ಲೇಖಕ: admin

ಮಡಿಕೇರಿ ಮೇ 10 NEWS DESK : 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಮೇ, 17 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 9 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಅನ್ನು ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಸಿದ ಸದಸ್ಯರು ಕೊಡವ ಯೋಧ ಕುಲಕ್ಕಾಗಿ “ಸೋಶಿಯಲ್ ಎಂಜಿನಿಯರಿಂಗ್” ಪ್ರಕ್ರಿಯೆಯ ಭಾಗವಾಗಿ ಪ್ರತ್ಯೇಕ “ಕೋಡ್ ಮತ್ತು ಕಾಲಮ್” ಅನ್ನು ಸೇರಿಸಬೇಕೆಂದು ಒತ್ತಾಯಿಸಿ ಗೃಹಮಂತ್ರಿಗಳು ಹಾಗೂ ಅವರ ಅಧೀನದಲ್ಲಿ ಬರುವ ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಆಫ್ ಇಂಡಿಯಾ (ಆರ್‍ಜಿಸಿಸಿಐ) ಇವರಿಗೆ ಜ್ಞಾಪನಾ ಪತ್ರ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ರಾಷ್ಟ್ರೀಯ ಜನಗಣತಿ ಜೊತೆಗೆ ಜಾತಿವಾರು ಜನಗಣತಿ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ. ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸುತ್ತದೆ. ಸೋಶಿಯಲ್ ಎಂಜಿನಿಯರಿಂಗ್…

Read More

ಮಡಿಕೇರಿ ಮೇ 9 NEWS DESK : 2025 ಮಾರ್ಚ್ -ಏಪ್ರಿಲ್ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ಕ್ಕೆ ಜಿಲ್ಲೆಯ 171 ಪ್ರೌಢ ಶಾಲೆಗಳಿಂದ 6255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 5142 ವಿದ್ಯಾರ್ಥಿಗಳು ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗಿದ್ದು ಶೇ.82.21 ಫಲಿತಾಂಶ ದಾಖಲಾಗಿದೆ. ಈ ಫಲಿತಾಂಶದಲ್ಲಿ 1159 ವಿದ್ಯಾರ್ಥಿಗಳ ಫಲಿತಾಂಶ ಅಪೂರ್ಣವಾಗಿತ್ತು. ಇದರಲ್ಲಿ 1099 ಜನ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗೆ ನೋಂದಣಿ ಆಗಿದ್ದಾರೆ. ಇನ್ನು 60 ಜನ ನೋಂದಣಿ ಆಗಬೇಕಾಗಿದೆ. ಪರೀಕ್ಷೆಗೆ ನೋಂದಣಿ ಆಗಲು ಮೇ, 10 ಕೊನೆಯ ದಿನವಾಗಿದೆ. ಪರೀಕ್ಷೆಗೆ ಶುಲ್ಕ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ನೋಂದಣಿ ಮಾಡಲು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಅಗತ್ಯ ಕ್ರಮವಹಿಸುವುದು. ಪರೀಕ್ಷೆ-2 ಮೇ, 26 ರಿಂದ ಮೇ, 31 ರವರೆಗೆ ನಡೆಯಲಿದೆ. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆಯು ಸಿಸಿ.ಟಿ.ವಿ ವೆಬ್‍ಕಾಸ್ಟಿಂಗ್ ಕಣ್ಗಾವಲಿನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 9 NEWS DESK : ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, ಜಾನುವಾರು ಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚಿಸಿದರು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಎನ್‍ಡಿಆರ್‍ಎಫ್ ತಂಡದ ಜೊತೆ ಸಮನ್ವಯ ಸಾಧಿಸಬೇಕು ಎಂದು…

Read More

ಮಡಿಕೇರಿ ಮೇ 9 NEWS DESK : ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ಮತ್ತು ಸೈನಿಕರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಬೇಕು ಎಂದು ನಗರದ ಬದ್ರಿಯಾ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳಾದ ಹಾಫಿಲ್ ನೌಫಾಲ್ ಸಕಾಫಿ ಅವರ ನೇತೃತ್ವದಲ್ಲಿ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರ ಒಳಿತಿಗಾಗಿ ಮುಸಲ್ಮಾನರು ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಬದ್ರಿಯಾ ಮಸೀದಿಯ ಅಧ್ಯಕ್ಷ ಅಮೀನ್ ಮೊಹಿಸಿನ್ ಅವರು, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಬೇಕು ಮತ್ತು ಶ್ರೇಯೋಭಿವೃದ್ಧಿಯಾಗಬೇಕೆಂದು ಸರ್ವ ಮುಸಲ್ಮಾನರು ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ. ದೇಶವನ್ನು ಬಲಪಡಿಸುವ ನಿಟ್ಟಿನಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು, ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಒಗ್ಗಟ್ಟನ್ನು ಕಾಯ್ದುಕೊಳ್ಳಲು ಪ್ರಾರ್ಥಿಸಲಾಯಿತು. ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತಿಯ ಸೈನಿಕರು ದಾಳಿ ನಡೆಸಿದ್ದು, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಆ ಮೂಲಕ ಭಾರತ ಯಾವುದೇ ಸಂದಿಗ್ಧ…

Read More

ಮಡಿಕೇರಿ ಮೇ 9 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಸಂಬಂಧ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಈಗಾಗಲೇ ನಿಯೋಜಿಸಿರುವ ಗಣತಿದಾರರು ತಮ್ಮ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯವರು ವಾಸಿಸುವ ಮನೆಗಳಿಗೆ ತೆರಳಿ ಮಾಹಿತಿ ಪಡೆದು ಸಮೀಕ್ಷೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ಸೂಚಿಸಿದರು. ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಗೆ ನಿರ್ಲಕ್ಷ್ಯ ವಹಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಗಣತಿದಾರರ ಜೊತೆ ಮೇಲ್ವಿಚಾರಕರು ಸಹ ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡು ಸಮೀಕ್ಷೆಯ ಪ್ರಗತಿ ಸಾಧಿಸಬೇಕು. ಪರಿಶಿಷ್ಟ ಜಾತಿ…

Read More

ಕುಶಾಲನಗರ, ಮೇ 9 NEWS DESK :  ಕುಶಾಲನಗರ ತಾಲ್ಲೂಕು ವೀರಶೈವ – ಲಿಂಗಾಯತ ಮಹಾಸಭಾದ ವತಿಯಿಂದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಮೇ 10 ರಂದು ಕುಶಾಲನಗರ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವೀರಶೈವ ಸಮಾಜ ಬಾಂಧವರಿಗೆ ಬೆಳಿಗ್ಗೆ 10.30 ರಿಂದ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದ್ದಾರೆ. ಸಾಮಾನ್ಯ ಪುರುಷ ಆಟಗಾರರಿಗೆ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ, ಮಹಿಳೆಯರಿಗೆ ಥ್ರೋಬಾಲ್ ಟೂರ್ನಿ ಇದೆ. ಪುರುಷರು ಹಾಗೂ ಮಹಿಳೆಯರಿಗೆ ಹಗ್ಗ ಜಗ್ಗಾಟ, ಭಾರದ ಗುಂಡು ಎಸೆತದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬಾಲಕರು ಮತ್ತು ಬಾಲಕಿಯರಿಗೆ ಹಾಗೂ ಪುರುಷರು ಮತ್ತು ಮಹಿಳೆಯರಿಗೆ ವಿವಿಧ ವೈಯಕ್ತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕ್ರೀಡಾಕೂಟವು ಕ್ರೀಡಾಜ್ಯೋತಿಯೊಂದಿಗೆ ಆರಂಭವಾಗಲಿದೆ. ಕ್ರೀಡಾಕೂಟಕ್ಕೆ ವೀರಶೈವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.  ಸ್ಪರ್ಧೆ :: ಅಂಗನವಾಡಿ, ಎಲ್.ಕೆ.ಜಿ., ಯು.ಕೆ.ಜಿ., ಮಕ್ಕಳಿಗೆ ಕಾಳು ಹೆರಕುವುದು, ಕಪ್ಪೆ ಕುಪ್ಪಳಿಸುವಿಕೆ,  ಪ್ರೌಢಶಾಲಾ ವಿದ್ಯಾರ್ಥಿಗಳ ಮಟ್ಟದ ತನಕ ನಿಧಾನ…

Read More

ಮಡಿಕೇರಿ ಮೇ 9 NEWS DESK : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಭಾರತೀಯ ಸೈನ್ಯಕ್ಕೆ ಶಕ್ತಿ ತುಂಬಲು ಮತ್ತು ದೇಶದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯ ಪ್ರತಿಯಾಗಿ ಭಾರತಿಯ ಸೈನಿಕರು ದಾಳಿ ನಡೆಸಿದ್ದಾರೆ. ಭಾರತ ನ್ಯಾಯದ ಪರವಾಗಿದೆ. ನ್ಯಾಯಕ್ಕೆ ಎಂದಿಗೂ ಜಯವಿದೆ ಎಂದು ಹೇಳಿದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನದ ಸ್ಥತಿ ಗಂಭೀರವಾಗಿದ್ದು, ಭಯೋತ್ಪಾದನೆಯ ಸಂಪೂರ್ಣ ನಾಶವೇ ಭಾರತದ ಗುರಿ ಆಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಭಾರತ ಸೇನೆಯ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ವಿರುದ್ಧ ಹೋರಾಟವನ್ನು ಆರಂಭಿಸಿದ್ದು, ಈಗಾಗಲೇ ಯಶಸ್ವಿಕಂಡಿದೆ. ದೇಶದ ರಕ್ಷಣೆಗೆ ಭಾರತೀಯ ಸೈನಿಕರು…

Read More

ಮಡಿಕೇರಿ NEWS DESK ಮೇ 9 : ಮಡಿಕೇರಿ ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಅಭಿನಂದನೆ ಸಲ್ಲಿಸಿರುವುದು ಸ್ವಾಗತಾರ್ಹ. ಆದರೆ ಅಭಿನಂದನೆಯ ಜೊತೆಯಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಬಿಟ್ಟಿ ಸಲಹೆಗಳನ್ನು ನೀಡಿರುವುದು ಸರಿಯಲ್ಲವೆಂದು ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪಾಂಡಿರ ಪೂಣಚ್ಚ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರವನ್ನು ಅಭಿವೃದ್ಧಿ ಪಡಿಸಲು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸಮರ್ಥರಾಗಿದ್ದಾರೆ, ಈಗಾಗಲೇ ಅಭಿವೃದ್ಧಿ ಕಾರ್ಯಗಳೆಡೆಗೆ ಗಮನ ಹರಿಸಿದ್ದಾರೆ. ನಗರಸಭೆಯಲ್ಲಿ ಹಲವು ಬಾರಿ ಆಡಳಿತ ನಡೆಸಿ ಅನುಭವ ಹೊಂದಿರುವ ಬಿಜೆಪಿ ಜನಪರ ಕಾಳಜಿಯಲ್ಲಿ ಸೈ ಎನಿಸಿಕೊಂಡಿದೆ. 16 ವಾರ್ಡ್ಗಳಲ್ಲಿ ಜಯ ಸಾಧಿಸುವ ಮೂಲಕ ಜನ ಮೆಚ್ಚುಗೆಯನ್ನು ಸಾಬೀತು ಪಡಿಸಿದೆ. ಆದರೆ ಕಾಂಗ್ರೆಸ್ ನ ಪ್ರಕಾಶ್ ಆಚಾರ್ಯ ಅವರು ನಗರದ ಬಗ್ಗೆ ಅತಿ ಕಾಳಜಿ ಇರುವಂತೆ ತೋರ್ಪಡಿಸಿಕೊಳ್ಳುತ್ತಿದ್ದು, ಇವರಿಂದ ಬಿಜೆಪಿ ಸದಸ್ಯರು ಅಭಿವೃದ್ಧಿಯ ಪಾಠ ಕಲಿಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.…

Read More

ಮಡಿಕೇರಿ ಮೇ 9 NEWSDESK : ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ಪ್ರತಿಬಂಧ ನಿಯಮಗಳಡಿಯ ಕೊಡಗು ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಜೆ.ಎಲ್.ಜನಾರ್ಧನ್ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ತಾಲ್ಲೂಕು ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More