಇದ್ದರು.

Read More

ಮಡಿಕೇರಿ ಜು.24 NEWS DESK : ಕಾಗಿ೯ಲ್ ನಲ್ಲಿ 27 ವಷ೯ಗಳ ಹಿಂದೆ ಭಾರತೀಯ ಯೋಧರು ತೋರಿದ ತ್ಯಾಗ, ಬಲಿದಾನ, ಶೌಯ೯ದ ಸ್ಮರಣೆಯಾಗಿ ಇದೇ ಜುಲೈ 26 ರಂದು ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ  ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಾದ್ಯಂತಲಿನ 125 ಸಂಘಸಂಸ್ಥೆಗಳು ಈ ಕಾಯ೯ಕ್ರಮದಲ್ಲಿ  ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ಜು.26 ರಂದು ಭಾನುವಾರ ಸಂಜೆ 5 ಗಂಟೆಯಿಂದ  ಆಯೋಜಿತ ಕಾಗಿ೯ಲ್ ವಿಜಯ್ ದಿವಸ್ – ಸೈನಿಕರೇ ನಾವೆಂದು ಮರೆಯೋದಿಲ್ಲ ನಿಮ್ಮನ್ನು ಎಂಬ ಸೈನಿಕರಿಗೆ ಪುಪ್ಪನಮನ – ಗಾನ ನಮನ ಮತ್ತು ಗೌರವ ನಮನ ಸಲ್ಲಿಕೆಯ ಕಾಯ೯ಕ್ರಮವನ್ನು ಮಡಿಕೇರಿ ಆಮಿ೯ ಕ್ಯಾಂಟೀನ್ ಹಿರಿಯ ವ್ಯವಸ್ಥಾಪಕ ಎನ್.ಎಸ್. ಕಾವೇರಿಯಪ್ಪ    ಉದ್ಘಾಟಿಸಲಿದ್ದಾರೆ.  ನಾಡಿನ ಹೆಸರಾಂತ ಗಾಯಕ ಮೈಸೂರಿನ ರಾಜೇಶ್…

Read More