ಮಡಿಕೇರಿ NEWS DESK ಜೂ.13 : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಈರಳೆವಳಮುಡಿಯ ಸೂದನ ಧನ್ಯಶ್ರೀ ಎಸ್.ಜಿ ನಾಲ್ಕು ಚಿನ್ನದ ಪದಕ ಪಡೆದು ಅಮೋಘ ಸಾಧನೆ ಮಾಡಿದ್ದಾರೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಧನ್ಯಶ್ರೀ ಎಸ್.ಜಿ ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋಟ್ ಅವರು ಪದಕ ಪ್ರದಾನ ಮಾಡಿ ಶುಭ ಹಾರೈಸಿದರು. ನಾಲ್ಕು ಚಿನ್ನದ ಪದಕಗಳನ್ನು ಪಡೆದ ಕುರಿತು ಸೂದನ ಧನ್ಯಶ್ರೀ ಹರ್ಷ ವ್ಯಕ್ತಪಡಿಸಿದರು.
ಲೇಖಕ: admin
ಮಡಿಕೇರಿ NEWS DESK ಜೂ.13 : ಸುದೀರ್ಘ ಹೋರಾಟಗಳ ಬಳಿಕವೂ ನೆಲ್ಲಿಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಕನಿಷ್ಟ ಮೃತ ವ್ಯಕ್ತಿಯ ಗೌರವಯುತ ಸಂಸ್ಕಾರಕ್ಕೆ ‘ಸ್ಮಶಾನ’ವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಯದ ಗಂಭೀರತೆಯನ್ನು ಅರಿತ ಆಡಳಿತ ವ್ಯವಸ್ಥೆ ಮತ್ತು ಜನಪ್ರತಿನಿಧಿಗಳು ಸಮಸ್ಯೆಯ ಪರಿಹಾರದ ಬಗ್ಗೆ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲವೆಂದು ಸ್ಮಶಾನ ಹೋರಾಟ ಸಮಿತಿಯ ಸಂಚಾಲಕ ಪಿ.ಆರ್.ಭರತ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಲಿಹುದಿಕೇರಿಯ 10 ರಿಂದ 12 ಸಾವಿರ ಜನಸಂಖ್ಯೆಯಲ್ಲಿ ಬಹುತೇಕ ಮಂದಿ ಬಡವರು ಮತ್ತು ಕೂಲಿಕಾರ್ಮಿಕರು. ಇವರು ಬಹಳಷ್ಟು ವರ್ಷಗಳಿಂದ ವ್ಯವಸ್ಥಿತವಾದ ಸ್ಮಶಾನ ಜಾಗವಿಲ್ಲದೆ ತೊಂದರೆಗೆ ಸಿಲುಕಿದ್ದಾರೆ. ಇನ್ನಾದರು ಸ್ಮಶಾನ ಜಾಗ ಒದಗಿಸುವಂತೆ ಆಗ್ರಹಿಸಿ ಜೂ.16 ರಂದು ನೆಲ್ಲಿಹುದಿಕೇರಿ ಗ್ರಾಮ ಪಂಚಾಯ್ತಿ ಮುಂಭಾಗ ‘ಅಣಕು ಶವಯಾತ್ರೆ’ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಸ್ಮಶಾನ ಹೋರಾಟ ಸಮಿತಿಯ ಹೋರಾಟಗಳ ಹಿನ್ನೆಲೆಯಲ್ಲಿ ಕೆಲವು ತಿಂಗಳ ಹಿಂದೆ ತಹಶೀಲ್ದಾರರು ಈ ಸಂಬಂಧ ನಡೆಸಿದ ಸಭೆಯಲ್ಲಿ, ಮೂರು ತಿಂಗಳ ಅವಧಿಯಲ್ಲಿ ಸ್ಮಶಾನ ಜಾಗ ಒದಗಿಸುವುದಾಗಿ ಭರವಸೆ ನೀಡಿದ್ದರು. ಇದೀಗ…
ಮಡಿಕೇರಿ NEWS DESK ಜೂ.13 : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತಕ್ಕೆ ನೀಡಿರುವ ಅತ್ಯಂತ ಶ್ರೇಷ್ಠವಾದ ಸಂವಿಧಾನದಲ್ಲಿ ಅಳವಡಿಸಿರುವ ಹಕ್ಕು ಮತ್ತು ಜವಾಬ್ದಾರಿಗಳನ್ನು ಅರಿತು ಸಮರ್ಥವಾಗಿ ನಿಭಾಯಿಸುವವರೆಗೆ ರಾಷ್ಟçದ ಬೆಳವಣಿಗೆ ಅಸಾಧ್ಯವೆಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟಿದ್ದಾರೆ. ಡಾ.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾಭವನದಲ್ಲಿ ನಗರಸಭಾ ಪೌರಕಾರ್ಮಿಕರಿಗೆ ಸ್ವೆಟರ್ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಸಂಕೇತ್ ಪೂವಯ್ಯ ಅವರು ಡಾ.ಅಂಬೇಡ್ಕÀರ್ ಅವರು ನೀಡಿರುವ ಸಂವಿಧಾನದಿಂದ ವಿಶ್ವಮಟ್ಟದಲ್ಲಿ ಭಾರತ ಇಂದು ಗೌರವವನ್ನು ಪಡೆಯುತ್ತಿದೆ. ಸಂವಿಧಾನದಲ್ಲಿ ನೀಡಲಾಗಿರುವ ಹಕ್ಕುಗಳು, ಸಮಾನತೆಯ ಅವಕಾಶಗಳಿಂದ ಜನರ ಬದುಕಿನಲ್ಲಿ ಸುಧಾರಣೆ ಕಾಣಲು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನವನ್ನು ನೀಡಿರುವ ಅಂಬೇಡ್ಕರ್ ಅವರನ್ನು ಅತ್ಯಂತ ಗೌರವದಿಂದ ಕಾಣಬೇಕು ಎಂದರು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳ ಕುರಿತಾದ ಮಾಹಿತಿಗಳು ಪಠ್ಯ ಪುಸ್ತಕದಲ್ಲಿ ಅಳವಡಿಕೆಯಾಗಬೇಕು. ಆ ಮೂಲಕ…
ಮಡಿಕೇರಿ NEWS DESK ಜೂ.13 : ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ 1098 ಗೆ ಮಾಹಿತಿ ನೀಡುವಂತಾಗಬೇಕು. ಬಾಲ…
ಸೋಮವಾರಪೇಟೆ NEWS DESK ಜೂ.13 : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನುವ ಆರೋಪದ ಹಿನ್ನೆಲೆ ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸರ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(28) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಮೊಕದ್ದಮೆ ದಾಖಲಿಸಿ ವಿಚಾರಣೆ ಕೈಗೊಂಡಿದ್ದಾರೆ. ಮಹಿಳೆಯೋರ್ವರು ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಲು ಕಾರೇಕೊಪ್ಪ ಬಸ್ ಶೆಲ್ಟರ್‌ನ ಪಕ್ಕದ ಮೋರಿ ಮೇಲೆ ಕುಳಿತ್ತಿದ್ದ ಸಂದರ್ಭ ಆರೋಪಿ, ಮಹಿಳೆಯ ಬಾಯಿ ಮುಚ್ಚಿ, ತಲೆಕೂದಲನ್ನು ಹಿಡಿದು ಎಳೆದು, ಮೈ ಮುಟ್ಟಿ ಮೋರಿಗೆ ತಳ್ಳಿ, ಮಾನಭಂಗಕ್ಕೆ ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆ ಕೂಗಿಕೊಂಡಾಗ ಸ್ಥಳೀಯರು ಬಂದು ಮಹಿಳೆಯನ್ನು ಉಪಚರಿಸಿದ್ದಾರೆ. ನಂತರ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಎಂ.ಎ.ಗೋಪಾಲ್ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆ NEWS DESK ಜೂ.13 : ಮಾಗಡಿ-ಜಾಲ್ಸೂರು ರಾಜ್ಯ ಹೆದ್ದಾರಿ 85 ರ ಸೋಮವಾರಪೇಟೆ-ಅಲೆಕಟ್ಟೆ-ತೋಳೂರುಶೆಟ್ಟಳ್ಳಿ-ಕೂತಿ ಮಾರ್ಗದ 20 ಕೋಟಿ ರೂ., ವೆಚ್ಚದ ರಸ್ತೆ ಕಾಮಗಾರಿ ಅವೈಜ್ಞಾನಿಕ ಅರೋಪದ ಹಿನ್ನೆಲೆ ಗುರುವಾರ ಕಾಮಗಾರಿ ಸ್ಥಳಕ್ಕೆ ಇಂಜಿನಿಯರ್ ಆರ್ಭಸ್ ಹಾಗು ಸಿವಿಲ್ ಎಕ್ಸ್ಪರ್ಟ್ ಟೆಸ್ಟಿಂಗ್ ಸೆಂಟರ್‌ನ ತಾಂತ್ರಿಕ ಅಧಿಕಾರಿ ತಿಲಕ್ ಅವರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯೋಜನಾ ಪಟ್ಟಿಯಂತೆ ಕಾಮಗಾರಿ ನಡೆಯುತ್ತಿದೆ. ಕೆಲವೆಡೆ ಕೆಲಸದಲ್ಲಿ ಒಂದಷ್ಟು ವ್ಯತ್ಯಯವಾಗಿದೆ. ತಕ್ಷಣದಿಂದಲೇ ಸರಿಪಡಿಸಲಾಗುವುದು. ಮಳೆ ಕಡಿಮೆಯಾದಲ್ಲಿ ಕೆಲವೆಡೆ ಕಾಂಕ್ರೀಟ್ ಕಾಮಗಾರಿ ಮಾಡುತ್ತೇವೆ. ಬಿಸಿಲು ಬಂದ ಮೇಲೆ ಡಾಮರೀಕರಣ ಮಾಡುತ್ತೇವೆ ಎಂದು ಇಂಜಿನಿಯರ್ ಭರವಸೆ ನೀಡಿದರು. ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಂ. ಜಯರಾಮ್, ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಪರಮೇಶ್, ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ಆರ್‌ಟಿಐ ಕಾರ್ಯಕರ್ತ ಬಗ್ಗನ ಅನಿಲ್, ಪ್ರಮುಖರಾದ ಮಾಚಯ್ಯ, ಜಗದೀಶ್, ಎಚ್.ಡಿ.ಮೋಹನ್, ದಿವಾಕರ್, ಜಿತೇಂದ್ರ, ಶಿವರಾಜ್ ಮತ್ತಿತರರು ಇದ್ದರು.
ಮಡಿಕೇರಿ ಜೂ.11 : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಸಿದ್ದಾಪುರ ಸಮೀಪದ ನಲ್ವತ್ತೆಕರೆ ಗ್ರಾಮದಲ್ಲಿ ಇಂದು ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಕಾರ್ಮಿಕ ಮಹಿಳೆ ಕವಿತಾ (40) ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನೆಲ್ಯಹುದಿಕೇರಿ, ಅತ್ತಿಮಂಗಲ, ನಲ್ವತ್ತೆಕರೆ ಮತ್ತಿತರ ಗ್ರಾಮಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು. ಬೆಳಗ್ಗಿನಿಂದ ಹುಡುಕಾಟ ನಡೆಸಿದರೂ ಕಾಡಾನೆಗಳು ಪತ್ತೆಯಾಗಿರಲಿಲ್ಲ. ನಂತರ ಮಧ್ಯಾಹ್ನದ ವೇಳೆಯಲ್ಲಿ ಕಾಫಿ ತೋಟವೊಂದರಲ್ಲಿ ಒಂಟಿ ಸಲಗ ಒಂದು ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಫಿ ತೋಟದ ಮಾರ್ಗದ ಮಧ್ಯ ಭಾಗದಿಂದ ಅರಣ್ಯಕ್ಕೆ ಓಡಿಸಲು ಮುಂದಾಗಿದ್ದರು. ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿದ ಕಾಡಾನೆ ಮನೆಯೊಂದರ ಹಲಸಿನ ಮರದ ಸಮೀಪ ನಿಂತಿತು. ಈ…
ಮಡಿಕೇರಿ NEWS DESK ಜೂ.11 : ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 12) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಮಡಿಕೇರಿ NEWS DESK ಜೂ.11 : ಕೊಡಗು ಜಿಲ್ಲೆಗೆ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 12.06.2025 ರಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ. ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ಮನೆಗೆ ವಿತರಿಸಲು ಕ್ರಮ ವಹಿಸುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದು. ಜಿಲ್ಲಾಧಿಕಾರಿಗಳು, ಕೊಡಗು ಜಿಲ್ಲೆ, ಮಡಿಕೇರಿ.
ಮಡಿಕೇರಿ NEWS DESK ಜೂ.11 : ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 29ನೇ ವಾರ್ಷಿಕ ಮಹಾಸಭೆ, ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಮಡಿಕೇರಿ ಸಮೀಪದ ತಾಳತ್ತಮನೆ ಗ್ರಾಮದಲ್ಲಿರುವ ಸಂಘದ ನಿವೇಶನದ ಆವರಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು ಸಮಾಜ ಬಾಂಧವರ ಪ್ರಗತಿಗೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆಗಾಗಿ ಸಂಘಕ್ಕೆ ಐದು ಎಕರೆ ಭೂಮಿ ಪಡೆಯಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು. ಸಮುದಾಯದ ಮಂದಿಯ ಆರೋಗ್ಯ ಸುಧಾರಣೆಗೆ ಆರೋಗ್ಯ ನಿಧಿ ಸಂಗ್ರಹಿಸಿ ಪ್ರತ್ಯೇಕ ಖಾತೆ ತೆರೆಯಬೇಕು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ ಮರಾಠ ಮರಾಟಿ ವಿದ್ಯಾಭಿವೃದ್ಧಿ ನಿಧಿ ಖಾತೆಯನ್ನು ಆರಂಭಿಸಬೇಕು, ಸರ್ಕಾರದ ಸಮಿತಿಗಳ ಸಭೆಯಲ್ಲಿ ಸಂಘವನ್ನು ಪ್ರತಿನಿಧಿಸಲು ಸಮಾಜ ಬಾಂಧವರು ಮುಂದೆ ಬರಬೇಕು, ಸರ್ವರು ಸಂಘದ ಅಜೀವ ಸದಸ್ಯತ್ವವನ್ನು ಪಡೆದು ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡಬೇಕೆಂದು ಕರೆ ನೀಡಿದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ…






